ಬೆಂಗಳೂರು: ನೋಂದಣಿಯೇತರ ಒಡಂಬಡಿಕೆಗಳಿಗಾಗಿ ಬಳಸುವ ಸ್ಟ್ಯಾಂಪ್ ಪೇಪರ್ಗಳ ನಕಲಿ ಹಾವಳಿ ಹೆಚ್ಚುತ್ತಿರುವುದನ್ನು ಪತ್ತೆ ಹಚ್ಚಿರುವ ಕಂದಾಯ ಇಲಾಖೆಯು ಎ. 1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿಗೆ ನಿರ್ಧರಿಸಿದ್ದು, ಸಬ್ ರಿಜಿಸ್ಟ್ರಾರ್ಗಳ ವಿಶೇಷ ಅಧಿಕಾರವನ್ನು ಮೊಟಕುಗೊಳಿಸಲು ಕಾನೂನು ತಿದ್ದುಪಡಿಗೆ ನಿರ್ಧರಿಸಿದೆ. ಸುಮಾರು 54 ಬಗೆಯ ನೋಂದಣಿಯೇತರ ಒಡಂಬಡಿಕೆ ಗಳಿಗಾಗಿ ಸ್ಟಾಂಪ್ ಪೇಪರ್ಗಳು ಬಳಕೆಯಾಗುತ್ತವೆ. ಮನೆ, ವಾಣಿಜ್ಯ ಮಳಿಗೆ ಒಪ್ಪಂದ ಪತ್ರ, ಸಾಲ, ಟೆಂಡರ್, ಸಾಮಗ್ರಿ ಸರಬರಾಜು ಸಹಿತ ಅನೇಕ ವಿಧದ ದಸ್ತಾವೇಜುಗಳು, ಎಸ್ಕಾಂಗಳಿಂದ …
Read More »ಕೆಪಿಎಸ್ಸಿ ಯಿಂದ ಡಿ.29 ರಂದು ಪ್ರೊಬೇಷನರ್ ಗ್ರೂಪ್ ಎ ಮತ್ತು ಬಿ ಹುದ್ದೆಗಳ ಪರೀಕ್ಷೆ
ಕೊಪ್ಪಳ: ಕರ್ನಾಟಕ ಲೋಕಸೇವಾ ಆಯೋಗದಿಂದ ಡಿಸೆಂಬರ್ 29 ರಂದು ಬೆಳ್ಳಿಗೆ 10 ರಿಂದ 12 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆಯವರೆಗೆ ಕೊಪ್ಪಳ ತಾಲ್ಲೂಕಿನಲ್ಲಿ ನಡೆಯಲಿರುವ ಗೆಜೆಟೆಡ್ ಪ್ರೋಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಹುದ್ದೆಗಳ ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತಲಿನ 200ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ. ಪರೀಕ್ಷಾ …
Read More »ಶಕ್ತಿ ಯೋಜನೆಯಿಂದಾಗಿ ರಾಜ್ಯ ಸರ್ಕಾರಕ್ಕೆ ಅಪಾರ ನಷ್ಟ: ಆರ್.ಅಶೋಕ್
ಬೆಂಗಳೂರು: ಶಕ್ತಿ ಯೋಜನೆಯಿಂದಾಗಿ ರಾಜ್ಯ ಸರ್ಕಾರಕ್ಕೆ ಅಪಾರ ನಷ್ಟವಾಗಿದ್ದು, ಸಾರಿಗೆ ನೌಕರರು ಪ್ರತಿಭಟಿಸುತ್ತಿದ್ದಾರೆ. ನಾಮ ಹಾಕುವುದರಲ್ಲಿ ಕಾಂಗ್ರೆಸ್ಸಿಗರು ಪಳಗಿದವರು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಆರ್ಥಿಕ ನಷ್ಟದಲ್ಲಿದೆ. ಬಸವರಾಜ ರಾಯರೆಡ್ಡಿ ಅವರು ಹಲವು ಬಾರಿ ಹೇಳಿದರೂ ಸಿಎಂ ಸಿದ್ದರಾಮಯ್ಯ ಕೇಳಿಲ್ಲ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟು ನಷ್ಟ ಉಂಟಾಗಿದೆ. ಸಾರಿಗೆ ನೌಕರರು ಧರಣಿ …
Read More »ಬೆಂಗಳೂರು: ಬಿಬಿಎಂಪಿಯ ಪ್ರತಿಯೊಂದು ವಾರ್ಡ್ ನಲ್ಲಿ 52 ಹೊಸ ಇಂದಿರಾ ಕ್ಯಾಂಟೀನ್ ಗಳ ಸ್ಥಾಪನೆ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಪ್ರತಿಯೊಂದು ವಾರ್ಡ್ನಲ್ಲೂ ಇಂದಿರಾ ಕ್ಯಾಂಟೀನ್ ಸ್ಥಾಪಿಸುವ ಯೋಜನೆಗೆ ಚಾಲನೆ ದೊರೆತಿದ್ದು, ಏಪ್ರಿಲ್ ವೇಳೆಗೆ 52 ಹೊಸ ಇಂದಿರಾ ಕ್ಯಾಂಟೀನ್ಗಳು ಆರಂಭವಾಗುವ ಸಾಧ್ಯತೆ ಇದೆ. ಗುಣಮಟ್ಟದ ಆಹಾರ ಎಲ್ಲರಿಗೂ ಸಿಗಬೇಕು, ಹಸಿದವರು ಉಪವಾಸದಿಂದ ಇರಬಾರದು ಎಂಬ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ಅನ್ನು ಎಲ್ಲ ವಾರ್ಡ್ಗಳಲ್ಲಿ ಆರಂಭಿಸಲಾಗುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023-24ರ ಬಜೆಟ್ನಲ್ಲಿ ಪ್ರಕಟಿಸಿದ್ದರು. 2023ರ ಜೂನ್ 12ರಂದು ಅಧಿಕಾರಿಗಳ ಸಭೆ ನಡೆಸಿ, ಕೂಡಲೇ ಹೊಸ …
Read More »ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸಲು ರಾಜ್ಯ ಸರ್ಕಾರ ಒಪ್ಪಿಗೆ
ಬೆಂಗಳೂರು: ನಷ್ಟದಲ್ಲಿರುವ ಕೊಂಕಣ ರೈಲ್ವೆ ನಿಗಮವನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸಲು ರಾಜ್ಯ ಸರ್ಕಾರ ತಾತ್ವಿಕವಾಗಿ ಒಪ್ಪಿಗೆ ನೀಡಿದೆ. ಕೇರಳ, ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ಸಂಪರ್ಕಿಸುವ ಕೊಂಕಣ ರೈಲ್ವೆಯನ್ನು ಲಾಭಕ್ಕೆ ತರಲು ಸಾಧ್ಯವಾಗದೇ, ಆಧುನೀಕರಣ ಕಾರ್ಯವೂ ಸಾಧ್ಯವಾಗದೇ ಏಗುತ್ತಾ ಸಾಗುತ್ತಿರುವುದರಿಂದ ವಿಲೀನಕ್ಕೆ ಕೊಂಕಣ ರೈಲ್ವೆ ನಿಗಮವೂ ಸಜ್ಜಾಗಿದೆ. ಕೊಂಕಣ ರೈಲ್ವೆ ನಿಗಮದಲ್ಲಿ ಕರ್ನಾಟಕ ಸರ್ಕಾರ ಶೇ 11.62 ರಷ್ಟು ಈಕ್ವಿಟಿ ಷೇರು (₹270 ಕೋಟಿ) ಹೊಂದಿದೆ. ಕೊಂಕಣ ರೈಲ್ವೆ ನಿಗಮ …
Read More »ಅಂಬೇಡ್ಕರ್ ವಿರುದ್ದ ಅಮಿತ್ ಶಾ ಅವಹೇಳನಕಾರಿ ಹೇಳಿಕೆ ಖಂಡಿಸಿ ಡಿ.28 ರಂದು ದಲಿತ ಸಂಘಟನೆಗಳಿಂದ ರಾಷ್ಟ್ರವ್ಯಾಪಿ ಪ್ರತಿಭಟನೆ
ನವದೆಹಲಿ: ಡಾ.ಬಿ.ಆರ್. ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು, ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿ ದಲಿತ ಮತ್ತು ಆದಿವಾಸಿ ಸಂಘಟನೆಗಳು ಶನಿವಾರ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲಿವೆ. ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸೇರಿದ ಸಂಸದರಿಗೂ ಒತ್ತಾಯಿಸಿರುವ ಸಂಘಟನೆಗಳು, ಪಾಲ್ಗೊಳ್ಳದಿದ್ದರೆ ಮುಂದಿನ ಚುನಾವಣೆಯಲ್ಲಿ ಸೋಲು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿವೆ. ಡಿ.28ರಂದು ಮಧ್ಯಾಹ್ನ 1 ಗಂಟೆಗೆ ದೇಶದಾದ್ಯಂತ …
Read More »ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿ, ಪಂಗಡದ ಉದ್ದಿಮೆದಾರರು ಹೊಸದಾಗಿ ಜವಳಿ ಘಟಕ ಸ್ಥಾಪಿಸಲು ಅರ್ಜಿ ಆಹ್ವಾನ
ಬೆಂಗಳೂರು: ಕೈಮಗ್ಗ ಮತ್ತು ಜವಳಿ ಇಲಾಖೆಯು ನೇಕಾರರ ವಿಶೇಷ ಪ್ಯಾಕೇಜ್ ಯೋಜನೆ ಎಸ್ಸಿಎಸ್ಪಿ/ಟಿಎಎಸ್ಪಿ ಯೋಜನೆಯಡಿ ಜವಳಿ ಕ್ಷೇತ್ರಕ್ಕೆ ಸಂಬಂಸಿದಂತೆ ಸಣ್ಣ ಮತ್ತು ಅತಿಸಣ್ಣ (ಎಸ್ಎಂಇ) ಘಟಕಗಳ ಸ್ಥಾಪನೆಗೆ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಉದ್ದಿಮೆದಾರರು ಹೊಸದಾಗಿ ಜವಳಿ ಘಟಕ ಸ್ಥಾಪಿಸಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಜವಳಿ ಉತ್ಪಾದನಾ ಉದ್ದಿಮೆದಾರರು ನಿಗದಿತ ನಮೂನೆ ಅರ್ಜಿಯನ್ನು ಉಪನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಮಂಜುನಾಥ ಟವರ್ಸ್, 2ನೇ ಮಹಡಿ, ಗಾಂಧಿನಗರ, 1ನೇ …
Read More »ಕೆನ್-ಬೆತ್ವಾ ನದಿ ಜೋಡಣೆ ಯೋಜನೆಗೆ ಇಂದು ಪ್ರಧಾನಿ ಮೋದಿ ಶಂಕುಸ್ಥಾಪನೆ
ಭೋಪಾಲ್: ಮಧ್ಯಪ್ರದೇಶದ ಬುಂದೇಲ್ಖಂಡದ ಹಣೆಬರಹವನ್ನು ಬದಲಾಯಿಸುವ ಕೆನ್-ಬೆತ್ವಾ ನದಿ ಜೋಡಣೆ ಯೋಜನೆಗೆ ಇಂದು ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದು ರಾಷ್ಟ್ರೀಯ ನದಿ ಜೋಡಣೆ ಕಾರ್ಯನೀತಿಯಡಿಯಲ್ಲಿ ಕೈಗೊಳ್ಳಲಾಗುತ್ತಿರುವ ಮೊದಲ ಯೋಜನೆಯಾಗಿದೆ. ಮಧ್ಯಪ್ರದೇಶದಲ್ಲಿ ಬರಗಾಲದ ಸ್ಥಿತಿಗೆ ತುತ್ತಾಗಿರುವ ಬುಂದೇಲ್ಖಂಡ ಪ್ರದೇಶಕ್ಕೆ ನೀರಾವರಿ, ಕುಡಿಯುವ ನೀರು ಮತ್ತು ಜಲವಿದ್ಯುತ್ ಸೌಲಭ್ಯವನ್ನು ಒದಗಿಸುವ ಯೋಜನೆ ಇದಾಗಿದೆ. ಬುಧವಾರ ಮಧ್ಯಪ್ರದೇಶದ ಖಜುರಾಹೋಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಈ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. …
Read More »ಬಿಬಿಎಂಪಿ ವ್ಯಾಪ್ತಿಯಲ್ಲಿ 67 ಸಾವಿರ ಇ-ಖಾತಾ ವಿತರಣೆ: ಮುನೀಶ್ ಮೌದ್ಗಿಲ್
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅಂತಿಮ ಇ-ಖಾತಾ ಪಡೆಯಲು 67 ಸಾವಿರ ಅರ್ಜಿಗಳು ಸ್ವೀಕೃತಗೊಂಡಿದ್ದು, ಎಲ್ಲ ಅರ್ಜಿಗಳನ್ನೂ ವಿಲೇವಾರಿ ಮಾಡಿ ಇ-ಖಾತಾಗಳನ್ನು ವಿತರಿಸಲಾಗಿದೆ ಎಂದುಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ತಿಳಿಸಿದರು. ಎಂಟೂ ವಲಯಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ನಿತ್ಯ ಬರುವ ಅರ್ಜಿಗಳನ್ನು ನಿಗದಿತ ಸಮಯದೊಳಗಾಗಿ ವಿಲೇವಾರಿ ಮಾಡಲಾಗುತ್ತಿದೆ’ ಎಂದರು. ಹೆಚ್ಚು ಬಾಕಿ ಆಸ್ತಿ ತೆರಿಗೆ ಉಳಿಸಿಕೊಂಡಿರುವ ಸುಸ್ತಿದಾರರ ವಲಯವಾರು ಪಟ್ಟಿ ಮಾಡಿ, ಅವರಿಂದ ತೆರಿಗೆ ಯನ್ನು ವಸೂಲಿ …
Read More »ಕಳೆದ ಒಂದೂವರೆ ವರ್ಷದಲ್ಲಿ ದೇಶದಾದ್ಯಂತ 10 ಲಕ್ಷ ಯುವಕರಿಗೆ ಉದ್ಯೋಗ ನೀಡಿರುವುದು ದಾಖಲೆ: ಪ್ರಧಾನಿ ಮೋದಿ
ನವದೆಹಲಿ : ನಮ್ಮ ಸರ್ಕಾರ ಕಳೆದ ಒಂದೂವರೆ ವರ್ಷದಲ್ಲಿ ಸುಮಾರು 10 ಲಕ್ಷ ಯುವಕರಿಗೆ ಸರ್ಕಾರಿ ಉದ್ಯೋಗ ನೀಡಿರುವುದು ದಾಖಲೆಯಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ದೇಶಾದ್ಯಂತ 45 ಸ್ಥಳಗಳಲ್ಲಿ ಆಯೋಜಿಸಿರುವ ಉದ್ಯೋಗ ಮೇಳದಲ್ಲಿ 71 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಜನರನ್ನು ಉದ್ದೇಶಿಸಿ ಮಾತನಾಡಿದರು. ನಮ್ಮ ಸರ್ಕಾರ ಕಳೆದ ಒಂದೂವರೆ ವರ್ಷದಲ್ಲಿ ಸುಮಾರು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





