Breaking News

bigtvnews22

ಕಲಬುರಗಿ: ಫೆ.7 ರಂದು ಮಿನಿ ಉದ್ಯೋಗ ಮೇಳ

ಕಲಬುರಗಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಫೆ.7 ರಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕಲಬುರಗಿ ಸರಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಕಂಪನಿ ವಿವರ ಇಂತಿದೆ. ಜೋಯಾಲುಕ್ಕಾಸ್ದಲ್ಲಿ ಸೇಲ್ಸ್ ಟ್ರೈನಿ ಹುದ್ದೆಗೆ ಡಿಪ್ಲೋಮಾ/ ಯಾವುದೇ ಪದವಿ …

Read More »

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲು ಕೇಂದ್ರಕ್ಕೆ ಕರ್ನಾಟಕ ಮನವಿ

ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಮನವಿ ಮಾಡಿದೆ. ಭದ್ರಾ ಮೇಲ್ದಂಡೆ ಯೋಜನೆ ರಾಜ್ಯದ ಪ್ರಮುಖ ಏತ ನೀರಾವರಿ ಯೋಜನೆಯಾಗಿದೆ. ಮೊದಲ ಹಂತದಲ್ಲಿ ತುಂಗಾ ನದಿಯಿಂದ ಭದ್ರಾ ಜಲಾಶಯಕ್ಕೆ 17.40 ಟಿಎಂಸಿ ನೀರು ಎತ್ತಲಾಗಿದೆ. ಎರಡನೇ ಹಂತದಲ್ಲಿ 29.90 ಟಿಎಂಸಿ ನೀರನ್ನು ಭದ್ರಾ ಜಲಾಶಯದಿಂದ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಮತ್ತು ದಾವಣಗೆರೆ ಸೇರಿದಂತೆ ಬರಪೀಡಿತ ಜಿಲ್ಲೆಗಳ 2,25,515 ಹೆಕ್ಟೇರ್ ಪ್ರದೇಶಕ್ಕೆ ಒದಗಿಸುವ ಗುರಿ …

Read More »

ಸಮಾಜದಲ್ಲಿನ ಜಾತಿ ವ್ಯವಸ್ಥೆ ಅಳಿದು ಸಮಸಮಾಜ ನಿರ್ಮಾಣಕ್ಕೆ ಅಂತರ್ಜಾತಿ ವಿವಾಹ ಹೆಚ್ಚಲಿ: ಸಿಎಂ ಸಿದ್ದರಾಮಯ್ಯ

ಹಗರಿಬೊಮ್ಮನಹಳ್ಳಿ: ಸಮಾಜದಲ್ಲಿನ ಜಾತಿ ವ್ಯವಸ್ಥೆ ಅಳಿದು ಸಮಸಮಾಜ ನಿರ್ಮಾಣವಾಗಬೇಕಿದ್ದರೆ ಅಂತರ್ಜಾತಿ ವಿವಾಹಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಲ್ಲಿಗೆ ಸಮೀಪದ ಬಂಡಿಹಳ್ಳಿಯಲ್ಲಿ ವಿಜಯನಗರ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಸಿರಾಜ್ ಶೇಖ್‌ ಅವರ ಪುತ್ರನ ವಿವಾಹ ಸಂದರ್ಭದಲ್ಲಿ ಹಮ್ಮಿಕೊಂಡ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಜಾತ್ಯತೀತ ತತ್ವವನ್ನು ನಮ್ಮ ಸಂವಿಧಾನ ಬೋಧಿಸಿದೆ. ಇದೇ ಆಶಯವನ್ನು ವ್ಯಕ್ತಪಡಿಸಿದ ಬಸವಣ್ಣವರು, ಜಾತಿಆಧಾರಿತ ಸಮಾಜ ವ್ಯವಸ್ಥೆ ಸಾಧುವಲ್ಲ …

Read More »

ಒಂದು ದೇಶ, ಒಂದು ಚುನಾವಣೆ ಪದ್ಧತಿ ಅನುಷ್ಠಾನದಿಂದ ದೇಶದ ವಿಕಾಸಕ್ಕೆ ವೇಗ: ರಾಮನಾಥ್‌ ಕೋವಿಂದ್‌

ಕಲಬುರಗಿ: ಒಂದು ದೇಶ, ಒಂದು ಚುನಾವಣೆ ಪದ್ಧತಿ ಅನುಷ್ಠಾನದಿಂದ ಭಾರತ ದೇಶದ ವಿಕಾಸಕ್ಕೆ ವೇಗ ದೊರಕಲಿದೆ ಎಂದು ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಪ್ರತಿಪಾದಿಸಿದ್ದಾರೆ. ಕಲಬುರಗಿ ಜಿಲ್ಲೆಯ ಸೇಡಂ ಬಳಿಯ ಬೀರನಹಳ್ಳಿಯ 240 ಎಕರೆ ವಿಶಾಲ ಭೂಪ್ರದೇಶದಲ್ಲಿ ಅದ್ಧೂರಿಯಾಗಿ ತಲೆ ಎತ್ತಿರುವ ಸುಸಜ್ಜಿತ ಪ್ರಕೃತಿ ನಗರದಲ್ಲಿ ಬುಧವಾರದಿಂದ 9 ದಿನಗಳ ಕಾಲ ನಡೆಯಲಿರುವ ಭಾರತ ಸಾಂಸ್ಕೃತಿ ಉತ್ಸವ- 7 ಹಾಗೂ ಕೊತ್ತಲ ಸ್ವರ್ಣ ಜಯಂತಿ ಸಂಭ್ರಮಕ್ಕೆ ದೀಪ ಬೆಳಗಿಸಿ ಚಾಲನೆ …

Read More »

ಕಲಬುರಗಿ: ಅಭಿವೃದ್ದಿಗೆ ಬಳಕೆಯಾಗದೆ ಕೈತಪ್ಪಿದ ₹3,472 ಕೋಟಿ

ಕಲಬುರಗಿ: ಪ್ರಾದೇಶಿಕ ಅಸಮಾನತೆ ನಿವಾರಣೆಗಾಗಿ ಡಾ.ಡಿ.ಎಂ. ನಂಜುಂಡಪ್ಪ ಸಮಿತಿ ನೀಡಿದ್ದ ವರದಿಯ ಮಾನದಂಡದ ಅನ್ವಯ ಕಲ್ಯಾಣ ಕರ್ನಾಟಕ ಭಾಗದ ಹಿಂದುಳಿದ 29 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನವು ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿಯ ಆಶಯಗಳು ಸಾಕಾರಗೊಳಿಸಿಲ್ಲ. ನಂಜುಡಪ್ಪ ಅಧ್ಯಕ್ಷತೆ ಸಮಿತಿ ಗುರುತಿಸಿದ್ದ ರಾಜ್ಯದ ಹಿಂದುಳಿದ 114 ತಾಲ್ಲೂಕುಗಳ ಪೈಕಿ ಕಲ್ಯಾಣ ಕರ್ನಾಟಕ ಭಾಗದ 29 ತಾಲ್ಲೂಕುಗಳಿವೆ. ಅವುಗಳಲ್ಲಿ ಎರಡು ಹಿಂದುಳಿದ, ಐದು ಅತಿ ಹಿಂದುಳಿದ ಹಾಗೂ 22 ಅತ್ಯಂತ ಹಿಂದುಳಿದ ತಾಲ್ಲೂಕಗಳಿವೆ. 2007-08ರಿಂದ …

Read More »

ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಲು ಸರ್ಕಾರದ ಮೇಲೆ ಒತ್ತಡ ತರಲು ಪ್ರಯತ್ನ: ಸಿ.ಎಸ್.ಷಡಾಕ್ಷರಿ

ಕೋಲಾರ: ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾದ ಹಿಂದಿನ ಒಪಿಎಸ್ ಯೋಜನೆಯನ್ನು ಜಾರಿ ಮಾಡಲು ಸರ್ಕಾರದ ಮೇಲೆ ಒತ್ತಡ ತರಲು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಎನ್ಪಿಎಸ್ ಪಿಂಚಣಿ ಯೋಜನೆಗೆ ವ್ಯಾಪಕವಾದ ವಿರೋದ ನೌಕರರ ಸಂಘದಿಂದ ವ್ಯಕ್ತವಾಗಿದೆ. ಈ ಯೋಜನೆ ನೌಕರರ ಹಿತಾಸಕ್ತಿಯ ವಿರುದ್ದವಾಗಿದೆ ಎಂದು ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಭರವಸೆ ನೀಡಿದರು. ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಎರಡನೇ …

Read More »

ರಾಜ್ಯದಲ್ಲಿ ಅನುಕಂಪದ ಆಧಾರದಲ್ಲಿ ಉದ್ಯೋಗ ನಿರೀಕ್ಷೆಯಲ್ಲಿದ್ದವರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಅನುಕಂಪದ ಆಧಾರದ ಉದ್ಯೋಗ ನಿರೀಕ್ಷೆಯಲ್ಲಿದ್ದಂತ ಜನರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಗುಡ್ ನ್ಯೂಸ್ ಒಂದನ್ನು ನೀಡಿದ್ದಾರೆ. ಅದೇ ನೇಮಕಾತಿ ಸಂಬಂಧ ಮಹತ್ವದ ಬದಲಾವಣೆಯ ನಿರ್ಧಾರವನ್ನು ಕೈಗೊಂಡಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು. ಈ ಸಭೆಯಲ್ಲಿ ಅರಣ್ಯ ಹಕ್ಕು ಸಮಿತಿ ನಿಗದಿತವಾಗಿ ಸಭೆಗಳನ್ನು ನಡೆಸಿ, ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ನೀಡುವ ಪ್ರಕ್ರಿಯೆ ತ್ವರಿತಗೊಳಿಸಬೇಕು. 3430 …

Read More »

ಆಧಾರ್ ಸೀಡಿಂಗ್ ಕಾರ್ಯಕ್ರಮ ಯಶಸ್ವಿ: ಗ್ರಾಮ ಸಹಾಯಕರು, ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೋತ್ಸಾಹಧನ

ಬೆಂಗಳೂರು: ಆಧಾರ್ ಸೀಡಿಂಗ್ ಕಾರ್ಯಕ್ರಮದ ಯಶಸ್ಸಿಗೆ ಸಹಕಾರ ನೀಡಿದ ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರಿಗೆ ಒಟ್ಟು 4.5 ಕೋಟಿ ರೂ. ಮೊತ್ತದ ಪ್ರೋತ್ಸಾಹಧನ ನೀಡಲು ನಿರ್ಧರಿಸಲಾಗಿದೆ. ಸೋಮವಾರ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಜ್ಯದ 2.12 ಕೋಟಿ ಜಮೀನುಗಳ ಪಹಣಿಗಳಿಗೆ ಆಧಾರ್ ಜೋಡಣೆ ಮಾಡಲಾಗಿದೆ. ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಗರು ಈ ಕಾರ್ಯನಿರ್ವಹಿಸಿದ್ದು, ಇವರು ಕೆಲಸ ಮಾಡದಿದ್ದಲ್ಲಿ ಆಧಾರ್ ಸೀಡಿಂಗ್ …

Read More »

ಯಾದಗಿರಿಯಲ್ಲಿ ನೂತನ ಪೊಲೀಸ್ ಠಾಣೆ, ವಸತಿ ಗೃಹಗಳನ್ನು ಉದ್ಘಾಟಿಸಿದ ಸಚಿವ ಜಿ.ಪರಮೇಶ್ವರ್

ಯಾದಗಿರಿ : ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳನ್ನು ಆಧುನಿಕರಣಗೊಳಿಸಲು ಸರಕಾರ ಕ್ರಮ ಕೈಗೊಂಡಿದೆ ಎಂದು ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದರು. ನಗರದಲ್ಲಿಂದು ಜಿಲ್ಲಾ ಪೊಲೀಸ್ ಇಲಾಖೆ, ರಾಜ್ಯ ಪೊಲೀಸ್ ಇಲಾಖೆ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ, 17 ಕೋಟಿ ರೂ.ವೆಚ್ಚದ ಪೊಲೀಸ್ ವಸತಿ ಗೃಹಗಳು ಹಾಗೂ 2.12 ಕೋಟಿ ರೂ. ವೆಚ್ಚದ ನಗರ ಪೊಲೀಸ್ ಠಾಣೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು. …

Read More »

ರಾಜ್ಯಾದ್ಯಂತ ಇದುವರೆಗೆ 5000 ಪೋಡಿ ದುರಸ್ಥಿ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು : ಡಿಸೆಂಬರ್ ನಲ್ಲಿ ದರಖಾಸ್ತು ಪೋಡಿ ಅಭಿಯಾನ ಆರಂಭವಾಗಿ ರಾಜ್ಯದ್ಯಾಂತ ಇದುವರೆಗೂ ಅಂದಾಜು 5000 ಪೋಡಿ ದುರಸ್ತಿ ಆಗಿದೆ. ಅದರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದುವರೆಗೂ 1236 ಪೋಡಿ ದುರಸ್ತಿ ಆಗಿದ್ದು ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಹೇಳಿದರು. ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ ಸಮೀಪ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ಕಂದಾಯ ಇಲಾಖೆ ಮತ್ತು ಭೂ ಮಾಪನ …

Read More »