Breaking News

Shaikh BigTv

ನಿರಾಶ್ರಿತರ ಕೇಂದ್ರಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸಿದ ಎಂ.ಆರ್.ಪಾಟೀಲ್‌

ಕುಂದಗೋಳ : ಧಾರಾಕಾರ ಮಳೆಯ ರಭಸಕ್ಕೆ ಮನೆ ಕಳೆದುಕೊಂಡು ನಿರಾಶ್ರಿತರ ಕೇಂದ್ರ ಸೇರಿದ ಹಂಚಿನಾಳ ಗ್ರಾಮದ ಜನರನ್ನೂ ಶಾಸಕ ಎಂ.ಆರ್.ಪಾಟೀಲ್‌ ಭೇಟಿ ನೀಡಿ ಸಮಸ್ಯೆ ಆಲಿಸಿದ್ದಾರೆ. ಕುಂದಗೋಳ ತಾಲೂಕಿನ ಹಂಚಿನಾಳ ಗ್ರಾಮದ ಬೆಣ್ಣೆ ಹಳ್ಳದ ಪ್ರವಾಹಕ್ಕೆ ಸಿಲುಕಿ ಹಲವು ಜನರು ಮನೆ ಕಳೆದುಕೊಂಡಿದ್ದರು.ಇನ್ನೂ ಬಹುತೇಕ ಕೃಷಿ ಭೂಮಿಯಲ್ಲಿನ ಬೆಳೆಗಳು ಸಹ ಹಾಳಾಗಿದ್ದನ್ನೂ ಸ್ವತಃ ಶಾಸಕರೇ ರೈತಾಪಿ ಜನರ ಜಮೀನುಗಳಿಗೆ ತಹಶೀಲ್ದಾರ್ ರಾಜು ಮಾವರಕರ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ …

Read More »

ಬೈಕ್ ಕಳ್ಳತನ ಮಾಡುತ್ತಿದ್ದ ಖತರ್ನಾಕ ಕಳ್ಳ ಬಂಧನ

ಹುಬ್ಬಳ್ಳಿ: ಅವಳಿ ನಗರದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಖತರ್ನಾಕ ಕಳ್ಳನನ್ನು ಬಂಧಿಸುವಲ್ಲಿ ಹುಬ್ಬಳ್ಳಿಯ ಉಪನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಬೈಕ್‌ ಕಳ್ಳತನ ಪ್ರಕರಣವನ್ನು ಬೆನ್ನತ್ತಿದ್ದ ಎಸಿಪಿ ಶಿವಪ್ರಕಾಶ ಮಾರ್ಗದರ್ಶನದಲ್ಲಿ ಇನ್ಸೆಕ್ಟರ್ ಹೂಗಾರ ನೇತೃತ್ವದ ತಂಡ ಹುಬ್ಬಳ್ಳಿ ಮೂಲದ ಮಹಾಂತೇಶ ಎಂಬಾತನನ್ನು ಬಂಧಿಸಿದ್ದಾರೆ. ಮಹಾಂತೇಶ ಕಲಾಲ ಈತ ಆನಂದ ನಗರದ ನಿವಾಸಿಯಾಗಿದ್ದು, ಈತ ಬೈಕ್ ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಸದ್ಯ ಬಂಧಿತ ಆರೋಪಿಯಿಂದ …

Read More »

ರೈತರು ಬೆಳೆ ಹಾನಿ : ಪ್ರತಿ ಎಕರೆಗೆ 20 ಸಾವಿರ ರೂ. ಪರಿಹಾರ ಘೋಷಣೆ ಮಾಡುವಂತೆ ಪ್ರತಿಭಟನೆ

ಧಾರವಾಡ: ಕಳೆದ ಕೆಲ ತಿಂಗಳಿನಿಂದ ಅತಿಯಾದ ಮಳೆಯಾಗಿ ರೈತರು ಬೆಳೆದ ಬೆಳೆ ಹಾಳಾಗಿವೆ. ರಾಜ್ಯ ಸರ್ಕಾರ ಕೂಡಲೇ ಪ್ರತಿ ಎಕರೆಗೆ 20 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘ-ಕರ್ನಾಟಕ ಪ್ರದೇಶ ಸಂಘಟನೆಯ ನೇತೃತ್ವದಲ್ಲಿ ರೈತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಧಾರವಾಡ ಜಿಲ್ಲೆಯ ಅಂದಾಜು 40 ಸಾವಿರ ಹೆಕ್ಟೇ‌ರ್ ಪ್ರದೇಶದಲ್ಲಿದ್ದ ಬೆಳೆ ಮಳೆಯಿಂದಾಗಿ ಹಾನಿಗೀಡಾಗಿದೆ. ಇದರಿಂದಾಗಿ ರೈತರು ಆತ್ಮಹತ್ಯೆಯ ದಾರಿ …

Read More »

ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ ಇಂದು ರಾಜೀನಾಮೆ

ಹುಬ್ಬಳ್ಳಿ: ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ ಅವರು ಇಂದು ತಮ್ಮ ಸದಸ್ಯ ಸ್ಥಾನಕ್ಕೆ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ರಾಜೀನಾಮೆ ನೀಡಿದರು. ಹುಬ್ಬಳ್ಳಿಯ ಪಿಂಟೋ ರಸ್ತೆಯಲ್ಲಿರುವ ಸಭಾಪತಿ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ಭೇಟಿ ನೀಡಿ ತಮ್ಮ ಸದಸ್ಯ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದರು. ರಾಜೀನಾಮೆ ಪತ್ರ ಸ್ವೀಕರಿಸಿ ಬಳಿಕ ಮಾತನಾಡಿದ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಸಿ.ಪಿ.ಯೋಗೇಶ್ವರ ಅವರು ರಾಜೀನಾಮೆ …

Read More »

ರಾಜೀನಾಮೆ ನೀಡಲು ಹುಬ್ಬಳ್ಳಿಗೆ ಆಗಮಿಸಿದ ಸಿಪಿ ಯೋಗೇಶ್ವರ

ಹುಬ್ಬಳ್ಳಿ: ಚನ್ನಪಟ್ಟಣ ಎನ್ ಡಿಎ ಟಿಕೆಟ್ ಗೊಂದಲ ತೀವ್ರಗೊಂಡಿದೆ. ಈ ನಡುವೆ ವಿಧಾನ ಪರಿಷತ್‌ ಸದಸ್ಯ ಸಿಪಿ ಯೋಗೇಶ್ವರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಹೀಗಾಗಿ ಸಿಪಿ ಯೋಗೇಶ್ವರ ಇಂದು ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ತಮ್ಮ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

Read More »

ಮನೆ ಕುಸಿತ: ಮಹಿಳೆ ಸಾವು

ನವಲಗುಂದ: ನಿರಂತರವಾಗಿ ಸುರಿದ ಮಳೆಯಿಂದ ತಾಲೂಕಿನ ಹನಸಿ ಗ್ರಾಮದಲ್ಲಿ ಮನೆ ಬಿದ್ದ ಸಮಯದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೋರ್ವಳು ಚಿಕಿತ್ಸೆ ಫಲಿಸದೇ ಕಿಮ್ನಲ್ಲಿ ನಿನ್ನೆ ರಾತ್ರಿ ಸಾವಿಗೀಡಾಗಿದ್ದಾರೆ. ತಾಲೂಕಿನ ಹನಸಿ ಗ್ರಾಮದಲ್ಲಿ ಮನೆ ಬಿದ್ದ ತಕ್ಷಣವೇ ಗ್ರಾಮಸ್ಥರು ಮಣ್ಣಿನಡಿ ಸಿಲುಕಿದ್ದ ಅತ್ತೆ-ಸೊಸೆಯನ್ನ ಆಸ್ಪತ್ರೆಗೆ ರವಾನೆ ಮಾಡಿದ್ದರು. ಆದರೆ, ಅತ್ತೆ ಮಂಗಳಾ ಪಾಟೀಲ ಅವರಿಗೆ ಎಡಗಾಲಿಗೆ ತೀವ್ರ ಪೆಟ್ಟಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

Read More »

ಸರ್ಕಾರಿ ಶಾಲೆಯ ಶಾಲಾ ಕೊಠಡಿ ಆವರಣದಲ್ಲಿ ನಿಂತ ನೀರು

ನವಲಗುಂದ: ಸತತ ಮಳೆಯಿಂದಾಗಿ ತಾಲೂಕಿನ ತಿರ್ಲಾಪುರ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲಾ ಕೊಠಡಿ ಹಾಗೂ ಆವರಣದಲ್ಲಿ ನೀರು ನಿಂತುಕೊಂಡಿದ್ದು, ಮಕ್ಕಳು ಶಾಲೆಗೆ ಹೋಗಲು, ಬರಲು ಸಾಧ್ಯವಾಗದ ಪರಿಸ್ಥಿತಿ ಉಂಟಾಗಿದೆ. ಶಾಲೆಗೆ ದಸರಾ ರಜೆ ಇರುವ ಕಾರಣಕ್ಕೆ ಅದೃಷ್ಟಾವಶಾತ್ ಯಾವುದೇ ಹಾನಿ ಸಂಭವಿಸಿಲ್ಲ. ಎರಡು ದಿನದ ಹಿಂದೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಗ್ರಾಮಕ್ಕೆ ಭೇಟಿ ನೀಡಿದ್ದರೂ ಶಾಲೆಯತ್ತ ತಿರುಗಿಯೂ ನೋಡದೇ ಇರುವುದು ಶೋಚನೀಯ. ಭೂಮಿ ಮಟ್ಟದಲ್ಲಿ …

Read More »

ನವಲಗುಂದದಲ್ಲಿ ಶ್ರೀ ಲಕ್ಷ್ಮೀ ದೇವಿಯ ಪ್ರಾಣ ಪ್ರತಿಷ್ಠಾಪನೆ

ನವಲಗುಂದ: ಪಟ್ಟಣದ ಬಸ್ತಿ ಓಣಿಯಲ್ಲಿ ನೂತನವಾಗಿ ನಿರ್ಮಾಣವಾದ ಲಕ್ಷ್ಮೀ ದೇವಸ್ಥಾನಕ್ಕೆ ಇಂದು ಶ್ರೀ ಲಕ್ಷ್ಮೀ ದೇವಿಯ ಪ್ರಾಣ ಪ್ರತಿಷ್ಠಾಪನೆ ಜರುಗಿತು. ವಾದ್ಯ ಮೇಳದೊಂದಿಗೆ ಶ್ರೀ ಲಕ್ಷ್ಮೀ ದೇವಿಯ ಮೂರ್ತಿ ಮೆರವಣಿಗೆ ಪ್ರಾರಂಭವಾಗಿದ್ದು, ಸುಮಂಗಲೆಯರು ಕುಂಭ ಹೊತ್ತು ಮೆರವಣಿಗೆಗೆ ಮೆರಗು ತಂದರು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ದೇವಸ್ಥಾನ ತಲುಪಿದ ಶ್ರೀ ಲಕ್ಷ್ಮೀ ದೇವಿಯ ವಿಗ್ರಹ ಪೂಜಾ ವಿಧಿ ವಿಧಾನ ನೆರವೇರಿದ ಬಳಿಕ ಪ್ರಾಣ ಪ್ರತಿಷ್ಠಾಪನೆ ಮಾಡಲಾಯಿತು. ಇನ್ನೂ ಇಂದಿನಿಂದ …

Read More »

ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚಾಕು ಇರಿತ

ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಯುವಕನೊಬ್ಬನಿಗೆ ಚಾಕು ಇರಿತದ ಘಟನೆ ಆನಂದ ನಗರದ ಮದನಿ ಮಸೀದಿ ಬಳಿ ನಡೆದಿದೆ. ವಿನಾಯಕ ಚಿತ್ರಗಾರ (21)ಎಂಬಾತನಿಗೆ ಚಾಕುವಿನಿಂದ ಇರಿಯಲಾಗಿದೆ. ಸಮೀರ, ಇರ್ಫಾನ್, ದೀಪಕ್, ಬಬ್ಬು ಮತ್ತಿತರರು ಹಲ್ಲೆ ಮಾಡಿ ಚಾಕುವಿನಿಂದ ಇರಿದಿದ್ದು, ಗಂಭೀರಾವ್‌ಇ ಗಾಯಗೊಂಡ ವಿನಾಯಕನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎಂಟು ದಿನಗಳ ಹಿಂದೆ ವಿನಾಯಕ ಹಾಗೂ ಸಮೀರ್ ಕುಟುಂಬದ ಮಕ್ಕಳ ನಡುವೆ ಜಗಳವಾಗಿತ್ತು. ಇದೇ ಕ್ಷುಲ್ಲಕ ಕಾರಣಕ್ಕಾಗಿ ಆಕ್ರೋಶ ಗೊಂಡ ಸಮೀರ್ …

Read More »

ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲ: ಲಾಡ್

ಧಾರವಾಡ: ಶಿಗ್ಗಾಂವಿ, ಸಂಡೂರು ಹಾಗೂ ಚೆನ್ನಪಟ್ಟಣ ಉಪಚುನಾವಣೆಯ ಟಿಕೆಟ್ ಹಂಚಿಕೆಯಲ್ಲಿ ಹೈಕಮಾಂಡ್‌ ತೀರ್ಮಾನವೇ ಅಂತಿಮವಾಗಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲ. ನಿನ್ನೆ ಸಿಎಂ ಅವರು ಸಭೆ ಕರೆದು ಸಚಿವರು ಹಾಗೂ ಡಿಸಿಎಂ ಜೊತೆ ಚರ್ಚೆ ಮಾಡಿದ್ದಾರೆ. ನಾವೆಲ್ಲ ನಮ್ಮ ಅಭಿಪ್ರಾಯ ಮಂಡನೆ ಮಾಡಿದ್ದೇವೆ. ಇವತ್ತು ಅಥವಾ ನಾಳೆ ಹೈಕಮಾಂಡ್ ನಿಂದ ಅಂತಿಮ ತೀರ್ಮಾನ ಬರಲಿದೆ ಎಂದರು. …

Read More »