Breaking News

bigtvnews22

ಹಾಸನ ವಿಮಾನ ನಿಲ್ದಾಣ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಕೇಂದ್ರಕ್ಕೆ ಮನವಿ ಮಾಡಿದ ಎಚ್.ಡಿ.ದೇವೇಗೌಡರು

ನವದೆಹಲಿ: ಕರ್ನಾಟಕದ ಪ್ರವಾಸೋದ್ಯಮ ಕ್ಷೇತ್ರದ ಬಲವರ್ಧನೆ ಸಹಕಾರಿಯಾಗುವ ಹಾಗೂ ರೈತರಿಗೆ ಅತಿ ಹೆಚ್ಚು ಉಪಯುಕ್ತವಾಗುವ ಹಾಸನ ವಿಮಾನ ನಿಲ್ದಾಣ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು. ಈ ಬಗ್ಗೆ ಗುರುವಾರ ರಾಜ್ಯಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿಗಳು, ಇದು ಅತ್ಯಂತ ಮಹತ್ವಾಕಾಂಕ್ಷೆಯ ವಿಮಾನ ನಿಲ್ದಾಣವಾಗಿದ್ದು, ಕ್ಷಿಪ್ರಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿದರೆ ಜನತೆಗೆ ಹೆಚ್ಚು ಅನುಕೂಲ ಆಗುತ್ತದೆ. ರಾಜ್ಯಕ್ಕೆ ದೊಡ್ಡ ಕೊಡುಗೆ ನೀಡುತ್ತದೆ ಎಂದು …

Read More »

ಗ್ರಾಮ-ಒಂದು ಕೇಂದ್ರಕ್ಕೆ ಫ್ರಾಂಚೈಸಿಗಾಗಿ ಅರ್ಜಿಗಳನ್ನು ಆಹ್ವಾನ

ಧಾರವಾಡ : ಧಾರವಾಡ ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ ವಿಲೇಜ್ ಒನ್ ಸೆಂಟರ್ ಫ್ರಾಂಚೈಸಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಚಿಕ್ಕಮಲ್ಲಿಗವಾಡದಲ್ಲಿ ಗ್ರಾಮ ಒನ್ ಕೇಂದ್ರ ಹಾಗೂ ಅಳ್ನಾವರ ತಾಲೂಕಿನ ನರೇಂದ್ರ ಗ್ರಾಮ ಪಂಚಾಯಿತಿ ಕೇಂದ್ರ, ಕಲಘಟಗಿ ತಾಲೂಕಿನ ಸೂರಶೆಟ್ಟಿಕೊಪ್ಪ ಗ್ರಾಮ ಪಂಚಾಯಿತಿಗಳಲ್ಲಿ ಫ್ರಾಂಚೈಸಿ ಆರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿಯೊಂದಿಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ವಿಲೇಜ್ ಒನ್ ಕೇಂದ್ರವನ್ನು …

Read More »

ಅಭ್ಯರ್ಥಿಗಳಿಂದ ಪತ್ರಿಕೋದ್ಯಮ ತರಬೇತಿ (ಅಪ್ರೆಂಟಿಸ್) ಗೆ ಅರ್ಜಿ ಆಹ್ವಾನ

ಧಾರವಾಡ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಕ್ಕೆ ವೃತ್ತಿ ತರಬೇತಿಗಾಗಿ ಪ್ರತಿಯೊಬ್ಬ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಧಾರವಾಡ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಪತ್ರಿಕೋದ್ಯಮ ಪದವೀಧರರು ಅಥವಾ ಸ್ನಾತಕೋತ್ತರ ಪದವೀಧರರಿಗೆ ಅಭ್ಯರ್ಥಿಗಳಿಗೆ ಜನವರಿ 2025 ರಿಂದ ಡಿಸೆಂಬರ್ ವರೆಗೆ 12 ತಿಂಗಳ ತರಬೇತಿ (ಅಪ್ರೆಂಟಿಸ್) ತರಬೇತಿಯನ್ನು ನೀಡಲಾಗುತ್ತದೆ. ಕರ್ನಾಟಕದಲ್ಲಿ ಕಾನೂನುಬದ್ಧವಾಗಿ ಸ್ಥಾಪಿಸಲಾದ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ …

Read More »

ಸಂಚಾರಿ ನಿಯಮಗಳ ಪಾಲನೆಯಿಂದ ಎಲ್ಲ ಸಂಚಾರಿಗಳು ಸುರಕ್ಷಿತ: ಜಿಲ್ಲಾಧಿಕಾರಿ ದಿವ್ಯ ಪ್ರಭು.

ಧಾರವಾಡ : ರಸ್ತೆ ಸಂಚಾರಿ ನಿಯಮಗಳನ್ನು ಪ್ರತಿಯೊಬ್ಬರು ಪಾಲಿಸುವದರಿಂದ ಎಲ್ಲ ಸಂಚಾರಿಗಳು ಸುರಕ್ಷಿತವಾಗಿರುತ್ತಾರೆ. 2024 ರ ಜನೆವರಿಯಿಂದ ನವೆಂಬರವರಗೆ ಅವಳಿನಗರದಲ್ಲಿ 118 ವಾಹನ ಅಪಘಾತ ಪ್ರಕರಣಗಳಾಗಿದ್ದು, ಇದರಲ್ಲಿ 126 ಜನ ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದಿಂದ ಆಯೋಜಿಸಿದ್ದ ಎಲ್.ಇ.ಡಿ ಸ್ಕ್ರೀನ್ ಹೊಂದಿರುವ ವಾಹನಗಳ …

Read More »

ಡಿಸೆಂಬರ್ 20ರಂದು ‘ಯುಐ’ ಚಿತ್ರ ದೇಶಾದ್ಯಂತ ಐದು ಭಾಷೆಗಳಲ್ಲಿ ತೆರೆಗೆ

ಹುಬ್ಬಳ್ಳಿ: ಇದೇ ಡಿಸೆಂಬರ್ 20ರಂದು ‘ಯುಐ’ ಚಿತ್ರ ದೇಶಾದ್ಯಂತ ಐದು ಭಾಷೆಗಳಲ್ಲಿ ತೆರೆಗೆ ಕಾಣಲಿದೆ. ಯುಐ ಟೈಟಲ್ ಏನು ಅಂತ ನೀವೇ ಹೇಳಬೇಕು. ಇಲ್ಲಾಂದ್ರೆ ಹೆಸರೇ ಇಟ್ಟು ಬಿಡ್ತಿದ್ದೆ. ಚಿತ್ರಮಂದಿರದಲ್ಲಿ ವೀಕ್ಷಕರು ಹೀರೋನಂತೆ ವಿಜೃಂಭಿಸಬೇಕು ಅನ್ನೋದು ನನ್ನ ಆಸೆ ಎಂದು ನಟ ಉಪೇಂದ್ರ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚಿತ್ರದಲ್ಲಿ ಪ್ರತಿಯೊಂದಕ್ಕೂ ಒಂದು ಅರ್ಥ ಇದೆ. ಆ ಅರ್ಥ ನೀವೆಲ್ಲ ಅದ್ಭುತವಾಗಿ ಅರ್ಥಮಾಡ್ಕೊತೀರಾ ಅಂತ ನನಗೆ ಗೊತ್ತು. …

Read More »

ಸಿಎಂ ಪರ ಬ್ಯಾಟಿಂಗ್ ಬೀಸಿದ ಸಚಿವ ಆರ್ ಬಿ ತಿಮ್ಮಾಪುರ

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಅವರ ಸ್ವಾಭಿಮಾನಿ ಸಮಾವೇಶಕ್ಕೆ ಸಾಕಷ್ಟು ವಿರೋಧಗಳ ನಡುವೆಯೂ ಸಚಿವ ಆರ್ ಬಿ ತಿಮ್ಮಾಪುರ ಸಿಎಂ ಪರ ಬ್ಯಾಟಿಂಗ್ ಬೀಸಿದ್ದಾರೆ. ವಿರೋಧ ಮಾಡಿದವರು ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ. ಅದು ಅವರ ವಿಚಾರ ಆದ್ರೆ ಸ್ವಾಭಿಮಾನಿ ಸಮಾವೇಶ ಮಾಡೋದರಲ್ಲಿ ತಪ್ಪೇನಿದೆ ಅಂತಾ ಪ್ರತಿಕ್ರಿಯೆ ನೀಡಿದರು. ರಾಜ್ಯದಲ್ಲಿರುವ ಬೇರೆ ಬೇರೆ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಅದು ಬಿಜೆಪಿ ಸರ್ಕಾರ ಇದ್ದಾಗಲೂ ಇದೆ. ನಮ್ಮ ಸರ್ಕಾರ ಇದ್ದಾಗಲೂ ಇದೆ. ಈ ಭ್ರಷ್ಟಾಚಾರ …

Read More »

ಬೆಳಗಾವಿಯ ಚಳಿಗಾಲ ಅಧಿವೇಶನದ ಮೊದಲ ದಿನವೇ ಮಹಾಮೇಳಾವ್: ಎಂಇಎಸ್

ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಆರಂಭವಾಗಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನದ ಮೊದಲ ದಿನವೇ (ಡಿ.9ರಂದು) ಮಹಾಮೇಳಾವ್‌ ನಡೆಸಲಾಗುವುದು ಎಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ಮುಖಂಡರು ಪ್ರಕಟಿಸಿದರು. ಇಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ಅವರನ್ನು ಇಂದು ಭೇಟಿಯಾದ ಅವರು, ಅಧಿವೇಶನಕ್ಕೆ ಪರ್ಯಾಯವಾಗಿ ನಗರದಲ್ಲಿ ಮಹಾಮೇಳಾವ್‌ ಮಾಡುತ್ತೇವೆ ಇದಕ್ಕೆ ವ್ಯವಸ್ಥೆ ಮಾಡಿಕೊಡಿ ಎಂದು ಮನವಿ ಮಾಡಿದರು. ಎಂಇಎಸ್‌ ಕಾರ್ಯಾಧ್ಯಕ್ಷ ಮನೋಹರ ಕಿಣೇಕರ, ರಾಜ್ಯ ಸರ್ಕಾರದಿಂದ ಗಡಿಭಾಗದ ಮರಾಠಿ ಭಾಷಿಕರ ಮೇಲೆ ಅನ್ಯಾಯ …

Read More »

ಶಿಗ್ಗಾಂವಿ ಫಲಿತಾಂಶ ಪ್ರಕಟವಾದ ಎರಡೇ ದಿನದಲ್ಲಿ ಅಜ್ಜಂಪೀರ್ ಖಾದ್ರಿಗೆ ಬಂಪರ್ ಗಿಫ್ಟ್

ಬೆಂಗಳೂರು: ಶಿಗ್ಗಾಂವಿ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ ಬಳಿಕ ಸಿಎಂ ಸಿದ್ದರಾಮಯ್ಯ ಮನವಿ ಮೇರೆಗೆ ಉಮೇದುವಾರಿಕೆ ವಾಪಸ್​ ಪಡೆದುಕೊಂಡಿದ್ದ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿಗೆ ಬಂಪ್ ಗಿಫ್ಟ್​ ನೀಡಲಾಗಿದೆ. ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಗಮದ ಅಧ್ಯಕ್ಷರನ್ನಾಗಿ ಅಜ್ಜಂಪೀರ್ ಖಾದ್ರಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಶಿಗ್ಗಾಂವಿ ಉಪಚುನಾವಣೆ ವೇಳೆ ತಮ್ಮ ಮಾತಿಗೆ ಬೆಲೆ ಕೊಟ್ಟು ನಾಮಪತ್ರ ವಾಪಸ್ ಪಡೆದುಕೊಂಡಿದ್ದಕ್ಕೆ ಸಿಎಂ …

Read More »

ಆಟೋ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ

ಹುಬ್ಬಳ್ಳಿ: ಆಟೋ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್’ನಲ್ಲಿದ್ದ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೂಲ್ವಿ ಬಳಿಯ ಫುಲ್ ಬಳಿಯಲ್ಲಿ ನಡೆದಿದೆ.ಗಾಯಗೊಂಡವರನ್ನು ಜಾಹಿರ್, ಅಬ್ದುಲ್ ಎಂದು ಗುರುತಿಸಲಾಗಿದ್ದು, ಆಕಳಿನ ಬೆನ್ನೆಯನ್ನು ತೆಗೆದುಕೊಂಡು ಅಕ್ಕನ ಮನೆಗೆ ಹೋಗುತ್ತಿದ್ದಾಗ ಈ ಒಂದು ದುರ್ಘಟನೆ ನಡೆದಿದೆ. ಅದರಗುಂಚಿಯಿಂದ ನೂಲ್ವಿಯತ್ತ ಹೋಗುತ್ತಿದ್ದ ಬೈಕ್’ಗೆ ನೂಲ್ವಿಯಿಂದ ಅದರಗುಂಚಿಯತ್ತ ಬರುತ್ತಿದ್ದ ಆಟೋ ನಡುವೆ ಅಪಘಾತ ಸಂಭವಿಸಿದ್ದು, ಆಟೋ ಚಾಲಕನ ಅತಿಯಾದ ವೇಗವೇ ಡಿಕ್ಕಿಗೆ ಕಾರಣ …

Read More »

ನಾವು ಸೋತಿದ್ದೇವೆ ಎಂದು ಕಾಂಗ್ರೆಸ್‌ನವರ ರೀತಿ ಇವಿಎಂ ಹ್ಯಾಕ್ ಆಗಿದೆ ಎನ್ನುವುದಿಲ್ಲ : ಜೋಶಿ

ಧಾರವಾಡ: ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಾವು ಸೋಲು ಕಂಡಿದ್ದೇವೆ. ಸಹಜವಾಗಿ ಆಡಳಿತ ಪಕ್ಷದ ಅಭ್ಯರ್ಥಿಗಳು ಉಪಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತಾರೆ. ಈಗ ನಾವು ಸೋತಿದ್ದೇವೆ ಎಂದು ಕಾಂಗ್ರೆಸ್‌ನವರ ರೀತಿ ಇವಿಎಂ ಹ್ಯಾಕ್ ಆಗಿದೆ ಎನ್ನುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಶಿಗ್ಗಾಂವಿಯಲ್ಲಿ ನಾವು ಗೆಲ್ಲುತ್ತೇವೆ ಎಂಬ ಭರವಸೆ ಇತ್ತು. ಆದರೆ, ಅಲ್ಲಿ ಏನು ತಪ್ಪಾಗಿದೆ ಎಂಬುದರ ಬಗ್ಗೆ ಪರಾಮರ್ಶೆ ಮಾಡುತ್ತೇವೆ. ಉಪಚುನಾವಣೆಯಲ್ಲಿ ಜನ …

Read More »