ನವದೆಹಲಿ: ಭಾರತಕ್ಕೆ ಆಗಮಿಸಿರುವ ಮಾಲ್ದೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜು ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಮವಾರ ಭೇಟಿಯಾದರು. ಮುಯಿಜು ಅವರು ದ್ವಿಪಕ್ಷೀಯ ಸಂಬಂಧ ವೃದ್ಧಿ ಸೇರಿದಂತೆ ಹಲವು ವಿಷಯಗಳನ್ನು ಚರ್ಚಿಸಲು ಭಾನುವಾರದಿಂದ ನಾಲ್ಕು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದಾರೆ. ನರೇಂದ್ರ ಮೋದಿ ಅವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮುಯಿಜು ಭಾರತಕ್ಕೆ ಬಂದಿದ್ದರು. ಆದರೆ ದ್ವಿಪಕ್ಷೀಯ ಮಾತುಕತೆಗಾಗಿ ಇದೇ ಮೊದಲ ಬಾರಿಗೆ ಅವರು ಆಗಮಿಸಿದ್ದಾರೆ. ಮಾಲ್ದೀವ್ಸ್ನ ಸಚಿವರು ಮೋದಿ ಬಗ್ಗೆ …
Read More »ಬಿಟ್ ಕಾಯಿನ್ ಹಗರಣ: ಡಿ ವೈ ಎಸ್ ಪಿ ಬಂಧನ
ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಡಿವೈಎಸ್ ಪಿ ಶ್ರೀಧರ್ ಪೂಜಾರ್ ಅವರನ್ನು ಬಂಧಿಸಿದ್ದಾರೆ. ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈ ಎಸ್ ಪಿ ಶ್ರೀಧರ್ ಪೂಜಾರ್ ಅವರನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಕರೆಸಿದ್ದ ಸಿಐಡಿ ಎಸ್ಐಟಿ ಅಧಿಕಾರಿಗಳು, ವಿಚಾರಣೆ ಬಳಿಕ ಸಿಐಡಿ ಕಚೇರಿಯಲ್ಲಿಯೇ ಶ್ರೀಧರ್ ಅವರನ್ನು ಬಂಧಿಸಿದ್ದಾರೆ.
Read More »ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆ ಅ.18 ಕ್ಕೆ ಮುಂದೂಡಿಕೆ
ಬೆಂಗಳೂರು : ಅ.10 ರಂದು ನಿಗದಿಯಾಗಿದ್ದ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆ ಅ.18 ಕ್ಕೆ ಮುಂದೂಡಿಕೆಯಾಗಿದೆ. ವಾಲ್ಮೀಕಿ ದಿನಾಚರಣೆ ಪ್ರಯುಕ್ತ ಅ.10 ರಂದು ನಿಗದಿಯಾಗಿದ್ದ ಸರ್ಕಾರದ ಸಚಿವ ಸಂಪುಟ ಸಭೆ ಅ.18 ಕ್ಕೆ ಮುಂದೂಡಿಕೆಯಾಗಿದೆ ಎಂದು ತಿಳಿದು ಬಂದಿದೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಿಗದಿಯಾಗಿದೆ. ಸಭೆಯಲ್ಲಿ ಮುಡಾ ಹಗರಣ ಸಂಬಂಧ ಚರ್ಚೆಯಾಗುವ ಸಾಧ್ಯತೆಯಿದೆ. ಹಾಗೂ ವಿವಿಧ ಯೋಜನೆಗಳಿಗೆ ಸರ್ಕಾರ ಅನುದಾನ ಘೋಷಿಸುವ ಸಾಧ್ಯತೆಯಿದೆ. ಹಾಗೂ ಜಾತಿಗಣತಿ …
Read More »ರೈತರ ಜಾನುವಾರುಗಳಿಗೆ ವಿಮೆ ಸೌಲಭ್ಯ ಒದಗಿಸಲು ಸಿಎಂ ಗೆ ಮನವಿ: ಸಚಿವ ಚಲುವರಾಯಸ್ವಾಮಿ
ಮೈಸೂರು: ರೈತರ ಜಾನುವಾರುಗಳಿಗೆ ವಿಮೆ ಸೌಲಭ್ಯ ಒದಗಿಸಲು ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದಾಗಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. ದಸರಾ ಮಹೋತ್ಸವದ ಅಂಗವಾಗಿ ನಗರದ ಜೆ.ಕೆ. ಮೈದಾನದಲ್ಲಿರುವ ಎಂಎಂಸಿ ಅಮೃತ ಮಹೋತ್ಸವ ಭವನದಲ್ಲಿ ನಡೆದ ರೈತ ದಸರಾ ವೇದಿಕೆ ಕಾರ್ಯಕ್ರಮವನ್ನು ನವಧಾನ್ಯ ಸುರಿದು, ಹೊಂಬಾಳೆಯನ್ನು ಬಿಡಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಹೊಸ ಹೊಸ ಯೋಜನೆಗಳು ರೈತರಿಗೆ ಸಹಕಾರಿಯಾಗುತ್ತಿದ್ದು, ಮುಂದೆ ರೈತರ ಜಾನುವಾರುಗಳಿಗೆ ವಿಮೆಯನ್ನು …
Read More »ಜಾಗತಿಕ ಮಟ್ಟದ ನಿಲ್ದಾಣವಾಗಿ ಅಭಿವೃದ್ದಿಗೊಂಡ ನವದೆಹಲಿ ರೈಲ್ವೆ ನಿಲ್ದಾಣ
ನವದೆಹಲಿ: ಜಾಗತಿಕ ಮಟ್ಟದ ನಿಲ್ದಾಣವಾಗಿ ಅಭಿವೃದ್ಧಿಗೊಂಡಿರುವ ನವದೆಹಲಿ ರೈಲ್ವೆ ನಿಲ್ದಾಣ, ವಾರ್ಷಿಕ ಆದಾಯ ಗಳಿಕೆಯಲ್ಲಿ ಅಗ್ರಸ್ಥಾನದಲ್ಲಿದೆ. 2023-24 ನೇ ಸಾಲಿನ ದೇಶದ 100 ಉತ್ತಮ ಆದಾಯ ಗಳಿಕೆ ಹಾಗೂ ಅತ್ಯಂತ ಜನನಿಬಿಡ ರೈಲು ನಿಲ್ದಾಣಗಳ ಪಟ್ಟಿಯನ್ನು ರೈಲ್ವೆ ಇಲಾಖೆ ಬಿಡುಗಡೆ ಮಾಡಿದ್ದು, ಅಗ್ರಸ್ಥಾನವನ್ನು ನವದೆಹಲಿ ಉಳಿಸಿಕೊಂಡಿದೆ. ದೆಹಲಿಯ ನಂತರದ ಸ್ಥಾನದಲ್ಲಿ ಪಶ್ಚಿಮ ಬಂಗಾಳದ ಹೌರಾ ನಿಲ್ದಾಣ ಇದ್ದು, 3 ನೇ ಸ್ಥಾನದಲ್ಲಿ ಚೆನ್ನೈ ಎಂಜಿಆರ್ ಸೆಂಟ್ರಲ್ ಇದೆ. ಟಾಪ್ 100ರಲ್ಲಿ …
Read More »ಯಶಸ್ವಿ 23 ವರ್ಷಗಳ ಅಧಿಕಾರ ಪೂರೈಸಿದ ಪ್ರಧಾನಿ ನರೇಂದ್ರ ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕ ಆಡಳಿತ ಕ್ಷೇತ್ರಕ್ಕೆ ಧುಮುಕಿ ಇಂದಿಗೆ 23 ವರ್ಷಗಳು ಸಂದಿವೆ ಪ್ರಧಾನಿಯಾಗಿ 11 ವರ್ಷ ಹಾಗೂ ಗುಜರಾತ್ನ ಮುಖ್ಯಮಂತ್ರಿಯಾಗಿ ಸುಮಾರು 12 ವರ್ಷಗಳ ಕಾಲ ನರೇಂದ್ರ ಮೋದಿಯವರು ಅಧಿಕಾರ ನಡೆಸಿದ್ದಾರೆ. ಗುಜರಾತ್ ಮುಖ್ಯಮಂತ್ರಿಯಾದ ದಿನದಿಂದ ಇಲ್ಲಿಯವರೆಗೂ ಒಂದಲ್ಲಾ ಒಂದು ಹುದ್ದೆಯನ್ನು ಮೋದಿ ಅಲಂಕರಿಸಿರುವುದು ವಿಶೇಷವಾಗಿದೆ. ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕ ಆಡಳಿತ ಕ್ಷೇತ್ರಕ್ಕೆ ಧುಮುಕಿ ಇಂದಿಗೆ 23 ವರ್ಷಗಳು ಸಂದಿವೆ. ಪ್ರಧಾನಿಯಾಗಿ 11 ವರ್ಷ …
Read More »ಕರ್ನಾಟಕದ ಯಾವ ಸರ್ಕಾರವೂ ರಾಜ್ಯದ ರೈಲ್ವೆ ಯೋಜನೆಗಳಿಗೆ ಹಣ ನೀಡಿಲ್ಲ: ಕೇಂದ್ರ ಸಚಿವ ಸೋಮಣ್ಣ
ಬಳ್ಳಾರಿ : ಕರ್ನಾಟಕದ ಯಾವ ಸರ್ಕಾರವೂ ರಾಜ್ಯದ ರೈಲ್ವೆ ಯೋಜನೆಗಳಿಗೆ ಹಣ ನೀಡಿಲ್ಲ, ಬಿಜೆಪಿ ಸರ್ಕಾರ ಇದ್ದಾಗಲು ಹಣ ಕೊಟ್ಟಿಲ್ಲ, ಕಾಂಗ್ರೆಸ್ ಸರ್ಕಾರ ಇದ್ದಾಗಲೂ ಹಣ ಕೊಟ್ಟಿಲ್ಲ ಕೇಂದ್ರವೇ ಹಣ ಹಾಕಿ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸುತ್ತಿದೆ ಎಂದು ಕೇಂದ್ರ ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣ ಹೇಳಿದರು. ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರ ಆಳ್ವಿಕೆಯಲ್ಲಿ ದೇಶದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ರೈಲ್ವೆ ಬಜೆಟ್ 2.62 ಸಾವಿರ ಕೋಟಿ …
Read More »ಪಿಎಂ ಕುಸುಮ್ ಯೋಜನೆಯಡಿ ಮಹಾರಾಷ್ಟ್ರದಲ್ಲಿ 5 ಸೌರ ವಿದ್ಯುತ್ ಸ್ಥಾವರಗಳ ನಿರ್ಮಾಣ
ಮುಂಬೈ: ಜಾಗತಿಕ ಮೂಲ ಸೌಕರ್ಯ ಸಂಸ್ಥೆಗಳಲ್ಲಿ ಒಂದಾಗಿರುವ ಮೇಘಾ ಎಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್ ಪ್ರಧಾನ ಮಂತ್ರಿ ಕಿಸಾನ್ ಉರ್ಜಾ ಸುರಕ್ಷಾ ಇವಮ್ ಉತ್ತಾನ್ ಮಹಾಭಿಯಾನ್ ಯೋಜನೆಯಡಿ ಮಹಾರಾಷ್ಟ್ರದಾದ್ಯಂತ ಒಟ್ಟು 19 ಮೆಗಾವ್ಯಾಟ್ ಸಾಮರ್ಥ್ಯದ ಐದು ಅತ್ಯಾಧುನಿಕ ಸೌರ ವಿದ್ಯುತ್ ಸ್ಥಾವರಗಳನ್ನು ಕಾರ್ಯಗತಗೊಳಿಸಿದ್ದು, ಈ ಮಹತ್ವಾಕಾಂಕ್ಷಿ ಸೌರ ವಿದ್ಯುತ್ ಸ್ಥಾವರಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿ ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಐದು ಸೌರ ಸ್ಥಾವರಗಳು ಧೊಂಡಲ್ಗಾಂವ್ (ಶಂಭಾಜಿ ನಗರ) …
Read More »ಸೇಡಂ ಮಠ ಮಂದಿರಗಳ ಜೀರ್ಣೋದ್ಧಾರಕ್ಕೆ ರಾಜ್ಯ ಸರ್ಕಾರದಿಂದ 10 ಕೋಟಿ ರೂ. ಅನುದಾನ
ಸೇಡಂ: ತಾಲ್ಲೂಕು ಸೇರಿದಂತೆ ವಿಧಾನಸಭಾ ಕ್ಷೇತ್ರದ 117 ಮಠ ಮಂದಿರಗಳ ನಿರ್ಮಾಣ ಮತ್ತು ಜೀರ್ಣೋದ್ಧಾರಕ್ಕಾಗಿ ರಾಜ್ಯ ಸರ್ಕಾರ ₹10 ಕೋಟಿ ಮಂಜೂರು ಮಾಡಿದೆ. ತಾಲ್ಲೂಕಿನ 90, ಸೇಡಂ ವಿಧಾನಸಭಾ ಕ್ಷೇತ್ರದ ಚಿಂಚೋಳಿ ತಾಲ್ಲೂಕಿನ 27 ಮಠ ಮಂದಿರಗಳ ಜೀರ್ಣೋದ್ಧಾರಕ್ಕೆ ಮಂಜೂರಾತಿ ಸಿಕ್ಕಿದ್ದು ಕಾಮಗಾರಿ ಆರಂಭಿಸಬೇಕಿದೆ. ಕ್ಷೇತ್ರದ ಶಾಸಕ, ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರ ಪ್ರಯತ್ನದಿಂದಾಗಿ ಧಾರ್ಮಿಕ ಕ್ಷೇತ್ರಕ್ಕೆ ಅನುದಾನ ಬಂದಿದ್ದು, ಮುಖ್ಯಮಂತ್ರಿಗಳ ವಿಶೇಷ ಅನುದಾದಡಿ ಮಂಜೂರಾತಿ ದೊರೆತಿದೆ. ವಿವಿಧ ಧಾರ್ಮಿಕ …
Read More »ದೇವಸ್ಥಾನದಲ್ಲಿ ಕಳ್ಳತನ: ಅರ್ಚಕ
ಉಡುಪಿ: ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿ ಅರ್ಚಕನನ್ನು ಪೊಲೀಸರು ಬಂಧಿಸಿದ್ದಾರೆ . ದೇವಸ್ಥಾನದ ಅರ್ಚಕ ನರಸಿಂಹ ಭಟ್ (43) ಬಂಧಿತ ಆರೋಪಿ. ಈತ ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ದೇವಿಯ ಮೈಮೇಲಿದ್ದ ಅಸಲಿ ಚಿನ್ನಾಭರಣಗಳನ್ನು ಕಳ್ಳತನ ಮಾಡಿ, ನಕಲಿ ಚಿನ್ನಾಭರಣಗಳನ್ನು ದೇವಸ್ಥಾನದಲ್ಲಿ ಇರಿಸಿದ್ದ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದು, ಆರೋಪಿಯು ದೇವಸ್ಥಾನದ ಚಿನ್ನಾಭರಣಗಳನ್ನು ವಿವಿಧ ಬ್ಯಾಂಕ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





