ಧಾರವಾಡ: ಕಲಘಟಗಿ ತಾಲೂಕಿನ ವಿವಿಧ ಗ್ರಾಮಗಳಿಗೆ ಸರಿಯಾಗಿ ಬಸ್ ಗಳನ್ನು ಬಿಡದೆ ಹೋದರೆ ಬಸ್ ಡಿಪೋ ಮುಚ್ಚಿ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹುಬ್ಬಳ್ಳಿ ಧಾರವಾಡ ಡಿಪೋ ಮ್ಯಾನೇಜರ್ ಅವರನ್ನು ತರಾಟೆಗೆ ತೆಗೆದುಕೊಂಡರು. ಕಲಘಟಗಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನ ಸಭೆಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿ, ಕಲಘಟಗಿಯಲ್ಲಿ ಬಸ್ ಡಿಪೋ ಮಾಡಿದರೂ ಸಮಸ್ಯೆ ನಿವಾರಣೆಯಾಗಿಲ್ಲ. ವಿವಿಧ …
Read More »ಅಪ್ರಾಪ್ತ ವಯಸ್ಸಿನ ಬಾಲಕಿಗೆ ಚುಡಾಯಿಸಿದ ಪುಂಡರು ಇದೀಗ ಪೋಲಿಸರ್ ಅತಿಥಿ
ಹುಬ್ಬಳ್ಳಿ: ಹಳೇಹುಬ್ಬಳ್ಳಿ ಪೋಲೀಸ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಚುಡಾಯಿಸಿದ ಪುಂಡರನ್ನು ಪತ್ತೆ ಹಚ್ಚಿದ ಹಳೇಹುಬ್ಬಳ್ಳಿ ಪೋಲೀಸರು ಅವರನ್ನು ಜೈಲಿಗೆ ಅಟ್ಟಿದ್ದಾರೆ. ಅಪ್ರಾಪ್ತ ಬಾಲಕಿ ಬೆನ್ನು ಬಿದ್ದು ಚುಡಾಯಿಸಿದ್ದ ಬೀದಿ ಕಾಮಣ್ಣರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಸಿಸಿಟಿವಿ ದೃಶ್ಯಗಳನ್ನು ಇಟ್ಟುಕೊಂಡು ಪೋಲೀಸರು ಆರೆಸ್ಟ್ ಮಾಡಿದ್ದಾರೆ.ಬೀದಿ ಕಾಮಣ್ಣರ ಕಾಟದಿಂದ ಬಾಲಕಿ ಓಡಿಹೋದರೂ ಬೈಕ್ ನಲ್ಲಿ ಬಂದು ಅಡ್ಡ ಹಾಕಿ ಚುಡಾಯಿಸಿದ್ದರು. ಸ್ಥಳೀಯರು ಪ್ರಶ್ನೆ ಮಾಡುತ್ತಲೇ ಎಸ್ಕೆಪ್ ಆಗಿದ್ದ ಬೀದಿ ಕಾಮಣ್ಣರು …
Read More »ತಂಬಾಕು ಮುಕ್ತ ಯುವ ಅಭಿಯಾನ ಜಿಲ್ಲೆಯ 187 ಶಾಲೆಗಳು ಮತ್ತು 4 ಗ್ರಾಮಗಳು ತಂಬಾಕು ಮುಕ್ತ
ಧಾರವಾಡ: ಭಾರತ ಸರ್ಕಾರದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಅಭಿಯಾನದ ತಂಬಾಕು ಮುಕ್ತ ಯುವ ಅಭಿಯಾನ ಕಾರ್ಯಕ್ರಮವನ್ನು ಸೆ. 24, 2024 ರಿಂದ ಹಮ್ಮಿಕೊಳ್ಳಲಾಗಿತ್ತು. ಸುಮಾರು 63 ಹೆಚ್ಚು ಜನ ಜಾಗೃತಿ ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಸಂಘಟಿಸಲಾಗಿತ್ತು. ಧಾರವಾಡ ಜಿಲ್ಲೆಯಲ್ಲಿ 60 ದಿನಗಳ ತಂಬಾಕು ಮುಕ್ತ ಯುವ ಅಭಿಯಾನದಲ್ಲಿ ಧಾರವಾಡ ಜಿಲ್ಲೆಯಲ್ಲಿನ 187 ಶಾಲೆಗಳನ್ನು ಮತ್ತು 4 ಗ್ರಾಮಗಳನ್ನು ತಂಬಾಕು ಮುಕ್ತಗೊಳಿಸಲಾಗಿದೆ. ಧಾರವಾಡ ತಾಲೂಕಿನ ಗರಗ ಪ್ರಾಥಮಿಕ …
Read More »ರಂಗಭೂಮಿಗೆ ಬಾಳಾಚಾರ್ ಅವರ ಕೊಡುಗೆ ಅಪಾರ
ಧಾರವಾಡ: ರಂಗಾಯಣದ ಪಂ. ಬಸವರಾಜ ರಾಜುಗುರು ಬಯಲು ರಂಗಮಂದಿರದಲ್ಲಿ ಧಾರವಾಡ ರಂಗಾಯಣ ಹಾಗೂ ಸಕ್ಕರಿ ಬಾಳಾಚಾರ್ (ಶಾಂತಕವಿ) ಟ್ರಸ್ಟ್ ಸಹಯೋಗದೊಂದಿಗೆ ಆಧುನಿಕ ಕನ್ನಡ ರಂಗಭೂಮಿ ದಿನದ ಅಂಗವಾಗಿ ಆಯೋಜಿಸಿದ್ದ 3 ದಿನಗಳ ನಾಟಕೋತ್ಸವವನ್ನು ಸಕ್ಕರಿ ಬಾಳಾಚಾರ್ (ಶಾಂತಕವಿ) ಟ್ರಸ್ಟ್ನ ಅಧ್ಯಕ್ಷ ಬಾಬುರಾವ್ ಸಕ್ಕರಿ ಅವರು ಉದ್ಘಾಟಿಸಿ, ಸಕ್ಕರಿ ಬಾಳಾಚಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸಿದರು. ಉತ್ತರ ಕರ್ನಾಟಕದಲ್ಲಿ ಮರಾಠಿ ನಾಟಕಗಳು ಹೆಚ್ಚು ಪ್ರಚಲಿತವಾಗಿದ್ದನ್ನು ಕಂಡು ಕನ್ನಡಿಗರಲ್ಲಿ ಕನ್ನಡ ಪ್ರಜ್ಞೆಯನ್ನು ಜಾಗೃತಗೊಳಿಸುವ …
Read More »ಉತ್ತರ ಕರ್ನಾಟಕ ಭಾಗದಲ್ಲಿ 127 ಬಸ್ ಗಳ ಸಂಚಾರಕ್ಕೆ ಹಸಿರು ನಿಶಾನೆ
ಹುಬ್ಬಳ್ಳಿ: ಕರ್ನಾಟಕದ ವಾಯುವ್ಯ ಕರ್ನಾಟ ರಸ್ತೆ ಸಾರಿಗೆ ಸಂಸ್ಥೆಗೆ ಅತ್ಯಧಿಕ ಬಸ್ಗಳು ಬೇಕು ಉತ್ತಮವಾದ ಹೊಸ ಬಸ್ಗಳಿಗೆ ಬಹುದಿನಗಳಿಂದ ಬೇಡಿಕೆ ಇತ್ತು ಅದೀಗ ನೆರವೇರಿದ್ದು, ಸಾರಿಗೆ ಸಚಿವರು ಇಂದು ಉತ್ತರ ಕರ್ನಾಟಕ ಭಾಗದಲ್ಲಿ 127 ಹೊಸ ಬಸ್ಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿದ್ದಾರೆ. ಹುಬ್ಬಳ್ಳಿಯ ಗೋಕುಲ ರಸ್ತೆಯ ಎಚ್.ಡಿ.ಬಿ.ಆರ್.ಟಿ.ಎಸ್. ಘಟಕದಲ್ಲಿ ಇಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 27ನೇ ಸಂಸ್ಥಾಪನಾ ದಿನಾಚರಣೆ ಸಮಾರಂಭ ನಡೆಸಲಾಯಿತು. ಈ ವೇಳೆ ರಾಜ್ಯ …
Read More »ಕರ್ನಾಟಕ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಸ್ಪೀಡ್ ಸ್ಕೆಟಿಂಗ್ ವಿಭಾಗದಲ್ಲಿ ಹುಬ್ಬಳ್ಳಿ ಯುವಕರ ಸಾಧನೆ
ಹುಬ್ಬಳ್ಳಿ: ಬೆಂಗಳೂರು ಹಾಗೂ ಮೈಸೂರ್ನಲ್ಲಿ ನಡೆದ 40 ಕರ್ನಾಟಕ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಸ್ಪೀಡ್ ಸ್ಕೆಟಿಂಗ್ ವಿಭಾಗದಲ್ಲಿ ಹುಬ್ಬಳ್ಳಿ ರೋಲರ್ ಸ್ಕೆಟಿಂಗ್ ಅಕಾಡೆಮಿಯ ಮಕ್ಕಳಾದ ನಂದೀಶ್ ಸುರೇಬಾನ ಒಂದು (ಚಿನ್ನದ ಪದಕ), ಅಗಸ್ಯ ಒಂದು (ಬೆಳ್ಳಿಯ ಪದಕ), ಸ್ವರ ಪಾಟೀಲ್ ಒಂದು (ಬೆಳ್ಳಿಯ ಪದಕ, ಸಮರ್ಥ ಮರಾಠ ಒಂದು (ಕಂಚಿನ ಪದಕ), ಹಾಗೂ ಆರ್ಟಿಸ್ಟಿಕ್ ವಿಭಾಗದಲ್ಲಿ ಕಸ್ತೂರಿ ಮಠದ್ ಒಂದು (ಕಂಚಿನ ಪದಕ) ಪಡೆದಿದ್ದಾರೆ. ಈ ಮಕ್ಕಳಿಗೆ ಅಕ್ಷಯ್ ಸೂರ್ಯವಂಶಿಯವರು ತರಬೇತಿ …
Read More »ರೈತರಿಗೆ ಹೆಚ್ಚಿನ ಪರಿಹಾರ ಬಿಡುಗಡೆ ಮಾಡಲು ಶಾಸಕ ಎನ್.ಎಚ್.ಕೋನರಡ್ಡಿ ಒತ್ತಾಯ
ಅಣ್ಣಿಗೇರಿ: ಇತ್ತೀಚೆಗೆ ಸುರಿದ ಮಳೆಯಿಂದ ಹಾನಿಯಾದ ಬೆಳೆ ವೀಕ್ಷಣೆಗಾಗಿ ರಾಜ್ಯ ಸರ್ಕಾರ ನೇಮಿಸಿದ ಅಧಿಕಾರಿಗಳ ತಾಲೂಕಿನ ವಿವಿಧೆಡೆ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಿತು. ಈ ವೇಳೆ ರೈತರಿಗೆ ಹೆಚ್ಚಿನ ಪರಿಹಾರ ಬಿಡುಗಡೆ ಮಾಡಲು ಶಾಸಕ ಎನ್.ಎಚ್.ಕೋನರಡ್ಡಿ ಒತ್ತಾಯಿಸಿದರು. ಈ ವೇಳೆ ಮಾತನಾಡಿದ ತಂಡದ ಮುಖ್ಯಸ್ಥೆ, ಉಡುಪಿಯ ಅಪರ ಜಿಲ್ಲಾಧಿಕಾರಿ ಮಮತಾ ಗೌಡರ, ನಿರಂತರವಾಗಿ ಸುರಿದ ಮಳೆಯಿಂದ ಗೋವಿನಜೋಳ, ಹತ್ತಿ, ಈರುಳ್ಳಿ, ಮೆಣಸಿನಕಾಯಿ, ಶೇಂಗಾ ಸೇರಿದಂತೆ ತಾಲೂಕಿನಲ್ಲಿ ಕೃಷಿ ಹಾಗೂ ತೋಟಗಾರಿಕೆ …
Read More »ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲ್ಲುವ ಭರವಸೆ ಇದೆ : ಲಾಡ್
ಹುಬ್ಬಳ್ಳಿ: ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲ್ಲುವ ಭರವಸೆ ಇದೆ. ಅಲ್ಲದೇ ಗೆಲುವಿನ ಚಿತ್ರಣ ನಮಗೆ ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಮಗೆ ಜನರ ಆಶೀರ್ವಾದದ ಮೇಲೆ ವಿಶ್ವಾಸವಿದೆ. ನಮ್ಮ ಕಾಂಗ್ರೆಸ್ಸಿನ ಜನಪರ ಕಾಳಜಿಯನ್ನು ನೋಡಿ ಜನರು ಸಂಡೂರು, ಚನ್ನಪಟ್ಟಣ ಹಾಗೂ ಶಿಗ್ಗಾಂವಿ ಚುನಾವಣೆಯಲ್ಲಿ ಆಶೀರ್ವಾದ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಗೆಲ್ಲುವ ಚಿತ್ರಣ ಮೇಲ್ನೋಟಕ್ಕೆ ಕಂಡು …
Read More »ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಂತೋಷ ಲಾಡ್
ಹುಬ್ಬಳ್ಳಿ: ಕೇಂದ್ರದ ಬಿಜೆಪಿ ಸರ್ಕಾರ ಆಪರೇಷನ್ ಕಮಲ ನಿರಂತರ ಪ್ರಯತ್ನ ಮಾಡುತ್ತಿದೆ. ಆಪರೇಷನ್ ಕಮಲ ಮಾಡುವುದರಲ್ಲಿ ಬಿಜೆಪಿ ನಿಸ್ಸಿಮರು. ಕಳೆದ 16 ತಿಂಗಳಿಂದ ನಿರಂತರ ಪ್ರಯತ್ನ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ತಮ್ಮ ಜೊತೆ ಜನ ಬೆಂಬಲ ಇದೆ ಅದನ್ನೇ ಹೇಳಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನೂರು ಸ್ಮಾರ್ಟ್ ಸಿಟಿ ಮಾಡುವುದಾಗಿ ಹೇಳಿದ್ರು, ಏನಾಗಿದೆ ಎಲ್ಲಿದೆ ಸ್ಮಾರ್ಟ್? …
Read More »ಪಿ.ಸಿ.ಜಾಬಿನ್ಸ್ ಕಾಲೇಜ್ ಪ್ರಾಧ್ಯಾಪಕ ನೇಣಿಗೆ ಶರಣು
ಹುಬ್ಬಳ್ಳಿ:ಪಿ.ಸಿ.ಜಾಬಿನ್ಸ್ ಕಾಲೇಜ್ ಪ್ರಾಧ್ಯಾಪಕರೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಲ್ಲಿನ ವಿದ್ಯಾನಗರದ ಜೆ.ಜಿ.ಕಾಮರ್ಸ್ ಕಾಲೇಜಿನ ಹಿಂಭಾಗದ ಕ್ವಾಟರ್ಸ್ ಮನೆಯಲ್ಲಿ ನಡೆದಿದೆ. ದಾವಣಗೆರೆ ಮೂಲದ ಪ್ರವೀಣ್ ಕುಮಾರ್ ಯು.ಆರ್ (35) ಎಂಬಾತರೇ ನೇಣಿಗೆ ಶರಣಾಗಿದ್ದಾರೆ. ನವೆಂಬರ್ 13 ರ ರಾತ್ರಿ ಬೆಳಗಿನ ಜಾವ 3 ಗಂಟೆಯ ವೇಳೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ. ನೇಣಿಗೆ ಶರಣಾಗಿರುವ ಪ್ರಾಧ್ಯಾಪಕರ ಸಾವಿಗೆ ಕಾರಣ ಏನೆಂಬುದು ತಿಳಿದು ໖໐໖.ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





