ಧಾರವಾಡ: ಪ್ರಸಕ್ತ ಸಾಲಿನ ಮೈಸೂರು ದಸರಾ ಮಹೋತ್ಸದಲ್ಲಿ ಭಾಗವಹಿಸಿದ್ದ ಧಾರವಾಡ ಜಿಲ್ಲಾ ಪಂಚಾಯತ ಸ್ತಬ್ಧಚಿತ್ರಕ್ಕೆ ರಾಜ್ಯಮಟ್ಟದ ದ್ವಿತೀಯ ಪ್ರಶಸ್ತಿ ಲಭಿಸಿದ್ದು, ಈ ದಸರಾ ಮಹೋತ್ಸವದ ಸ್ತಬ್ದಚಿತ್ರ ಉಪ ಸಮಿತಿ ಇಂದು ಫಲಿತಾಂಶ ಪ್ರಕಟಿಸಿದೆ. ಇಸ್ರೋ ಗಗನಯಾನದಲ್ಲಿ ಹಣ್ಣಿನ ನೋಣಗಳ ಕುರಿತು ಧಾರವಾಡ ಜಿಲ್ಲಾ ಪಂಚಾಯತಿಯಿಂದ ಸ್ತಬ್ದ ಚಿತ್ರ ರೂಪಿಸಲಾಗಿತ್ತು. ಅತ್ಯತ್ತಮ ಸ್ತಬ್ದಚಿತ್ರ ಆಯ್ಕೆಗಾಗಿನ ತಜ್ಞರ ಸಮಿತಿ ದಸರಾ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಎಲ್ಲ ಜಿಲ್ಲೆಗಳ ಸ್ತಬ್ಧಚಿತ್ರಗಳನ್ನು ಪರಿಶೀಲಿಸಿ, ವಿನೂತನವಾದ ಮತ್ತು ಹೊಸ …
Read More »ಪ್ರೀತಿಸಿ ಮದುವೆಯಾದ ಜೋಡಿಗೆ ಬೇಕಿದೆ ರಕ್ಷಣೆ
ಹುಬ್ಬಳ್ಳಿ : ಪ್ರೀತಿಸಿ ಮದುವೆಯಾದ ಜೋಡಿಗೆ ಹುಡುಗಿ ಮನೆಯವರು ಜೀವ ಬೆದರಿಕೆ ಹಾಕಿದ್ದ, ಈ ಹಿನ್ನೆಲೆ ಜೋಡಿ ಇದೀಗ ಜೀವದ ಭಯಕ್ಕೆ ಮಾಧ್ಯಮದ ಮುಂದೆ ತಮ್ಮ ಕಷ್ಟ ಹೇಳಿಕೊಂಡಿದ್ದಾರೆ. ಮದುವೆಯಾದ ಜೋಡಿ ಇದೀಗ ರಕ್ಷಣೆ ಕೊಡುವಂತೆ ಪೊಲೀಸರ ಮೊರೆ ಹೋಗಿದ್ದಾರೆ. ಆನಂದ ದೊಡ್ಡಮನಿ (21) ಮೇಘಾನಾ(19) ಪ್ರೀತಿಸಿ ಮದುವೆಯಾದ ಜೋಡಿ.ಆನಂದ ಆಟೋ ಚಾಲಕರಾಗಿದ್ದು, ಯುವತಿ ಮೇಘಾನಾ ಕಾಲೇಜು ವಿದ್ಯಾರ್ಥಿನಿ.. ಇಬ್ಬರು ಕಳೆದ ಮೂರು ವರ್ಷದಿಂದ ಪ್ರೀತಿ ಮಾಡುತ್ತಿದ್ದಾರಂತೆ.. ಇತ್ತೀಚೆಗೆ ಇವರ …
Read More »ಅ. 23 ರಂದು ಕಿತ್ತೂರ ರಾಣಿ ಚನ್ನಮ್ಮ ಜಯಂತಿ ಆಚರಣೆ
ಧಾರವಾಡ : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಅಕ್ಟೋಬರ 23 ರಂದು ಮಧ್ಯಾಹ್ನ 12 ಗಂಟೆಗೆ ಕಿತ್ತೂರ ರಾಣಿ ಚನ್ನಮ್ಮ ಜಯಂತಿಯನ್ನು ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಜರುಗಿದ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಯಂತಿ ಕಾರ್ಯಕ್ರಮವನ್ನು …
Read More »ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲಿಕರಣ ಇಲಾಖೆ;ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ
ಧಾರವಾಡ: ರಾಷ್ಟ್ರೀಯ ಅಂಗವಿಕಲರ ಗ್ರಾಮೀಣ ಪುನರ್ವಸತಿ ಯೋಜನೆ ಅಡಿಯಲ್ಲಿ ಧಾರವಾಡ ತಾಲೂಕಿನ ನರೇಂದ್ರ ಗ್ರಾಮ ಪಂಚಾಯತ ಹಾಗೂ ಅಳ್ನಾವರ ತಾಲೂಕಿನ ಅರವಟಗಿ ಗ್ರಾಮ ಪಂಚಾಯತಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯಲ್ಲಿ ವೈಯಕ್ತಿಕ ವಿವರಗಳನ್ನು ಬರೆದು ಆಯಾ ತಾಲೂಕಿನ ತಾಲೂಕಾ ಪಂಚಾಯತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರು (ಎಂಆರ್ಡಬ್ಲ್ಯೂ) ಇವರಿಗೆ ಅಕ್ಟೋಬರ್ 25, 2024 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ …
Read More »180 ಮನೆಗಳು ಮತ್ತು 3 ಜಾನುವಾರು ಹಾನಿ: ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶ
ಧಾರವಾಡ : ವಾಯುಭಾರ ಕುಸಿತದಿಂದ ಧಾರವಾಡ ಬೆಲೆಯಲ್ಲಿ ಹಾಗೂ ಬೆಣ್ಣಿಹಳ್ಳ ಮತ್ತು ತುಪ್ಪರಿಹಳ್ಳದ ಅಚ್ಚು-ಕಟ್ಟು ಪ್ರದೇಶದಲ್ಲಿ ಅಕ್ಟೋಬರ್ 09 ರಿಂದ 16 ರವರೆಗೆ ಮಳೆಯಾಗುತ್ತದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ತಾಲೂಕು ಆಡಳಿತಗಳು ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಎಲ್ಲರೂ ಅವರವರ ಕೇಂದ್ರ ಸ್ಥಾನದಲ್ಲಿದ್ದು, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ …
Read More »ನವಲಗುಂದ: ಅ.16ಕ್ಕೆ ವಿದ್ಯುತ್ ವ್ಯತ್ಯಯ
ನವಲಗುಂದ: ನವಲಗುಂದದ 110 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆ ಬುಧವಾರ ದಿ. 16 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಇದೇ ಬುಧವಾರದಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆ ವರೆಗೆ ನವಲಗುಂದ, ಅಳಗವಾಡಿ, ಯಮನೂರ, ಶಾನವಾಡ, ಕುಮಾರಕೊಪ್ಪ, ಇಬ್ರಾಹಿಂಪುರ, ಕಡದಳ್ಳಿ, ಅಮರಗೋಳ, ಸೊಟಕನಾಳ, ಶಲವಡಿ, ಬಳ್ಳೂರು, ಚೆನ್ನಮ್ಮನ ಕೆರೆ ( ವಾಟರ್ ಸಪ್ಪೆ) ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಹೆಸ್ಕಾಂ …
Read More »ಅ.15ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ಅಣ್ಣಿಗೇರಿ: 110 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಾಗೂ ವಿದ್ಯುತ್ ಪರಿವರ್ತಕ ಅಳವಡಿಕೆ ಮತ್ತು ಸ್ವಿಚ್ ಗೇರ್ ಕಾಮಗಾರಿಗಳನ್ನು ಕೈಗೊಳ್ಳುವುದರಿಂದ ಅಕ್ಟೋಬರ್ 15 ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಹೆಸ್ಕಾಂನೊಂದಿಗೆ ಸಹಕರಿಸಬೇಕೆಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ. ನಲವಡಿ, ಭದ್ರಾಪುರ, ಕೋಳಿವಾಡ, ಅಣ್ಣಿಗೇರಿ, ಹಳ್ಳಿಕೇರಿ, ಮಜ್ಜಿಗುಡ್ಡ, ಕೊಂಡಿಕೊಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ …
Read More »ಕಾಂಗ್ರೆಸ್ ಪಕ್ಷ ಗಲಭೆ ಪ್ರಕರಣವನ್ನು ವಾಪಾಸ್ ಪಡೆದು ಸಂವಿಧಾನಕ್ಕೆ ಅಗೌರವ ಕೊಡುತ್ತಿದೆ: ಶೆಟ್ಟರ್
ಹುಬ್ಬಳ್ಳಿ : ಹಳೇಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಕಠಿಣ ಕಾನೂನುಗಳನ್ನು ಹಾಕಲಾಗಿತ್ತು. ಕಡಿಮೆ ಸಮಯದಲ್ಲಿ ಸಾವಿರಾರು ಜನ ಸೇರಿ ಗಲಭೆ ಮಾಡಿದ್ದರು. ಆಗಿನ ಕಮಿಷನರ್ ಲಾಬೂರಾಮ್ ಅವರು ಸ್ಥಳಕ್ಕೆ ದೌಡಾಯಿಸಿ ನಿಯಂತ್ರಣ ಮಾಡಿ, ಅನಾಹುತ ತಪ್ಪಿಸಿದ್ದಾರೆ. ಇದೊಂದು ಪೂರ್ವ ನಿಯೋಜಿತ ಕೃತ್ಯವಾಗಿದೆ. ಇದೀಗ ಕಾಂಗ್ರೆಸ್ ಪಕ್ಷ ಗಲಭೆ ಪ್ರಕರಣವನ್ನು ವಾಪಾಸ್ ಪಡೆದು ಸಂವಿಧಾನಕ್ಕೆ ಅಗೌರವ ಕೊಡುತ್ತಿದೆ. ಮತಬ್ಯಾಂಕ್ ಗೆ ಸಮಾಜದ ವ್ಯವಸ್ಥೆ ಹಾಳು ಮಾಡುತ್ತಿದೆಂದು ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ …
Read More »ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಗಲಭೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಎಚ್ ಕೆ ಪಾಟೀಲ್
ಹುಬ್ಬಳ್ಳಿ : ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆರೋಪಿಗಳ ವಿರುದ್ಧ ದಾಖಲಾಗಿದ್ದ ಕೇಸ್ ಗಳನ್ನು ಹಿಂದೆ ಪಡೆದ ಹಿನ್ನೆಲೆ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ ಆದ್ರೆ ಕಾನೂನು ಸಚಿವ ಎಚ್ ಕೆ ಪಾಟೀಲ್ ಸರ್ಕಾರದ ನಡೆಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಅವರು ಗಲಭೆಕೋರರ ಮೇಲಿನ ಕೇಸ್ ವಾಪಸ್ಸು ಪಡೆದಿದ್ದು ಅಲ್ಪ ಸಂಖ್ಯಾತರ ಕಲ್ಯಾಣ ಹಾಗೂ ಅಲ್ಪ ಸಂಖ್ಯಾತರ ಸೇವೆ …
Read More »ಹಿಂದೂ – ಮುಸ್ಲಿಂ ಭಾವೈಕ್ಯತೆಯ ಪುರಾಣ ಮಹಾ ಮಂಗಲೋತ್ಸವ
ಕುದಗೋಳ ; ಬೃಹತ್ ಕುಂಭ ಕೋಡಗಳ ಮೆರವಣಿಗೆ, ಶೃಂಗಾರಗೊಂಡ ಚಿಕ್ಕೋಡಿಯಲ್ಲಿ ತಾಯಿ ದೇವಿಯ ಮೆರವಣಿಗೆ ವಿಜಯದಶಮಿ ಹಬ್ಬಕ್ಕೆ ಮುಸ್ಲಿಂ ಬಾಂಧವರ ಸಹಕಾರದೊಂದಿಗೆ ಜಾತಿ, ಮತ, ಧರ್ಮ ಮೀರಿದ ವಾತಾವರಣ ಗುಡೇನಕಟ್ಟಿ ಗ್ರಾಮದಲ್ಲಿ ಕಂಡು ಬಂದಿದೆ. ನವರಾತ್ರಿ ಹಬ್ಬದ ಒಂಬ್ಬತ್ತು ದಿನಗಳು ಪುರಾಣ ಪ್ರವಚನ ಕೈಗೊಂಡ ಗ್ರಾಮಸ್ಥರು ಪುರಾಣ ಮಹಾಮಂಗಲೋತ್ಸವ ಕಾರ್ಯಕ್ರಮವನ್ನು ಗ್ರಾಮದ ಮಾರುತಿ ದೇವಸ್ಥಾನದಲ್ಲಿ ಮಣಕವಾಡದ ಮೃತ್ಯುಂಜಯ ಮಹಾಸ್ವಾಮಿಗಳು, ಅಭಿನವ ಕಲ್ಯಾಣಪುರ ಬಸವಣ್ಣಜ್ಜನವರ ದಿವ್ಯ ಸಾನಿಧ್ಯದಲ್ಲಿ ನಡೆಯಿತು.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





