ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನಡೆಸುತ್ತಿದ್ದ ಉದ್ಯೋಗಾಕಾಂಕ್ಷಿ ಯುವತಿ ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ನಗರದ ಶಿವಗಿರಿಯಲ್ಲಿ ನಡೆದಿದೆ.ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಲೆಂದು ಬಂದಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘೋರ ಧಾರವಾಡದ ತಪೋವನ ಬಳಿ ನಡೆದಿದೆ.ಬಳ್ಳಾರಿ ಮೂಲಕ ಪಲ್ಲವಿ (22) ಆತ್ಮಹತ್ಯೆಗೆ ಶರಣಾದ ಯುವತಿ. ಸ್ಪರ್ಧಾತ್ಮಕ ಪರೀಕ್ಷೆ ಸಿದ್ಧತೆಯಲ್ಲಿದ್ದ ಯುವತಿ ಇಂದು ಬೆಳಿಗ್ಗೆ ಇದ್ದಕ್ಕಿದ್ದಂತೆ ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದಾಳೆ. ಯುವತಿ ಆತ್ಮಹತ್ಯೆಗೆ ನಿಖರ …
Read More »ಮಲ್ಲಿಕ್ ಜಾನ್ ಕೊಲೆ ಪ್ರಕರಣ; ಪ್ರಮುಖ ಆರೋಪಿ ರವಿ ಜಾಧ ಆರೆಸ್ಟ್ …!
ಹುಬ್ಬಳ್ಳಿ ಕಳೆದ ಒಂದು ತಿಂಗಳ ಹಿಂದೆ ಹುಬ್ಬಳ್ಳಿಯ ಮಂಟೂರ ರೋಡ್ ಬ್ಯಾಳಿ ಪ್ಲಾಟ್ ಬಳಿ ಮಹಮ್ಮದ್ ಮಲಿಕ್ ಜಾನ್ ಮೇಲೆ ಸೆಟ್ಲಿಮೆಂಟ್ ಗ್ಯಾಂಗ್ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆರೋಪಿಗಳನ್ನು ಬೆಂಡಿಗೇರಿ ಠಾಣೆ ಬಂಧಿಸಿದ್ದರು. ಆದ್ರೆ ಪ್ರಮುಖ ಆರೋಪಿ ರವಿ ಜಾಧವನನ್ನು ಇಂದು ಬಂಧಿಸಿದ್ದಾರೆ. ಬೆಂಡಿಗೇರಿ ಠಾಣೆ ಇನ್ಸ್ಪೆಕ್ಟರ್ ಎಸ್.ಆರ್ ನಾಯ್ಕ್ ಅವರು ಇಂದು ಕಾರ್ಯಾಚರಣೆ ನಡೆಸಿ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಮಂಟೂರ …
Read More »ಗೌರವ ಸನ್ಮಾನ ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂ ಸಿದ್ಧರಾಮಯ್ಯ ಚಾಲನೆ….
ಸಭಾಪತಿ ಬಸವರಾಜ ಹೊರಟ್ಟಿಯವರ ಅಭಿನಂದನಾ ಗೌರವ ಸನ್ಮಾನ ಕಾರ್ಯಕ್ರಮಕ್ಕೆ ಸಿಎಂ ಸಿದ್ಧರಾಮಯ್ಯ ದೀಪ ಬೆಳಗುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು. ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಚಿವರಾದ ಎಚ್.ಕೆ.ಪಾಟೀಲ, ಸಂತೋಷ ಲಾಡ್, ಮಾಜಿ ಸಿಎಂ ಜಗದೀಶ ಶೆಟ್ಟರ್ ನೇತೃತ್ವದಲ್ಲಿ ಕಾರ್ಯಕ್ರಮಕ್ಕೆ ಅದ್ದೂರಿಯಾಗಿ ಚಾಲನೆ ದೊರೆಯಿತು.ಇನ್ನೂ ಕಾರ್ಯಕ್ರಮದಲ್ಲಿ ಸಚಿವರು, ಶಾಸಕರು ಹಾಗೂ ರಾಜಕೀಯ ಮುಖಂಡರು ಸೇರಿದಂತೆ ನಾಡಿನ ವಿವಿಧ …
Read More »ಬಸವರಾಜ ಹೊರಟ್ಟಿಯವರ ಕಾರ್ಯಕ್ರಮಕ್ಕೆ ಸಿಎಂ ಸಿದ್ಧರಾಮಯ್ಯ ಆಗಮನ…
ಹುಬ್ಬಳ್ಳಿ: ರಾಜ್ಯ ರಾಜಕಾರಣದ ಮೂಲಕ ವಿಶ್ವದಾಖಲೆ ನಿರ್ಮಿಸಿರುವ ಸಭಾಪತಿ ಬಸವರಾಜ ಹೊರಟ್ಟಿಯವರ ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂ ಸಿದ್ಧರಾಮಯ್ಯನವರು ಆಗಮಿಸಿದ್ದು, ನಾಡದೊರೆಗೆ ಆತ್ಮೀಯವಾಗಿ ಸ್ವಾಗತ ಕೋರಲಾಯಿತು.ಕಾರ್ಯಕ್ರಮಕ್ಕೆ ಆಗಮಿಸಿದ ಸಿಎಂ ಸಿದ್ಧರಾಮಯ್ಯನವರಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಸವರಾಜ ಹೊರಟ್ಟಿ ಸೇರಿದಂತೆ ಆಗಮಿಸಿದ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡು ಶುಭ ಕೋರಿದರು.ಇನ್ನೂ ನೆಹರೂ ಮೈದಾನದಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಸಿಎಂ ಆಗಮಿಸುತ್ತಿದ್ದಂತೆಯೇ ಎಲ್ಲೆಡೆಯೂ ಜೈಕಾರ್ ಮೊಳಗಿರುವುದು ವಿಶೇಷವಾಗಿದೆ.
Read More »ಸಾರ್ವಜನಿಕರ ‘ವಾಹನ ತಪಾಸಣೆ’ ವೇಳೆ ದುರ್ನಡತೆ ತೋರುವ ರಾಜ್ಯದ Traffic ಪೊಲೀಸರಿಗೆ ಖಡಕ್ ಸೂಚನೆ.!
ವಾಹನ ತಪಾಸಣಾ/ಪರೀಶೀಲನೆ ಸಮಯದಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ವಾಹನ ಚಾಲಕರಿಗೆ ಕಿರುಕುಳ ಹಲ್ಲೆ. ಅವಾಚ್ಯ ಶಬ್ದಗಳ ಬಳಕೆ ಮಾಡಿ ದುರ್ನಡತೆ ತೋರುವುದನ್ನು ಕಡಿವಾಣ ಹಾಕಲು ಸೂಕ್ತ ಸುತ್ತೋಲೆ/ಆದೇಶ ನೀಡುವ ಬಗ್ಗೆ ಸುತ್ತೋಲೆ ಹೊರಡಿಸಲಾಗಿದೆ…ಈ ಮೇಲ್ಕಂಡ ವಿಷಯಕ್ಕೆ ಸಂಬಂದಿಸಿದಂತೆ ರಾಜ್ಯ ಪೊಲೀಸ್ ಇಲಾಖೆಯು ಶಿಸ್ತಿನ ಇಲಾಖೆಯಾಗಿದ್ದು ಕೆಲವು ಅಧಿಕಾರಿ ಸಿಬ್ಬಂದಿಗಳು ತೋರುತ್ತಿರುವ ದುರ್ನಡತೆ, ಅಧಿಕಾರ ದುರ್ಬಳಕೆಯಿಂದ ಸಂಪೂರ್ಣ ಪೊಲೀಸ್ ಇಲಾಖೆಯ ಗೌರವಕ್ಕೆ ಧಕ್ಕೆ ಉಂಟಾಗುತ್ತಿದ್ದು ಕಾಲಕಾಲಕ್ಕೆ ಇಲಾಖೆಯಿಂದ ಹಲವಾರು ಸುತ್ತೋಲೆ ಜ್ಞಾಪನಗಳನ್ನು …
Read More »ಅಪರಾಧ ಪ್ರಕರಣ’ಗಳಲ್ಲಿ ಸಿಕ್ಕಿಬೀಳೋ ಪೊಲೀಸರಿಗೆ ಶಾಕ್: ಇನ್ಮುಂದೆ ಈ ಕ್ರಮ ಫಿಕ್ಸ್…..
ಡಿಜಿ ಆರ್ಡರ್ ಗಾಳಿಗೆ ತೂರಿದ ಟ್ರಾಕ್ ಪೊಲೀಸರು.. ಸರ್ಕಾರದ ಸಂಬಳ ಇದ್ರು ರೋಡಲ್ಲಿ ನಿಂತು ಹಪ್ತಾ ವಸೂಲಿ…. ಗಸ್ತು ತಿರುಗಿ ಸುಗಮ ಸಂಚಾರಕ್ಕೆ ಅನುಕೂಲ ಆಗಿ ಅಂದ್ರೆ ಇವರು ಮಾಡಿದ್ದು ಏನ ಗೊತ್ತಾ…???? ಅಬ್ಬಬ್ಬಾ …. ಟ್ರಾಫಿಕ್ ಚಂಬು ಗ್ಯಾಂಗ ಕೈಗೆ ಸಿಕ್ಕ ಬಡ ವಾಹನ ಸವಾರರ ಗೋಳು ಕೇಳೋರ್ಯಾರು..??? ಡಿಜಿ ಅವರು ನೋಡಲೇಬೇಕಾದ ಸುದ್ದಿ ಇದು.. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಪೊಲೀಸರೇ ಅಪರಾಧ ಪ್ರಕರಣಗಳಲ್ಲಿ ಶಾಮೀಲಾಗುತ್ತಿರುವ ಪ್ರಕರಣಗಳು …
Read More »ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿಗೆ ಡಿಜಿ ಐಜಿಪಿ ಖಡಕ್ ಎಚ್ಚರಿಕೆ..!
ಇತ್ತೀಚೆಗೆ ಕೆಲವು ದರೋಡೆ, ಕಳ್ಳತನ ಮತ್ತು ವಂಚನೆ ಕೃತ್ಯಗಳಲ್ಲಿ ಕೆಲವು ಪೊಲೀಸ್ ಸಿಬ್ಬಂದಿಯವರುಗಳ ಹೆಸರುಗಳು ತಳಕು ಹಾಕಿಕೊಂಡಿರುವುದು.. ಪೊಲೀಸರೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಡಿಜಿ-ಐಜಿಪಿ ಡಾ.ಎಂಎ ಸಲೀಂ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಇಂತಹ ಕೃತ್ಯಗಳಲ್ಲಿ ಭಾಗಿಯಾಗುವ ಸಿಬ್ಬಂದಿ, ಮೇಲ್ವಿಚಾರಣೆಯಲ್ಲಿ ವಿಫಲರಾಗುವ ಹಿರಿಯ ಅಧಿಕಾರಿಗಳ ವಿರುದ್ಧವೂ ಕಠಿಣ ಶಿಸ್ತುಕ್ರಮದ ಎಚ್ಚರಿಕೆ. ಬೆಂಗಳೂರು: ಅಪರಾಧ ಕೃತ್ಯಗಲ್ಲಿ ಪದೇಪದೆ ಪೊಲೀಸ್ ಸಿಬ್ಬಂದಿಯೇ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ …
Read More »ಅಣ್ಣಿಗೇರಿ ಬಳಿ ಭೀಕರ ರಸ್ತೆ ಅಪಘಾತ — ಇನ್ಸ್ಪೆಕ್ಟರ್ ಪಂಚಯ್ಯ ಸಾಲಿಮಠ ಸ್ಥಳದಲ್ಲೇ ಸಾವು..!
ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಅಣ್ಣಿಗೇರಿ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ದುರಂತದಲ್ಲಿ ಇನ್ಸ್ಪೆಕ್ಟರ್ ಪಂಚಯ್ಯ ಸಾಲಿಮಠ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪಂಚಯ್ಯ ಸಾಲಿಮಠ ಅವರು ಬೈಲಹೊಂಗಲ, ಗದಗ ಹಾಗೂ ಹುಬ್ಬಳ್ಳಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸೇವೆ ಸಲ್ಲಿಸಿದ್ದ, ಶಿಸ್ತಿನ ಮತ್ತು ಜನಸೇವೆಗೆ ಹೆಸರು ಪಡೆದ ಪೊಲೀಸ್ ಅಧಿಕಾರಿ. ಅಪಘಾತದ ಮಾಹಿತಿ ತಿಳಿದ ಕೂಡಲೇ ಅಣ್ಣಿಗೇರಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆಯಿಂದ …
Read More »ಇಡಿ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ: ನಾಲ್ವರ ಬಂಧನ…
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಇಡಿ(ಜಾರಿ ನಿರ್ದೇಶನಾಲಯ) ಅಧಿಕಾರಗಳ ಹೆಸರಿನಲ್ಲಿ ವ್ಯಾಪಾರಿಯೊಬ್ಬರನ್ನು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಗಳನ್ನು ಅರೆಸ್ಟ್ ಮಾಡಿದ್ದು, ಇನ್ನುಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾಹಿತಿ ನೀಡಿದರು.ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಮಹಾರಾಷ್ಟ್ರ ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಬಂಧಿತರಿಂದ ಆರು ಲಕ್ಷಕ್ಕೂ ಅಧಿಕ ಮೌಲ್ಯದ ಆಭರಣ, 60 ಸಾವಿರ ನಗದು ಹಾಗೂ …
Read More »“ಬಸ್ ನಿಲ್ದಾಣದಲ್ಲಿ ನಡೆದ ವಂಚನೆ ಗ್ಯಾಂಗ್ ಬಯಲು – 4 ಜನ ಆರೋಪಿ ಬಂಧನ “
ನವೆಂಬರ್ 19, 2025ರಂದು ಮಧ್ಯಾಹ್ನ 3.15ಕ್ಕೆ ಹುಬ್ಬಳ್ಳಿ ಬಸ್ ನಿಲ್ದಾಣದ ಬಳಿ ನಡೆದ ವಂಚನೆ ಪ್ರಕರಣದಲ್ಲಿ, 5–6 ಜನರ ತಂಡವಾಗಿ ಕೆಲಸ ಮಾಡುತ್ತಿದ್ದ ಆರೋಪಿ ಗ್ಯಾಂಗ್ ಮೇಲೆ ಪೊಲೀಸರು ದಾಳಿ ನಡೆಸಿ, ಪ್ರಮುಖ ಆರೋಪಿ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಯೋಜನೆಬದ್ಧವಾಗಿ ಯಾತ್ರಿಕರನ್ನು ಮರುಗು ಮೂಡಿಸಿ, ಒಟ್ಟು ₹2.94 ಲಕ್ಷ ಮೌಲ್ಯದ ಚಿನ್ನ ಹಾಗೂ ₹2 ಲಕ್ಷ ನಗದು ಕಸಿದುಕೊಂಡಿದ್ದ ಈ ಗ್ಯಾಂಗ್ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ದೂರುಗಳು ದಾಖಲಾಗಿದ್ದವು. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





