ಬೆಂಗಳೂರು: ಕರ್ನಾಟಕ ರಾಜ್ಯ ವ್ಯಾಪಾರ ವ್ಯವಹಾರಗಳಿಗೆ ಮುಕ್ತವಾಗಿದ್ದು, ಇಲ್ಲಿನ ಉತ್ತಮ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಯಮಿಗಳಿಗೆ ಕರೆ ನೀಡಿದ್ದಾರೆ. ವಿಧಾನಸೌಧದ ಸಮೇಳನ ಸಭಾಂಗಣದಲ್ಲಿಂದು ಅಮೆರಿಕ ಮತ್ತು ಭಾರತದ ವ್ಯವಹಾರಿಕ ಪರಿಷತ್ ದುಂಡು ಮೇಜಿನ ಸಭೆಯಲ್ಲಿ ಮಾತನಾಡಿದ ಅವರು, ಮಾಹಿತಿ ತಂತ್ರಜ್ಞಾನ, ವೈಮಾನಿಕ ಹಾಗೂ ಬಾಹ್ಯಾಕಾಶ ಸೇರಿಂದತೆ ಹಲವು ಕ್ಷೇತ್ರಗಳಲ್ಲಿನ ಜಾಗತಿಕ ಸವಾಲುಗಳನ್ನು ಎದುರಿಸಲು ಸಹಕಾರ ನೀಡುವಂತೆ ಸಲಹೆ ನೀಡಿದ್ದಾರೆ. ಭಾರತ ಮತ್ತು ಅಮೆರಿಕ ಒಟ್ಟಾಗಿ ಸಮಸ್ಯೆಗಳಿಗೆ ಪರಿಹಾರ ಹುಡುಕಬೇಕು …
Read More »ವಿದೇಶದಲ್ಲಿ ಭಾರತೀಯ ಸಂಪ್ರದಾಯ ಆಚರಣೆ
ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಮಣಕವಾಡದ ಶಶಿ ಚಾಕಲಬ್ಬಿ, ಸಾನ್ವಿ ಚಾಕಲಬ್ಬಿ ಎಂಬುವವರೇ ಅಮೇರಿಕಾದ ಸ್ಯಾನ್-ಡಿಯಾಗೋ ನಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡುವ ಮೂಲಕ ಮಹತ್ವದ ಸಂದೇಶವನ್ನು ಸಾರಿದ್ದಾರೆ. ಈ ಹಿಂದೆಯೂ ಕೂಡ ಈ ದಂಪತಿ ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಮನೆಯಲ್ಲಿಯೇ ರಾಮಮಂದಿರ ನಿರ್ಮಾಣ ಮಾಡಿ ಪೂಜೆ ಕೂಡ ಮಾಡಿದ್ದರು. ಈ ಬಾರಿ ಗಣೇಶೋತ್ಸವಕ್ಕೆ ಗಣಪತಿ ಪ್ರತಿಷ್ಠಾಪನೆ ಮಾಡಿ ವಿಶೇಷವಾಗಿ ಪೂಜೆ ಸಲ್ಲಿಸಿ ನೆರೆ ಹೊರೆಯವರಿಗೆ ಪ್ರಸಾದ ವಿತರಣೆ ಮಾಡಿ …
Read More »ವಿಮೆಗಳ ಮೇಲಿನ ಜಿಎಸ್ಟಿ ತೆರಿಗೆ ಇಳಿಕೆಗೆ ತೀರ್ಮಾಣ
ನವದೆಹಲಿ: ಆರೋಗ್ಯ ವಿಮೆ ಹಾಗೂ ಜೀವ ವಿಮೆಗಳ ಪ್ರೀಮಿಯಂ ಮೇಲಿನ ಜಿಎಸ್ಟಿ ಪ್ರಮಾಣವನ್ನು ಈಗಿರುವ ಶೇಕಡ 18ಕ್ಕಿಂತ ಕಡಿಮೆ ಮಾಡಬೇಕು ಎಂಬ ವಿಚಾರವಾಗಿ ಜಿಎಸ್ಟಿ ಮಂಡಳಿಯಲ್ಲಿ ಬಹುತೇಕ ಸಹಮತ ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿದೆ. ಆದರೆ ಈ ಕುರಿತ ಅಂತಿಮ ತೀರ್ಮಾನವನ್ನು ಜಿಎಸ್ಟಿ ಮಂಡಳಿಯ ಮುಂದಿನ ಸಭೆಯಲ್ಲಿ ಕೈಗೊಳ್ಳಲಾಗುತ್ತದೆ ಎಂದು ಗೊತ್ತಾಗಿದೆ. ಜಿಎಸ್ಟಿ ಮಂಡಳಿಯ ಸಭೆಯು ಸೋಮವಾರ ನಡೆಯಿತು. ವಿಮಾ ಪ್ರೀಮಿಯಂಗಳ ಮೇಲಿನ ತೆರಿಗೆ ಪ್ರಮಾಣವನ್ನು ಕಡಿಮೆ ಮಾಡುವುದರ ಪರಿಣಾಮದ …
Read More »ಮೈಸೂರಿನಲ್ಲಿ ಪಾರಂಪರಿಕ ಸಂಗೀತೋತ್ಸವ
ಮೈಸೂರು: ನಗರದ ವಾಣಿವಿಲಾಸ ಮೊಹಲ್ಲಾದ 8ನೇ ಕ್ರಾಸ್ನಲ್ಲಿ ಶ್ರೀಪ್ರಸನ್ನ ವಿದ್ಯಾಗಣಪತಿ ಮಹೋತ್ಸವ ಚಾರಿಟಬಲ್ ಟ್ರಸ್ಟ್ (ಎಸ್ಪಿವಿಜಿಎಂಸಿ), ಪ್ರಜಾವಾಣಿ ಹಾಗೂ ಡೆಕ್ಕನ್ ಹೆರಾಲ್ಡ್ ಸಹಯೋಗದಲ್ಲಿ ಆಯೋಜಿಸಿರುವ 63ನೇ ಪಾರಂಪರಿಕ ಸಂಗೀತೋತ್ಸವ ಆರಂಭಗೊಂಡಿತು. ವಿದುಷಿ ಸೂರ್ಯಗಾಯತ್ರಿ, ಟ್ರಸ್ಟ್ ಅಧ್ಯಕ್ಷ ಜಗನ್ನಾಥ ಶೆಣೈ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನಸ್ವಾಮಿ ಚಾಲನೆ ನೀಡಿದರು. ಕಲಾವಿದರ ಮೂಲಕ ಸಂಗೀತ ಪರಂಪರೆಯನ್ನು ಹೊಸ ತಲೆಮಾರಿಗೆ ದಾಟಿಸುವ ಜವಾಬ್ದಾರಿಯನ್ನು ಆರು ದಶಕಗಳಿಂದ ಟ್ರಸ್ಟ್ ಮಾಡುತ್ತಿರುವುದು ಶ್ಲಾಘನೀಯ …
Read More »ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾವು
ದೊಡ್ಡಬಳ್ಳಾಪುರ: ಗಣೇಶ ಮೂರ್ತಿ ಪ್ರತಿಷ್ಠಾಪನೆಯ ಬಳಿ ಆಟವಾಡುತ್ತಿದ್ದ ಶಾಲಾ ಬಾಲಕಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ. ಚೇತನ (12) ಮೃತಪಟ್ಟ ಬಾಲಕಿ. ಕೊನಘಟ್ಟ ಗ್ರಾಮದ ಶ್ರೀನಿವಾಸ ಮೂರ್ತಿ ಮತ್ತು ಲಕ್ಷ್ಮಮ್ಮ ದಂಪತಿ ಮಗಳು. ಗಣೇಶ ಮೂರ್ತಿ ಪ್ರತಿಷ್ಠಾಪನೆಯ ಬಳಿ ಆಟವಾಡುತ್ತಿದ್ದ ಶಾಲಾ ಬಾಲಕಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾಳೆ. ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿ ಪ್ರತಿಷ್ಠಾನೆ ಮಾಡಿದ್ದ ಗಣಪತಿ ಬಳಿ ಆಟವಾಡುತ್ತಿದ್ದ ವೇಳೆ ಚೇತನಳಿಗೆ ವಿದ್ಯುತ್ ಶಾಕ್ ಹೊಡೆದಿದೆ ಎಂದು …
Read More »ಮುಡಾ ಹಗರಣ: ಇಂದು ಹೈಕೋರ್ಟ್ ನಲ್ಲಿ ಸಿಎಂ ಅರ್ಜಿ ವಿಚಾರಣೆ
ಬೆಂಗಳೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಇಂದು ಮಧ್ಯಾಹ್ನ 3 ಗಂಟೆಗೆ ಹೈಕೋರ್ಟ್ ನಡೆಸಲಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಹಾಂ ರಾಜ್ಯಪಾಲರಿಗೆ ದೂರು ನೀಡಿದ್ದರು. ಬಳಿಕ ರಾಜ್ಯಪಾಲರು ಬಳಿಕ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ರಾಜ್ಯಪಾಲರು …
Read More »ಮೃತ್ಯುಂಜಯ ಸ್ವಾಮೀಜಿ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಕೋನರಡ್ಡಿ ಭಾಗಿ
ನವಲಗುಂದ : ನವಲಗುಂದ ವಿಧಾನಸಭಾ ಮತಕ್ಷೇತ್ರ-69 ಅಣ್ಣಿಗೇರಿ ತಾಲೂಕಿನ ಸುಕ್ಷೇತ್ರ ಮಣಕವಾಡ ಗ್ರಾಮದ ಶ್ರೀ ಅನ್ನದಾನೀಶ್ವರ ಮಠದಲ್ಲಿ ಹಮ್ಮಿಕೊಂಡಿದ್ದ ಶ್ರೀ ಮ. ನಿ. ಪ್ರ ಮೃತ್ಯುಂಜಯ ಮಹಾಸ್ವಾಮಿಗಳ 19ನೇ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮವನ್ನು, ಶ್ರೀ ಮ. ನಿ. ಪ್ರ ಅಭಿನವ ಮೃತ್ಯುಂಜಯ ಮಹಾಸ್ವಾಮಿಗಳು ಇವರ ದಿವ್ಯ ಸಾನಿಧ್ಯದಲ್ಲಿ ಶಾಸಕ ಎನ್. ಎಚ್. ಕೋನರೆಡ್ಡಿ ಭಾಗವಹಿಸಿ ಕಾರ್ಯಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾನ್ಯ ಕೇಂದ್ರ ಸಚಿವರು, ಹಾಗೂ ಮಾಜಿ ಸಚಿವರು …
Read More »ಕೆಯುಡಿ ಪತ್ರಿಕೋದ್ಯಮ ವಿಭಾಗದ ಹತ್ತಿರ ಪ್ರತ್ಯೇಕ್ಷವಾದ ಚಿರತೆ
ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯ ಗ್ರಂಥಾಲಯದಿಂದ ಪತ್ರಿಕೋದ್ಯಮ ವಿಭಾಗಕ್ಕೆ ಹೋಗುವ ರಸ್ತೆಯಲ್ಲಿಯೇ ಚಿರತೆ ಪ್ರತ್ಯಕ್ಷವಾಗಿದೆ. ಕಳೆದ ಕೆಲ ತಿಂಗಳ ಹಿಂದೆ ಚಿರತೆ ಕರ್ನಾಟಕ ವಿಶ್ವವಿದ್ಯಾಲಯ ಆವರಣ ಹಾಗೂ ಮನಸೂರು ಭಾಗದಲ್ಲಿ ಕಾಣಿಸಿಕೊಂಡಿತ್ತು. ಮನಸೂರಿನಲ್ಲಿ ದನ, ಕರುಗಳ ಮೇಲೆ ಚಿರತೆ ದಾಳಿ ಕೂಡ ನಡೆಸಿತ್ತು. ಆದರೆ, ಈ ಚಿರತೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ವಿಫಲವಾಗಿತ್ತು. ಈಗ ಕರ್ನಾಟಕ ವಿಶ್ವವಿದ್ಯಾಲಯ ಪತ್ರಿಕೋದ್ಯಮ ವಿಭಾಗಕ್ಕೆ ಹೋಗುವ ರಸ್ತೆಯಲ್ಲೇ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ. ಅದು ರಸ್ತೆ ದಾಟುತ್ತಿರುವ …
Read More »ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಶಿಕ್ಷಣ ಇಲಾಖೆ ಆದೇಶ
ಬೆಂಗಳೂರು : ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024 25ನೇ ಸಾಲಿನಿಂದ ಹಾಲಿ ಇರುವ ಕನ್ನಡ ಇತರೆ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ ಇತರೆ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಲು ಘೋಷಿಸಿದ ಹಿನ್ನೆಲೆಯಲ್ಲಿ ಸರ್ಕಾರವು ಉಲ್ಲೇಖ 1ರನ್ವಯ ಮೊದಲನೇ ಹಂತದಲ್ಲಿ 1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ …
Read More »ಕಾಂಗ್ರೆಸ್ ಬಗ್ಗೆ ಟೀಕಿಸಿದ ಟೆಂಗಿನಕಾಯಿ
ಹುಬ್ಬಳ್ಳಿ: ರಾಜ್ಯದದಲ್ಲಿ ಅವಧಿಗೆ ಮುನ್ನ ಸರಕಾರ ಬಿಳ್ಳಬಹುದು ಎಂಬ ಪರೋಕ್ಷವಾದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿಕೆ ವಿಚಾರ, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮನೆವೊಂದು ಮೂರು ಬಾಗಿಲು ಆಗಿದೆ. ಇನ್ನೂ ಮುಖ್ಯಮಂತ್ರಿ ಗಾಧಿ ಖಾಲಿ ಆಗಿಲ್ಲ. ಆದರೆ ಯಾರು ಯಾರು ಟವಲ್ ಹಾಕುವ ಕೆಲಸ ಮಾಡತಾ ಇದ್ದಾರೆ. ಇದು ಸಮಸ್ಯೆಗಳ ಸುರಿಮಾಲೆ ಇದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಮಸ್ಯೆಗಳನ್ನ ಸರಕಾರ ಎದುರಿಸುತ್ತಿದೆ. ಅವರ ಅವರೇ ಕಚ್ಚಾಡುತ್ತಿದ್ದಾರೆಂದು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





