Breaking News

Shaikh BigTv

ವಲ್ಫ್ ಆಸ್ತಿ ದಾಖಲೆಗಾಗಿ ಘರ್ಷಣೆ: 32 ಜನ‌ ಬಂಧನ

ಹಾವೇರಿ: ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ವಲ್ಫ್ ಆಸ್ತಿ ದಾಖಲೆಗಾಗಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಪೊಲೀಸರು 32 ಜನರನ್ನು ವಶಕ್ಕೆ ಪಡೆದಿದ್ದಾರೆ. ಆಸ್ತಿ ದಾಖಲೆಗಳಲ್ಲಿ ಕೆಲವು ಆಸ್ತಿಗಳನ್ನು ವಕ್ಸ್ ಸ್ವತ್ತುಗಳು ಎಂದು ಲೇಬಲ್ ಮಾಡಲಾಗುತ್ತಿದೆ ಎಂಬ ಆತಂಕದ ಬಗ್ಗೆ ಎರಡು ಗುಂಪುಗಳ ನಡುವೆ ಉದ್ವಿಗ್ನತೆ ಭುಗಿಲೆದ್ದಾಗ ಬುಧವಾರ ತಡರಾತ್ರಿ ಈ ಘಟನೆ ನಡೆದಿದೆ. ವಿವಾದವು ಉಲ್ಬಣಗೊಂಡಿತು, ಉದ್ರಿಕ್ತ ಗುಂಪು ಇತರ ಗುಂಪಿನ ನಾಯಕರ ಮನೆಗಳ ಮೇಲೆ ದಾಳಿ ನಡೆಸಿ, ಕಲ್ಲುಗಳನ್ನು …

Read More »

ನಿಂತಿದ್ದ ಲಾರಿಗೆ ಟೂರಿಸ್ಟ್ ವಾಹನ ಡಿಕ್ಕಿ : ಪ್ರವಾಸಿಗರಿಗೆ ಗಂಭೀರ ಗಾಯ

ಉಡುಪಿ : ನಿಂತಿದ್ದ ಲಾರಿಗೆ ಟೂರಿಸ್ಟ್ ವಾಹನ ಡಿಕ್ಕಿ ಹೊಡೆದು ಪುಣ್ಯಕ್ಷೇತ್ರ ದರ್ಶನಕ್ಕೆ ಹೊರಟಿದ್ದ ಪ್ರವಾಸಿಗರು ಗಾಯಗೊಂಡ ದುರ್ಘಟನೆ ಇಂದು ಮುಂಜಾನೆ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ. ಕೊಲ್ಲೂರಿನತ್ತ ತೆರಳುತ್ತಿದ್ದ ಹೊರ ರಾಜ್ಯದ ಟೂರಿಸ್ಟ್ ವಾಹನವು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದ್ದು, ಮಹಿಳೆಯರೂ ಸೇರಿದಂತೆ ಪ್ರವಾಸಿಗರು ಗಂಭೀರ ಗಾಯಗೊಂಡಿದ್ದಾರೆ. ಸ್ಥಳೀಯರ ಸಹಕಾರದಿಂದ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. …

Read More »

ಪರ್ಯಾಯ ಪುತ್ತಿಗೆ ಮಠದ ಕಾರ್ಯಕ್ರಮಕ್ಕೆ ರಜನೀಕಾಂತ್ ಗೆ ಆಮಂತ್ರಣ

ಉಡುಪಿ: ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಉಡುಪಿ ಶ್ರೀಕೃಷ್ಣನ ಭಕ್ತರಾದ ಖ್ಯಾತ ಚಿತ್ರನಟ ಸೂಪರ್ ಸ್ಟಾರ್ ರಜನೀಕಾಂತ್ ಅವರನ್ನು ಪರ್ಯಾಯದ ಕಾರ್ಯಕ್ರಮಗಳಿಗೆ ಆಮಂತ್ರಿಸಲಾಯಿತು. ಮಠದ ವತಿಯಿಂದ ಹರೀಶ್ ಭಟ್ ಅವರು ರಜನೀಕಾಂತ್ ಅವರಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದರು. ಈ ಸಂದರ್ಭದಲ್ಲಿ ರಜನೀಕಾಂತ್ ಅವರು ಕೋಟಿ ಗೀತಾ ಲೇಖನ ಯಜ್ಞದ ಬಗ್ಗೆ ಖುದ್ದಾಗಿ ಮಾಹಿತಿ ಪಡೆದುಕೊಂಡು ಸಂತೋಷಪಟ್ಟು, ಸದ್ಯದಲ್ಲಿಯೇ ಭೇಟಿ ನೀಡುವುದಾಗಿ ತಿಳಿಸಿದರು.

Read More »

ಬಾಡಿಗೆ ಮನೆಯಲ್ಲಿ ಗಾಂಜಾ ಮಾರಾಟ ಮಾಡುತ್ತೀದ್ದವರ ಬಂಧನ

ಉಳ್ಳಾಲ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ಯಾ ರೆಹಮತ್ ನಗರ ಕಜೆ ಬಾಕಿಮಾರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ಗಾಂಜಾ ಮಾರಾಟ ನಡೆಸುತ್ತಿದ್ದ ಜೋಡಿಯನ್ನು ೩ ಮಂಗಳೂರು ನಗರ ದಕ್ಷಿಣ ಉಪವಿಭಾಗದ ಆಂಟಿ ಡ್ರಗ್ ಟೀಂ ನೇತೃತ್ವದ ಪೊಲೀಸ್ ತಂಡ ພ໐໖໖໖. ಆರೋಪಿತರಿಂದ 2,04,000 ರೂ ಬೆಲೆಯ 8 ಕೆ.ಜಿ ಗಾಂಜಾ ವಶಪಡಿಸಿಕೊಂಡಿದೆ. ಮಾಡೂರು ನಿವಾಸಿ ನಜೀರ್ ಹುಸೈನ್ (50) ಮತ್ತು ಕಿನ್ಯಾ ರೆಹಮತ್ ನಗರ ದ ಅನ್ಸಾತ್ (37) ಎಂಬವರನ್ನು …

Read More »

ನ್ಯೂ ಲುಕ್ ನಲ್ಲಿ ಪೋಸ್ ಕೊಟ್ಟ ಶ್ವಾನ

ಉಡುಪಿ: ಹೊಸ ಟಿಶರ್ಟ್, ಚಡ್ಡಿ ಧರಿಸಿರುವ ಬೀದಿ ಶ್ವಾನವೊಂದು ನಗರದ ಪ್ರಮುಖ ರಸ್ತೆಯಲ್ಲಿ ಸಂಚರಿಸುವುದು ಗಮನಸೆಳೆಯಿತು. ಒಂದಿಷ್ಟು ಜನರು ಫೋಟೋ ಕ್ಲಿಕ್ಕಿಸಿದರು. ಕೆಲವರಂತೂ ಮುಸಿ ಮುಸಿ ನಕ್ಕರು. ನಿಜ ಸಂಗತಿ ತಿಳಿದುಬಂದಾಗ ಎಲ್ಲರೂ ವಿಸ್ಮಿತರಾದರು. ಪ್ರಾಣಿಪ್ರಿಯ ನಿತ್ಯಾನಂದ ಒಳಕಾಡು ಅವರು ನಾಯಿಗೆ ಸ್ನಾನಮಾಡಿಸಿ ಹೊಸಬಟ್ಟೆ ಉಡಿಸಿ ದೀಪಾವಳಿಯನ್ನು ವಿಶಿಷ್ಟವಾಗಿ ಆಚರಿಸಿದ್ದರು. ಈ ಬೀದಿನಾಯಿ ಕಳೆದ ಎರಡು ವರ್ಷಗಳ ಹಿಂದೆ ವಾಹನ ಅಪಘಾತದಿಂದ ಗಾಯಾಳಾಗಿ ಅಸಹಾಯಕ ಸ್ಥಿತಿಯಲ್ಲಿತ್ತು. ಒಳಕಾಡುವರು ರಕ್ಷಿಸಿ ಚಿಕಿತ್ಸೆಗೆ …

Read More »

ಭೂಮಿ ಒತ್ತುವರಿ ಆಗಿರುವುದಕ್ಕೆ ಕಂದಾಯ ಸಚಿವಾಲಯ ನೋಟಿಸ್ ಕೊಟ್ಟಿದೆ : ಲಕ್ಷ್ಮೀ ಹೆಬ್ಬಾಳಕರ್

ಉಡುಪಿ: ಭೂಮಿ ಒತ್ತುವರಿ ಆಗಿರುವುದಕ್ಕೆ ಕಂದಾಯ ಸಚಿವಾಲಯ ನೋಟಿಸ್ ಕೊಟ್ಟಿದೆ. ಯಾರನ್ನೂ ಒಕ್ಕಲೆಬ್ಬಿಸಲ್ಲ. ಯಾರಿಗೂ ಅನ್ಯಾಯ ಮಾಡಲ್ಲ. ಎಲ್ಲರನ್ನು ಸಮಾನರಾಗಿ ಕರೆದುಕೊಂಡು ಹೋಗುವುದೇ ನಮ್ಮ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಉಡುಪಿಯಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ವಕ್ಸ್ ಸೊತ್ತುಗಳನ್ನು ರಾಷ್ಟ್ರೀಕರಣಗೊಳಿಸಿ ಎಂಬ ಬಿಜೆಪಿ ಶಾಸಕ …

Read More »

ಶಿಗ್ಗಾಂವಿಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಗೆಲುವು ಖಚಿತ: ಫೈಜ್ ಇಬ್ರಾಹಿಂ, ಫಾರೂಕ್, ಫತೇಶ ಯರಗಟ್ಟಿ…

Featured Video Play Icon

ಶಿಗ್ಗಾಂವಿ: ವಿಧಾನಸಭಾ ಉಪಚುನಾವಣೆಗೆ ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಒಲವು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರದ ಗ್ಯಾರಂಟಿ ಯೋಜನೆಗಳು ಪೂರ್ಣ ಪ್ರಮಾಣದಲ್ಲಿ ಜನರಿಗೆ ತಲುಪಿವೆ ಇದರಿಂದಾಗಿ ಶಿಗ್ಗಾಂವಿಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ 30 ಸಾವಿರಕ್ಕಿಂತ‌ ಹೆಚ್ಚಿನ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಕಾಂಗ್ರೆಸ್​ ಮುಖಂಡರಾದ ಸಿ.ಎಂ.ಫೈಜ್ ಇಬ್ರಾಹಿಂ ಹಾಗೂ ಫಾರೂಕ್ ಅಬುನವರ, ಫತೇಶ ಯರಗಟ್ಟಿ ತಿಳಿಸಿದ್ದಾರೆ.ಅಭಿಪ್ರಾಯ ಭಿನ್ನಾಭಿಪ್ರಾಯ ಎಲ್ಲ ಪಕ್ಷದಲ್ಲಿದ್ದು, …

Read More »

ಕಲಘಟಗಿಯಲ್ಲಿ ದೀಪಾವಳಿ ಹಬ್ಬದ ಖರೀದಿ ಜೋರು

ಕಲಘಟಗಿ : ಕಲಘಟಗಿ ಪಟ್ಟಣದಲ್ಲಿ ದೀಪಾವಳಿ ಹಬ್ಬದ ನಿಮಿತ್ತ ಇಂದು ಮಾರುಕಟ್ಟೆಯಲ್ಲಿ ಖರೀದಿ ಜೋರಾಗಿ ನಡೆದಿತ್ತು. ಮಾರುಕಟ್ಟೆಯಲ್ಲಿ ಹಣ್ಣು ಹಂಪಲುಗಳು ದರ ಗಗನಕ್ಕೆ ಏರಿದ್ದರು ಖರೀದಿ ಮಾತ್ರ ಜೋರಾಗಿ ಇತ್ತು. ಇನ್ನು ಹೂವಿನ ದರ ಕೇಳಿದ್ರೆ ಜನರಿಗೆ ನುಂಗಲಾರದ ತುತ್ತಾಗಿತ್ತು. ಗ್ರಾಮೀಣ ಭಾಗದ ಜನರಿಗೆ ಮುಖ್ಯ ಅವಶ್ಯಕತೆ ಇರುವ ಎತ್ತುಗಳಿಗೆ ಅಲಂಕಾರ ಮಾಡುವ ಘಂಟೆ ಹಗ್ಗ ಕಪ್ಪು ದಾರ ಇನ್ನು ಮುಂತಾದ ವಸ್ತುಗಳು ಖರೀದಿಗಾಗಿ ರೈತರು ಆಗಮಿಸಿದ್ದರು. ಅಷ್ಟೆ ಅಲ್ಲದೆ …

Read More »

ಕಾಂಗ್ರೆಸ್​ ಪಕ್ಷದ ಕಾರ್ಯಕರ್ತರು ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು: ಜಿ.ಸಿ.ಚಂದ್ರಶೇಖರ್…

ಬೆಂಗಳೂರು: ರಾಜ್ಯದಲ್ಲಿ ನ.13 ರಂದು ನಡೆಯಲಿರುವ ಮೂರು ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಚುನಾವಣಾ ಪ್ರಚಾರ ಕೈಗೊಳ್ಳಬೇಕೆಂದು ಸಂಸದರು ಹಾಗೂ ಪಕ್ಷದ ಕಾರ್ಯಾಧ್ಯಕ್ಷರಾದ ಜಿ.ಸಿ.ಚಂದ್ರಶೇಖರ್‌ ತಿಳಿಸಿದ್ದಾರೆ. ಪಕ್ಷದ ಉತ್ಸಾಹಿ, ನಿಷ್ಟಾವಂತ ಹಾಗೂ ಚುನಾವಣಾ ಪ್ರಚಾರ ಕಾರ್ಯದಲ್ಲಿ ಅನುಭವ ಹೊಂದಿರುವ ತಾವು ಕೆಪಿಸಿಸಿ ಕ್ಯಾಂಪ್ ನವರು ನಿಗದಿಪಡಿಸಿದ ಬೂತ್ ನಲ್ಲಿ ಸಂಚರಿಸಿ ಪ್ರಚಾರ ಕೈಗೊಳ್ಳುವುದರ ಮೂಲಕ ಶಿಗ್ಗಾಂವಿ ಉಪಚುನಾವಣೆಗೆ ಕಾಂಗ್ರೆಸ್​ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಗೆಲುವಿಗೆ ಶ್ರಮಿಸಬೇಕು ಹಾಗೂ …

Read More »

ಮನೆ ಕಳ್ಳತನ : ಸಿಸಿ ಕ್ಯಾಮೆರಾದಲ್ಲಿ ಸೆರೆ

ಹುಬ್ಬಳ್ಳಿ: ಹುಬ್ಬಳ್ಳಿಯ ಹೊರವಲಯದ ಮನೆಗಳನ್ನೇ ಟಾರ್ಗೆಟ್ ಮಾಡಿ ಮಳೆಗಳ್ಳತನ ಮಾಡಿರುವ, ಘಟನೆ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಗರದ ಬುದ್ಧ ವಿಹಾರ ಪ್ಲಾಟ್’ನಲ್ಲಿ ಈ ಕಳ್ಳತನ ನಡೆದಿದ್ದು, ಕಳ್ಳನ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ರಾಜು ಮೈಕಲ್ ಎನ್ನುವವರಿಗೆ ಸೇರಿರುವ ಮನೆಯಲ್ಲಿಯೇ ಕಳ್ಳತನವಾಗಿದ್ದು, ಮನೆಯಲ್ಲಿನ ಬಾಂಡ್ ಸೇರಿದಂತೆ ಇನ್ನಿತರ ವಸ್ತುಗಳು ಕಳ್ಳತನವಾಗಿವೆ. ಇನ್ನೂ ಇದೇ ಮನೆಯನ್ನು ಈ ಹಿಂದೆಯೂ ಕಳ್ಳತನ ಮಾಡಲು ಪ್ರಯತ್ನಿಸಲಾಗಿತ್ತು. …

Read More »