ಧಾರವಾಡ : ಸಹಕಾರ ಇಲಾಖೆಯಿಂದ ಕರ್ನಾಟಕ ಲೇವಾದೇವಿಗಾರರ ಅಧಿನಿಯಮ 1961 ಹಾಗೂ ನಿಯಮಾವಳಿಗಳು 1965 ರನ್ವಯ ನೋಂದಾಯಿತ ಆಗಿರುವ ಖಾಸಗಿ ಲೇವಾದೇವಿಗಾರರು ಹೆಚ್ಚಿನ ಬಡ್ಡಿ ವಸೂಲು ಮಾಡಿದರೆ, ಅವರ ಲೈಸನ್ಸ್ ರದ್ದುಪಡಿಸಿ, ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಅವರು ಇಂದು ಮಧ್ಯಾಹ್ನ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಜಿಲ್ಲೆಯ ಖಾಸಗಿ ಲೇವಾದೇವಿದಾರರು, ಮೈಕ್ರೋ ಪೈನಾನ್ಸ್ ಮತ್ತು ಪೈನಾನ್ಸ್ ಸಂಸ್ಥೆಗಳ …
Read More »ಡಿ. 9 ರಂದು ಜಿಲ್ಲೆಯಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಆಚರಣೆ
ಧಾರವಾಡ : ಡಿಸೆಂಬರ 9 ರಂದು ಹಮ್ಮಿಕೊಂಡಿರುವ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಅಂಗವಾಗಿ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಗಂಣದಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಸಮನ್ವಯ ಸಮಿತಿ ಸಭೆಯನ್ನು ಜರುಗಿಸಲಾಯಿತು. ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಸುಜಾತಾ.ವಿ.ಹಸವೀಮಠ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದಂದು ಜಿಲ್ಲೆಯ 1 ರಿಂದ 19 ವರ್ಷದ ಒಳಗಿನ 5,80,127 ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ ನೀಡುವ ಗುರಿಯನ್ನು ನಿಗದಿಪಡಿಸಲಾಗಿದೆ. …
Read More »ಡಾ.ಬಿ.ಆರ್.ಅಂಬೇಡ್ಕರವರ ತತ್ವ, ಆದರ್ಶಗಳನ್ನು ನಾವೇಲ್ಲರೂ ಅಳವಡಿಸಿಕೊಳ್ಳೋಣ : ಡಾ.ಅರುಣಕುಮಾರ ಸಿ
ಧಾರವಾಡ : ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ(ಡಿಮ್ಹಾನ್ಸ್) ಸಭಾಂಗಣದಲ್ಲಿ ಬಾಬಾ ಸಾಹೇಬ ಡಾ.ಬಿ.ಆರ್.ಅಂಬೇಡ್ಕರ ಅವರ 68ನೇ ಮಹಾ ಪರಿನಿರ್ವಾಣ ದಿನದ ಪ್ರಯುಕ್ತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಗೌರವ ನಮನಗಳನ್ನು ಸಲ್ಲಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಡಿಮ್ಹಾನ್ಸ್ ಸಂಸ್ಥೆಯ ನಿರ್ದೇಶಕ ಡಾ.ಅರುಣಕುಮಾರ ಸಿ ಅವರು ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರವರ ತತ್ವ, ಆದರ್ಶಗಳನ್ನು ನಾವೇಲ್ಲರೂ ಅಳವಡಿಸಿಕೊಳ್ಳೋಣ ಮತ್ತು ಅವರ …
Read More »ಸೇತುವೆ ನಿರ್ಮಾಣಕ್ಕೆ ಶಾಸಕ ಕೋನರಡ್ಡಿ ಭೂಮಿ ಪೂಜೆ
ಅಣ್ಣಿಗೇರಿ: ಕೊಂಡಿಕೊಪ್ಪ ಗ್ರಾಮದಲ್ಲಿ ಕೊಂಡಿಕೊಪ್ಪ ಕುರ್ತಕೋಟಿ ರಸ್ತೆಯ ಸವಳ ಹಳ್ಳಕ್ಕೆ ಸಣ್ಣ ನೀರಾವರಿ ಇಲಾಖೆಯಿಂದ ರೂ. 2.47 ಕೋಟಿ ಅನುದಾನದಲ್ಲಿ ಸೇತುವೆ ನಿರ್ಮಾಣಕ್ಕೆ ಶಾಸಕ ಕೋನರಡ್ಡಿ ಅವರು ನೆರವೇರಿಸಿ, ಮಾತನಾಡಿ ಅವರು ಹಳ್ಳದ ಆಚೆ ಇರುವ ಕೊಂಡಿಕೊಪ್ಪ ಗ್ರಾಮದ ರೈತರ ಜಮೀನುಗಳಿಗೆ ಹಳ್ಳದಾಟಿ ಹೋಗಲು ದೊಡ್ಡ ಸಮಸ್ಯೆಯಾಗಿತ್ತು. ಸಮಸ್ಯೆಗೆ ಪರಿಹಾರ ಕಂಡುಹಿಡಿಯಲು ಪೂಜೆ ಮಾಡಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಗ್ರಾಮದ ಬಸ್ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳ ಸಲುವಾಗಿ ಮನವಿ …
Read More »ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಎಸ್ಕೆಪ್
ಧಾರವಾಡ: ಮನೆ ಮುಂದೆ ನಿಲ್ಲಿಸಿದ್ದ ಬೈಕ್ನ್ನು ಖದೀಮರು ಹೊತ್ತೊಯ್ದಿರುವ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ನಡೆದಿದೆ. ಉಪ್ಪಿನ ಬೆಟಗೇರಿ ಗ್ರಾಮದ ಬಸವರಾಜ ಪಟ್ಟಣಶೆಟ್ಟಿ ಎಂಬುವವರಿಗೆ ಸೇರಿದ ಬೈಕನ್ನೇ ಖದೀಮರು ಹೊತ್ತೊಯ್ದಿದ್ದಾರೆ. ಶನಿವಾರ ಸಂತೆಗೆಂದು ಬಸವರಾಜ ಬೈಕ್ ತೆಗೆದುಕೊಂಡು ಬಂದು ಮುತ್ತೂರ ಅವರ ಮನೆ ಎದುರು ನಿಲ್ಲಿಸಿ ಹೋಗಿದ್ದ. ಅಷ್ಟರಲ್ಲಾಗಲೇ KA-25 EY0473 ಸಂಖ್ಯೆಯ ಬೈಕ್ನ್ನು ಖದೀಮರು ತೆಗೆದುಕೊಂಡು ಹೋಗಿದ್ದಾರೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕಳ್ಳತನ …
Read More »ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಸಂತೋಷ್ ಲಾಡ್
ಹುಬ್ಬಳ್ಳಿ: ಬಡವರಿಗೆ ಭೂಮಿ ಕೊಟ್ಟವರು ಕಾಂಗ್ರೆಸ್ನವರು. ಉಳುವವನೆ ಭೂಮಿ ಒಡೆಯ ಕಾರ್ಯಕ್ರಮ ಮಾಡಿದ್ದೇ ಕಾಂಗ್ರೆಸ್, ಬಿಜೆಪಿ ಅವಾಗ ಸಾಹುಕಾರ ಪರವಾಗಿ ಕಾರ್ಯಕ್ರಮಕ್ಕೆ ವಿರೋಧ ಮಾಡಿದ್ದರು ಎಂದು ಹುಬ್ಬಳ್ಳಿಯಲ್ಲಿ ಸಚಿವ ಸಂತೋಷ್ ಲಾಡ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಬಾಣಂತಿಯರ ಸಾವು ವಿಚಾರಕ್ಕೆ ಸಂಬಂಧ ಪಟ್ಟ ಸಚಿವರು ಉತ್ತರ ಕೊಟ್ಟಿದ್ದಾರೆ. ಅದರ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ ಎಂದರು. ವಕ್ಸ್ ವಿರೋಧಿಸಿ …
Read More »58,000 ಕಾರ್ಡ್ ಗಳಲ್ಲಿ 20 ಸಾವಿರ ನಕಲಿ ಕಾರ್ಡ್ ಗಳನ್ನು ಗುರುತಿಸಿ ರದ್ದು ಮಾಡಲಾಗಿದೆ : ಸಂತೋಷ ಲಾಡ್
ಹುಬ್ಬಳ್ಳಿ : ನಕಲಿ ಕಾರ್ಮಿಕ ಕಾರ್ಡ್ ಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಮರೋಪಾದಿಯಲ್ಲಿ ಇಲಾಖೆ ಕಾರ್ಯನಿರ್ವಹಿಸುತ್ತಿದೆ. ಈ ನಿಟ್ಟಿನಲ್ಲಿ 20 ಸಾವಿರ ನಕಲಿ ಕಾರ್ಡ್ ರದ್ದು ಮಾಡಿದ್ದೇವೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, 58,000 ಕಾರ್ಡ್ ಗಳಲ್ಲಿ 20 ಸಾವಿರ ನಕಲಿ ಕಾರ್ಡ್ ಗಳನ್ನು ಗುರುತಿಸಿ ರದ್ದು ಮಾಡಲಾಗಿದೆ. ಅಂಬೇಡ್ಕರ್ ಸೇವಾ ಕೇಂದ್ರದ ಮೂಲಕ 43 ಝೂನ್ ಮಾಡಿದ್ದೇವೆ. ಈ …
Read More »ಮುಸಲ್ಮಾನರು ನಮ್ಮ ಬ್ರದರ್ಸ್ ಅಂತ ಡಿ.ಕೆ ಶಿವಕುಮಾರ್ ಹೇಳಿದ್ದು, ಕುಕ್ಕರ್ನಲ್ಲಿ ಬಾಂಬ್ ಇಟ್ಟವರನ್ನಲ್ಲ : ಲಾಡ್
ಹುಬ್ಬಳ್ಳಿ: ಬಿಜೆಪಿಯವರು ನಮ್ಮ ಸ್ನೇಹಿತರು. ನಾವು ಅವರನ್ನ, ಅವರು ನಮ್ಮನ್ನ ಗೌರವಿಸಬೇಕು. ಮಾನವತಾವಾದಿ ಆ ಪುಣ್ಯಾತ್ಮ ಬಸವಣ್ಣನವರಿಗೆ ಬೈದು ನಿಮಗೆ ಏನು ಅನುಕೂಲ ಆಗುತ್ತೆ?. ಅನುಕೂಲ ಆಗೋದಾದ್ರೆ ದೇವರು ನಿಮಗೆ ಒಳ್ಳೇದು ಮಾಡ್ಲಿ ಎಂದು ಸಚಿವ ಸಂತೋಷ್ ಲಾಡ್ ವ್ಯಂಗ್ಯವಾಡಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮುಸಲ್ಮಾನರು ನಮ್ಮ ಬ್ರದರ್ಸ್ ಅಂತ ಡಿ.ಕೆ ಶಿವಕುಮಾರ್ ಹೇಳಿದ್ದು, ಕುಕ್ಕರ್ನಲ್ಲಿ ಬಾಂಬ್ ಇಟ್ಟವರನ್ನಲ್ಲ ಎಂದರು. ಬಿಜೆಪಿ ಸರ್ಕಾರದಲ್ಲಿ ಮುಸ್ಲಿಂ ಸಚಿವರು ಇರಲಿಲ್ವಾ..? …
Read More »ಅಕ್ರಮ ಮಣ್ಣು, ಮರಳು ದಂಧೆಗೆ ನಲುಗಿದ ಅವಳಿ ನಗರ…
ಕಾಣದ ಕೈ ಹಿಡಿತದಲ್ಲಿ ಮಣ್ಣು ಮರಳು ದಂಧೆ!!!! ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಭರೆ ಹಾಕೊ ಲೆಕ್ಕದಲ್ಲಿ ಆರಕ್ಷರ ನಡೆ!!!! ಮಣ್ಣಿನಿಂದ ಮಣ್ಣಾದವರ ಕಥೆ ಗೊತ್ತಿಲ್ವಾ ಈ ಭೂಪನಿಗೆ!!! ಅಕ್ರಮ ಮಣ್ಣು ಮರಳು ದಂಧೆ ಕರಾಳ ಮುಖದ ಇಂಚಿಂಚು ಮಾಹಿತಿ ನಿಮ್ಮ ಮುಂದೆ…. ಸಣ್ಣವರಮುಂದೆ ಹೀರೋ…. ಕೈಗೆ ಸಿಗಲಾದವನ ಮುಂದೆ ಜೀರೊ ಆದ ಸೂಪರ್ ಪವರ…..!!! ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡದಲ್ಲಿ ಒಂದಲ್ಲಾ ಒಂದು ಘಟನೆಗಳು ಸದ್ದು ಮಾಡುತ್ತಿರುತ್ತವೆ. ಈಗ ಅವ್ಯಾಹತ …
Read More »ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ (ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ) ತರಬೇತಿಗಾಗಿ ಅರ್ಜಿ ಸಲ್ಲಿಸುವ ಅವಧಿ ಡಿ. 18 ವರೆಗೆ ವಿಸ್ತರಣೆ
ಧಾರವಾಡ : 2024-25 ನೇ ಸಾಲಿಗೆ ಭಾರತೀಯ ಶುಶ್ರೂಷಾ ಪರಿಷತ್ತಿನ ಮಾರ್ಗಸೂಚಿಯಂತೆ ಧಾರವಾಡ ಜಿಲ್ಲೆಯಲ್ಲಿರುವ ಸರ್ಕಾರಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರಿಗೆ ತರಬೇತಿ ಕೇಂದ್ರಕ್ಕೆ 24 ತಿಂಗಳ ತರಬೇತಿಗಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಡಿಸೆಂಬರ 18 ವರೆಗೆ ವಿಸ್ತರಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿಗಳನ್ನು www.karhfw.gov.in ವೆಬ್ ಸೈಟ್ನಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





