Breaking News

Shaikh BigTv

ಜಿ.ಎಸ್.ಪಾಟೀಲ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ರಕ್ತದಾನ ಶಿಬಿರ

ಕುಂದಗೋಳ : ಐಕ್ಯೂಎಸಿ ಯುವ ರೆಡ್ ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ ಘಟಕ, ರೋಟರಿ ಕ್ಲಬ್ ಮಿಡ್‌’ಟೌನ್ ಧಾರವಾಡದ ಸಹಯೋಗದೊಂದಿಗೆ ಕುಂದಗೋಳ ಪಟ್ಟಣದ ಜೆ.ಎಸ್‌.ಎಸ್ ವಿದ್ಯಾಪೀಠದ ಜಿ.ಎಸ್.ಪಾಟೀಲ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮವನ್ನೂ ಪ.ಪೂ.ಶಿವಾನಂದ ಮಹಾ ಸ್ವಾಮೀಜಿ ಹಾಗೂ ಕಲ್ಯಾಣಪುರಮಠದ ಬಸವಣ್ಣ ಅಜ್ಜ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಪ್ರೊ.ಜೆ.ಎನ್. ಆರಿಕಟ್ಟಿ ರಕ್ತದಾನದ ಮಹತ್ವ ಪ್ರಯೋಜನ ಕುರಿತು ವಿದ್ಯಾರ್ಥಿಗಳಿಗೆ ಅರಿವು …

Read More »

ರೈತನಿಗೆ ಸಂಕಷ್ಟ ತಂದ ಮಳೆ

ಅಳ್ಳಾವರ: ಭತ್ತದ ಬೆಳೆ ಸಂಪೂರ್ಣ ಜಲಾವೃತವಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದೆ ರೈತ ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಳ್ಳಾವರ ತಾಲೂಕಿನಾದ್ಯಂತ ವರ್ಷದ ಸರಾಸರಿಗಿಂತ ಈ ಬಾರಿ ತುಸು ಹೆಚ್ಚೇ ಮಳೆಯಾಗಿದೆ. ಭಾರೀ ಪ್ರಮಾಣದ ಮಳೆಗೆ ಬೆಳೆಗಳೆಲ್ಲ ಮಳೆ ನೀರಿಗೆ ಆಹುತಿಯಾಗಿವೆ. ಕಟಾವಿಗೆ ಬಂದ ಭತ್ತದ ಬೆಳೆ ಮೇಲೆಯೇ ನೀರು ಹರಿಯುತ್ತಿದ್ದು, ಭತ್ತದ ಬೆಳೆ ಸಂಪೂರ್ಣ ಹಾಳಾಗಿದೆ. ಇದರಿಂದ ಅಲ್ಪ ಸ್ವಲ್ಪ ಬಂದ ಬೆಳೆಯು ಕೈಗೆ …

Read More »

ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ ಜೋಶಿ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಪ್ರಸ್ತಾವನೆಯ ಮೇರೆಗೆ ಸಿಕಂದರಾಬಾದ್ – ವಾಸ್ಕೋ ನಡುವೆ ಸಂಚರಿಸುವ ರೈಲು, ದಿನಾಂಕ 09/10/2024 ರಿಂದ ಬಳ್ಳಾರಿ, ಕೊಪ್ಪಳ, ಗದಗ, ಹುಬ್ಬಳ್ಳಿ, ಧಾರವಾಡ ಮಾರ್ಗವಾಗಿ ಸಂಚರಿಸುತ್ತಿದ್ದು, ವಾರದಲ್ಲಿ ಎರಡು ದಿನ ಸಂಚರಿಸುವ ಈ ರೈಲು ಪ್ರಯಾಣಿಕರಿಗೆ ಅತ್ಯಂತ ಪ್ರಯೋಜನಕಾರಿಯಾಗಲಿದೆ. ಇದರ ಜೊತೆಗೆ ಬೆಳಗಾವಿ – ಮಣಗೂರು (ಭದ್ರಾಚಲಂ) ನಡುವೆ ರೈಲು ಸಂಚಾರ ಒದಗಿಸಬೇಕೆಂಬ ಸಚಿವರ ಮನವಿಯ ಮೇರೆಗೆ ದಿನಾಂಕ 16/10/2024 ರಿಂದ ರೈಲು …

Read More »

ಸಂಗೊಳ್ಳಿ ರಾಯಣ್ಣನ ಮೂರ್ತಿ ತೆರವು ಮಾಡದಂತೆ ಶಾಂತಿಯುತ ಪ್ರತಿಭಟನೆ

ಕುಂದಗೋಳ: ಗುಡೇನಕಟ್ಟಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆಯ ಸ್ಥಳದಲ್ಲಿ ಅಭಿಮಾನಿಗಳು ಬೀಡು ಬಿಟ್ಟಿದ್ದು, ಪ್ರತಿಷ್ಠಾಪಿಸಿದ ಮೂರ್ತಿ ತೆರವು ಮಾಡದಂತೆ ಶಾಂತಿಯುತ ಪ್ರತಿಭಟನೆ ಕೈಗೊಂಡಿದ್ದಾರೆ. ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಬುಧವಾರ ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ರಾಜು ಮಾವರಕರ, ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಜಗದೀಶ್ ಕಮ್ಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೇಲಧಿಕಾರಿಗಳ ಆದೇಶಕ್ಕೆ ಅನುಗುಣವಾಗಿ ಕ್ರಮ …

Read More »

ಗವಿ ಸಿದ್ದೇಶ್ವರ ಸ್ವಾಮೀಜಿ ಹುಬ್ಬಳ್ಳಿಯ ಕಸಬಾಪೇಟ ಪೊಲೀಸ್‌ ಠಾಣೆಗೆ ಭೇಟಿ

ಹುಬ್ಬಳ್ಳಿ: ಕೊಪ್ಪಳದ ಗವಿ ಸಿದ್ದೇಶ್ವರ ಸ್ವಾಮೀಜಿ ಹುಬ್ಬಳ್ಳಿಯ ಕಸಬಾಪೇಟ ಪೊಲೀಸ್‌ ಠಾಣೆಗೆ ಭೇಟಿ ನೀಡಿ ಪೊಲೀಸ್ ಠಾಣೆಯ ಆವರಣದಲ್ಲಿ ಬೆಳೆದ ಉದ್ಯಾನವನದ ಮಾಹಿತಿಯನ್ನು ಇನ್ಸೆಕ್ಟರ್ ರಾಘವೇಂದ್ರ ಹಳ್ಳೂರ್ ಅವರಿಂದ ಪಡೆದರು. ಬೇರೆ ಕಾರ್ಯ ನಿಮಿತ್ತ ಹುಬ್ಬಳ್ಳಿಗೆ ಆಗಮಿಸಿದ ಕೊಪ್ಪಳದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ ಕಸಬಾಪೇಟ ಪೊಲೀಸ್‌ ಠಾಣೆಯ ಮುಂದೆ ಹೋಗುವಾಗ ಠಾಣೆಯ ಮುಂಭಾಗ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರೋದನ್ನು ನೋಡಿ ಪೊಲೀಸ್‌ ಠಾಣೆಗೆ ಭೇಟಿಯನ್ನು ನೀಡಿದರು. ಇದುವರೆಗೂ ಒಂದು ಬಾರಿಯೂ …

Read More »

ಮನೆಯ ಮುಂದೆ ದೊಡ್ಡ ಪ್ರಮಾಣದಲ್ಲಿ ನಿಂತ ನೀರು

ಧಾರವಾಡ: ಸಂಪಿಗೆನಗರ, ನೀಲ ಸಿಟಿ, ವ್ಯಾಸ ವಿಹಾರ ಲೇಔಟ್, ಶ್ರೀಶ್ ರೆಸಿಡೆನ್ಸಿ ಲೇಔಟ್‌ಗಳಲ್ಲಿ ವ್ಯಾಪಕವಾಗಿ ಮಳೆ ನೀರು ನುಗ್ಗಿದೆ. ಮನೆಯ ಮುಂದೆ ದೊಡ್ಡ ಪ್ರಮಾಣದಲ್ಲಿ ನೀರು ನಿಂತಿರುವುದರಿಂದ ಜನ ಹೊರಗಡೆ ಬರಲೂ ಆಗುತ್ತಿಲ್ಲ. ನೀರಿನೊಂದಿಗೆ ಹಾವು, ಚೇಳುಗಳು ಸಹ ಬರುತ್ತಿದ್ದು, ಜನ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಸ್ಥಳಕ್ಕೆ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಭೇಟಿ ನೀಡಿ, ಪ್ರೋಣ್ ಕ್ಯಾಮೆರಾ ಮೂಲಕ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಈ ವೇಳೆ ಅಧಿಕಾರಿಗಳೊಂದಿಗೆ ಸ್ಥಳೀಯರು …

Read More »

ಧಾರಕಾರ ಮಳೆ : ಬೆಳೆ ಸಂಪೂರ್ಣ ಜಲಾವೃತ

ಕುಂದಗೋಳ : ತಾಲೂಕಿನಲ್ಲಿ ಬುಧವಾರ ರಾತ್ರಿಯಿಂದ ಇಂದು ಬೆಳಿಗ್ಗೆವರೆಗೂ ಸುರಿದ ಧಾರಾಕಾರ ಮಳೆಗೆ ರೈತಾಪಿ ಜನ ಕಿತ್ತು ಕೈ ಬಿಟ್ಟ ಶೇಂಗಾ, ಸೋಯಾಬಿನ್ ಸೇರಿದಂತೆ ಹತ್ತಿ ಬೆಳೆ ಸಂಪೂರ್ಣ ಜಲಾವೃತವಾಗಿವೆ. ಇನ್ನೂ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದ ಕೆರೆ ಕಾಲುವೆ ಒಡೆದು ಅಕ್ಕಪಕ್ಕದ ಹೊಲಗಳಿಗೆ ರಭಸದಿಂದ ನೀರು ನುಗ್ಗಿದ ಪರಿಣಾಮ ಬೆಳೆ ಸಂಪೂರ್ಣ ನೀರಿನಲ್ಲಿ ಮುಳುಗಿ ಹೋಗಿವೆ. ಸದ್ಯ ನೀರಿನ ವೇಗ ಹೆಚ್ಚುತ್ತಿರುವ ಕಾರಣ ರೈತಾಪಿ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. …

Read More »

ರತನ್ ಟಾಟಾ ನಿಧನ : ಡಾ.ಸಿ.ಎಚ್.ವಿ.ಎಸ್.ವಿ ಪ್ರಸಾದ್ ಕಂಬನಿ

ಹುಬ್ಬಳ್ಳಿ : ಬಹುದೊಡ್ಡ ಉದ್ಯಮಿ ಟಾಟಾ ಸಮೂಹ ಸಂಸ್ಥೆಯ ಮುಖ್ಯಸ್ಥರಾದ ರತನ್ ಟಾಟಾ ಅವರ ನಿಧನ ಭಾರತಕ್ಕೆ ತುಂಬಲಾರದ ನಷ್ಟವಾಗಿದೆ. ತತ್ವ ಸಿದ್ಧಾಂತಗಳ ಮೇಲೆ ಜೀವನ ನಡೆಸಿದ ರತನ್ ಟಾಟಾ ಅವರು, ತಮ್ಮ ಉಜ್ವಲ ಭವಿಷ್ಯದ ಮೂಲಕ ಯುವ ಉದ್ಯಮಿಗಳಿಗೆ ಸಾಕಷ್ಟು ಪ್ರೇರಣೆಯಾಗಿದ್ದ ಬಹುದೊಡ್ಡ ಸಾರ್ಥಕ ಸಾಧಕರು ರತನ್ ಟಾಟಾ ಎಂದು ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ಮಾಲೀಕರಾದ ಡಾ.ಸಿ.ಎಚ್.ವಿ.ಎಸ್.ವಿ ಪ್ರಸಾದ್ ಕಂಬನಿ ಮಿಡಿದಿದ್ದಾರೆ. ರತನ್ ಟಾಟಾ ಅವರ ನಿಧನದ …

Read More »

ವಿನೂತನ ರೀತಿಯಲ್ಲಿ ಶ್ರೀನಿವಾಸ ಕಲ್ಯಾಣ

ಹುಬ್ಬಳ್ಳಿ: ಕುಸುಗಲ್ ರಸ್ತೆಯಲ್ಲಿರುವ ಕುಬೇರಪುರಂನ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ವಿನೂತನ ರೀತಿಯಲ್ಲಿ ಶ್ರೀನಿವಾಸ ಕಲ್ಯಾಣವನ್ನು ಅದ್ದೂರಿಯಾಗಿ ನೆರವೇರಿಸಲಾಯಿತು. ಆರಂಭದಲ್ಲಿಯೇ ವಿಶ್ವೇಶ್ವರ ಪೂಜೆ ಸಲ್ಲಿಸುವ ಮೂಲಕ ಕಲ್ಯಾಣ ಕಾರ್ಯಕ್ರಮ ನಡೆಸಿದ್ದು, ಮಹಿಳೆಯರು, ಮಕ್ಕಳು ಮದುವೆ ಮನೆಯಲ್ಲಿ ಲವಲವಿಕೆಯಿಂದ ಓಡಾಡುವಂತೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿವಿಧ ನೃತ್ಯ, ಸಂಗೀತ ಕಾರ್ಯಕ್ರಮ ನಡೆಸಿದರು. ಕಾರ್ಯಕ್ರಮಕ್ಕೆ ಡಾ.ಸಿ.ಎಚ್.ವಿ.ಎಸ್.ವಿ ಪ್ರಸಾದ್‌, ಪಾಲಿಕೆ ಸದಸ್ಯೆ ಉಮಾ ಮುಕುಂದ ಆಗಮಿಸಿದ್ದು, ವಿದ್ಯುಕ್ತವಾಗಿ ಚಾಲನೆ ನೀಡಿದರು. ಇದೇ …

Read More »

ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ

ಕುಂದಗೋಳ : ರಾತ್ರೋರಾತ್ರಿ ಗುಡೇನಕಟ್ಟಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಯಾರೋ ಸದ್ದಿಲ್ಲದೆ ಪ್ರತಿಷ್ಠಾಪನೆ ಮಾಡಿದ್ದು ಸಂಪೂರ್ಣ ಗ್ರಾಮವೇ ಗೊಂದಲಕ್ಕೆ ಸಿಲುಕಿದೆ. ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ 5 ರಿಂದ 6 ಫೂಟ್ ಎತ್ತರದ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಆದರೆ, ಯಾರು ಈ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ ಎಂಬುದಕ್ಕೆ ಸೂಕ್ತ ಸ್ಪಷ್ಟನೆ ಸಿಕ್ಕಿಲ್ಲ, ಮಾರುತಿ ದೇವಸ್ಥಾನದ ಬಳಿಯಿರುವ ಸರ್ಕಲ್‌’ನಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಮುಖ್ಯವಾಗಿ ಸಿಸಿ ಕ್ಯಾಮೆರಾ ವ್ಯವಸ್ಥೆ …

Read More »