ನವಲಗುಂದ: ಸ್ಥಳೀಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಸಂತೋಷ ಹುಬ್ಬಳ್ಳಿ ರವರು ವಾಲ್ಮೀಕಿಯವರಿಂದ ರಚನೆಯಾದ ಮಹಾಕಾವ್ಯ ರಾಮಾಯಣವು ಇಂದಿನ ಜಗತ್ತಿನಲ್ಲಿ ಸತ್ವವುಳ್ಳ ಹಾಗೂ ಮೌಲ್ಯಯುತವಾದ ಕಾವ್ಯವಾಗಿದ್ದು ಶ್ರೇಷ್ಠ ಸಾಹಿತ್ಯದ ಸೃಷ್ಟಿಗೆ ಕಾರಣವಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ.ಎಂ.ಬಿ.ಬಾಗಡಿ ವಾಲ್ಮೀಕಿಯು ಕವಿಕುಲದ ಗುರುವಾಗಿ ಹಲವಾರು ಕವಿಗಳಿಗೆ ಮತ್ತು ಸಾಹಿತಿಗಳಿಗೆ ಸ್ಫೂರ್ತಿಯ …
Read More »ತೋಟಗಾರಿಕೆ ಕಾರ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
ಕುಂದಗೋಳ : ಸಹಾಯಕ ತೋಟಗಾರಿಕೆ ನಿರ್ದೇಶಕರ ಕಾರ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ತೋಟಗಾರಿಕೆ ನಿರ್ದೇಶಕ ಮಂಜುನಾಥ ಕರೋಶಿಯವರ ನೇತೃತ್ವದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕುಂದಗೋಳ ತಾಲೂಕಿನ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಹಾಗೂ ಸಹ ಸಿಬ್ಬಂದಿಗಳು ಉಪಸ್ಥಿತರಿದ್ದರು.
Read More »ಹಳ್ಳದ ದಂಡೆಗೆ ನೀರಿಗೆ ಪೂಜೆ ಸಲ್ಲಿಸಿ ನೈವೇದ್ಯ ಸಮರ್ಪಿಣೆ
ಕುಂದಗೋಳ : ರೈತಾಪಿ ಜನರ ಬಹುದೊಡ್ಡ ಹಬ್ಬ ಸೀಗೆ ಹುಣ್ಣಿಮೆಗೆ ಭೂಮಿ ತಾಯಿಯ ಪೂಜೆ ಸಲ್ಲಿಸಲು ತರೆಳಿದ ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದ ಅಣ್ಣಯ್ಯ ನಂದಯ್ಯನವರ, ಮುಕ್ಕಣ್ಣ ಹಂಚಿನಾಳ ಗ್ರಾಮದಿಂದ ಸಂಪರ್ಕ ಕಳೆದುಕೊಂಡ ಬೇರೆ ಮಾರ್ಗದ ಮೂಲಕ ಊರು ತಲುಪಲು ಮುಂದಾಗಿದ್ದಾರೆ. ಇತ್ತ ಹಳ್ಳ ತುಂಬಿ ರಭಸದಿಂದ ತುಂಬಿ ಹರಿಯುತ್ತಿರುವ ಕಾರಣ ತಮ್ಮ ಜಮೀನಿಗೆ ತೆರಳಲು ಮಾರ್ಗ ಇಲ್ಲದೆ ರೈತಾಪಿ ಜನ ಜಮೀನಿಗೆ ಪೂಜೆ ಸಲ್ಲಿಸುವ ಬದಲು ಹಳ್ಳದ ದಂಡೆಗೆ …
Read More »69 ಜನ ಸಾಧಕರಿಗೆ ಧೀಮಂತ ಪ್ರಶಸ್ತಿ ಪ್ರದಾನ : ರಾಮಪ್ಪ ಬಡಿಗೇರ
ಹುಬ್ಬಳ್ಳಿ : ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯಿಂದ ಈ ಬಾರಿ 69 ಜನ ಸಾಧಕರಿಗೆ ಧೀಮಂತ ಪ್ರಶಸ್ತಿ ಪ್ರದಾನ ಮಾಡಲು ನಿರ್ಧರಿಸಲಾಗಿದೆ ಎಂದು ಮೇಯರ್ ರಾಮಪ್ಪ ಬಡಿಗೇರ ತಿಳಿಸಿದ್ದಾರೆ. ರಾಜ್ಯೋತ್ಸವ ಪ್ರಯುಕ್ತ ನಡೆದ ವಿವಿಧ ಸಮಿತಿಗಳ ಅಧ್ಯಕ್ಷರ ಹಾಗೂ ಅಧಿಕಾರಿಗಳ ಸಭೆಯ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸಾಹಿತ್ಯ, ಕ್ರೀಡೆ, ಸಮಾಜಸೇವೆ, ವೈದ್ಯಕೀಯ, ಕಲೆ, ರಂಗಭೂಮಿ, ಪತ್ರಿಕೋದ್ಯಮ ಸೇರಿದಂತೆ ವಿವಿಧ 16 ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ …
Read More »ಕಲಘಟಗಿಯಲ್ಲಿ ಸೀಗೆ ಹುಣ್ಣಿಮೆ ಆಚರಣೆ
ಕಲಘಟಗಿ:ಸುರಿಯುತ್ತಿರುವ ಬಾರಿ ಮಳೆಯಿಂದಾಗಿ ಸಂಭ್ರಮ ಸಡಗರದ ನಡೆಯಬೇಕಿದ್ದ ಸೀಗೆ ಹುಣ್ಣಿಮೆ ಈ ಬಾರಿ ಸಂಕ್ಷೇಪವಾಗಿ ರೈತರು ತಮ್ಮ ಜಮೀನುಗಳಿಗೆ ಚರಗ ಚೆಲ್ಲುವ ಮೂಲಕ ಆಚರಣೆ ಮಾಡುತ್ತಿದ್ದಾರೆ. ತಾಲೂಕಿನಲ್ಲಿ ಹಳ್ಳ ಕೊಳ್ಳ ತುಂಬಿ ಹರಿಯುತ್ತಿದ್ದು ರೈತರು ತಮ್ಮ ಜಮೀನಿಗೆ ಹೋಗಲಾರದೆ ರಸ್ತೆ ಪಕ್ಕದಲ್ಲಿ ಐದು ಮಂದಿ ಪಾಂಡವರ ಮೂರ್ತಿ ಇಟ್ಟು ಚರಗ ಚೆಲ್ಲಿದರು. ನೆನ್ನೆ ಕೆಲವರು ರಸ್ತೆ ಪಕ್ಕದಲ್ಲಿ ಇರುವ ಜಮೀನಿಗೆ ತೆರಳಿ ಚೆರಗ ಚೆಲ್ಲಿ ಮಳೆ ಕಡಿಮೆ ಆಗುವಂತೆ ದೇವರಲ್ಲಿ …
Read More »ಆಸಿಡ್ ಟ್ಯಾಂಕರ್ ವಾಹನ ಪಲ್ಟಿ
ಹುಬ್ಬಳ್ಳಿ: ಹುಬ್ಬಳ್ಳಿಯಿಂದ ಧಾರವಾಡ ಕಡೆಗೆ ಆಸಿಡ್ ತೆಗೆದುಕೊಂಡು ಹೋಗುತ್ತಿದ್ದ ಟ್ಯಾಂಕರ್ ವಾಹನ ದಾರಾವತಿ ಟೆಂಪಲ್ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಟ್ಯಾಂಕರಲ್ಲಿದ್ದ ಆಸಿಡ್ ಎಲ್ಲ ಲಿಕೇಜ್ ಆಗಿ ರಸ್ತೆ ಪೂರ್ತಿ ಹರಿದ ಪರಿಣಾಮ ದಟ್ಟ ಹೊಗೆ ಆವರಿಸಿಕೊಂಡು ಬೈಪಾಸ್ ನಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿತ್ತು. ಆಸಿಡ್ ರಸ್ತೆ ತುಂಬಾ ಬಿದ್ದ ಕೂಡಲೇ ದಟ್ಟ ಹೊಗೆಯಿಂದ ವಾಹನ ಸಂಚಾರಕ್ಕೆ ಅನಾನುಕೂಲವಾದ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ ಸಂಚಾರಿ ವಿಭಾಗದ ಡಿಸಿಪಿ …
Read More »ಚಿಗರಿ ಬಸ್ಸಿನಲ್ಲಿ ಛತ್ರಿ ಹಿಡಿದು ಕೊತ್ತ ಪ್ರಯಾಣಿಕ
ಧಾರವಾಡ: ಹುಬ್ಬಳ್ಳಿ, ಧಾರವಾಡ ಅವಳಿನಗರಗಳ ಮಧ್ಯೆ ಸಾವಿರಾರು ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಂಡಿರುವ ಬಿಆರ್ಟಿಎಸ್ ಯೋಜನೆಯ “ಚಿಗರಿ’ ಬಸ್ಸು ಮತ್ತೆ ಟ್ರೋಲ್ಗೆ ಒಳಗಾಗಿದೆ. ಈ ಬಸ್ನಲ್ಲಿ ಸರಿಯಾಗಿ ಎಸಿ ಕೆಲಸ ಮಾಡುತ್ತಿಲ್ಲ ಎಂಬ ಆರೋಪ ಆಗಾಗ ಕೇಳಿ ಬರುತ್ತಲೇ ಇತ್ತು. ಈಗ ಮಳೆಯಾದರೆ ಸಾಕು ಈ ಬಸ್ಗಳು ಸೋರಲು ಆರಂಭಿಸಿವೆ. ಬುಧವಾರ ಸುರಿದ ಮಳೆಯಿಂದಾಗಿ ಚಿಗರಿ ಬಷ್ಟೊಂದು ಸೋರುತ್ತಿತ್ತು. ಈ ವೇಳೆ ಪ್ರಯಾಣಿಕರೊಬ್ಬರು ಬಸ್ಸಿನಲ್ಲಿ ಛತ್ರಿ ಹಿಡಿದು ಕುಳಿತು ಪ್ರಯಾಣಿಸಿದ್ದಾರೆ. ಸದ್ಯ …
Read More »ಜಮೀನಿನಲ್ಲಿ ಹಾಳಾಗಿರುವ ಬೆಳೆಗಳಿಗೆ ಪರಿಹಾರ ನೀಡಬೇಕೆಂದು ಮನವಿ ಸಲ್ಲಿಕೆ
ಕುಂದಗೋಳ : ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿರುವ ನರಚನಹಳ್ಳ ಮಳೆ ಬಂದಾಗ ನೀರು ತುಂಬಿ ರಭಸದಿಂದ ಹರಿದು ಪ್ರವಾಹ ಸೃಷ್ಟಿ ಮಾಡುವ ಸಂದರ್ಭದಲ್ಲಿ ಬೆಣ್ಣೆ ಹಳ್ಳ ಹಾಗೂ ನರಚನಹಳ್ಳ ತುಂಬಿ ಹರಿಯುವ ವೇಳೆ ನರಚನಹಳ್ಳದ ನೀರು ತನ್ನ ಹರಿವಿನಲ್ಲಿ ಸೇರಿಸಿಕೊಳ್ಳದೆ ರೈತರ ಜಮೀನುಗಳಿಗೆ ಪ್ರತಿ ವರ್ಷವೂ ನುಗ್ಗಿ ಬೆಳೆಯನ್ನು ಹಾಳು ಮಾಡುತ್ತಿದೆ. ನರಚನಹಳ್ಳವನ್ನು ಕೂಡಲೇ ಹೂಳೆತ್ತುವ ಕಾರ್ಯವನ್ನು ಮಾಡಬೇಕು ಹಾಗೂ ಹಳ್ಳದ ನೀರು ನುಗ್ಗಿ ಅಕ್ಕಪಕ್ಕ ಜಮೀನಿನಲ್ಲಿ ಹಾಳಾಗಿರುವ ಬೆಳೆಗಳಿಗೆ ಪರಿಹಾರ …
Read More »ಒಳ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ
ಧಾರವಾಡ : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಒಳ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಮಾದಿಗ ಸಮುದಾಯದ ಜನ ಧಾರವಾಡದಲ್ಲಿ ಬೃಹತ್ ಹೋರಾಟ ನಡೆಸಿದರು. ಧಾರವಾಡದ ಕಲಾಭವನದಲ್ಲಿ ಜಮಾಯಿಸಿದ ಸಾವಿರಾರು ಜನ, ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಒಳ ಮೀಸಲಾತಿ ಕಲ್ಪಿಸುವುದಾಗಿ ಹೇಳಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ವರ್ಷ ಆಗುತ್ತ ಬಂದಿದ್ದರೂ ಈ ಒಳ …
Read More »ನವೆಂಬರ್ 1 ರಂದು ಅದ್ದೂರಿಯಾಗಿ ನಾಡ ಹಬ್ಬ ರಾಜ್ಯೋತ್ಸವನ್ನು ಆಚರಣೆ: ಜಿಲ್ಲಾಧಿಕಾರಿ ದಿವ್ಯ ಪ್ರಭು
ಧಾರವಾಡ : ಪ್ರತಿ ವರ್ಷದಂತೆ ನವೆಂಬರ್ 1 ರಂದು ರಾಜ್ಯೋತ್ಸವನ್ನು ಅದ್ದೂರಿಯಾಗಿ ಆಚರಿಸಲಾಗುವುದು. ಜಿಲ್ಲೆಯ ಎಲ್ಲ ಸರ್ಕಾರಿ ನೌಕರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು. ಅವರು ಇಂದು ಸಂಜೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು. ರಾಜ್ಯೋತ್ಸವ ದಿನದಂದು ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





