ನವದೆಹಲಿ: ಸೈನಿಕ ಶಾಲೆಗಳು ಸಮಾಜಕ್ಕೆ ಮಾರ್ಗದರ್ಶನ ನೀಡುವಲ್ಲಿ ಮತ್ತು ಶಿಸ್ತು, ದೇಶಭಕ್ತಿ ಮತ್ತು ಧೈರ್ಯದಂತಹ ವಿದ್ಯಾರ್ಥಿ ಮೌಲ್ಯಗಳನ್ನು ಬೆಳೆಸುವಲ್ಲಿ ಹೊಸ ವೇಗವನ್ನು ನೀಡುತ್ತವೆ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಶ್ರೀ ಭವಾನಿ ನಿಕೇತನ ಸೈನಿಕ ಶಾಲೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ, ಸೈನಿಕ ಶಾಲೆಗಳು ವಿದ್ಯಾರ್ಥಿಗಳಿಗೆ ಪುಸ್ತಕ ಜ್ಞಾನವನ್ನು ನೀಡುವುದಲ್ಲದೆ, ಅವರಲ್ಲಿ ಮೌಲ್ಯಗಳ ಬಗ್ಗೆ ಬದ್ಧತೆಯನ್ನು ಬೆಳೆಸಲು ಪ್ರಯತ್ನಿಸುತ್ತವೆ. ಸೈನಿಕ ಶಾಲೆಗಳು ತಮ್ಮ ವಿದ್ಯಾರ್ಥಿಗಳಲ್ಲಿ …
Read More »ತನಿಖೆಯಾಗಿ ತಪ್ಪು ಕಂಡುಬಂದರೆ ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕಾಗುತ್ತದೆ: ಸತೀಶ ಜಾರಕಿಹೊಳಿ
ಬೆಳಗಾವಿ: ಕಾಂಗ್ರೆಸ್ ಹೈ ಕಮಾಂಡ್ ಹಾಗೂ ರಾಜ್ಯದ ಎಲ್ಲ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ಇದ್ದೇವೆ. ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಕಾನೂನು ಹೋರಾಟ ಮಾಡುತ್ತೇವೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂಬ ಬಿಜೆಪಿ ಹೋರಾಟಕ್ಕೆ ಅರ್ಥವಿಲ್ಲ. ಹೈಕೋರ್ಟ್ ತನಿಖೆಗೆ ಆದೇಶ ನೀಡಿದೆ ಅಷ್ಟೇ, ತನಿಖೆಯಾಗಲಿ ತಪ್ಪು ಕಂಡುಬಂದರೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕಾಗುತ್ತದೆ …
Read More »ಜಲಜೀವನ್ ಮಿಷನ್ ಅಡಿಯಲ್ಲಿ 7200 ಕೋಟಿ ರೂ.ಗಳ ಬಸವಸಾಗರ ಯೋಜನೆ ಆರಂಭ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು : ಕಲಬುರಗಿ ಹಾಗೂ ಬೀದರ್ ಜಿಲ್ಲೆಯ ಎಲ್ಲ ಗ್ರಾಮೀಣ ಜನವಸತಿಗಳಿಗೆ ಬಹುಗ್ರಾಮ ನೀರು ಸರಬರಾಜು ಯೋಜನೆಯಡಿ ಕಲಬುರಗಿ ಜಿಲ್ಲೆಯ ನಾರಾಯಣಪುರ ಹಿನ್ನಿರಿನ ಬಳಿಯಿರುವ ಬಸವಸಾಗರ ಜಲಾಶಯದಿಂದ ಕುಡಿಯುವ ನೀರು ಸರಬರಾಜು ಮಾಡುವ 7200 ಕೋಟಿ ರೂ.ವೆಚ್ಚದ ಯೋಜನೆಯನ್ನು ಜಲ ಜೀವನ್ ಮಿಷನ್ ಅಡಿ ಆರಂಭಿಸಲಾಗುವುದು ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ರಾಜ್ಯ ಸರಕಾರ ಶೇ.50ರ ಪಾಲು ಹಾಗೂ ನಿರ್ವಹಣಾ ವೆಚ್ಚ ಸೇರಿದಂತೆ 3914.45 …
Read More »ನಾವು ಇಂದಿರಾ ಕ್ಯಾಂಟೀನ್ ಮಾಡಬೇಡಿ ಅಂತಾ ಹೇಳಲ್ಲ : ಜೋಶಿ
ಹುಬ್ಬಳ್ಳಿ: ಹುಬ್ಬಳ್ಳಿಯ ಸ್ಮಶಾನದಲ್ಲಿ ಇಂದಿರಾ ಕ್ಯಾಂಟೀನ್ ಕಟ್ಟಿರುವ ವಿಚಾರಕ್ಕೆ ಸಾಕಷ್ಟು ವಿವಾದವನ್ನು ಸೃಷ್ಟಿ ಮಾಡ್ತಿದೆ. ಅದಕ್ಕೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಇಂದಿರಾ ಕ್ಯಾಂಟೀನ್ ವಿಚಾರ ನನಗೆ ಸಂಪೂರ್ಣ ಮಾಹಿತಿ ಇಲ್ಲ. ನಾವು ಇಂದಿರಾ ಕ್ಯಾಂಟೀನ್ ಮಾಡಬೇಡಿ ಅಂತಾ ಹೇಳಲ್ಲ. ಸ್ಮಶಾನ ಇದ್ರೆ ಪಾಲಿಕೆ ಅದನ್ನು ಸರಿ ಮಾಡಬೇಕು. ಸೌಹಾರ್ದಯುತವಾಗಿ ಎಲ್ಲ ಸರಿ ಮಾಡಬೇಕು ಎಂದರು.
Read More »ಕರ್ನಾಟಕ ದಿನಗೂಲಿ ನೌಕರರಿಗೆ ವೇತನ ಶ್ರೇಣಿ, ಆರ್ಥಿಕ ಸೌಲಭ್ಯ ಮಂಜೂರು: ಸರ್ಕಾರ ಆದೇಶ
ಬೆಂಗಳೂರು: ಕರ್ನಾಟಕ ಸರ್ಕಾರ ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ರನ್ವಯ ಅಧಿಸೂಚಿಸಲ್ಪಟ್ಟ ಅರ್ಹ ದಿನಗೂಲಿ ನೌಕರರಿಗೆ 2024ರನ್ವಯ ಪರಿಷ್ಕೃತ ವೇತನ ಶ್ರೇಣಿಗಳನ್ವಯ ಆರ್ಥಿಕ ಸೌಲಭ್ಯಗಳನ್ನು ಮಂಜೂರು ಮಾಡುವ ಬಗ್ಗೆ ಆದೇಶ ಹೊರಡಿಸಿದೆ. ವಿವಿಧ ಅಧಿಸೂಚನೆ, ಸುತ್ತೋಲೆಗಳನ್ನು ಉಲ್ಲೇಖ ಮಾಡಿ ಆದೇಶವನ್ನು ಹೊರಡಿಸಲಾಗಿದೆ. ಈ ಕುರಿತು ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ನಾಗರತ್ನ ವಿ. ಪಾಟೀಲ್, ಸರ್ಕಾರದ ಅಧೀನ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ …
Read More »6 ತಿಂಗಳಿಂದ ಆಧಾರ್ ಸೇವಾ ಕೇಂದ್ರ ಬಂದ್: ನಿತ್ಯ ಗ್ರಾಮಸ್ಥರ ಪರದಾಟ
ತುರ್ವಿಹಾಳ: ಸಿಂಧನೂರು ತಾಲ್ಲೂಕಿನ ದೊಡ್ಡ ಹೋಬಳಿಯಾದ ತುರ್ವಿಹಾಳದಲ್ಲಿ ಆರು ತಿಂಗಳಿಂದ ಆಧಾರ್ ಸೇವಾ ಕೇಂದ್ರ ಮುಚ್ಚಿದ್ದರಿಂದ ಪಟ್ಟಣ ಹಾಗೂ ಸುತ್ತಲಿನ ಗ್ರಾಮಗಳ ಜನರು ಮತ್ತು ವಿದ್ಯಾರ್ಥಿಗಳು ಹೊಸ ಆಧಾರ್ ಕಾರ್ಡ್ ಮತ್ತು ತಿದ್ದುಪಡಿಗಾಗಿ ನಿತ್ಯ ಪರದಾಡುತ್ತಿದ್ದಾರೆ. ಪಟ್ಟಣದ ವ್ಯಾಪ್ತಿಗೆ ಗುಂಜಳ್ಳಿ ಕ್ಯಾಂಪ್, ಶ್ರೀನಿವಾಸ ಕ್ಯಾಂಪ್, ಬಸಣ್ಣ ಕ್ಯಾಂಪ್, ಮಧ್ಯಕ್ಯಾಂಪ್ಗಳಲ್ಲಿ ಒಟ್ಟು 20 ಸಾವಿರ ಜನರು ಸೇರಿದಂತೆ ಹೋಬಳಿ ವ್ಯಾಪ್ತಿಯ 20 ಹಳ್ಳಿಗಳಲ್ಲಿ ಅಂದಾಜು 50 ಸಾವಿರ ಜನಸಂಖ್ಯೆ ಇದೆ. ಆದರೆ …
Read More »ರಾಜ್ಯದ 1 ರಿಂದ 10 ನೇ ತರಗತಿ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾಚಿಕ್ಕಿ ವಿತರಣೆಗೆ ರಾಜ್ಯ ಸರ್ಕಾರ ಸೂಚನೆ
ಬೆಂಗಳೂರು : 2024-25ನೇ ಸಾಲಿನಲ್ಲಿ ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸಿರುವ ಅಜೀಂ ಪ್ರೇಮ್ಜಿ ಫೌಂಡೇಶನ್ ಫಾರ್ ಡೆವಲಪ್ಮೆಂಟ್ ಖಾಸಗಿ ಸಂಸ್ಥೆಯ ಸಹಭಾಗಿತ್ವದಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಸೇರಿದಂತೆ ಸರ್ಕಾರಿ, ಅನುದಾನಿತ ಶಾಲೆಗಳ 1-10ನೇ ತರಗತಿ ವಿದ್ಯಾರ್ಥಿಗಳಿಗೆ ವಾರದಲ್ಲಿ ಎಲ್ಲಾ ಆರು ದಿನಗಳಿಗೆ ಪೂರಕ ಪೌಷ್ಠಿಕ ಆಹಾರವಾಗಿ ಮೊಟ್ಟೆ,/ಬಾಳೆಹಣ್ಣು/ ಶೇಂಗಾ ಚಿಕ್ಕಿಯನ್ನು ವಿತರಿಸುತ್ತಿದ್ದು ಅಧಿಕೃತವಾಗಿ ಚಾಲನೆ ನೀಡುವ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕು ಹಂತದಲ್ಲಿ 25-09-2024 ರಂದು ನಡೆಸುವ ಬಗ್ಗೆ …
Read More »ಕೇಂದ್ರ ಸರ್ಕಾರದಿಂದ ರೈತ ಸಮುದಾಯಕ್ಕೆ ಸಿಹಿಸುದ್ದಿ: ಎನ್ ಪಿಕೆ ರಸಗೊಬ್ಬರಗಳಿಗೆ ಸಹಾಯಧನ
ನವದೆಹಲಿ : ಕೇಂದ್ರ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಎನ್ ಪಿಕೆ ರಸಗೊಬ್ಬರಗಳಿಗೆ ಸಹಾಯಧನ ನೀಡಲು ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಬುಧವಾರ ನಡೆದ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳನ್ನು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಪ್ರಕಟಿಸಿದರು. ಪ್ರಧಾನಿ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಸಚಿವ ಸಂಪುಟವು ರೈತರಿಗೆ ಅನುಕೂಲವಾಗುವಂತೆ ಒಂದರ ನಂತರ ಒಂದರಂತೆ ಯೋಜನೆಗಳನ್ನು ಅನುಮೋದಿಸಿದೆ ಎಂದು ಹೇಳಿದರು. ಎನ್ಪಿಕೆ ರಸಗೊಬ್ಬರಗಳ ಮೇಲೆ …
Read More »ಗಣೇಶ ವಿಸರ್ಜನೆ ವೇಳೆ ಗಲಾಟೆ: ಮೂವರಿಗೆ ಚಾಕು ಇರಿತ
ಬೆಳಗಾವಿ: ಕುಂದಾನಗರಿಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಭೀಕರ ದುರಂತ ಸಂಭವಿಸಿದ್ದು, ನಗರದ ಚೆನ್ನಮ್ಮ ವೃತ್ತದ ಬಳಿ ಮೂವರು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ದುಷ್ಕರ್ಮಿಗಳು ಚೂರಿ ಇರಿದಿದ್ದಾರೆ. ಮೆರವಣಿಗೆಯಲ್ಲಿ ಡ್ಯಾನ್ಸ್ ವಿಚಾರಕ್ಕೆ ಸಂಬಂಧಿಸಿ ಗಲಾಟೆ ಆಗಿದ್ದು, ದುಷ್ಕರ್ಮಿಗಳು ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ್ದಾರೆ. ಹೊಟ್ಟೆ, ಕತ್ತು, ಬೆನ್ನಿನ ಭಾಗಕ್ಕೆ ಚಾಕುವಿನಿಂದ ಇರಿಯಲಾಗಿದ್ದು, ಇವರು ಸಮಾಜ ಕಲ್ಯಾಣ ವಸತಿ ನಿಲಯದ ಮೂವರು ವಿದ್ಯಾರ್ಥಿಗಳಾಗಿದ್ದಾರೆ. ಈ ಘಟನೆಯಲ್ಲಿ ಪ್ರವೀಣ್ ಗುಂಡ್ಯಾಗೋಳ್ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು …
Read More »ಕಲ್ಯಾಣ ಕರ್ನಾಟಕದ 17,430 ಹುದ್ದೆಗಳ ಭರ್ತಿಗೆ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕಲಬುರಗಿಯಲ್ಲಿ ನಡೆದ ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಖಾಲಿ ಇರುವ 17,430 ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಿದೆ. ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಕುರಿತು ಮಾಹಿತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಖಾಲಿ ಇರುವ ಹುದ್ದೆಗಳ ಭರ್ತಿಗೆ ಹಂತ ಹಂತವಾಗಿ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಆದರೆ ಈ 17,430 ಹುದ್ದೆಗಳ ಭರ್ತಿ ಮಹತ್ವದ ನಿರ್ಧಾರವನ್ನು ಜಾರಿಗೆ ತರಲು ನಿರ್ದಿಷ್ಟ ಗಡುವನ್ನು ನಿಗದಿಪಡಿಸಿಲ್ಲ. ಮಂಗಳವಾರ ನಡೆದ ಸಚಿವ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





