Breaking News

Shaikh BigTv

ಹುಬ್ಬಳ್ಳಿಯಲ್ಲಿ ಮತ್ತೆ ಹರಿದ ನೆತ್ತರು: ವ್ಯಕ್ತಿಯ ಭೀಕರ ಕೊಲೆ

Featured Video Play Icon

ಹುಬ್ಬಳ್ಳಿ: ವ್ಯಕ್ತಿಯೋರ್ವನನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ ಘಟನೆ ಇಲ್ಲಿನ ನಗರದ ಹೊರವಲಯದ ಗದಗ ರಸ್ತೆಯಲ್ಲಿ ಗುರುವಾರ ತಡರಾತ್ರಿ ನಡೆದಿದ್ದು, ಕೊಲೆ ಮಾಡಿದ ಆರೋಪಿತರನ್ನು ಆದಷ್ಟು ಬೇಗ ಬಂಧನ ಮಾಡಲಾಗುವುದು ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್ ಹೇಳಿದರು. ಇಲ್ಲಿನ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, 38 ವರ್ಷದ ಸ್ಯಾಮ್ಯೂಯಲ್ ಎಂಬಾತನೇ ಕೊಲೆಯಾದ ವ್ಯಕ್ತಿಯಾಗಿದ್ದು, ಈತ ಹಂದಿ …

Read More »

ಹುಬ್ಬಳ್ಳಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು

ಹುಬ್ಬಳ್ಳಿ: ಹುಬ್ಬಳ್ಳಿಯ ಉಣಕಲ್‌ನ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟದಿಂದ ಗಾಯಗೊಂಡು ಇಲ್ಲಿನ ಕಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಒಂಬತ್ತು ಮಾಲಾಧಾರಿಗಳ ಪೈಕಿ ನಿಜಲಿಂಗಪ್ಪ ಬೇಪುರಿ (58), ಸಂಜಯ್​​ ಸವದತ್ತಿ (18) ಮೃತಪಟ್ಟಿದ್ದಾರೆ. ಈ ಇಬ್ಬರ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸರ್ಕಾರ ಘೋಷಣೆ ಮಾಡಿದೆ. ಮೃತ ನಿಜಲಿಂಗಪ್ಪ ಬೇಪುರಿ, ಸಂಜಯ್​​ ಸವದತ್ತಿ ಕುಟುಂಬಕ್ಕೆ ಪರಿಹಾರ ನೀಡಲಾಗುವುದು ಜಿಲ್ಲಾ ಉಸ್ತುವಾರಿ ಸಚಿವರಾದ ಸಚಿವ ಸಂತೋಷ್​ …

Read More »

ಸಿಎಂಗೆ ಮನವಿ ಪತ್ರ ಬರೆದ ಸಂತೋಷ ಲಾಡ್..

Featured Video Play Icon

BIGTV BIG IMPACT: ಸಿಎಂಗೆ ಮನವಿ ಪತ್ರ ಬರೆದ ಸಂತೋಷ ಲಾಡ್.. ಹುಬ್ಬಳ್ಳಿ: ಬೆಳಗಾವಿಯಲ್ಲಿ ಡಿ.26 ಮತ್ತು 27 ರಂದು ಹಮ್ಮಿಕೊಂಡಿರುವ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸ್ಮರಣೆಯು ಚಿರಕಾಲ ಇರಲು ರಾಜ್ಯ ಸರ್ಕಾರಿ ಅಧಿಕಾರಿಗಳು, ನೌಕರರು, ನಿಗಮ ಮಂಡಳಿಯ ಅಧಿಕಾರಿಗಳು, ನೌಕರರು ಕೆಲಸದ ದಿನಗಳಲ್ಲಿ ವಾರದಲ್ಲಿ ಒಂದು ದಿನ ಕಡ್ಡಾಯವಾಗಿ ಖಾದಿ ಧರಿಸಬೇಕು ಎಂಬ ಆದೇಶವನ್ನು ಹೊರಡಿಸಲು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವಂತೆ …

Read More »

ಸ್ವಾವಲಂಬಿ ಸಕಿ ಪ್ರೋಡ್ಯೂಜರ್ ಕಂಪನಿಯ ನಾಲ್ಕನೇಯ ವಾರ್ಷಿಕ ಸರ್ವಸಾಧಾರಣ ಸಭೆ

ಧಾರವಾಡ: ಉತ್ತರ ಕರ್ನಾಟಕದ ಮೊದಲನೇಯ ಮಹಿಳೆಯರ ಓಎಪ್‌ಪಿನಲ್ಲಿ ಸ್ವಾವಲಂಬಿ ಸಕಿ ಪ್ರೋಡ್ಯೂಜರ್ ಕಂಪನಿಯ 150 ಮಹಿಳೆಯರು ತಾವು ತಯಾರಿಸಿದ ಕರಕುಶಲ ವಸ್ತುಗಳನ್ನು ಹುಬ್ಬಳ್ಳಿಯ ವಿದ್ಯಾನಗರ ಶಿರೂರ ಪಾರ್ಕ್ ನಲ್ಲಿ ಅಥೆಂಟಿಕ್ ಕರ್ನಾಟಕ ಮಳಿಗೆಯಲ್ಲಿ ಹಾಗೂ ಏರ್‌ಪೋರ್ಟ್ ನಲ್ಲಿ ಅವಸರ್ ಸ್ಟಾಲ್ ನ್ನು ನಬಾರ್ಡ್ ನ ಸಹಯೋಗದೊಂದಿಗೆ ಸ್ಥಾಪಿಸಿ ಉತ್ತಮ ವ್ಯವಹಾರವನ್ನು ಮಾಡಿ ಸಫಲರಾಗಿದ್ದಾರೆ. ಸಕಿ ಪ್ರೋಡ್ಯುಜರ್ ಕಂಪನಿಯ ನಾಲ್ಕನೇಯ ವಾರ್ಷಿಕ ಸರ್ವಸಾಧಾರಣ ಸಭೆಯನ್ನು ಇದೇ ಡಿ.23 ರಂದು ನಗರದ ಜೆಎಸ್ಎಸ್ …

Read More »

ಅಧಿವೇಶನದಲ್ಲಿ ಮಹಾತ್ಮ ಗಾಂಧಿಯವರು ಒತ್ತು ನೀಡಿದ್ದ ಖಾದಿ ಉದ್ಯಮ ಈಗ ಅಳಿವಿನಂಚಿನಲ್ಲಿ….!

Featured Video Play Icon

ನೈಜ ಸತ್ಯ ಮರೆಮಾಚಿ ಕಾರ್ಯಕ್ರಮ ಮಾಡಲು ಹೊರಟ ಇಂದಿನ ಕಾಂಗ್ರೆಸ್!!! ಗಾಂಧಿಕಂಡ ಕನಸಿನ‌ ಬೆಳಗಾವಿ ಅಧಿವೇಶನಕ್ಕೆ 100 ವರ್ಷ. ಖಾದಿ ಗ್ರಾಮೋದ್ಯೋಗಕ್ಕೆ ಕೊಳ್ಳೆ ಇಡುತ್ತಾ ಇಂದಿನ ಕಾಂಗ್ರೆಸ್..?? ಗಾಂಧಿಜೀ ಕಂಡ ಕನಸು!! ನನಸು ಇನ್ನು ಹಗಲು ಕನಸು!! ಹುಬ್ಬಳ್ಳಿ: ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್​ ಅಧಿವೇಶನದ 100 ನೇ ವರ್ಷಾಚರಣೆಯ ನೆನಪಿಗಾಗಿ ಇದೇ ಡಿಸೆಂಬರ್ 26 ಮತ್ತು 27 ರಂದು ಬೆಳಗಾವಿಯಲ್ಲಿ ಐತಿಹಾಸಿಕ ಸಮಾವೇಶ ಆಯೋಜನೆಗೊಂಡಿದೆ. ಎಐಸಿಸಿ ಅಧಿವೇಶನದ …

Read More »

ಅವಳಿನಗರದಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಪ್ರಕರಣಗಳು.

ಡ್ರಗ್ಸ್ ಮುಕ್ತ ಅವಳಿ ನಗರ ನಿರ್ಮಾಣಕ್ಕೆ ಒತ್ತು ನೀಡಿ: ಪರಮೇಶ್ವರ ಇತ್ತೀಚಿನ ದಿನಗಳಲ್ಲಿ ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಹುಬ್ಬಳ್ಳಿ ಧಾರವಾಡ ನಗರಗಳನ್ನು ಡ್ರಗ್ಸ್ ಮುಕ್ತ ಮಾಡಲು ಪೊಲೀಸರು ಒತ್ತು ನೀಡಬೇಕಿದೆ. ಡ್ರಗ್ಸ್ ಸರಬರಾಜು ಮಾಡುವವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಅವರನ್ನು ಹತ್ತಿಕ್ಕುವ ಕೆಲಸಗಳು ಆಗಬೇಕಿದೆ. 2 ಸಾವಿರ ಜನರಲ್ಲಿ 800 ಜನರಿಗೆ ಪಾಸಿಟಿವ್ ಬಂದಿರುವುದು ಆತಂಕಕಾರಿ ವಿಷಯವಾಗಿದೆ. ಹೀಗಾಗಿ ವಿದ್ಯಾರ್ಥಿಗಳು ಡ್ರಗ್ಸ್ ಬಳಸದಂತೆ ತಿಳುವಳಿಕೆ ನೀಡಬೇಕಾಗಿದೆ. ಆ ನಿಟ್ಟಿನಲ್ಲಿ …

Read More »

ರಾಜ್ಯದ ವಿವಿಧ ಠಾಣೆಯಲ್ಲಿ ರೈತರ ಮೇಲೆ ದಾಖಲಾಗಿರುವ ಕೇಸ್ ಹಿಂಪಡೆಯುವ ಬಗ್ಗೆ ನಿರ್ಧಾರ: ಸಚಿವ ಡಾ.ಜಿ.ಪರಮೇಶ್ವರ್

ಹುಬ್ಬಳ್ಳಿ: ರಾಜ್ಯದ ವಿವಿಧ ಠಾಣೆಯಲ್ಲಿ ರೈತರ ಮೇಲೆ ದಾಖಲಾಗಿರುವಂತ ಕೇಸ್ ಹಿಂಪಡೆಯುವ ಬಗ್ಗೆ ಸಂಪುಟ ಸಭೆಯಲ್ಲಿ ಇರಿಸಿ, ನಿರ್ಧಾರ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಶೀಘ್ರವೇ ನಿರ್ಧಾರವನ್ನು ಪ್ರಕಟಿಸುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಈ ಮೂಲಕ ರಾಜ್ಯದ ರೈತರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಇಂದು ಹುಬ್ಬಳ್ಳಿಯ ವಿದ್ಯಾನಗರದಲ್ಲಿನ ನೂತನ ಪೊಲೀಸ್ ಠಾಣೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದ ರೀತಿಯಲ್ಲೇ …

Read More »

ಹುಬ್ಬಳ್ಳಿಯ ಕಿಮ್ಸ್ ಗೆ ಮೇಜರ್‌ ಸರ್ಜರಿಗೆ ಮುಂದಾದ ರಾಜ್ಯ ಸರ್ಕಾರ: ವ್ಯವಸ್ಥೆಯ ಕುರಿತು ಗಂಭೀರ ಚರ್ಚೆ

ಹುಬ್ಬಳ್ಳಿ: ಉತ್ತರ ಕರ್ನಾಟಕದ ಏಳು ಜಿಲ್ಲೆಗಳಿಗೆ ಹಾಗೂ ಹೊರ ರಾಜ್ಯದ ರೋಗಿಗಳು ದಾಖಲಾಗುವ ಕರ್ನಾಟಕದ ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದಾಗಿರುವ ಕಿಮ್ಸ್‌ ಆಸ್ಪತ್ರೆ ಹಾಗೂ ನಿರ್ದೇಶಕರ ಬಗ್ಗೆ ಇದೀಗ ಗಂಭೀರವಾದ ಚರ್ಚೆ ನಡೆದಿದೆ. ಕಿಮ್ಸ್‌ – ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ( ಕೆಎಂಸಿ&ಆರ್‌ಐ ) ಆಸ್ಪತ್ರೆಗೆ ನಿತ್ಯ ಸಾವಿರಾರು ಜನ ಬರುತ್ತಾರೆ. ಹಲವು ಪ್ರಮುಖ ವೈದ್ಯಕೀಯ ಸೇವೆಗಳನ್ನು ಇಲ್ಲಿ ಕೊಡಲಾಗುತ್ತದೆ. ಆದರೆ, ಸಿಲಿಂಡರ್‌ ಸ್ಫೋಟದಿಂದ ಗಾಯಗೊಂಡ …

Read More »

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ: ಕೇಂದ್ರ ಸಚಿವ ಜೋಶಿ ಹೇಳಿಕೆಗೆ ಸಚಿವ ಪರಮೇಶ್ವರ್ ತಿರುಗೇಟು

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಅಸಮರ್ಥ ಕೇಂದ್ರ ಸಚಿವ ಎಂದರೆ ಒಪ್ಪಿಕೊಳ್ತಾರಾ..? ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ. ಅದಕ್ಕೆ ಅವರು ಹಾಗೆ ಹೇಳಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ತಿರುಗೇಟು ನೀಡಿದರು. ‌ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮನ್ನ ಅಸಮರ್ಥ ಸಚಿವ ಎಂಬ ಕೇಂದ್ರ ಸಚಿವ ಜೋಶಿ ಅವರ ಹೇಳಿಕೆಗೆ ತಿರುಗೇಟು‌ ನೀಡಿದರು. ಸಿ.ಟಿ. ರವಿ ಪ್ರಕರಣವನ್ನು ಈಗಾಗಲೇ ಸಿಓಡಿ ತನಿಖೆಗೆ ಒಪ್ಪಿಸಲಾಗಿದೆ. …

Read More »

ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿ 2025ರ ಜೂನ್ ವೇಳೆಗೆ ಮುಕ್ತಾಯ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ಸಾವಿನ ಹೆದ್ದಾರಿ ಎಂದೇ ಕುಖ್ಯಾತಿಗೆ ಪಾತ್ರ ಆಗಿರುವ ಹುಬ್ಬಳ್ಳಿ – ಧಾರವಾಡ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿಯ ಬಗ್ಗೆ ಸಚಿವ ಪ್ರಹ್ಲಾದ ಜೋಶಿ ಅವರು ಬಿಗ್‌ ಅಪ್ಡೇಟ್ಸ್‌ ಕೊಟ್ಟಿದ್ದಾರೆ. ಈ ಮಾರ್ಗದಲ್ಲಿ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್‌ ಅವ್ಯಸ್ಥೆಯಿಂದ ಈ ಭಾಗದ ಜನ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಇಲ್ಲಿ ನಿರಂತರವಾಗಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳಿಂದ ನೂರಾರು ಜನ ಸಾವನ್ನಪ್ಪಿದ್ದಾರೆ. ಅಲ್ಲದೆ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ರಸ್ತೆಯನ್ನು ಅಗಲೀಕರಣ ಮಾಡಬೇಕು …

Read More »