Breaking News

bigtvnews22

ಶಿಕ್ಷಕಿಯ ಅಶ್ಲೀಲ ವೀಡಿಯೊ ಮೂಲಕ ಬ್ಲಾಕ್ ಮೇಲ್ : ನಾಲ್ವರು ಬಂಧನ

ಆಗ್ರಾ: ಶಾಲಾ ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಬಳಸಿ ಆಕೆಯನ್ನು ಬ್ಲಾಕ್ ಮೇಲ್ ಮಾಡಿದ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದಡಿ ನಾಲ್ವರು ವಿದ್ಯಾರ್ಥಿಗಳನ್ನು ಆಗ್ರಾ ಪೊಲೀಸರು ಬಂಧಿಸಿದ್ದಾರೆ. ಆಗ್ರಾ ನಿವಾಸಿಯಾಗಿರುವ ಶಿಕ್ಷಕಿ ಮಥುರಾದ ಶಾಲೆಯಲ್ಲಿ ಪಾಠ ಮಾಡುತ್ತಾರೆ. ಅಲ್ಲದೆ ಕಲಿಕೆಯಲ್ಲಿ ಹಿಂದಿರುವ 10ನೇ ತರಗತಿ ವಿದ್ಯಾರ್ಥಿಗಳಿಗೆ ಅವರು ಆಗ್ರಾದಲ್ಲಿ ಹೆಚ್ಚುವರಿ ತರಗತಿಗಳನ್ನು ತೆಗೆದುಕೊಳ್ಳುತ್ತಾರೆ. ವಿದ್ಯಾರ್ಥಿಯೊಬ್ಬ ಕಾಲಕ್ರಮೇಣ ಆಕೆಗೆ ಹತ್ತಿರವಾಗಿದ್ದ. ತನ್ನ ಮೊಬೈಲ್ ಫೋನ್ ನಿಂದ ಶಿಕ್ಷಕಿಯ ಅಶ್ಲೀಲ ವೀಡಿಯೊವನ್ನು ಮಾಡಿದ್ದಾನೆ. …

Read More »

ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ಕರ್ನಾಟಕದ 47.12 ಲಕ್ಷ ರೈತರಿಗೆ 942 ಕೋಟಿ ರೂ. ಹಣ ವರ್ಗಾವಣೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೊಳಿಸಿದ ಪಿಎಂ ಕಿಸಾನ್ ಸಮ್ಮಾನ್ ಯೋಜನೆ ರೈತರ ಸಂಜೀವಿನಿ ಆಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ. ಕೇಂದ್ರ ಸರ್ಕಾರ ಪಿಎಂ ಕಿಸಾನ್ ಸಮ್ಮಾನ್ 18ನೇ ಕಂತಿನ ನಿಧಿ ರೈತರ ಖಾತೆಗೆ ನೇರ ವರ್ಗಾವಣೆಯಾದ ಬಳಿಕ ಪ್ರತಿಕ್ರಿಯಿಸಿರುವ ಸಚಿವರು, ಈ ಯೋಜನೆ ರೈತರಿಗೆ ಉತ್ತೇಜನ ನೀಡಿದೆ ಎಂದಿದ್ದಾರೆ ಎಂದರು. ಕಿಸಾನ್ ಸಮ್ಮಾನ್ ಯೋಜನೆಯಡಿ ವರ್ಷಕ್ಕೆ 6000 ರೂ. ಧನಸಹಾಯ ನೀಡುವ ಮೂಲಕ …

Read More »

ಅರಣ್ಯಾಧಿಕಾರಿಗಳ ದೌರ್ಜನ್ಯ ವಿರೋಧಿಸಿ ರಾಜ್ಯ ರೈತ ಸಂಘ ಮತ್ತು ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಲಿಂಗಸುಗೂರು: ತಾಲ್ಲೂಕಿನ ಯರಡೋಣದ ರೈತ ಮಹಿಳೆ ಜಮೀನದಲ್ಲಿ ಬೆಳೆದಿದ್ದ ಪಪ್ಪಾಯಿ, ದಾಳಿಂಬೆ ಬೆಳೆಗಳನ್ನು ಯಂತ್ರ ಸಹಾಯದಿಂದ ನಾಶಪಡಿಸಿ ದೌರ್ಜನ್ಯ ನಡೆಸಿದ ಅರಣ್ಯಾಧಿಕಾರಿಗಳ ದೌರ್ಜನ್ಯ ವಿರೋಧಿಸಿ ರಾಜ್ಯ ರೈತ ಸಂಘ ಮತ್ತು ದಲಿತ ಸಂಘರ್ಷ ಸಮಿತಿ ಸಹಯೋಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಜೇವರ್ಗಿ ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯ ಅಮರೇಶ್ವರ ಕ್ರಾಸ್‍ನಲ್ಲಿ ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ಮುಖಂಡರು, ಸುಪ್ರೀಂ ಕೋರ್ಟ್‌ ಮತ್ತು ಸರ್ಕಾರ ಆದೇಶ, ಸುತ್ತೋಲೆಗಳನ್ನು ಧಿಕ್ಕರಿಸಿ …

Read More »

ಬಿರುಗಾಳಿ ಸಹಿತ ಭಾರೀ ಮಳೆಯಿಂದಾಗಿ ನೆಲಕಚ್ಚಿದ ಗೋವಿನಜೋಳ: ರೈತ ದಂಪತಿ ಕಣ್ಣೀರು

ಗದಗ: ನಿನ್ನೆ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಯಿಂದಾಗಿ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಅಪಾರ ಪ್ರಮಾಣದ ಗೋವಿನ ಜೋಳ ಬೆಳೆ ನೆಲಕಚ್ಚಿದೆ.‌ ಲಕ್ಕುಂಡಿ ಗ್ರಾಮದ ರೈತ ಷಣ್ಮುಖಪ್ಪ ಕರಿಯಲ್ಲಪ್ಪನವರಗೆ ಸೇರಿದ 8 ಎಕರೆ ಜಮೀನಿನಲ್ಲಿ ಬೆಳೆದಿದ್ದ ಗೋವಿನಜೋಳ ಸಂಪೂರ್ಣ ಬೆಳೆ ಮಖಾಡೆ ಮಲಗಿದ್ದು ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ರೈತ ದಂಪತಿ ಷಣ್ಮುಖಪ್ಪ ಕರಿಯಲ್ಲಪ್ಪನವರ ಹಾಗೂ ಆತನ ಪತ್ನಿ ಲಕ್ಷ್ಮವ್ವ ಲಕ್ಷಾಂತರ ರೂಪಾಯಿ ಸಾಲ ಸೋಲ ಮಾಡಿ …

Read More »

ಕಲ್ಯಾಣ ಕರ್ನಾಟಕದ ಅಭಿವೃದ್ದಿ, ರಾಜ್ಯದಲ್ಲಿನ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ರಾಜ್ಯಸರ್ಕಾರ ಬದ್ಧ: ಸಿಎಂ

ರಾಯಚೂರು: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ಹಾಗೂ ರಾಜ್ಯದಲ್ಲಿನ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಸಿಂಧನೂರಿನ ಸರ್ಕಾರಿ ಪದವಿ ಕಾಲೇಜು ಆವರಣದಲ್ಲಿ ಸಿಂಧನೂರು ದಸರಾ ಉತ್ಸವ-2024 ಉದ್ಘಾಟಿಸಿ ಮಾತನಾಡಿದ ಅವರು, ದಸರಾ ಯಾವುದೇ ಒಂದು ಜಾತಿ, ಒಂದು ಧರ್ಮಕ್ಕೆ ಸೀಮಿತವಾದ ವೈಭವ ಅಲ್ಲ ಇದು ಸರ್ವ ಜನಾಂಗದ ಸಂಭ್ರಮದ ಹಬ್ಬ ಅಂಬಾ ದೇವಿ‌ ಕೂಡ ಚಾಮುಂಡೇಶ್ವರಿಯ ಅವತಾರ ಇದು …

Read More »

ಬೆಂಗಳೂರು ತುಮಕೂರು ರಸ್ತೆ ಮಾರ್ಗಕ್ಕೆ ಶೀಘ್ರ ನಮ್ಮ ಮೆಟ್ರೋ ಸೇವೆ ಆರಂಭ

ಬೆಂಗಳೂರು: ಬೆಂಗಳೂರು- ತುಮಕೂರು ರಸ್ತೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು ಹಸಿರು ಮಾರ್ಗದಲ್ಲಿ ನಮ್ಮ ಮೆಟ್ರೋ ಸೇವೆ ಶೀಘ್ರದಲ್ಲೇ ಆರಂಭಗೊಳ್ಳಲಿದೆ. ನಾಗಸಂದ್ರ ಟು ಮಾದಾವರ ನಡುವಿನ ಮಾರ್ಗದಲ್ಲಿ ಮುಂದಿನ ತಿಂಗಳಲ್ಲೇ ವಾಣಿಜ್ಯ ಸಂಚಾರ ಆರಂಭಗೊಳ್ಳಲಿದ್ದು ತುಮಕೂರು ರಸ್ತೆಯ 3.7 ಕಿ.ಮೀಟರ್ ಅಂತರದ ಮಾರ್ಗ ಮೆಟ್ರೋ ಸಾರ್ವಜನಿಕರಿಗೆ ಮುಕ್ತಗೊಳಿಸಲು ಸನ್ನದ್ದವಾಗಿದೆ. ಏಳು ವರ್ಷದಿಂದ ಮೆಟ್ರೋಗಾಗಿ ಕಾಯುತ್ತಿದ್ದ ಜನರಿಗೆ ಬಿಎಂಆರ್ಸಿಎಲ್ ನಿಂದ ಗುಡ್ ನ್ಯೂಸ್ ಸಿಕ್ಕಿದೆ. ನಾಗಸಂದ್ರ ಮಾದವಾರ ಮಾರ್ಗದಲ್ಲಿ ಮೆಟ್ರೋ ವಾಣಿಜ್ಯ …

Read More »

ಹಿಂದೂ ಕೆನಡಿಯನ್ನರಿಗೆ ನವರಾತ್ರಿ ಹಬ್ಬದ ಶುಭಾಶಯ ಕೋರಿದ ಕೆನಡಾ ಪ್ರಧಾನಿ ಜಸ್ಟೀನ್ ಟ್ರುಡೋ

ಒಟ್ಟಾವ: ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೋ ಅವರು ನವರಾತ್ರಿಯ ಮೊದಲ ದಿನವಾದ ಗುರುವಾರ ಹಿಂದೂ ಕೆನಡಿಯನ್ನರಿಗೆ ಶುಭ ಕೋರಿದ್ದಾರೆ. ಇಂದು ರಾತ್ರಿ, ಕೆನಡಾ ಮತ್ತು ಪ್ರಪಂಚದಾದ್ಯಂತದ ಹಿಂದೂ ಸಮುದಾಯಗಳು ನವರಾತ್ರಿ ಹಬ್ಬದ ಆರಂಭವನ್ನು ಆಚರಿಸಲಿವೆ. ಇದು ಕೆಟ್ಟದ್ದರ ಮೇಲೆ ಒಳ್ಳೆಯದು ಮತ್ತು ಕತ್ತಲೆಯ ಮೇಲೆ ಬೆಳಕಿನ ವಿಜಯವನ್ನು ಆಚರಿಸುತ್ತದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ, ಆಚರಿಸುವವರಿಗೆ, ಮುಂದಿನ ಒಂಬತ್ತು ರಾತ್ರಿಗಳು ಕುಟುಂಬಗಳು ಮತ್ತು ಸ್ನೇಹಿತರು ಪ್ರಾರ್ಥನೆ, ಸಂಗೀತ ಮತ್ತು ಪ್ರೀತಿಪಾತ್ರರೊಂದಿಗೆ …

Read More »

ಮಾನ್ವಿಯಲ್ಲಿ 36 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ನಾಳೆ ಸಿಎಂ ಸಿದ್ದರಾಮಯ್ಯರಿಂದ ಚಾಲನೆ

ಮಾನ್ವಿ: ಅ.5ರಂದು ಮಾನ್ವಿ ಪಟ್ಟಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಸದಸ್ಯರು, ಶಾಸಕರು ಆಗಮಿಸಲಿದ್ದಾರೆ. ಪಟ್ಟಣದಲ್ಲಿ ₹9.5ಕೋಟಿ ವೆಚ್ಚದ ಎಕ್ಸ್‌ಪ್ರೆಸ್‌ ಬಸ್ ನಿಲ್ದಾಣ ನಿರ್ಮಾಣ ಹಾಗೂ ಸಣ್ಣ ನೀರಾವರಿ ಇಲಾಖೆಯ ₹36 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ನಂತರ ಕಾಂಗ್ರೆಸ್ ಪಕ್ಷದ ಸ್ವಾಭಿಮಾನಿ ಸಮಾವೇಶದಲ್ಲಿ ಭಾಗವಹಿಸುವರು. ಸಣ್ಣ ‌ನೀರಾವರಿ ಸಚಿವ ಎನ್.ಎಸ್.ಬೋಸರಾಜು ಹಾಗೂ ಶಾಸಕ ಜಿ.ಹಂಪಯ್ಯ ನಾಯಕ ನೇತೃತ್ವದಲ್ಲಿ ಈ ಸಮಾವೇಶದ ಸಿದ್ಧತೆ …

Read More »

ರಾಜ್ಯದ ರೈಲ್ವೆ ಯೋಜನೆಗಳ ಸಂಪೂರ್ಣ ವೆಚ್ಚ ರೈಲ್ವೆ ಇಲಾಖೆಯೆ ಭರಿಸಲಿದೆ: ಕೇಂದ್ರ ಸಚಿವ ಸೋಮಣ್ಣ

ಹುಬ್ಬಳ್ಳಿ: ರಾಜ್ಯದಲ್ಲಿ ನಡೆಯುವ ರೈಲ್ವೆ ಯೋಜೆನಗಳ ಸಂಪೂರ್ಣ ವೆಚ್ಚವನ್ನು ರೈಲ್ವೆ ಇಲಾಖೆಯೇ ಭರಿಸಲಿದೆ. ಆದರೆ ಯೋಜನೆಗೆ ಬೇಕಾದ ಭೂಮಿಯನ್ನು ಸಕಾಲಕ್ಕೆ ಕೊಡುವುದು ರಾಜ್ಯ ಸರಕಾರದ ಕರ್ತವ್ಯವಾಗಿದೆ ಎಂದು ರೈಲ್ವೆ ಖಾತೆ ಸಹಾಯಕ ಸಚಿವ ವಿ.ಸೋಮಣ್ಣ ತಿಳಿಸಿದರು. ನೈಋತ್ಯ ರೈಲ್ವೆ ವಲಯದ ಹಿಂದಿನ, ಹೊಸ ಯೋಜನೆಗಳು ಹಾಗೂ ಈ ಭಾಗದ ಪ್ರಮುಖ ಬೇಡಿಕೆಗಳ ಕುರಿತು ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರ ಸಭೆಯ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ವಿ ಸೋಮಣ್ಣ …

Read More »

ರೈಲ್ವೆ ನೌಕರರಿಗೆ ಬೋನಸ್ ನೀಡಲು ಕೇಂದ್ರ ಸರ್ಕಾರ ಚಿಂತನೆ

ನವದೆಹಲಿ : ಮುಂಬರುವ ಹಬ್ಬಗಳಿಗೆ ಮುಂಚಿತವಾಗಿ ರೈಲ್ವೆ ನೌಕರರು ಕೇಂದ್ರದಿಂದ ಬೋನಸ್ ಪಡೆಯಬಹುದು ಮತ್ತು ಈ ನಿಟ್ಟಿನಲ್ಲಿ ಅನುಮೋದನೆ ಶೀಘ್ರದಲ್ಲೇ ಬರಬಹುದು ಎಂದು ಮೂಲಗಳು ತಿಳಿಸಿವೆ. ಮುಂಬರುವ ಹಬ್ಬದ ಋತುವಿನಲ್ಲಿ ಬಳಕೆಯನ್ನು ಹೆಚ್ಚಿಸುವ ಪ್ರಯತ್ನದಲ್ಲಿ ದಸರಾ ಮತ್ತು ದೀಪಾವಳಿ ರಜಾದಿನಗಳಿಗೆ ಮುಂಚಿತವಾಗಿ ಬೋನಸ್ ಪಾವತಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ವರ್ಷವೂ ರೈಲ್ವೆ ಎಲ್ಲಾ ಗೆಜೆಟೆಡ್ ಅಲ್ಲದ ಉದ್ಯೋಗಿಗಳಿಗೆ 78 ದಿನಗಳ ಬೋನಸ್ ಘೋಷಿಸಿತ್ತು. ಆರನೇ ವೇತನ ಆಯೋಗದ …

Read More »