Breaking News

Shaikh BigTv

ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ : ಮಾಬುಸಾಬ ಯರಗುಪ್ಪಿ

ನವಲಗುಂದ: ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ ಅವರ ತ್ಯಾಗ ಮತ್ತು ಬಲಿದಾನವನ್ನು ಪ್ರತಿಯೊಬ್ಬರು ಸ್ಮರಿಸಬೇಕೆಂದು ಸಮಾಜ ಸೇವಕ ಮಾಬುಸಾಬ ಯರಗುಪ್ಪಿ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಸರ್ಕಾರಿ ಮಾದರಿ ಕೇಂದ್ರ ಶಾಲೆ ನಂ-3ರಲ್ಲಿ 78ನೇ ವರ್ಷದ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಸಾವಿರಾರು ಮಹನೀಯರ ಹೋರಾಟದ ಫಲವಾಗಿ ಇಂದು ನಾವು ಎಪ್ಪತ್ತೆಂಟನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಣೆ ಮಾಡುತ್ತಿದ್ದು, ಮಹಾತ್ಮರ ತ್ಯಾಗ ಬಲಿದಾನದಿಂದ ಸಿಕ್ಕಿರುವಂತಹ ಪವಿತ್ರವಾದ …

Read More »

ಪ್ರೇಕ್ಷಕರ ಮನ ಗೆದ್ದ, ಸ್ವಾತಂತ್ರ್ಯ ಧಾರೆಯ ಸಮರ ಧೀರರು, ನೃತ್ಯ ರೂಪಕ

ಧಾರವಾಡ : ಸ್ವಾತಂತ್ರ್ಯ ದಿನಾಚರಣೆಯ ವುಶೇಷ ಆಚರಣೆ ಮೂಲಕ ಅವಿಭಜಿತ ಧಾರವಾಡ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಳನ್ನು ಜನರಿಗೆ ಮತ್ತಮ್ಮೊ ಕಟ್ಟಿಕೊಡುವ ಮಹಾದಾಸೆಯಿಂದ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರ ಪರಿಕಲ್ಪನೆಯಲ್ಲಿ ಮೂಡಿಬಂದ ಶಾಲಾ ಶಿಕ್ಷಣ ಇಲಾಖೆ ಪ್ರಸ್ತುತ ಪಡಿಸಿದ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದ ಸ್ವಾತಂತ್ರ್ಯ ಧಾರೆಯ ಸಮರ ಧೀರರು ಎಂಬ ನೃತ್ಯ ರೂಪಕ ಅತ್ಯುತ್ತಮ ಪ್ರದರ್ಶನದ ಮೂಲಕ ಪ್ರೇಕ್ಷರ …

Read More »

ಧಾರವಾಡದಲ್ಲಿ ಸ್ವಾತಂತ್ರೋತ್ಸವ ಆಚರಣೆ

ಧಾರವಾಡ: 78 ನೇ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ನೇರವೇರಿಸಿ, ವಿವಿಧ ಸೇನಾ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು.ಧಾರವಾಡ ಜಿಲ್ಲಾಡಳಿತದಿಂದ ನಗರದ ಆರ್ ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. ಅದರಂತೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು, ಜಿಲ್ಲೆಯ ಜನರಿಗೆ ಸ್ವಾತಂತ್ರೋತ್ಸವದ ಸಂದೇಶ ರವಾನಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು, ಜಿಪಂ ಸಿಇಓ ಸ್ವರೂಪ ಟಿ. ಕೆ, ಭಾಗವಹಿಸಿದ್ದರು.

Read More »

ತಹಶೀಲ್ದಾರ ಕಛೇರಿಯ ಆವರಣದಲ್ಲಿ ಸ್ವಾತಂತ್ರೋತ್ಸವ ಆಚರಣೆ

ಹುಬ್ಬಳ್ಳಿ:78 ನೇ ಸ್ವಾತಂತ್ರೋತ್ಸವ ದಿನಾಚರಣೆ ಅಂಗವಾಗಿ ಇಲ್ಲಿಯ ತಹಶೀಲ್ದಾರ ಕಛೇರಿಯ ಆವರಣದಲ್ಲಿ ನವಲಗುಂದ ಶಾಸಕರಾದ ಕೊನರೆಡ್ಡಿ, ತಹಶೀಲ್ದಾರ ಕಲ್ಲಗೌಡ ಪಾಟೀಲ ಸೇರಿದಂತೆ ಅಧಿಕಾರಿಗಳಿಂದ ಧ್ವಜಾರೋಹಣವನ್ನು ನೆರೆವೇರಿಸಿದರು.

Read More »

ರಾಷ್ಟ್ರಗೀತೆ ಹಾಡಿ ಗೌರವ ಸಲ್ಲಿಸಿ ಸ್ವಾತಂತ್ರ್ಯ ದಿನಾ ಆಚರಣೆ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮೇಯರ್ ರಾಮಣ್ಣ ಬಡಿಗೇರ ಅವರು ಧ್ವಜಾರೋಹಣ ನೆರವೇರಿಸಿದರು. ರಾಷ್ಟ್ರಗೀತೆ ಹಾಡಿ ಗೌರವ ಸಲ್ಲಿಸಿದ ಪಾಲಿಕೆ ಅಧಿಕಾರಿಗಳು, ಈ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲಿಕೆ ಆಯುಕ್ತ ಈಶ್ವರ ಉಳಾಗಡ್ಡಿ, ಪಾಲಿಕೆ ವೈದ್ಯಾಧಿಕಾರಿ ಡಾ. ಶ್ರೀಧರ ದಂಡೆಪ್ಪನವರ, ಸೇರಿದಂತೆ ಪಾಲಿಕೆ ಅಧಿಕಾರಿಗಳು ಸಿಬ್ಬಂದಿ ಭಾಗವಹಿಸಿದ್ದರು.

Read More »

ಹುಬ್ಬಳ್ಳಿಯ ಹೃದಯ ಭಾಗವಾದಲ್ಲಿ ಸ್ವಾತಂತ್ರ್ಯ ದಿನ ಆಚರಣೆ

ಹುಬ್ಬಳ್ಳಿ: ಹುಬ್ಬಳ್ಳಿಯ ಹೃದಯ ಭಾಗವಾದ ಚನ್ನಮ್ಮ ವೃತ್ತದ ಪಕ್ಕದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಮೈದಾನ ( ಈದ್ಗಾ ಮೈದಾನ) ದಲ್ಲಿ78 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪಾಲಿಕೆ ಆಯುಕ್ತ ಈಶ್ವರ ಉಳಾಗಡ್ಡಿ ಧ್ವಜಾರೋಹಣ ನಡೆಸಿದರು. ಈ ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳಾಗಡ್ಡಿ, ಶಾಸಕ ಮಹೇಶ ಟೆಂಗಿನಕಾಯಿ, ರಾಜಣ್ಣ ಕೊರವಿ ಸೇರಿದಂತೆ ಗಣ್ಯಾತಿ ಗಣ್ಯರಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

Read More »

ಮುಖ್ಯಮಂತ್ರಿ ಪದಕಕ್ಕೆ ಸಿಪಿಐ ಶ್ರೀಶೈಲ ಕೌಜಲಗಿ ಆಯ್ಕೆಧ

ಕಲಘಟಗಿ : 2023-2024 ರ ಮುಖ್ಯಮಂತ್ರಿ ಪದಕ್ಕೆ ರಾಜ್ಯದ 126 ಪೊಲೀಸ್ ಅಧಿಕಾರಿಗಳು ಆಯ್ಕೆ ಆಗಿದ್ದು, ಕಲಘಟಗಿ ಪೊಲೀಸ್ ಠಾಣೆಯ ಸಿಪಿಐ ಶ್ರೀಶೈಲ ಕೌಜಲಗಿ ಅವರಿಗೆ ಮುಖ್ಯಮಂತ್ರಿ ಪದಕಕ್ಕೆ ಅವರು ಸಹ ಆಯ್ಕೆ ಆಗಿದ್ದಾರೆ. ಈ ಒಂದು ಪದಕ ರಾಜ್ಯ ಸರ್ಕಾರ ನೀಡುತ್ತಿದ್ದಾರೆ. ಇಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು ಪದಕ ನೀಡುವ ದಿನಾಂಕವನ್ನು ನಿಗದಿ ಪಡಿಸಿಲ್ಲ ಈ ಒಂದು ಮುಖ್ಯಮಂತ್ರಿ ಪದಕ ಕಲಘಟಗಿ ಠಾಣೆಗೆ ಬಂದಿದ್ದು ತಾಲೂಕಿನ ಜನರು …

Read More »

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೂತನ ಉಪಾಧ್ಯಕ್ಷರಾಗಿ ಪೀರಸಾಬ್ ಕೌತಾಳ ನೇಮಕ

ಧಾರವಾಡ : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೂತನ ಉಪಾಧ್ಯಕ್ಷರಾಗಿ ಪೀರಸಾಬ್ ಕೌತಾಳ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ಹುಬ್ಬಳ್ಳಿಯ ಗೋಕುಲ ರಸ್ತೆಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಗೆ ಆಗಮಿಸಿದ ಪೀರಸಾಬ್ ಅವರು ಅಲ್ಲಿ ತಮ್ಮ ಅಧಿಕಾರ ವಹಿಸಿಕೊಂಡರು. ಪೀರಸಾಬ್ ಅವರು ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಅವರ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಪೀರಸಾಬ್‌ ಕೌತಾಳ ಅವರನ್ನು ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ …

Read More »

ರಸ್ತೆಗಳಿಗೆ ಸ್ವಾತಂತ್ರ್ಯ ಹೋರಾಟಗಾರರು ಹೆಸರು ಇಡುವಂತೆ ಮನವಿ ಸಲ್ಲಿಕೆ

ಕುಂದಗೋಳ : ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಕೇಂದ್ರ ಸ್ಥಾನವಾದ ಕುಂದಗೋಳ ನಗರದಲ್ಲಿ ಕೇವಲ ಬೆರಳೆಣಿಕೆಯಷ್ಟು ಸ್ವಾತಂತ್ರ್ಯ ಹೋರಾಟಗಾರರ ಪುತ್ಥಳಿ ನಿರ್ಮಾಣವಾಗಿವೆ.ಬೀದಿಗಳಿಗೆ ಹೋರಾಟಗಾರರ ಹೆಸರು ಇಡಬೇಕು ಎಂದು ಭಾರತೀಯ ಜನತಾ ಪಕ್ಷ ಯುವ ಮೋರ್ಚಾ ವತಿಯಿಂದ ಮನವಿ ಪತ್ರ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಕುಂದಗೋಳ ತಾಲೂಕಿನ ಕೇಂದ್ರ ಸ್ಥಾನವಾದ ಕುಂದಗೋಳ ಪಟ್ಟಣದಲ್ಲಿ ಪ್ರಥಮ ಸ್ವಾತಂತ್ರ್ಯ ಹೋರಾಟಗಾರರಾದ ಕಿತ್ತೂರಿನ ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಮತ್ತು ಕ್ರಾಂತಿಕಾರಿಗಳಾದಂತಹ ಸುಭಾಸ ಚಂದ್ರ ಭೋಸ …

Read More »

ಧಾರವಾಡದಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಜಾಗೃತಿ ಜಾಥಾ

ಧಾರವಾಡ: ಸ್ವಾತಂತ್ರೋತ್ಸವ ಸಂಭ್ರಮಾಚರಣೆ ಹಿನ್ನಲೆಯಲ್ಲಿ ಧಾರವಾಡ ನಗರದಾದ್ಯಂತ ಹರ್ ಘರ್ ತಿರಂಗಾ ಅಭಿಯಾನದ ಜಾಗೃತಿ ಜಾಥಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಭಾರತದ ಸ್ವಾತಂತ್ರ್ಯ ಗುರುತಿಸಲು ತಿರಂಗವನ್ನು ಮನೆಗೆ ತರಲು ಮತ್ತು ಅದನ್ನು ಹಾರಿಸಲು ಜನರನ್ನು ಪ್ರೋತ್ಸಾಹಿಸಲು ಈ ಜಾಗೃತಿ ಜಾಥಾ ಹಮ್ಮಿಕೊಳ್ಳಲಾದ್ದು, ಭಾರತ ಮಾತೆಗೆ ಜಯವಾಗಲಿ, ಹರ್ ಘರ್ ತಿರಂಗಾ ಎಂದು ಘೋಷಣೆ ಕೂಗುತ್ತ ಎನ್ ಸಿ ಸಿ, ಎನ್ ಎಸ್ ಎಸ್ ವಿದ್ಯಾರ್ಥಿಗಳು ಜಾಗೃತಿ ಜಾಥಾದಲ್ಲಿ ಭಾಗವಹಿಸಿದ್ದರು.

Read More »