Breaking News

Shaikh BigTv

ಪಂಚಮಸಾಲಿ ಮೀಸಲಾತಿ ಹೋರಾಟ ಪೂರ್ವಭಾವಿ ಸಭೆ

ನವಲಗುಂದ: ಪಟ್ಟಣದ ಗವಿಮಠ ದಾಸೋಹ ಭವನದಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟ ಪೂರ್ವಭಾವಿ ಸಭೆ ಕೂಡಲಸಂಗಮದ ಜಯಬಸವ ಮೃತ್ಯುಂಜಯ ಮಹಾಸ್ವಾಮಿಗಳು ನೇತೃತ್ವದಲ್ಲಿ ಜರುಗಿತು. ಈ ವೇಳೆ ಶ್ರೀಗಳು ಮಾತನಾಡಿ, ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದ ವೇಳೆ ಸರ್ಕಾರದ ಗಮನ ಚಳಿಯಲು ಪ್ರತಿಗ್ರಾಮ, ಪಟ್ಟಣದ ರೈತರು ತಮ್ಮ ಟ್ರಾಕ್ಟರ್ ಗಳ ಮೂಲಕ ಸುವರ್ಣಸೌದಕ್ಕೆ ಮುತ್ತಿಗೆ ಹಾಕಲು ರಾಜ್ಯದ ಮೂಲೆಗಳಿಂದ ಆಗಮಿಸುತ್ತಿದ್ದಾರೆ ಮುತ್ತಿಗೆ ಹಾಕಲು ಬರುವ ಜನರು ತಮ್ಮ ರೊಟ್ಟಿ ಬುತ್ತಿಯನ್ನು ಕಟ್ಟಿಕೊಂಡು ಬರುವಂತೆ …

Read More »

ವಿದ್ಯಾಕಾಶಿಗೆ ಆಗಮಿಸಿದ ನಟ, ನಿರ್ದೇಶಕ ಉಪೇಂದ್ರ

ಧಾರವಾಡ: ಮಾದಕ ವಸ್ತುಗಳನ್ನು ಬಳಕೆ ಮಾಡದಂತೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಹುಬ್ಬಳ್ಳಿ, ಧಾರವಾಡ ಪೊಲೀಸ್ ಕಮಿಷನರೇಟ್ ವತಿಯಿಂದ ಧಾರವಾಡದ ಜೆಎಸ್‌ಎಸ್ ಕಾಲೇಜಿಗೆ ನಟ, ನಿರ್ದೇಶಕ ಉಪೇಂದ್ರ ಅವರು ಆಗಮಿಸಿದ್ದರು. ಉಪೇಂದ್ರ ಅವರು ಹುಬ್ಬಳ್ಳಿಯಿಂದ ಧಾರವಾಡದ ಜೆಎಸ್‌ಎಸ್‌ ಕಾಲೇಜಿಗೆ ಬರುವುದು ಸುಮಾರು ಎರಡು ಗಂಟೆಯಷ್ಟು ತಡವಾಯಿತು. ಅಷ್ಟರಲ್ಲಾಗಲೇ ಜೆಎಸ್‌ಎಸ್‌ ಕಾಲೇಜು ಮೈದಾದನದಲ್ಲಿ ದೊಡ್ಡ ಪ್ರಮಾಣದಲ್ಲೇ ವಿದ್ಯಾರ್ಥಿಗಳು ಜಮಾಯಿಸಿದ್ದರು. ನಟ ಉಪೇಂದ್ರ ಅವರು ಬರುವುದು ತಡವಾಗಿದ್ದರಿಂದ ವಿದ್ಯಾರ್ಥಿಗಳಿಗಾಗಿ ಅನೇಕ ಹಾಡುಗನ್ನು ಹಾಕಿ …

Read More »

ಕಳ್ಳತನದ ಆರೋಪದಲ್ಲಿ ಜೈಲು ಪಾಲಾಗಿದ್ದ ಮೆಕ್ಯಾನಿಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ

ಹುಬ್ಬಳ್ಳಿ: ಕಳೆದ ಹತ್ತು ದಿನಗಳ ಹಿಂದೆ ಆನಂದ ನಗರದಲ್ಲಿ ಕಳ್ಳತನದ ಆರೋಪದಲ್ಲಿ ಜೈಲು ಪಾಲಾಗಿದ್ದ ಮೆಕ್ಯಾನಿಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಪೊಲೀಸರ ಕಿರುಕುಳದಿಂದಲೇ ಪತಿ ಸಾವನಪ್ಪಿದ್ದಾರೆ ಎಂದು ಮೃತ ಮೆಕ್ಯಾನಿಕ್ ಮಹಾಂತೇಶನ ಹೆಂಡತಿ ತನಿಖೆ ನಡೆಸುವಂತೆ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಸದ್ಯ ಈ ಪ್ರಕರಣಕ್ಕೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಆತ್ಮಹತ್ಯೆ ಮಾಡಿಕೊಂಡ ಮಹಾಂತೇಶ್ ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದ ಎನ್ನಲಾಗಿದೆ. ಈಗ ಈ ಡೆತ್ …

Read More »

ಹಾಡಹಗಲೇ ವ್ಯಕ್ತಿಗೆ ಚಾಕು ಇರಿತ

ಧಾರವಾಡ: ಹಾಡಹಗಲೇ ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಸಂಭವಿಸಿದೆ. ಗರಗ ಗ್ರಾಮದ ಗಿರೀಶ ಕರಡಿಗುಡ್ಡ ಎಂಬುವವರೇ ಹತ್ಯೆಗೀಡಾದವರು. ಹತ್ಯೆ ಮಾಡಿದವರು ಯಾರು? ಯಾವ ಉದ್ದೇಶಕ್ಕಾಗಿ ಹತ್ಯೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಗಿರೀಶ ಅವರು ಸಣ್ಣ ಪುಟ್ಟ ರಿಯಲ್ ಎಸ್ಟೇಟ್ ಕೆಲಸ ಹಾಗೂ ಕಾರುಗಳನ್ನು ಕೊಡಿಸುವ ಮತ್ತು ತೆಗೆದುಕೊಳ್ಳುವ ಕೆಲಸ ಮಾಡುತ್ತಿದ್ದರು ಎಂದು ಗೊತ್ತಾಗಿದೆ. ಮಂಗಳವಾರ ಮಧ್ಯಾಹ್ನ ಗಿರೀಶ ತಮ್ಮ ಮನೆ …

Read More »

ಸಂಚಾರಿ ನಿಯಮಗಳ ಪಾಲನೆಯಿಂದ ಎಲ್ಲ ಸಂಚಾರಿಗಳು ಸುರಕ್ಷಿತ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ: ರಸ್ತೆ ಸಂಚಾರಿ ನಿಯಮಗಳನ್ನು ಪ್ರತಿಯೊಬ್ಬರು ಪಾಲಿಸುವದರಿಂದ ಎಲ್ಲ ಸಂಚಾರಿಗಳು ಸುರಕ್ಷಿತವಾಗಿರುತ್ತಾರೆ. 2024 ರ ಜನೆವರಿಯಿಂದ ನವೆಂಬರವರಗೆ ಅವಳಿನಗರದಲ್ಲಿ 118 ವಾಹನ ಅಪಘಾತ ಪ್ರಕರಣಗಳಾಗಿದ್ದು, ಇದರಲ್ಲಿ 126 ಜನ ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದಿಂದ ಆಯೋಜಿಸಿದ್ದ ಎಲ್.ಇ.ಡಿ ಸ್ಕ್ರೀನ್ ಹೊಂದಿರುವ ವಾಹನಗಳ ಮೂಲಕ …

Read More »

ಶ್ರೀ ಪರ್ವತ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ದೀಪೋತ್ಸವ ಕಾರ್ಯಕ್ರಮ

ನವಲಗುಂದ: ಪಟ್ಟಣದ ಗಾಂಧಿ ಮಾರುಕಟ್ಟೆಯಲ್ಲಿ ಇರುವ ಶ್ರೀ ಪರ್ವತ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಕೂಡಾ ಇಂದು ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ಜರುಗಿತು. ದೇವಸ್ಥಾನದ ಮುಂಭಾಗ ರಂಗೋಲಿಯಿಂದ ಸಿಂಗರಿಸಿ, ಮಣ್ಣಿನ ಹಣತೆಯಲ್ಲಿ ದೀಪಗಳನ್ನು ಹಚ್ಚಿ ಕಾರ್ತಿಕೋತ್ಸವ ಆಚರಣೆ ಮಾಡಲಾಯಿತು. ನಗರದ ಜನತೆ ಕಾರ್ತಿಕೋತ್ಸವದಲ್ಲಿ ಭಾಗಿಯಾಗಿ ದೀಪಗಳನ್ನು ಬೆಳಗಿಸಿ, ದೇವಸ್ಥಾನದ ವತಿಯಿಂದ ಕಲ್ಪಿಸಲಾದ ಪ್ರಸಾದ ಸ್ವೀಕರಿಸಿ ಮಲ್ಲಿಕಾರ್ಜುನನ ಕೃಪೆಗೆ ಪಾತ್ರರಾದರು.

Read More »

ಕನಕದಾಸರ ಭವ್ಯ ಮೂರ್ತಿ ಭವ್ಯ ಮೆರವಣಿಗೆ

ಅಣ್ಣಿಗೇರಿ: ಪಟ್ಟಣದಲ್ಲಿ ಕನಕದಾಸರ ಜಯಂತಿಯ ನಿಮಿತ್ಯ ಕನಕದಾಸರ ಭವ್ಯ ಮೂರ್ತಿಯನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಈ ಮೆರವಣಿಗೆಗೆ ದಾಸೋಹ ಮಠದ ಡಾ. ಶ್ರೀ ಶಿವಕುಮಾರ ಶ್ರೀಗಳು ಹಾಗೂ ಶಾಸಕರಾದ ಕೋನರಡ್ಡಿ ಮತ್ತು ವಿನೋದ್ ಅಸೂಟಿಯವರು ರಿಬ್ಬನ್ ಕಟ್ ಮಾಡುವ ಮುಖಾಂತರ ಚಾಲನೆ ನೀಡಿದರು. ಇನ್ನು ಈ ಮೆರವಣಿಗೆಯಲ್ಲಿ ಡೊಳ್ಳು ಮೇಳ ಕುಂಭಮೇಳದವರು ಪಾಲ್ಗೊಂಡು ಮೆರವಣಿಗೆಗೆ ಮೆರಗು ತಂದರು.

Read More »

ಬಿಜೆಪಿಯಲ್ಲಿನ ಆಂತರಿಕ ಕಚ್ಚಾಟರಿಂದ ಲಕ್ಷಾಂತರ ಜನ ಕಾರ್ಯಕರ್ತರಿಗೆ ಬೇಸರ ಉಂಟಾಗಿದೆ : ಬೆಲ್ಲದ

ಧಾರವಾಡ: ಸದ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಆಂತರಿಕ ಕಚ್ಚಾಟಕ್ಕೆ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಬೇಸರ ವ್ಯಕ್ತಡಿಸಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿನ ಆಂತರಿಕ ಕಚ್ಚಾಟರಿಂದ ಲಕ್ಷಾಂತರ ಜನ ಕಾರ್ಯಕರ್ತರಿಗೆ ಬೇಸರ ಉಂಟಾಗಿದೆ. ಬಿಜೆಪಿಗಾಗಿ ಹಗಲು, ರಾತ್ರಿ ಲಕ್ಷಾಂತರ ಜನ ಕಾರ್ಯಕರ್ತರು ದುಡಿದಿದ್ದಾರೆ. ಯಾವುದೇ ಫಲಾಪೇಕ್ಷೆ ಇಲ್ಲದೇ ಬಹಳ ವರ್ಷಗಳಿಂದ ದುಡಿದಿದ್ದಾರೆ. ಪಕ್ಷದ ಸಂಸ್ಥಾಪಕ ಶಾಮ ಪ್ರಸಾದ್‌ ಮುಖರ್ಜಿ ದೇಶಕ್ಕಾಗಿ ಜೀವ ಕಳೆದುಕೊಂಡಿದ್ದಾರೆ. ಅವರು ಆರ್ಟಿಕಲ್ …

Read More »

ಜನರಿಗೆ 24×7 ಕುಡಿಯುವ ನೀರನ್ನು ವದಗಿಸುವ ಬಹುದೊಡ್ಡ ಕನಸು ಇಂದು ಯಶಸ್ವಿಯಾಗಿದೆ: ಕೋನರಡ್ಡಿ

ಅಣ್ಣಿಗೇರಿ: ಪಟ್ಟಣದ ಜನರಿಗೆ 24×7 ಕುಡಿಯುವ ನೀರನ್ನು ವದಗಿಸುವ ಬಹುದೊಡ್ಡ ಕನಸು ಇಂದು ಯಶಸ್ವಿಯಾಗಿದೆಸದ್ಯ ಪ್ರತಿದಿನ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಶಾಸಕ ಕೋನರಡ್ಡಿ ಹೇಳಿದರು. ಅವರು ಪಟ್ಟಣದ ಪುರಸಭೆ ಸಭಾಭವನದಲ್ಲಿ ನಡದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಪಟ್ಟಣದ ಜನರು ಮೊದಲು ನೀರಿನ ಸಮಸ್ಯೆಯನ್ನು ಎದರುಸುತ್ತಿದ್ದರು. ಆದರೆ ಇಂದು ಅಣ್ಣಿಗೇರಿ ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರು ಸರಬರಾಜು ವ್ಯವಸ್ಥೆಯನ್ನು ಕಲ್ಪಿಸುವುದರಜೊತೆಗೆ 24×7ನಿರಂತರ ನೀರು ಪೂರೈಕೆ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲಾಗಿದೆ. ಜನರಿಗೆ ಪ್ರತಿದಿನ …

Read More »

ರೈತರು ಹೆಚ್ಚಿನ ಪರಿಶ್ರಮ ಪಟ್ಟರೆ ಕೃಷಿ ಹಾಗೂ ತೋಟಗಾರಿಕೆಯನ್ನು ಲಾಭದಾಯಕವಾಗಿಸಬಹುದಾಗಿದೆ: ಕೋನರಡ್ಡಿ

ನವಲಗುಂದ: ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿ ಕಂಪೌಂಡ ಗೋಡೆ ಹಾಗೂ ಕಾಂಕ್ರೀಟ್ ರಸ್ತೆ ಕಾಮಗಾರಿಯ ಭೂಮಿ ಪೂಜೆಯನ್ನು ಶಾಸಕ ಎನ್ ಎಚ್ ಕೋನರಡ್ಡಿ ನೇರವೆರಿಸಿದರು. ಈ ವೇಳೆ ಮಾತನಾಡಿದ ಅವರು ಇಲಾಖೆಯಿಂದ ಬೆಳೆಸುತ್ತಿರುವ ಸಸಿ ಹಾಗೂ ಗಿಡಗಳ ವೀಕ್ಷಣೆ ವೇಳೆ ಮಾತನಾಡಿದ ಅವರು ರೈತರು ಹೆಚ್ಚಿನ ಪರಿಶ್ರಮ ಪಟ್ಟರೆ ಕೃಷಿ ಹಾಗೂ ತೋಟಗಾರಿಕೆಯನ್ನು ಲಾಭದಾಯಕವಾಗಿಸಬಹುದಾಗಿದೆ ಎಂದರು. ಇದೆ ವೇಳೆ ಅಧಿಕಾರಿಗಳು ನೀರಿನ ಕೊರತೆ ಇದೆ ಎಂದು ತಿಳಿಸಿದಾಗ. ಪುರಸಭೆ ಅಧಿಕಾರಿಗಳಿಗೆ …

Read More »