ಧಾರವಾಡ : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಒಳ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಮಾದಿಗ ಸಮುದಾಯದ ಜನ ಧಾರವಾಡದಲ್ಲಿ ಬೃಹತ್ ಹೋರಾಟ ನಡೆಸಿದರು. ಧಾರವಾಡದ ಕಲಾಭವನದಲ್ಲಿ ಜಮಾಯಿಸಿದ ಸಾವಿರಾರು ಜನ, ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಒಳ ಮೀಸಲಾತಿ ಕಲ್ಪಿಸುವುದಾಗಿ ಹೇಳಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ವರ್ಷ ಆಗುತ್ತ ಬಂದಿದ್ದರೂ ಈ ಒಳ …
Read More »ನವೆಂಬರ್ 1 ರಂದು ಅದ್ದೂರಿಯಾಗಿ ನಾಡ ಹಬ್ಬ ರಾಜ್ಯೋತ್ಸವನ್ನು ಆಚರಣೆ: ಜಿಲ್ಲಾಧಿಕಾರಿ ದಿವ್ಯ ಪ್ರಭು
ಧಾರವಾಡ : ಪ್ರತಿ ವರ್ಷದಂತೆ ನವೆಂಬರ್ 1 ರಂದು ರಾಜ್ಯೋತ್ಸವನ್ನು ಅದ್ದೂರಿಯಾಗಿ ಆಚರಿಸಲಾಗುವುದು. ಜಿಲ್ಲೆಯ ಎಲ್ಲ ಸರ್ಕಾರಿ ನೌಕರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು. ಅವರು ಇಂದು ಸಂಜೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು. ರಾಜ್ಯೋತ್ಸವ ದಿನದಂದು ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ …
Read More »ಪರಿಶಿಷ್ಟ ಜಾತಿ ಉಪ ಯೋಜನೆ: ಪರಿಶಿಷ್ಟ ಜಾತಿ ಯುವಕ, ಯುವತಿಯರಿಗೆ ಹೊಲಿಗೆ ತರಬೇತಿ ಹಾಗೂ ವಿಡಿಯೋಗ್ರಾಫಿ ತರಬೇತಿ ಶಿಬಿರಕ್ಕೆ ಅರ್ಜಿ ಅಹ್ವಾನ
ಧಾರವಾಡ : ಯುವಜನರನ್ನು ಉತ್ತೇಜಿಸುವ ದೃಷ್ಠಿಯಿಂದ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಯುವಕ, ಯುವತಿಯರಿಗೆ ಹೊಲಿಗೆ ತರಬೇತಿ ಹಾಗೂ ವಿಡಿಯೋಗ್ರಾಫಿ ತರಬೇತಿ ಶಿಬಿರಕ್ಕೆ ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತ ಯುವಕ, ಯುವತಿಯರು ಇಲಾಖೆಯಿಂದ ಅರ್ಜಿಗಳನ್ನು ಪಡೆದು ಅಕ್ಟೋಬರ್ 30, 2024 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0836-2447424 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. …
Read More »ಕಿತ್ತೂರು ರಾಣಿ ಚನ್ನಮ್ಮ ವಿಜಯ ಜ್ಯೋತಿ ಯಾತ್ರಾ ರಥ ಸ್ವಾಗತ
ಧಾರವಾಡ: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಅಂಗವಾಗಿ ಜಿಲ್ಲೆಗೆ ಇಂದು ಬೆಳಿಗ್ಗೆ ಆಗಮಿಸಿದ್ದ ಕಿತ್ತೂರು ರಾಣಿ ಚನ್ನಮ್ಮ ವಿಜಯ ಜ್ಯೋತಿ ಯಾತ್ರಾ ರಥವನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಡಿಸಿ ಕಚೇರಿ ಮುಂಭಾಗದಲ್ಲಿ ಸ್ವಾಗತಿಸಿ, ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರು ಹಾಗೂ ಕವಿವ ಸಂಘದ ಅಧ್ಯಕ್ಷರಾದ ಚಂದ್ರಕಾಂತ ಬೆಲ್ಲದ, ತಹಶಿಲ್ದಾರ ಡಿ.ಎಚ್.ಹೂಗಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಕನ್ನಡ ಪರ ಸಂಘಟನೆಗಳ …
Read More »ಮನೆ ಕೀಲಿ ಮುರಿದು 1ಲಕ್ಷ 15 ಸಾವಿರ ರೂ.ಆಭರಣ ಕಳ್ಳತನ
ಹುಬ್ಬಳ್ಳಿ: ನಗರದ ವಿಜಯನಗರದಲ್ಲಿ ಮನೆ ಕೀಲಿ ಮುರಿದು 1ಲಕ್ಷ 15 ಸಾವಿರ ರೂಪಾಯಿ ಮೌಲ್ಯದ ಆಭರಣ ಕಳ್ಳತನ ಮಾಡಿದ ಘಟನೆ ನಡೆದಿದೆ. ವಿಜಯನಗರದ ಶಂಬಯ್ಯ ಬಾಡದಮಠ ಎಂಬುವರ ಮನೆಯಲ್ಲಿ ಕಳ್ಳತನವಾಗಿದೆ. ಮನೆಯಲ್ಲಿದ್ದ 1 ಲಕ್ಷ ಮೌಲ್ಯದ ಬೆಳ್ಳಿ, ಬಂಗಾರ ಸ್ವಲ್ಪ ಹಣ ಕಳ್ಳತನ ಮಾಡಲಾಗಿದೆ. ಈ ಕುರಿತು ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ಹಿನ್ನಲೆ ಪ್ರತಿಭಟನೆ : ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ
ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಕೇಸನ್ನು ರಾಜ್ಯ ಸರ್ಕಾರ ಹಿಂದೆ ಪಡೆದುಕೊಂಡ ಕ್ರಮವನ್ನು ಖಂಡಿಸಿ ಇಂದು ಶ್ರೀರಾಮ ಸೇನೆಯು ಪ್ರತಿಭಟನೆ ಹಮ್ಮಿಕೊಂಡಿದೆ. ಈ ಹಿನ್ನೆಲೆ ಹಳೇ ಹುಬ್ಬಳ್ಳಿ ಇಂಡಿ ಪಂಪ ಬಳಿಯಲ್ಲಿ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. 2022ರಲ್ಲಿ ನಡೆದ ಈ ಹಳೇ ಹುಬ್ಬಳ್ಳಿ ಗಲಾಟೆಯಲ್ಲಿ ಹನುಮಾನ ದೇವಸ್ಥಾನಕ್ಕೂ ಕಿಡಗೇಡಿಗಳು ಕಲ್ಲು ತೂರಾಟ ನಡೆಸಿ ದೇವಸ್ಥಾನದ ಗಾಜುಗಳನ್ನು ಪುಡಿ ಪುಡಿ ಮಾಡಲಾಗಿತ್ತು. ಅಷ್ಟೇ ಅಲ್ಲದೇ ಈ ಸಂದರ್ಭದಲ್ಲಿ …
Read More »ಜೀವ ವಿಮೆ ಒದಗಿಸುವ ಹಾಗೂ ಖಾಯಂಗೊಳಿಸುವ ಕುರಿತು ಮನವಿ ಸಲ್ಲಿಕೆ
ನವಲಗುಂದ: ಬೆಳೆ ಸಮೀಕ್ಷೆ (ಖಾಸಗಿ ನಿವಾಸಿ) ಗಾರರಿಗೆ ಭದ್ರತೆ, ಜೀವ ವಿಮೆ ಒದಗಿಸುವ ಹಾಗೂ ಖಾಯಂಗೊಳಿಸುವ ಕುರಿತು ನವಲಗುಂದ ತಹಶೀಲ್ದಾರ ಸುಧೀರ ಸಾವಕಾರ ಅವರಿಗೆ ಖಾಸಗಿ ಬೆಳೆ ಸಮೀಕ್ಷೆಗಾರರು ಮನವಿ ಸಲ್ಲಿಸಿದರು. ನಾವು ಸುಮಾರು 7-8 ವರ್ಷಗಳಿಂದ ಬೆಳೆ ಸಮೀಕ್ಷೆಗಾರರಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದು, ಸೇವೆ ಸಲ್ಲಿಸುತ್ತಿರುವಾಗ ಹಾವು ಚೇಳು ಕಚ್ಚಿರುತ್ತವೆ, ತೋಳಗಳು, ಹೆಚ್ಚೇನುಗಳು ದಾಳಿ ಮಾಡಿರುತ್ತವೆ. ನಾವು ಜೀವದ ಆಸೆ ಬಿಟ್ಟು ಶ್ರದ್ದೆಯಿಂದ ರೈತರ ಸೇವೆ ಮಾಡುತ್ತಿದ್ದೇವೆ ಸಮೀಕ್ಷೆ …
Read More »ಉತಾರ ಬದಲಿಸುವಂತೆ ಮನವಿ ಸಲ್ಲಿಕೆ
ಕುಂದಗೋಳ : ಕಡಪಟ್ಟಿ ಗ್ರಾಮದ ಅಂಗನವಾಡಿ-1 ರ ಕಟ್ಟಡದ ಇ ಸ್ವತ್ತು ಉತಾರದ ಜಾಗವನ್ನು ಕೊಂಡವಾಡ ಎಂಬುದರ ಬದಲಾಗಿ ಅಂಗನವಾಡಿ-1 ಎಂದು ನಮೂದಿಸಿ ಉತಾರ ಪೂರೈಸಲು ಕಡಪಟ್ಟಿ ಗ್ರಾಮ ಪಂಚಾಯಿತಿ ಸದಸ್ಯರಾದ ಬಸಪ್ಪ ಕುರಿ ಗ್ರಾಮಸ್ಥರಾದ ಸಂತೋಷ ನೆಲ್ಲೂರು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಗೆ ಮನವಿ ಮಾಡಿದ್ದಾರೆ. ಶಾಸಕ ಎಂ.ಆರ್.ಪಾಟೀಲ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಅವರು ಅಂಗನವಾಡಿ ಕಟ್ಟಡ ಕಳೆದ 20 ವರ್ಷಗಳಿಂದ ಕೊಂಗವಾಡ ಜಾಗದಲ್ಲಿದೆ. ಇಲ್ಲಿಯವರೆಗೆ ಇ …
Read More »ಮಹಿಳೆಯರ ಶಿಕ್ಷಣಕ್ಕೆ ನಮ್ಮ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ : ಕೋನರಡ್ಡಿ
ನವಲಗುಂದ: ಎಲ್ಲ ಕ್ಷೇತ್ರದಲ್ಲೂ ಮಹಿಳೆಯರು ಉತ್ತಮ ಸಾಧನೆ ಮಾಡುತ್ತಿದ್ದು, ಮಹಿಳೆಯರ ಶಿಕ್ಷಣಕ್ಕೆ ನಮ್ಮ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಶಾಸಕ ಎನ್.ಎಚ್.ಕೋನರಡ್ಡಿ ಹೇಳಿದರು. ಪಟ್ಟಣದ ಗವಿಮಠ ದಾಸೋಹ ಭವನದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಹಾಗೂ ‘ಮಗಳನ್ನು ಉಳಿಸಿ ಮಗಳನ್ನು ಓದಿಸಿ’ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. …
Read More »ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ಎರಡು ದೇಹಗಳು ಛಿದ್ರ ಛಿದ್ರ
ಹುಬ್ಬಳ್ಳಿ:ಸಾವಿನ ಹೆದ್ದಾರಿಗೆ ಮತ್ತೆರಡು ಜೀವಗಳು ಬಲಿಯಾಗಿವೆ.ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಎರಡು ದೇಹಗಳು ಛಿದ್ರ ಛಿದ್ರವಾದ ಘಟನೆ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಹೊರವಲಯದಲ್ಲಿರುವ ಗೋಕುಲ ಗ್ರಾಮದ ಧಾರಾವತಿ ಹನುಮಂತ ದೇವಸ್ಥಾನದ ಬಳಿಯ ಬೈಪಾಸ್ನಲ್ಲಿ ನಡೆದ ಅವಘಡದಲ್ಲಿ ಮೃತ ಇಬ್ಬರೂ ವ್ಯಕ್ತಿಗಳ ಗುರುತು ಪತ್ತೆಯಾಗದ ರೀತಿಯಲ್ಲಿ ಛಿದ್ರವಾಗಿ ಬಿದ್ದಿವೆ. ಅಪಘಾತದಲ್ಲಿ ಸಾವನ್ನಪ್ಪಿದ ಇಬ್ಬರ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





