ಹುಬ್ಬಳ್ಳಿ : ತಾಲೂಕಿನ ಮಂಟೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶ್ರೀ ವಲ್ಲಭೇಶ್ವರ ಕಾರ್ತಿಕೋತ್ಸವ ಹಾಗೂ ಸಹಸ್ರ ದೀಪೋತ್ಸವದ ಕಾರ್ಯಕ್ರಮದಲ್ಲಿ ಸರ್ವಧರ್ಮ ಸಮಾಜ ಸೇವಕ ಡಾ. ರಮೇಶ್ ಮಹಾದೇವಪ್ಪನವರು ಪಾಲ್ಗೊಂಡು ಕಾರ್ಯಕ್ರಮಕ್ಕೆ ಮೆರಗು ತಂದರು. ನಂತರ ದೇವರ ದರ್ಶನ ಪಡೆದು ಪುನೀತರಾದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಡಾ. ರಮೇಶ್ ಮಹಾದೇವಪ್ಪನವರ ಅವರಿಗೆ ವಿಶೇಷ ಸನ್ಮಾನ ಮಾಡಿ ಗೌರವಿಸಿದರು. ಈ ಕಾರ್ಯಕ್ರಮದಲ್ಲಿ ಪೂಜ್ಯ ಸ್ವಾಮೀಜಿ ಹಾಗೂ ಗುರು ಹಿರಿಯರು ಭಾಗಿಯಾಗಿದ್ದರು.
Read More »ಕಾರು, ಬೈಕ್ ಹಾಗೂ ಟಾಟಾ ಏಸ್ ವಾಹನಗಳ ಮಧ್ಯೆ ಸರಣಿ ಅಪಘಾತ
ಧಾರವಾಡ: ಕಾರು, ಬೈಕ್ ಹಾಗೂ ಟಾಟಾ ಏಸ್ ವಾಹನಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡದ ತೇಜಸ್ವಿನಗರ ರಸ್ತೆಯಲ್ಲಿ ಸಂಭವಿಸಿದೆ. ಪ್ರಶಾಂತ ಅಣ್ಣಿಗೇರಿ (25) ಎಂಬ ಯುವಕನೇ ಸಾವನ್ನಪ್ಪಿದ ದುರ್ದೈವಿ.ಇನ್ನೋರ್ವ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆತನಿಗೆ ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಕಾರು ಚಾಲಕನ ಅಜಾಗರೂಕತೆಯಿಂದ ಈ ಘಟನೆ ನಡೆದಿದೆ. ಇನ್ನು ಕಾರು ವಶಕ್ಕೆ ಪಡೆದ ಸಂಚಾರ ಠಾಣೆ ಪೊಲೀಸರು ಪ್ರಕರಣ …
Read More »ಆಂಜನೇಯನ ವೃತ ಹಿಡಿದು ಭಕ್ತಾದಿಗಳು ಪಾದಯಾತ್ರೆ
ನವಲಗುಂದ: ಪಟ್ಟಣದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಆಂಜನೇಯನ ವೃತ ಹಿಡಿದು ಮಹಾಪೂಜೆ ನಡೆಸಿ ಪಾಲಿಕೆ, ಮೆರವಣಿಗೆ ಮೂಲಕ ಭಕ್ತಾದಿಗಳು ಪಾದಯಾತ್ರೆ ಕೈಗೊಂಡರು. ಈ ಪಾದಯಾತ್ರೆಯು ಲಾಲಘಡ ಮಾರುತಿ ದೇವಸ್ಥಾನದಿಂದ ಪ್ರಾರಂಭಗೊಂಡು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಂಚರಿಸಿ, 14ಕಿಲೋ ಮೀಟರ್ ದೂರದಲ್ಲಿ ಇರುವ ಕಾಲವಾಡ ಗ್ರಾಮದ ಜೋಡ್ ಆಂಜನೇಯ ದೇವಸ್ಥಾನದವರೆಗೂ ನಡೆಯಿತು. ನೂರಾರು ಭಕ್ತರು ಈ ವಿಶೇಷ ಸಂದರ್ಭದಲ್ಲಿ ಭಾಗಿಯಾಗಿದ್ದರು
Read More »ಗಣೇಶ ಟ್ರಾವೆಲ್ಸ್ ಬಸ್ ಮತ್ತು ಟ್ಯಾಂಕರ್ ನಡುವೆ ಡಿಕ್ಕಿ
ಹುಬ್ಬಳ್ಳಿ: ಗಣೇಶ ಟ್ರಾವೆಲ್ಸ್ ಬಸ್ ಮತ್ತು ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬಸ್ನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಈ ಘಟನೆ ಅಂಕೋಲಾ ಬಳಿ ನಡೆದಿದೆ. ಹುಬ್ಬಳ್ಳಿಯಿಂದ ಅಂಕೋಲದತ್ತ ತೆರಳುತ್ತಿದ್ದ ಗಣೇಶ ಟ್ರಾವೆಲ್ಸ್ ಬಸ್, ಎದುರಿಗೆ ಬರುತ್ತಿದ್ದ ಟ್ಯಾಂಕರ್ ನಡುವೆ ಡಿಕ್ಕಿ ಸಂಬವಿಸಿದೆ. ಅಪಘಾತದಲ್ಲಿ ಬಸ್ನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ತೀವ್ರ ಗಾಯಗೊಂಡವರನ್ನು ಆ್ಯಂಬುಲೆನ್ಸ್ ಮೂಲಕ ಅಂಕೋಲಾ ಆಸ್ಪತ್ರೆಗೆ ರವಾನಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣಹಾನಿಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
Read More »ಮಹಿಳೆ ನಾಪತ್ತೆ ಠಾಣೆಗೆ ದೂರು
ಕುಂದಗೋಳ : ಮಹಿಳೆಯೋರ್ವಳು ಮನೆಯಿಂದ ಕಾಣೆಯಾದ ಬಗ್ಗೆ ಪತ್ತೆ ಮಾಡಿ ಕೊಡುವಂತೆ ಸಂಬಂಧಿಕರು ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕುಂದಗೋಳ ತಾಲೂಕಿನ ಕುಬಿಹಾಳ ಗ್ರಾಮದ ಲಕ್ಷ್ಮೀ ಗುರುಸಿದ್ದಪ್ಪ ರಡ್ಡರ್ (25) ವರ್ಷದ ಮಹಿಳೆ ಮನೆಯಿಂದ ಹೊರಗೆ ಹೋದವರು ಪುನಃ ಬಾರದೆ ಕಾಣೆ ಆಗಿದ್ದಾರೆ. ಡಿ.13 ರಂದು ಕಾಣೆಯಾದ ಲಕ್ಷ್ಮೀ ಎಂಬುವವರನ್ನು ಪತ್ತೆ ಮಾಡಿ ಕೊಡುವಂತೆ ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
Read More »ಯುವತಿಯೋರ್ವಳು ಯಾರಿಗೂ ಹೇಳದೆ ಕೇಳದೆ ಮನೆಯಿಂದ ಕಾಣೆ
ಲಕುಂದಗೋಳ: ಯುವತಿಯೋರ್ವಳು ಯಾರಿಗೂ ಹೇಳದೆ ಕೇಳದೆ ಮನೆಯಿಂದ ಕಾಣೆಯಾದ ಘಟನೆ ಕುಂದಗೋಳ ತಾಲೂಕಿನ ದೇವನೂರು ಗ್ರಾಮದಲ್ಲಿ ಡಿಸೆಂಬರ್ 13ರಂದು ನಡೆದಿದೆ. ದೇವನೂರು ಗ್ರಾಮದ ಐಶ್ವರ್ಯ ಮಂಜುನಾಥ ಕಮಡೊಳ್ಳಿ ಎಂಬ (18) ವರ್ಷದ ಯುವತಿ ಮನೆಯಿಂದ ಕಾಣೆಯಾಗಿದ್ದು, ಪೋಷಕರು ಯುವತಿಯನ್ನು ಪತ್ತೆ ಮಾಡಿ ಕೊಡುವಂತೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಕುರಿತು ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಪತ್ತೆ ಕಾರ್ಯ ನಡೆದಿದೆ.
Read More »ಎರಡು ಕುಟುಂಬಗಳ ಮಧ್ಯೆ ನಡೆದ ಜಗಳ
ಕುಂದಗೋಳ: ಕುಂದಗೋಳ ಪಟ್ಟಣದ ಅಂಬೇಡ್ಕರ್ ನಗರದಲ್ಲಿ ಎರಡು ಕುಟುಂಬಗಳ ಮಧ್ಯೆ ನಡೆದ ಜಗಳ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಕಳೆದ ಡಿಸೆಂಬರ್ 7ರಂದು ಕುಂದಗೋಳ ಪಟ್ಟಣದ ಬಸವರಾಜ ದೊಡ್ಡಮನಿ ಮತ್ತು ಮೀನಾಕ್ಷಿ, ನಿಂಗಪ್ಪ ಎಂಬುವರ ಮಧ್ಯೆ ಜಗಳ ನಡೆದಿತ್ತು. ಈ ವೇಳೆ ನನ್ನ ಮೇಲೆ 14 ಜನ ಆರೋಪಿಗಳು ಹಲ್ಲೆ ಮಾಡಿದ್ದಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ಬಸವರಾಜ ದೊಡ್ಡಮನಿ ಆರೋಪಿಸಿದ್ದಾರೆ. ಜೊತೆಗೆ 14 ಜನ …
Read More »ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ 73,811 ಪ್ರಕರಣಗಳು ಇತ್ಯರ್ಥ
ಧಾರವಾಡ : ಡಿಸೆಂಬರ 14 ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ರಾಜೀ ಆಗಬಹುದಾದಂತಹ 17,596 ಪ್ರಕರಣಗಳನ್ನು ತೆಗೆದುಕೊಂಡು ಅವುಗಳ ಪೈಕಿ 12,551 ಪ್ರಕರಣಗಳನ್ನು ಹಾಗೂ 63,013 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ತೆಗೆದುಕೊಂಡು ಅವುಗಳ ಪೈಕಿ 61,260 ಪ್ರಕರಣಗಳನ್ನು ಸೇರಿ ಒಟ್ಟು 73,811 ಪ್ರಕರಣಗಳನ್ನು ರಾಜೀ ಸಂಧಾನ ಮಾಡಿಸಲಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ ಇತ್ಯರ್ಥ ಪಡಿಸಿಕೊಂಡ ಒಟ್ಟು ಮೊತ್ತ 8,09,37,468 ರೂಪಾಯಿಗಳು. ನ್ಯಾಯಾಲಯದಲ್ಲಿ …
Read More »ಇನ್ಸ್ಪೆಕ್ಟರ್ ಸುರೇಶ್ ಯಳ್ಳೂರು ಮೇಲಿನ ಆರೋಪಕ್ಕೆ ತನಿಖೆಯಲ್ಲಿ ಸೂಕ್ತ, ಪೂರಕ ದಾಖಲೆ ಕಂಡಿಲ್ಲ: ಕಮಿಷನರ್ ಎನ್ ಶಶಿಕುಮಾರ್
ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಠಾಣೆಯಲ್ಲಿ ಕಳೆದ 2 ವರ್ಷಗಳಿಂದ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸುರೇಶ್ ಯಳ್ಳೂರ್ ಅವರು ಠಾಣೆಯ ಮಹಿಳಾ ಸಿಬ್ಬಂದಿಗಳಿಗೆ ಹಾಗೂ ಕೆಲವು ಸಹೋದ್ಯೋಗಿಗಳಿಗೆ ಕೆಲಸದ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಬೆಳ್ಳಿಗ್ಗೆ ಕಮಿಷನರ್ ಎನ್ ಶಶಿಕುಮಾರ್ ಅವರು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ತೆರಳಿ ಅಲ್ಲಿರುವ ಮಹಿಳಾ ಕಾನ್ಸ್ಟೇಬಲ್ ಗಳನ್ನು ವಿಚಾರಣೆ ನಡೆಸಿದ್ದಾರೆ. ಈ ಕುರಿತು ಸಿಬ್ಬಂದಿಗಳನ್ನು ವಿಚಾರಿಸಿದಾಗ ಇನ್ಸ್ಪೆಕ್ಟರ್ ಸುರೇಶ …
Read More »ಮಹದಾಯಿ ಯೋಜನೆ ಜಾರಿ ವಿಚಾರದಲ್ಲಿ ನಮ್ಮ ಸರ್ಕಾರ ಬದ್ಧವಿದೆ: ಡಿಕೆಶಿ
ಹುಬ್ಬಳ್ಳಿ: ಮಹದಾಯಿ ಯೋಜನೆ ಜಾರಿ ವಿಚಾರದಲ್ಲಿ ನಮ್ಮ ಸರ್ಕಾರ ಬದ್ಧವಿದೆ. ಟೆಂಡರ್ ಕರೆಯುವ ವಿಚಾರವಾಗಿ ನಾವು ಈಗಾಗಲೇ ಎಲ್ಲವನ್ನೂ ಸಿದ್ಧ ಮಾಡಿಕೊಂಡಿದ್ದೇವೆ. ಜಗದೀಶ ಶೆಟ್ಟರ್ ಹಾಗೂ ಪ್ರಹ್ಲಾದ್ ಜೋಶಿ ಇದರ ಬಗ್ಗೆ ಗಮನಹರಿಸಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಅರಣ್ಯ ಇಲಾಖೆ ಅನುಮತಿ ಸಿಗುವ ಭರವಸೆ ಇದೆ. ಅನುಮತಿ ಸಿಕ್ಕರೆ ಕಾಮಗಾರಿ ಆರಂಭ ಮಾಡಲಿದ್ದೇವೆ ಎಂದರು. ಇನ್ನು ಕೋವಿಡ್ ಹಗರಣದ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





