ಹುಬ್ಬಳ್ಳಿ: ಹಳೇ ವೈಷಮ್ಯದ ಹಿನ್ನಲೆ ಯುವಕರಿಬ್ಬರಿಗೆ ಚಾಕು ಇರಿದ ಘಟನೆ ಆನಂದ ನಗರದ ಗೋಡಕೆ ಪ್ಲಾಟ್ ಬಳಿ ನಡೆದಿದೆ. ಸಮೀರ್ ಶೇಖ್ (18) ಹಾಗೂ ಚಿಕ್ಕಪ್ಪ ಜಾವೀದ್ ಶೇಖ್ (32) ಎಂಬ ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ. ಗಂಭೀರವಾಗಿ ಗಾಯಗೊಂಡ ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ… ಹಳೇ ಹುಬ್ಬಳ್ಳಿ ಠಾಣೆಯ ಇನ್ಸ್‌ಪೆಕ್ಟರ್ ಸುರೇಶ್ ಯಳ್ಳೂರು.. ತಂಡ ದೌಡಾಯಿಸಿ ಆರೋಪಿಗಾಗಿ ಬಲೆ ಬೀಸಿದ್ದಾರೆ…
Read More »ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಕ್ಷೇತ್ರ ತನಿಖಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ
ಧಾರವಾಡ: ಕೃಷಿ ವಿಶ್ವವಿದ್ಯಾಲಯ ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ವಿಸ್ತರಣೆ ಮತ್ತು ಸಂವಹನ ನಿರ್ವಹಣೆ ವಿಭಾಗದಲ್ಲಿನ ಒಂದು ಕ್ಷೇತ್ರ ತನಿಖಾಧಿಕಾರಿ ತಾತ್ಕಾಲಿಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಜನವರಿ 13, 2025 ರಂದು ಬೆಳಿಗ್ಗೆ 10.30 ಗಂಟೆಗೆ ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ಡೀನ್ ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು. ಮಾಹಿತಿಗಾಗಿ 0836-2214234 www.uasd. edu ವನ್ನು ಸಂಪರ್ಕಿಸಬಹುದೆಂದು ಕೃವಿವಿ ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ಡೀನ್ …
Read More »ಹುಬ್ಬಳ್ಳಿಯ ರೌಡಿಗಳಿಗೆ ಕಮಿಷನರ್ ಎನ್. ಶಶಿಕುಮಾರ್ ಖಡಕ್ ವಾರ್ನಿಂಗ್…!
ಹುಬ್ಬಳ್ಳಿ : ಅವಳಿ ನಗರದಲ್ಲಿ ಹಳಿ ತಪ್ಪಿದ ಕಾನೂನು ಸುವ್ಯವಸ್ಥೆ ಹಿನ್ನೆಲೆಯಲ್ಲಿ ಪುಡಿ ರೌಡಿಗಳ ಹಾವಳಿ ಹೆಚ್ಚಾಗಿದ್ದು, ಸಾಲು ಸಾಲು ಅಪರಾಧ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿವೆ. ಇನ್ನು ಈ ಸಂಬಂಧ ಹುಬ್ಬಳ್ಳಿ – ಧಾರವಾಡ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಪುಡಿ ರೌಡಿಗಳಿಗೆ ಖಡಕ್ ವಾರ್ನಿಂಗ್ ನೀಡಿ, ತರಾಟೆಗೆ ತೆಗೆದುಕೊಂಡರು.
Read More »ಕೊಲೆ ಪ್ರಕರಣವನ್ನು ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ಯಶಸ್ವಿಯಾದ ಬೆಂಡಿಗೇರಿ ಠಾಣೆಯ ಪೊಲೀಸರು
ಹುಬ್ಬಳ್ಳಿ ಖಡಕ್ ಖಾಕಿ ಕಾರ್ಯಾಚರಣೆ: ಕೊಲೆಗಡುಕರ ಹೆಡೆಮುರಿ.. ಕ್ರೌರ್ಯ ಮೆರೆದಿದ್ದವರನ್ನು ಕಂಬಿ ಹಿಂದೆ ಅಟ್ಟಿದ ಖಾಕಿ ಕಹಾನಿ.. ಹುಬ್ಬಳ್ಳಿ: ಬೆಂಡಿಗೇರಿ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ನಡೆದಿದ್ದ ಕೊಲೆ ಪ್ರಕರಣವನ್ನು ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ಬೆಂಡಿಗೇರಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು, ಮಂಟೂರ ರಸ್ತೆಯ ನಿವಾಸಿ ಸ್ಯಾಮ್ಯುಯೆಲ್ ಮಬ್ಬು (38) ಎಂಬಾತನನ್ನು ನಗರದ ಹೊರವಲಯದ ರಿಂಗ್ ರೋಡ್ ಬಳಿಯಲ್ಲಿ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಕೊಲೆ …
Read More »ಸಿಲಿಂಡರ್ ಸ್ಪೋಟದಿಂದ ಗಾಯಗೊಂಡಿದ್ದ ಮತ್ತೊಬ್ಬ ಮಾಲಾಧಾರಿ ಸಾವು: ಮೃತರ ಸಂಖ್ಯೆ 6ಕ್ಕೆ ಏರಿಕೆ
ಹುಬ್ಬಳ್ಳಿ: ಸಿಲಿಂಡರ್ ಸ್ಪೋಟದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಂದು 22 ವರ್ಷದ ಮಂಜುನಾಥ ಎಂಬ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಉಣಕಲ್‌ನಲ್ಲಿ ಕಳೆದ ರವಿವಾರ ನಡುರಾತ್ರಿ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ 9 ಜನರು ಗಂಭೀರವಾಗಿ ಗಾಯಗೊಂಡಿದ್ದರು. ಈ ಪೈಕಿ ಈಗಾಗಲೇ 5 ಜನ ಅಯ್ಯಪ್ಪ ಮಾಲಾಧಾರಿಗಳು ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಇಂದು ಬೆಳ್ಳಿಗ್ಗೆ 10.15ಕ್ಕೆ ಮಂಜುನಾಥ ವಾಗಮೋಡೆ ಎಂಬ …
Read More »ಗ್ಯಾಸ್ ಸಿಲಿಂಡರ್ ಸ್ಪೋಟದಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು: ಮೃತರ ಸಂಖ್ಯೆ 5ಕ್ಕೆ ಏರಿಕೆ
ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಅಯ್ಯಪ್ಪ ಮಾಲಾಧಾರಿಗಳ ಪೈಕಿ ಶನಿವಾರ ರಾತ್ರಿ ಶಂಕರ್ (30) ವರ್ಷದ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಉಣಕಲ್‌ನಲ್ಲಿ ರವಿವಾರ ಮಧ್ಯರಾತ್ರಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ 9 ಜನರು ಗಂಭೀರವಾಗಿ ಗಾಯಗೊಂಡಿದ್ದರು. ಈ ಪೈಕಿ 4 ಜನ ಅಯ್ಯಪ್ಪ ಮಾಲಾಧಾರಿಗಳು ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಕಳೆದೆರಡು ದಿನದಲ್ಲಿ ಮೃತಪಟ್ಟಿದ್ದರು. ಶನಿವಾರ ತಡರಾತ್ರಿ ಶಂಕರ …
Read More »ಹುಬ್ಬಳ್ಳಿಯ ಹಳೆ ಸಿಎಆರ್ ಮೈದಾನದಲ್ಲಿ ಮಾದಕ ವಸ್ತು ಪೆಡ್ಲರ್ಸ್ ಪರೇಡ್..
ಹುಬ್ಬಳ್ಳಿ: ದುಷ್ಕರ್ಮಿಗಳ ವಿರುದ್ಧದ ನಿರಂತರ ಕಾರ್ಯಾಚರಣೆಯಲ್ಲಿ ಹುಬ್ಬಳ್ಳಿ-ಧಾರವಾಡ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕಳೆದ 10 ವರ್ಷಗಳಲ್ಲಿ ದಾಖಲಾದ ಮಾದಕ ದ್ರವ್ಯ ಮತ್ತು ಮಾನಸಿಕ ಮಾದಕ (ಎನ್‌ಡಿಪಿಎಸ್) ಪ್ರಕರಣಗಳ ಆರೋಪಿಗಳ ಒಟ್ಟು 200 ಕ್ಕೂ ಹೆಚ್ಚು ವ್ಯಕ್ತಿಗಳ ಪರೇಡ್ ಅನ್ನು ಹು-ಧಾ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ನೇತೃದಲ್ಲಿ ನಡೆಸಿದರು. ಎಲ್ಲಾ ಆರೋಪಿಗಳನ್ನು ನಗರದ ಕಾರವಾರ ರಸ್ತೆಯಲ್ಲಿರುವ ಸಿಎಆರ್ ಮೈದಾನಕ್ಕೆ ಕರೆಸಿ ಪೆಡ್ಲರ್ಸ್ ಗಳಿಗೆ ಕಮಿಷನರ್ ಖಡಕ್ ವಾರ್ನಿಂಗ್ ನೀಡಿದರು …
Read More »ಹುಬ್ಬಳ್ಳಿ: ಹೊಸ ವರ್ಷ ಸಂಭ್ರಮಾಚರಣೆಗೆ ಪೊಲೀಸ್ ಇಲಾಖೆ ಹದ್ದಿನ ಕಣ್ಣು
ಹುಬ್ಬಳ್ಳಿ: ವರ್ಷವನ್ನು ಅದ್ದೂರಿಯಾಗಿ ಸ್ವಾಗತಿಸಿಕೊಳ್ಳಲು ನಗರದ ಜನರು ಪೂರ್ವಸಿದ್ಧತೆ ನಡೆಸುತ್ತಿದ್ದರೆ, ಶಾಂತಿಯುತ ಆಚರಣೆಗೆ ಪೊಲೀಸ್ ಇಲಾಖೆ ಮನರಂಜನೆ ಕಾರ್ಯಕ್ರಮಗಳನ್ನು ನಡೆಸುವ ಹೋಟೆಲ್‌ಗಳ ಮೇಲೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹದ್ದಿನ ಕಣ್ಣಿಡಲು ಮುಂದಾಗಿದೆ. ಕೆಲವು ಪ್ರತಿಷ್ಠಿತ ಹೋಟೆಲ್‌ಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಗ್ರಾಹಕರನ್ನು ಸೆಳೆಯಲು ಸಿದ್ಧತೆ ನಡೆಸಿವೆ. ಯುವಕರನ್ನು ಆಕರ್ಷಿಸಲು ಡಿಜೆ, ಮ್ಯೂಸಿಕ್ ಪಾರ್ಟಿಗಳನ್ನು ಆಯೋಜಿಸಿ, ಗಾಯಕರನ್ನು ಕರೆಸಿ ಸಂಗೀತ ರಾತ್ರಿ ನಡೆಸಲು ತೀರ್ಮಾನಿಸಿವೆ. ಬಹುತೇಕ ಹೋಟೆಲ್‌ಗಳು ಆಲಂಕಾರಿಕ ವಿದ್ಯುದ್ದೀಪಗಳಿಂದ …
Read More »ಅವಳಿ ನಗರದಲ್ಲಿ ಮತ್ತೆ ಸದ್ದು ಮಾಡಿದ ಪೊಲೀಸರ ಬಂದೂಕು: ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕ್ರಿಮಿನಲ್ ಮೇಲೆ ಫೈರಿಂಗ್
ಧಾರವಾಡ: ಅವಳಿ ನಗರದಲ್ಲಿ ಪೊಲೀಸ್ ಬಂದೂಕು ಮತ್ತೆ ಸದ್ದು ಮಾಡಿದೆ. ನಟೋರಿಯಸ್ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಹೌದು, ಮನೆ ಕಳ್ಳತನ ಪ್ರಕರಣದ ಆರೋಪಿ ಕ್ರಿಮಿನಲ್, ನಟೋರಿಯಸ್ ಪಾಲಾ ವೆಂಕಟೇಶ್ವರರಾವ್ ಎಂಬಾತನ ಎರಡು ಕಾಲಿಗೆ ಗುಂಡು ಬಿದಿದ್ದು, ಮೂಲತಃ ಆಂದ್ರಪ್ರದೇಶದ ಪಾಲಾ ವೆಂಕಟೇಶ್ವರರಾವ್, ಧಾರವಾಡದ ನವಲೂರಿನ ಮನೆಯೊಂದಕ್ಕೆ ಕನ್ನ ಹಾಕಿದ್ದ ಭೂಪ, ನಟೋರಿಯಸ್ ಕ್ರಿಮಿನಲ್‌ನನ್ನ ಬಂಧಿಸಿ ಹೆಚ್ಚಿನ ವಿಚಾರಣೆ ಕರೆದುಕೊಂಡು ಹೋದಾಗ ಪೊಲೀಸರ ಮೇಲೆ ದಾಳಿ ಮಾಡಿದ್ದಾನೆ. ಆರೋಪಿ ದಾಳಿ …
Read More »ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನ
ಧಾರವಾಡ : ರಾಷ್ಟ್ರೀಯ ಅಂಗವಿಕಲರ ಗ್ರಾಮೀಣ ಪುನರ್ವಸತಿ ಯೋಜನೆ ಅಡಿಯಲ್ಲಿ ಧಾರವಾಡ ತಾಲೂಕಿನ ನರೇಂದ್ರ ಹಾಗೂ ಚಿಕ್ಕಮಲ್ಲಿಗವಾಡ ಗ್ರಾಮ ಪಂಚಾಯತಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ವಿಕಲಚೇತನರು ಜನವರಿ 17, 2025 ರೊಳಗಾಗಿ ಅರ್ಜಿ ನಮೂನೆಯಲ್ಲಿ ವೈಯಕ್ತಿಕ ವಿವರಗಳನ್ನು ಬರೆದು ಧಾರವಾಡ ತಾಲೂಕಾ ಪಂಚಾಯತಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತ (ಎಂಆರ್‍ಡಬ್ಲ್ಯೂ)ರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





