Breaking News

Shaikh BigTv

ಬೀದಿ ನಾಯಿಗಳ ಹಾವಳಿ ತಪ್ಪಿಸಬೇಕು: ಮಾಬುಸಾಬ ಯರಗುಪ್ಪಿ ಆಗ್ರಹ

ನವಲಗುಂದ : ಪಟ್ಟಣದಲ್ಲಿ ಇತ್ತೀಚಿಗೆ ಬೀದಿ ನಾಯಿಗಳ ಹಾವಳಿಯಿಂದ ಸಾರ್ವಜನಿಕರು ಓಡಾಡುವುದು ಕಷ್ಟವಾಗಿದ್ದು, ಸೂಕ್ತ ಕ್ರಮ ಜರುಗಿಸಿ ಬೀದಿ ನಾಯಿಗಳ ಹಾವಳಿ ತಪ್ಪಿಸಬೇಕೆಂದು ಸಮಾಜ ಸೇವಕ ಮಾಬುಸಾಬ ಯರಗುಪ್ಪಿ ಆಗ್ರಹ ಮಾಡಿದರು. ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ಎಸ್‌.ಪಿ.ಪೂಜಾರ ಅವರಿಗೆ ಮನವಿ ನೀಡಿ ಮಾತನಾಡಿದ ಅವರು ಪ್ರತಿ ವಾರ್ಡ್‌ಗಳಲ್ಲೂ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಐದರಿಂದ ಹತ್ತು ನಾಯಿಗಳ ಹಿಂಡು ಬೀದಿಗಳಲ್ಲಿ ಓಡಾಡುವ ಮೂಲಕ ಸಾರ್ವಜನಿಕರಲ್ಲಿ ಭಯ ಹುಟ್ಟಿಸುತ್ತಿವೆ, ಬೀದಿ …

Read More »

ಕ್ಷೌರಿಕರ ಮೇಲೆ ಬಿಜೆಪಿ ಮುಖಂಡನಿಂದ ದರ್ಪ

ಹುಬ್ಬಳ್ಳಿ: ತನ್ನ ಮಗನ ಹೇರ್ ಕಟಿಂಗ್ ವಿಚಾರವಾಗಿ ಬಿಜೆಪಿ‌ ಮುಖಂಡನಿಂದ ಮೂರು ಜನ‌ ಕ್ಷೌರಿಕರ ಮೇಲೆ ಹಲ್ಲೆ ನಡೆಸಿದ ಘಟನೆ ಹುಬ್ಬಳ್ಳಿಯ ನವನಗರದಲ್ಲಿರುವ ಹೇರ್ ಕಟಿಂಗ್ ಸಲೂನ್ ನಲ್ಲಿ ನಡೆದಿದೆ. ತನ್ನ ಮಗನ ಹೇರ್ ಕಟಿಂಗ್ ವಿಚಾರವಾಗಿ ಸಲೂನ್ ನಲ್ಲಿದ್ದ ಕ್ಷೌರಿಕರಿಗೆ ಮನಬಂದಂತೆ ಥಳಿಸಿದ ಬಿಜೆಪಿ ಮುಖಂಡ ವಿಜಯಕುಮಾರ ಅಪ್ಪಾಜಿ ಹುಬ್ಬಳ್ಳಿಯ ನವನಗರದ ನಿವಾಸಿ. ಹಲವು ಬಿಜೆಪಿ ಮುಖಂಡರ‌ ಜೊತೆ ಗುರುತಿಸಿಕೊಂಡಿರುವ ವಿಜಯ ಕುಮಾರ ಅಪ್ಪಾಜಿ ನವನಗರದಲ್ಲಿರುವ ಲೊರೇಲ್ ಸಲೂನ್ …

Read More »

ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು. ಗುರುವಾರ ಪ್ರತಿಭಟನೆ ನಡೆಸಿ, ಆಶಾ ಕಾರ್ಯಕರ್ತೆಯರಿಗೆ ಸೇವಾ ಭದ್ರತೆ ಒದಗಿಸಬೇಕು ಹಾಗೂ ವೇತನ ಹೆಚ್ಚಳ ಮಾಡಬೇಕು ಎಂದು ಆಶಾ ಕಾರ್ಯಕರ್ತೆಯರು ಸರ್ಕಾರಕ್ಕೆ ಮನವಿ ಸಲ್ಲಿಸಿದರು.

Read More »

ಹುಬ್ಬಳ್ಳಿಯಲ್ಲಿ ಲಾಟಿಚಾರ್ಜ್‌ ಖಂಡಿಸಿ ಪ್ರತಿಭಟನೆ

ಹುಬ್ಬಳ್ಳಿ – ಧಾರವಾಡದ ವಾರ್ಡ್ ನಂ.30 ಮತ್ತು 31ರ ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿ ಸೇರಿಕೊಂಡು ಬೆಳಗಾವಿ ವಿಧಾನಸೌಧದ ಮುಂದೆ ಹೋರಾಟದ ಸಮಯದಲ್ಲಿ ಲಾಠಿ ಚಾರ್ಜ್ ಮಾಡಿದ್ದನ್ನು ಹಾಗೂ ವಿರೋಧ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಅರವಿಂದ ಬೆಲ್ಲದ ಅವರ ಮೇಲೆ ನಡೆದಂತ ಲಾಠಿ ಚಾರ್ಜ್‌ ಅನ್ನು ಖಂಡಿಸಿ ಗೋಕುಲ್ ರೋಡ ಮಂಜುನಾಥ ನಗರದ ಕ್ರಾಸ್ ನಲ್ಲಿಂದು ಪ್ರತಿಭಟನೆ ಮಾಡಿದರು.

Read More »

ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆ ಹಿಡಿದು ಕೆಲಕಾಲ ಪ್ರತಿಭಟನೆ

ಅಣ್ಣಿಗೇರಿ : ಬಸವ ಜಯ ಮೃತ್ಯುಂಜಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಲಿಂಗಾಯಿತ ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಹೋರಾಟವನ್ನು ಬೆಳಗಾವಿಯ ಸುವರ್ಣ ವಿಧಾನ ಸೌಧದ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನೆ ನಿಯಂತ್ರಿಸಲು ಲಾಠಿಚಾರ್ಜ್ ನಡೆಸಿದ ಹಿನ್ನೆಲೆಯಲ್ಲಿ ಸುಮಾರು ಜನರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೋರಾಟಗಾರರ ಮೇಲೆ ಪೊಲೀಸರ ಹಲ್ಲೆಯನ್ನು ಸಮಸ್ತ ಅಣ್ಣಿಗೇರಿ ತಾಲೂಕಿನ ಲಿಂಗಾಯತ ಪಂಚಮಸಾಲಿ ಸಮಾಜ ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿ, ಇಂದು ಪಟ್ಟಣದಲ್ಲಿ …

Read More »

ಪಂಚಮಸಾಲಿ ಸಮಾಜದ ವತಿಯಿಂದ ರಸ್ತೆ ತಡೆದು ಪ್ರತಿಭಟನೆ

ನವಲಗುಂದ : 2ಎ ಮೀಸಲಾತಿಗಾಗಿ ನಡೆಯುತ್ತಿದ್ದ ಹೋರಾಟವನ್ನ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹತ್ತಿಕ್ಕುವ ಕುತಂತ್ರ ಮಾಡಿದ್ದರಿಂದಲೇ ಇಷ್ಟೊಂದು ರಾದ್ಧಾಂತ ನಡೆದಿದೆ ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಕಿಡಿಕಾರಿದರು. ಪಂಚಮಸಾಲಿ ಹೋರಾಟದ ವೇಳೆ ರಾಜ್ಯ ಸರಕಾರ ಲಾಠಿ ಚಾರ್ಜ ಮಾಡಿದ್ದನ್ನು ಖಂಡಿಸಿ ಪಟ್ಟಣದ ಬಸ್ ನಿಲ್ದಾಣದ ಎದುರಿಗೆ ಹೆದ್ದಾರಿ ತಡೆದು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ಶ್ರೀಗಳ ನೇತೃತ್ವದಲ್ಲಿ ನಡೆದ ಹೋರಾಟ ಶಾಂತಿಯುತವಾಗಿ ನಡೆದಿತ್ತು. ಆದರೆ, ವ್ಯವಸ್ಥಿತವಾಗಿ …

Read More »

ಕಾರು ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ

ಧಾರವಾಡ: ಕಾರು ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡ ತಾಲೂಕಿನ ಯರಿಕೊಪ್ಪ ಬಳಿಯ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದೆ. ಮೂಲತಃ ಬೆಂಗಳೂರು ಮೂಲದವರಾದ ಮೂರು ಜನ ಈ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಕಾರಿನಲ್ಲಿ ನಾಲೈದು ಜನ ಗೋವಾ ಕಡೆಯಿಂದ ಮರಳಿ ಬೆಂಗಳೂರಿನತ್ತ ತೆರಳುತ್ತಿದ್ದರು. ಈ ವೇಳೆ ಹುಬ್ಬಳ್ಳಿ ಕಡೆಯಿಂದ ಪುಣೆ ಕಡೆ ಹೋಗುತ್ತಿದ್ದ ಲಾರಿ ಈ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ …

Read More »

ಅನ್ನದಾತನ ಹೊಲಕ್ಕೆ ಕನ್ನಾ ಹಾಕಿದ ಖದೀಮರು

ಕುಂದಗೋಳ : ಅನ್ನದಾತನ ತೋಟಕ್ಕೆ ಕನ್ನ ಹಾಕಿದ ದುಷ್ಕರ್ಮಿಗಳು ತೋಟದಲ್ಲಿ ಬೆಳೆದಂತಹ ಗಿಡಗಳನ್ನು ಕಳ್ಳತನ ಮಾಡಿರುವ ದುಷ್ಕೃತ್ಯ ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದಲ್ಲಿ ನಡೆದಿದೆ. ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದ 209/9 ಮತ್ತು 209/10 ಸರ್ವೇ ನಂಬ‌ರ್ ಜಮೀನಿನ ತೋಟದಲ್ಲಿ ರೈತ ಬೆಳೆದ 30 ಸಾವಿರ ಮೌಲ್ಯದ ಬಿದಿರಿನ ಮರ, 5 ಸಾವಿರ ಮೌಲ್ಯದ ಅಕೆಶಿಯಾ ಗಿಡ, 15 ಸಾವಿರ ತೆಂಗಿನಮರ, 50 ಸಾವಿರ ಮೌಲ್ಯದ ಗಂಧದ ಮರಗಳನ್ನು ನೂಲ್ವಿ …

Read More »

ಸಿಎಂ ವಿರುದ್ಧ ಕಿಡಿಕಾರಿದ ಶೆಟ್ಟರ್

ಹುಬ್ಬಳ್ಳಿ: ಪಂಚಮಸಾಲಿ ಲಿಂಗಾಯತ ಸಮುದಾಯದ ಮೀಸಲಾತಿಗಾಗಿ ಸುವರ್ಣಸೌಧದ ಮುಂದೆ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದ ಸಮುದಾಯದ ಸದಸ್ಯರ ಮೇಲೆ, ನಿನ್ನೆ ನಡೆದ ಲಾಠಿಚಾರ್ಜ್ ಅಮಾನುಷವಾದದ್ದು, ಅತ್ಯಂತ ಖಂಡನೀಯವಾದದ್ದು, ಅಧಿಕಾರದ ದುರುಪಯೋಗ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್‌ ಸರ್ಕಾರ ಹಾಗೂ ಸಿದ್ದರಾಮಯ್ಯ ಅವರ ಈ ಸರ್ವಾಧಿಕಾರಿ ಧೋರಣೆಗೆ ಧಿಕ್ಕಾರ. ಧರಣಿಯನ್ನು ಹತ್ತಿಕ್ಕುವ ಭರದಲ್ಲಿ ಪೊಲೀಸರಿಂದ ಧರಣಿ ನಿರತರ ಮೇಲೆ ಹಲ್ಲೆ ನಡೆಸಿ, ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದ ನಿಮ್ಮ ನಡೆಯನ್ನು ನಾವು ಖಂಡಿಸುತ್ತೇವೆಂದು ಸಂಸದ ಜಗದೀಶ್ ಶೆಟ್ಟರ್ …

Read More »

ಸರಕಾರದ ವರ್ಚಸ್ಸು ಹೆಚ್ಚಿಸುವಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಪಾತ್ರ ಮಹತ್ವದ್ದು; ಅವರಿಂದ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಸಾಧ್ಯ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ : ಜನರ ಕಲ್ಯಾಣಕ್ಕಾಗಿ ಸರಕಾರಗಳು ಜಾರಿಗೆ ತರುವ ಪ್ರತಿ ಯೋಜನೆ, ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಮತ್ತು ನಿಯಮಾನುಸಾರ ಅನುಷ್ಠಾನವಾಗಲು ಗ್ರಾಮ ಆಡಳಿತ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ. ಗ್ರಾಮ ಆಡಳಿತ ಅಧಿಕಾರಿಗಳು ತಮ್ಮ ಕಾರ್ಯಶೈಲಿ, ತತಕ್ಷಣದ ಸ್ಪಂದನೆಗಳ ಮೂಲಕ ಕ್ಷೇತ್ರಮಟ್ಟದಿಂದ ಸರಕಾರದ ವರ್ಚಸ್ಸು ಹೆಚ್ಚಿಸುತ್ತಾರೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಅವರು ಇಂದು ಮಧ್ಯಾಹ್ನ ನಗರದ ರೇವೆನ್ಯೂ ಕ್ಲಬ್ ಆವರಣದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲೂಕು ಕಚೇರಿ …

Read More »