Breaking News

bigtvnews22

ಜೊಯಿಡಾ ಜಿಂಕೆ ಬೇಟೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

ಉತ್ತರಕನ್ನಡ: ಜಿಂಕೆ ಬೇಟೆ‌ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನ ಅರಣ್ಯ ಇಲಾಖೆಯ ಅಧಿಕಾರಿಗಳು ಇಂದು ಬಂಧಿಸಿದ್ದಾರೆ. ತಲೆಮರೆಸಿಕೊಂಡ ಪ್ರಕರಣದ ಮುಖ್ಯ ಆರೋಪಿಗಳಾದ ನಾರಾಯಣ ದಬ್ಗಾರ ಮತ್ತು ದೀಪಕ ನಾಯ್ಕನನ್ನ ಬಂಧಿಸಲಾಗಿದೆ. ಜಿಲ್ಲೆಯ ಜೊಯಿಡಾ ತಾಲೂಕಿನ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಗುಂದ ಅರಣ್ಯದ ಯರಮುಖ ಭಾಗದಲ್ಲಿ ಆರೋಪಿಗಳು ಜಿಂಕೆ ಬೇಟೆಯಾಡಿದ್ದರು. ಜಿಂಕೆಯ ಮಾಂಸ ಮತ್ತು ಚರ್ಮ ಬೇಯಿಸುತ್ತಿದ್ದ ವೇಳೆ ಅರಣ್ಯಾಧಿಕಾರಿಗಳು ದಾಳಿ ಮಾಡಿದ್ದರು. ಆರೋಪಿಗಳಾದ ನಂದಿಗದ್ದಾ ಗ್ರಾಮ ಪಂಚಾಯತ್ ವ್ಯಾಪ್ತಿಯ …

Read More »

ರಾಜ್ಯದ ಜನರಿಗೆ ಉಚಿತ ವಿದ್ಯುತ್ ಪೂರೈಕೆ: ಗೋವಾ ಸರ್ಕಾರ ಘೋಷಣೆ

ಪಣಜಿ: ಪ್ರಸಕ್ತ ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಗೋವಾ ರಾಜ್ಯದ ಜನರಿಗೆ ದೊಡ್ಡ ಉಡುಗೊರೆ ಲಭಿಸಿದ್ದು, ಇಂಧನ ಸಚಿವ ಸುದೀನ ಧವಳೀಕರ್ ಅವರು ದೊಡ್ಡ ಘೋಷಣೆ ಮಾಡಿದ್ದಾರೆ, ಪ್ರತಿ ತಿಂಗಳು 300-400 ಯೂನಿಟ್ ವಿದ್ಯುತ್ ಬಳಕೆದಾರರಿಗೆ ಗೋವಾ ಸರ್ಕಾರ ಉಚಿತ ವಿದ್ಯುತ್ ಪೂರೈಕೆ ಮಾಡಲಿದೆ. ಗೋವಾ ರಾಜ್ಯ ಇಂಧನ ಸಚಿವ ಧರ್ಮಾಪುರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಈ ವಿಶೇಷ ಉಡುಗೊರೆಯ ಘೋಷಣೆ ಮಾಡಿದ್ದಾರೆ. ತಮ್ಮ ತಮ್ಮ ಊರಿನಲ್ಲಿ ಸೋಲಾರ್ ಪ್ಲ್ಯಾಂಟ್ ನಿರ್ಮಾಣ …

Read More »

ಲಾಡ್ಜ್ ನಲ್ಲಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಕಲಬುರಗಿ: ನಗರದ ರೈಲ್ವೆ ನಿಲ್ದಾಣ ಸಮೀಪದ ಲಾಡ್ಜ್‌ವೊಂದರಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಪುರ ನಗರದ ಬೋತ್ರಾ ಕಾಲೊನಿ ನಿವಾಸಿ, ಕಲಬುರಗಿಯ ಖಾಸಗಿ ಕಾಲೇಜೊಂದರಲ್ಲಿ ಡಿ. ಫಾರ್ಮಾ ಓದುತ್ತಿದ್ದ ಸುಯೋಗ ಚಂದ್ರಕಾಂತ ಆತ್ಮಹತ್ಯೆ ಮಾಡಿಕೊಂಡವರು. ಸ್ಟೇಷನ್ ಬಜಾರ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಯೋಗ ವಿಜಯಪುರ ನಗರದಲ್ಲೇ ಉಳಿದುಕೊಂಡು ಆಗಾಗ ಕಾಲೇಜಿಗೆ ಬಂದು ಹೋಗುತ್ತಿದ್ದರು. ಅಕ್ಟೋಬರ್ 11ರ ಸಂಜೆ 6ಕ್ಕೆ ಹೊರಗೆ ಹೋಗುವುದಾಗಿ ಪೋಷಕರಿಗೆ ತಿಳಿಸಿದ ಸುಯೋಗ, …

Read More »

ಕಾವೇರಿ ಐದನೇ ಹಂತದ ಯೋಜನೆ ಸಿಎಂ ಸಿದ್ದರಾಮಯ್ಯರಿಂದ ಲೋಕಾರ್ಪಣೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕದ ಬಟನ್ ಪ್ರೆಸ್(ಗುಂಡಿ ಒತ್ತುವುದರ) ಮಾಡುವುದರ ಮೂಲಕ ಬುಧವಾರ ಲೋಕಾರ್ಪಣೆಗೊಳಿಸಿದರು. ಶಾಸಕರಾದ ನರೇಂದ್ರಸ್ವಾಮಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಮಾಜಿ ಸಚಿವರಾದ ಎಸ್.ಟಿ.ಸೋಮಶೇಖರ್, …

Read More »

ರಾಜ್ಯ ಸರ್ಕಾರದಿಂದ ಕನ್ನಡ ರಾಜ್ಯೋತ್ಸವದಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣಕ್ಕೆ ಸಚಿವರ ನೇಮಕ

ಬೆಂಗಳೂರು: ರಾಜ್ಯ ಸರ್ಕಾರದಿಂದ ನವೆಂಬರ್ 1, 2024 ರಂದು ಕನ್ನಡ ರಾಜ್ಯೋತ್ಸವದಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರನ್ನು ನೇಮಕ ಮಾಡಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಶಿಷ್ಠಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಸೂಚನೆಯಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರಿಗೆ ಆದೇಶ ಹೊರಡಿಸಿದ್ದಾರೆ. ನವೆಂಬರ್.1, 2024ರಂದು ಕನ್ನಡ ರಾಜ್ಯೋತ್ಸವ ದಿನದ ಪ್ರಯುಕ್ತ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಆದರೇ ಬೆಂಗಳೂರು ನಗರ ಜಿಲ್ಲೆ ಹೊರತುಪಡಿಸಿ, …

Read More »

ಚನ್ನಪಟ್ಟಣ ಉಪಚುನಾವಣೆಗೆ ನಾನೇ ಅಭ್ಯರ್ಥಿ: ಡಿಸಿಎಂ ಡಿಕೆಶಿ ಸ್ಪಷ್ಟನೆ

ಬೆಂಗಳೂರು : ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ ಆಗಿದ್ದು, ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ನಡೆಯಲಿದೆ. ಬಳಿಕ ನವೆಂಬರ್ 23 ರಂದು ಫಲಿತಾಂಶ ಹೊರಬೀಳಲಿದೆ ಈ ಹಿನ್ನೆಲೆಯಲ್ಲಿ ಚನ್ನಪಟ್ಟಣ ಉಪಚುನಾವಣೆಗೆ ನಾನೇ ಅಭ್ಯರ್ಥಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮತ್ತೆ ಸ್ಪಷ್ಟನೆ ನೀಡಿದರು. ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ಎಲ್ಲಾ ಉಪಚುನಾವಣೆಗೂ ಕಾಂಗ್ರೆಸ್ ತಯಾರಾಗಿದೆ …

Read More »

ನ.13 ರಂದು ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ

ನವದೆಹಲಿ: ಕರ್ನಾಟಕ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ದೆಹಲಿಯ ವಿಜ್ಞಾನ ಭವನದಲ್ಲಿ ಇಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಎರಡು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದರು. ಇದೇ ವೇಳೆ ಕರ್ನಾಟಕದ ಶಿಗ್ಗಾಂವಿ(ಹಾವೇರಿ), ಚನ್ನಪಟ್ಟಣ(ರಾಮನಗರ) ಮತ್ತು ಸಂಡೂರು(ಬಳ್ಳಾರಿ ಜಿಲ್ಲೆ) ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ಪ್ರಕಟಿಸಿದ್ದು, ನವೆಂಬರ್ 13ರಂದು ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಇನ್ನು ನವೆಂಬರ್ 23ರಂದು ಈ …

Read More »

ಭಾರತದಲ್ಲಿ ಶೀಘ್ರದಲ್ಲೇ 6ಜಿ ಸೇವೆ ಆರಂಭ: ಪ್ರಧಾನಿ ಮೋದಿ

ನವದೆಹಲಿ : ಭಾರತದಲ್ಲಿ ಸಂವಹನ ಕ್ರಾಂತಿಯ ಕ್ಷೇತ್ರದಲ್ಲಿ ಇತ್ತೀಚಿನ ವರ್ಷಗಳಲ್ಲಿ ಸಾಧಿಸಿರುವ ಪ್ರಗತಿ ಅತ್ಯಂತ ಮಹತ್ವದ್ದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ಭಾರತದಲ್ಲಿ ಮೊಬೈಲ್ ಮತ್ತು ಇಂಟರ್ನೆಟ್ ಕ್ಷೇತ್ರದಲ್ಲಿ ದೊಡ್ಡ ಕ್ರಾಂತಿಯಾಗಿದೆ ಎಂದರು. 5ಜಿ ರೂಪಾಂತರವನ್ನು ನೀಡಿದ್ದು, ನಾವು ಕೂಡ ಶೀಘ್ರದಲ್ಲೇ 6ಜಿ ನಲ್ಲಿ ಕೆಲಸ ಮಾಡಲಿದ್ದೇವೆ ಎಂದು ಹೇಳಿದರು. ಇಂಡಿಯಾ ಮೊಬೈಲ್ ಕಾಂಗ್ರೆಸ್ 2024ರ ಉದ್ಘಾಟನೆಯ ಸಂದರ್ಭದಲ್ಲಿ, 21ನೇ ಶತಮಾನದಲ್ಲಿ, ಭಾರತದ ಮೊಬೈಲ್ …

Read More »

ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೀಘ್ರದಲ್ಲೆ 5800 ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಧಾರವಾಡ : ಕಲ್ಯಾಣ ಕರ್ನಾಟಕದ ಭಾಗದಲ್ಲಿ 5800 ಶಿಕ್ಷಕರ ನೇಮಕಾತಿಗೆ ಒಪ್ಪಿಗೆ ಸಿಕ್ಕಿದೆ, ಶೀಘ್ರವೇ ನೇಮಕಾತಿ ನಡೆಯಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಸಚಿವರು ಕಲ್ಯಾಣ ಕರ್ನಾಟಕದ ಭಾಗದಲ್ಲಿ 5800 ಶಿಕ್ಷಕರ ನೇಮಕಾತಿಗೆ ಒಪ್ಪಿಗೆ ಸಿಕ್ಕಿದೆ, ದೈಹಿಕ ಶಿಕ್ಷಕರ ನೇಮಕಾತಿ ಬಗ್ಗೆ ಸಿಎಂ ಜೊತೆ ಮಾತನಾಡುತ್ತೇನೆ, ನಾನು ಸಚಿವನಾದ ಮೇಲೆ 13,000 ಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿ ಆಗಿದೆ ಎಂದರು. ಮಕ್ಕಳು ಮೊಟ್ಟೆ ತಿಂದರೆ …

Read More »

ಐತಿಹಾಸಿಕ ಮೈಸೂರು ದಸರಾ ಜಂಬೂಸವಾರಿಯಲ್ಲಿ ಬಸವಣ್ಣನವರ ಸ್ತಬ್ಧಚಿತ್ರಕ್ಕೆ ಪ್ರಥಮ ಬಹುಮಾನ

ಮೈಸೂರು : ಐತಿಹಾಸಿಕ ಮೈಸೂರು ದಸರಾದ ವಿಜಯದಶಮಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಈ ಬಾರಿ ಪ್ರದರ್ಶನಗೊಂಡ ಸರ್ಕಾರದ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳಲ್ಲಿ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಾಗೂ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಿಸಿದ ಸ್ತಬ್ಧಚಿತ್ರವು ಪ್ರಥಮ ಬಹುಮಾನ ಗಳಿಸಿದೆ. ಸ್ತಬ್ದಚಿತ್ರದ ಮುಂಭಾಗದಲ್ಲಿ ವಿಶ್ವಗುರು ಶ್ರೀ ಜಗಜ್ಯೋತಿ ಬಸವಣ್ಣನವರ ಮಾದರಿ ಪ್ರತಿಕೃತಿಯನ್ನು ಚಿತ್ರಿಸಲಾಗಿತ್ತು. ಬಸವಣ್ಣನವರು ಕುಳಿತ ಪೀಠದ ಕೆಳಭಾಗದಲ್ಲಿ …

Read More »