Breaking News

bigtvnews22

ರಾಜ್ಯದಲ್ಲಿ ಶಿಕ್ಷಕರ ಹುದ್ದೆಗಳ ಕೊರತೆಯನ್ನು ಸರಿಪಡಿಸಲು ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಕರ್ನಾಟಕದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶಿಕ್ಷಕರ ಹುದ್ದೆಗಳ ಕೊರತೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಒಟ್ಟು 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಇದರ ಪೈಕಿ, 48,922 ಹುದ್ದೆಗಳು ಪ್ರಾಥಮಿಕ ಶಿಕ್ಷಣದ ಹಂತದಲ್ಲಿ ಮತ್ತು 10,850 ಹುದ್ದೆಗಳು ಪ್ರೌಢಶಾಲಾ ಹಂತದಲ್ಲಿ ಖಾಲಿ ಇವೆ. ಈ ಸಮಸ್ಯೆ ರಾಜ್ಯದ ಶಿಕ್ಷಣ ವ್ಯವಸ್ಥೆಗೆ ಸವಾಲಾಗಿ ಪರಿಣಮಿಸಿದ್ದು, ವಿದ್ಯಾರ್ಥಿಗಳ ಪಾಠಕ್ರಮ, ಕಲಿಕೆ ಗುಣಮಟ್ಟ ಮತ್ತು …

Read More »

ರಾಜ್ಯಾದ್ಯಂತ ಸರ್ಕಾರಿ ನೇಮಕಾತಿಯಲ್ಲಿ 2,035 ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಡಿ.ಸುಧಾಕರ್

ಬೆಂಗಳೂರು: 371(ಜೆ ) ಕಾಯ್ದೆಯನ್ವಯ ರಾಜ್ಯದಾದ್ಯಂತ ಸರ್ಕಾರಿ ನೇಮಕಾತಿಯಲ್ಲಿ ರಾಜ್ಯಮಟ್ಟದ ಸ್ಥಳೀಯ ವೃಂದದ ನೇರ ನೇಮಕಾತಿಯಲ್ಲಿ 9695 ಹುದ್ದೆಗಳನ್ನು ಗುರುತಿಸಲಾಗಿದ್ದು, ಈ ಪೈಕಿ 5977 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಎಂದು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ತಿಳಿಸಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಅವರು, 371(ಜೆ ) ಅಡಿ ವಿವಿಧ ನೇಮಕಾತಿ ಸಂಸ್ಥೆಗಳಲ್ಲಿ 1,658 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದ್ದು, ಇನ್ನು 2,035 ಹುದ್ದೆಗಳ ಭರ್ತಿ ಮಾಡಲು …

Read More »

ಉತ್ತರ ಕರ್ನಾಟಕದ ಜನ ಕರ್ನಾಟಕವನ್ನು ಕಟ್ಟುವುದರಲ್ಲಿ ವಿಶೇಷ ಪಾತ್ರವನ್ನು ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಉತ್ತರ ಕರ್ನಾಟಕದ ಜನರ ಬಗ್ಗೆ ನಮ್ಮ ಬದ್ಧತೆಯನ್ನು ಪ್ರಶ್ನಿಸುವಂತಿಲ್ಲ. ಈ ಭಾಗದ ಜನರ ಬಗ್ಗೆ ನನಗೆ ವಿಶೇಷ ಪ್ರೀತಿ ಮತ್ತು ಕಾಳಜಿಯಿದೆ. ಉತ್ತರ ಕರ್ನಾಟಕದ ಜನ ಕರ್ನಾಟಕವನ್ನು ಕಟ್ಟುವುದರಲ್ಲಿ ವಿಶೇಷವಾದ ಪಾತ್ರವನ್ನು ವಹಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸುವರ್ಣ ವಿಧಾನಸೌಧದ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ನಡೆದ ಚರ್ಚೆಗೆ ಸರಕಾರ ಪರವಾಗಿ ಅವರು ಉತ್ತರ ನೀಡಿದರು. ಕಲಬುರಗಿ ಮತ್ತು ಬೆಳಗಾವಿ ವಿಭಾಗಗಳಲ್ಲಿ …

Read More »

ರಾಜ್ಯದಲ್ಲಿ ಮಾಜಿ ಸೈನಿಕರಿಗೆ ಭೂ ಮಂಜೂರಾತಿಗೆ ನಿವೇಶನ ನೀಡಲು ಕ್ರಮ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ : ರಾಜ್ಯದಲ್ಲಿರುವ ಮಾಜಿ ಸೈನಿಕರಿಗೆ ವ್ಯವಸಾಯದ ಉದ್ದೇಶಕ್ಕಾಗಿ ಭೂ ಮಂಜೂರಾತಿ ಮಾಡಲು ರಾಜ್ಯದಲ್ಲಿ ಸರ್ಕಾರಿ ಭೂಮಿಯ ತೀವ್ರ ಕೊರತೆಯಿರುವುದರಿಂದ, ಅವರಿಗೆ ನಿವೇಶನ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ವಿಧಾನ ಪರಿಷತ್ತಿನಲ್ಲಿ ಸದಸ್ಯ ಸಿ. ಎನ್. ಮಂಜೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ದೇಶಕ್ಕಾಗಿ ಸೇವೆ ಸಲ್ಲಿಸಿರುವ ಮಾಜಿ ಸೈನಿಕರ ಕುರಿತಂತೆ ಗೌರವ ಮತ್ತು ಅಭಿಮಾನವಿದೆ. ಜವಾನ್ ಸಮ್ಮಾನ್ ಹೆಸರಿನಲ್ಲಿ ಮಾಜಿ …

Read More »

ಮುಂದುವರೆದ ಸಮುದಾಯವನ್ನು 2ಎ ಮೀಸಲಾತಿಗೆ ಸೇರಿಸಬೇಡಿ: ರಾಜ್ಯ ಹಿಂದುಳಿದ ಒಕ್ಕೂಟದಿಂದ ಪ್ರತಿಭಟನೆ

ಬೆಳಗಾವಿ: ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯವಾಗಿ ಮುಂದುವರಿದ ಯಾವುದೇ ಸಮುದಾಯವನ್ನು ಪ್ರವರ್ಗ ‘2ಎ’ ಮೀಸಲಾತಿ ಪಟ್ಟಿಯಲ್ಲಿ ಸೇರಿಸಬಾರದು ಎಂದು ಆಗ್ರಹಿಸಿ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದವರು ಇಲ್ಲಿನ ಸುವರ್ಣ ವಿಧಾನಸೌಧ ಬಳಿ ಇರುವ ವೇದಿಕೆಯಲ್ಲಿ ಬುಧವಾರ ಬೃಹತ್‌ ಪ್ರತಿಭಟನೆ ನಡೆಸಿದರು. ಸದ್ಯ ಪ್ರವರ್ಗ ‘3ಬಿ’ ಅಡಿ ಮೀಸಲಾತಿ ಪಡೆಯುತ್ತಿರುವ ಲಿಂಗಾಯತ ಪಂಚಮಸಾಲಿ ಸಮುದಾಯದವರು ತಮ್ಮನ್ನು ‘2ಎ’ಗೆ ಸೇರ್ಪಡೆಗೊಳಿಸುವಂತೆ ಒತ್ತಾಯಿಸಿ ಹೋರಾಟ ಮಾಡುತ್ತಿದ್ದಾರೆ. ಶೈಕ್ಷಣಿಕ, ಸಾಮಾಜಿಕ ಆರ್ಥಿಕ ಮತ್ತು …

Read More »

ವಿಜಯ್ ಮಲ್ಯ ಆಸ್ತಿ ಮಾರಾಟದಿಂದ ಬ್ಯಾಂಕ್ ಗಳಿಗೆ 14 ಸಾವಿರ ಕೋಟಿ ಮರಳಿಸಿದ ಜಾರಿ ನಿರ್ದೇಶನಾಲಯ

ನವದೆಹಲಿ: ಬಹುಕೋಟಿ ಬ್ಯಾಂಕ್ ವಂಚನೆ ಹಗರಣಗಳಲ್ಲಿ ಷಾಮೀಲಾದ ಆರೋಪ ಎದುರಿಸುತ್ತಿರುವ ಉದ್ಯಮಿ ವಿಜಯ್ ಮಲ್ಯ ಅವರ ಆಸ್ತಿಗಳ ಮಾರಾಟದಿಂದ ಬಂದ 14 ಸಾವಿರ ಕೋಟಿ ರೂಪಾಯಿಗಳನ್ನು ಕಾನೂನು ಜಾರಿ ನಿರ್ದೇಶನಾಲಯ ಬ್ಯಾಂಕ್‌ಗಳಿಗೆ ಮರಳಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಲೋಕಸಭೆಯಲ್ಲಿ ಬಹಿರಂಗಪಡಿಸಿದರು. ವಜ್ರದ ವ್ಯಾಪಾರಿ ನೀರವ್ ಮೋದಿಯವರಿಂದ 1053 ಕೋಟಿ ಸೇರಿದಂತೆ ವಿವಿಧ ಹಗರಣಗಳಲ್ಲಿ ಷಾಮೀಲಾದವರಿಂದ ಒಟ್ಟು 22280 ಕೋಟಿ ರೂಪಾಯಿಗಳನ್ನು ಸಂತ್ರಸ್ತರಿಗೆ ವಾಪಾಸು ನೀಡಲಾಗಿದೆ ಎಂದು …

Read More »

ರೈತರಿಗೆ ಸಹಾಯ ಮಾಡಲು 1,000 ಕೋಟಿ ರೂ.ಗಳ ಕ್ರೆಡಿಟ್ ಗ್ಯಾರಂಟಿ ಯೋಜನೆಗೆ ಚಾಲನೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ಸಂಕಷ್ಟದ ಮಾರಾಟದಲ್ಲಿ ತೊಡಗಿರುವ ಸಣ್ಣ ರೈತರಿಗೆ ಸಹಾಯ ಮಾಡಲು ಕೇಂದ್ರವು ಸೋಮವಾರ ಕ್ರೆಡಿಟ್ ಗ್ಯಾರಂಟಿ ಯೋಜನೆಯನ್ನು (ಸಿಜಿಎಸ್) ಅನಾವರಣಗೊಳಿಸಿದೆ. ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಪ್ರಾರಂಭಿಸಿದ ಈ ಯೋಜನೆಯು ರೈತರಿಗೆ – ವಿಶೇಷವಾಗಿ ಸಣ್ಣ ಮತ್ತು ಅತಿಸಣ್ಣ – ಎಲೆಕ್ಟ್ರಾನಿಕ್ ವೇರ್ಹೌಸ್ ರಸೀದಿಗಳನ್ನು ಬಳಸಿಕೊಂಡು ಸುಗ್ಗಿಯ ನಂತರದ ಸಾಲಗಳನ್ನು ಪಡೆಯಲು ಸಹಾಯ ಮಾಡಲು 1000 ಕೋಟಿ ರೂ.ಗಳ ಕಾರ್ಪಸ್ ಅನ್ನು ಒದಗಿಸುತ್ತದೆ. …

Read More »

ಸಾರ್ವಜನಿಕ ಗ್ರಂಥಾಲಯ ಇಲಾಖೆ ಗ್ರಂಥಾಲಯ ವಿಜ್ಞಾನ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ

ಧಾರವಾಡ : ಸಾರ್ವಜನಿಕ ಗ್ರಂಥಾಲಯ ಇಲಾಖೆಯು ರಾಜ್ಯದ ನಾಲ್ಕು ಕಂದಾಯ ಇಲಾಖೆಗಳಾದ ಮಂಗಳೂರು (ಮೈಸೂರು ವಿಭಾಗ), ಬೆಂಗಳೂರು, ಧಾರವಾಡ (ಬೆಳಗಾವಿ ವಿಭಾಗ) ಮತ್ತು ಕಲ್ಬುರ್ಗಿ ವಿಭಾಗಗಳಲ್ಲಿ ಆರು ತಿಂಗಳ ಗ್ರಂಥಾಲಯ ವಿಜ್ಞಾನ ತರಬೇತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆಯಾ ಕಂದಾಯ ಇಲಾಖೆಗಳಿಂದ ಅರ್ಜಿ ಸಲ್ಲಿಸಬೇಕು ಮತ್ತು ಅಗತ್ಯ ದಾಖಲೆಗಳೊಂದಿಗೆ ಜನವರಿ 10, 2025 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಧಾರವಾಡ ನಗರ ಕೇಂದ್ರ ಗ್ರಂಥಾಲಯದ ಆಯಾ ನಗರ …

Read More »

ಗದಗ ಜಿಲ್ಲೆಯಲ್ಲಿ ನೂತನ ಕೃಷಿ ಕಾಲೇಜು ಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಭರವಸೆ

ಗದಗ : ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು 200 ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಮೂಲಕ ಕ್ಷೇತ್ರಕ್ಕೆ ನೂತನ ಕೃಷಿ ಕಾಲೇಜು ಸ್ಥಾಪನೆ ವಿಚಾರವಾಗಿ ಭರವಸೆ ನೀಡಿದರು. ಈ ವೇಳೆ ಮಾತನಾಡಿದ ಸಿಎಂ, ಕ್ಷೇತ್ರದ ಶಾಸಕ ಜೆ.ಎಸ್.ಪಾಟೀಲ್ ಅವರು ನನ್ನ ಬಳಿ ಬರುವುದು ರೋಣಾ ಮತ ಕ್ಷೇತ್ರದ ಅಭಿವೃದ್ಧಿ ವಿಚಾರಕ್ಕೆ ಮಾತ್ರ. ಮುಂದಿನ ಬಜೆಟ್​​​ನಲ್ಲಿ ಕ್ಷೇತ್ರಕ್ಕೆ ಕೃಷಿ ಕಾಲೇಜು …

Read More »

ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ₹15000 ಕೋಟಿ ಬಂಡವಾಳ ಹೂಡಿಕೆ: ಕೇಂದ್ರ ಸಚಿವ ಕುಮಾರಸ್ವಾಮಿ

ಭದ್ರಾವತಿ: ನಗರದ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (ವಿಐಎಸ್‌ಎಲ್)ಗೆ ₹ 15,000 ಕೋಟಿ ಬಂಡವಾಳ ತೊಡಗಿಸುವ ಸಂಬಂಧ ಯೋಜನಾ ವರದಿ ತಯಾರಿಸಲು ಕೋಲ್ಕತ್ತದ ಸಂಸ್ಥೆಗೆ ಜವಾಬ್ದಾರಿ ವಹಿಸಲಾಗಿದ್ದು, ಶೀಘ್ರ ಕಾರ್ಖಾನೆಗೆ ಭೇಟಿ ನೀಡಲಿದೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದರು. ಮುಖಂಡ ಮಂಗೋಟೆ ರುದ್ರೇಶ್ ಹಾಗೂ ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್ ನೇತೃತ್ವದ ಕಾರ್ಮಿಕರ ನಿಯೋಗ ಈಚೆಗೆ ನವದೆಹಲಿಯಲ್ಲಿ …

Read More »