Breaking News

bigtvnews22

ಜಾತಿ ವ್ಯವಸ್ಥೆ ತೊಲಗಿ ಸಮ ಸಮಾಜ ನಿರ್ಮಾಣಕ್ಕೆ ಅಂತರ್ಜಾತಿ ವಿವಾಹ ಹೆಚ್ಚಾಗಲಿ: ಸಿಎಂ ಸಿದ್ದರಾಮಯ್ಯ

ಹಗರಿಬೊಮ್ಮನಹಳ್ಳಿ: ಬಸವಣ್ಣ ನವರು ಅಂತರ್ಜಾತಿ ವಿವಾಹ ಉತ್ತೇಜಿಸಿದ್ದರು, ಆದೇ ರೀತಿ ಈಗ ನಾವೆಲ್ಲ ಅಂತಹ ವಿವಾಹ ಉತ್ತೇಜಿಸುವ ಅಗತ್ಯ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಲ್ಲಿ ಇಂದು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಿರಾಜ್ ಶೇಖ್ ಅವರ ಮಗನ ಮದುವೆ ಜತೆಗೆ ಹಮ್ಮಿಕೊಂಡ ಸರ್ವಧರ್ಮ ಸಾಮೂಹಿಕ ವಿವಾಹದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಾತಿ ವ್ಯವಸ್ಥೆ ತೊಲಗಿ ಸಮ ಸಮಾಜ ನಿರ್ಮಾಣವಾಗಲು ಅಂತರ್ಜಾತಿ ವಿವಾಹ ಹೆಚ್ಚಬೇಕು ಎಂದರು. ಲಂಬಾಣಿ ಸಮುದಾಯ …

Read More »

ಕೇಂದ್ರ ಸರ್ಕಾರದಿಂದ ಜಾತಿ ಗಣತಿ ಮಾಡಲು ತೀರ್ಮಾನ: ಕೇಂದ್ರ ಸಚಿವ ಎಚ್ಡಿಕೆ

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದಿಂದ ಈಗಾಗಲೇ ಜಾತಿ ಗಣತಿ ಮಾಡಿ ಸುಮಾರು 12 ವರ್ಷಗಳು ಕಳೆದಿವೆ. ಈಗ ಸಾಕಷ್ಟು ಬದಲಾವಣೆ ಆಗಿದೆ. ಈಗ ಆ ವರದಿ ಅಪ್ರಸ್ತುತ. ಹೀಗಾಗಿ ಕೇಂದ್ರ ಸರ್ಕಾರದಿಂದ ಜಾತಿ ಗಣತಿ ಮಾಡಲು ತೀರ್ಮಾನಿಸಲಾಗಿದೆ ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ತಾಲ್ಲೂಕಿನ ಹಾಡೋನಹಳ್ಳಿಯಲ್ಲಿ ಮಾತನಾಡಿ, 10 ವರ್ಷಕ್ಕೊಮ್ಮೆ ಜಾತಿ ಗಣತಿ ಮಾಡಬೇಕು. ಅದನ್ನು ಈಗಿನ ಕಾಂಗ್ರೆಸ್‌ ಸರ್ಕಾರ ಮಾಡಿಲ್ಲ. ಹೊಸದಾಗಿ ರಾಜ್ಯ ಸರ್ಕಾರ ಜಾತಿ …

Read More »

ಕಲಬುರಗಿ: ಗಣರಾಜ್ಯೋತ್ಸವಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲು ಕ್ರಮ ವಹಿಸಿ; ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ : 76ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ತಿಳಿಸಿದರು. ಅವರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲಿ 76ನೇ ಗಣರಾಜ್ಯೋತ್ಸವನ್ನು ಆಚರಿಸುವ ಸಲುವಾಗಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಾರಂಭವನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಗುವುದು. ಜ.26 ರಂದು ಬೆಳಿಗ್ಗೆ 9ಗಂಟೆಗೆ ಪೋಲಿಸ್ ಗ್ರೌಂಡ್ ಮೈದಾನದಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ …

Read More »

ನನಗೆ ಯಾರ ಬೆಂಬಲವು ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ: ಡಿಸಿಎಂ ಡಿಕೆಶಿ

ಶೃಂಗೇರಿ: ಕರ್ಮಣ್ಯೇ ವಾಧಿಕಾರಸ್ತೇ | ಮಾ ಫಲೇಷು ಕದಾಚನ ಎಂಬ ಶ್ಲೋಕದಂತೆ ನಮ್ಮ ಪ್ರಯತ್ನ ನಾವು ಮಾಡೋಣ ಫಲಾಫಲ ದೇವರಿಗೆ ಬಿಡೋಣ. ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ’ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು. ಮುಂದಿನ ಸಿಎಂ ಡಿ.ಕೆ. ಶಿವಕುಮಾರ್ ಅವರು ಆಗಬೇಕು ಎಂದು ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದಾರೆ ಎಂದು ಕೇಳಿದಾಗ, ‘ನನ್ನ ಪರವಾಗಿ ಯಾರೂ ಒತ್ತಾಯ ಮಾಡುವುದು ಬೇಡ. ನನಗೆ ಯಾರ ಬೆಂಬಲವೂ …

Read More »

2024-25ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆ ವಿಮೆ ಮಾಡಿಸಿದವರು ಬೆಳೆ ಸಮೀಕ್ಷೆ ಆಯಪ್ ನಲ್ಲಿ ನೋಂದಾಯಿಸುವುದು ಕಡ್ಡಾಯ

ಬೆಂಗಳೂರು: 2024-25 ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಬೆಳೆ ಸಮೀಕ್ಷೆ ಆಯಪ್ ಬಿಡುಗಡೆ ಮಾಡಿದ್ದು ರೈತರು ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಬೆಳೆ ಸಮೀಕ್ಷೆ ಆಯಪ್‍ನಲ್ಲಿ ನೋಂದಾಯಿಸಬೇಕು. ಸರಕಾರದ ವಿವಿಧ ಯೋಜನೆಗಳಾದ ಫಸಲ ಭೀಮಾ ಯೋಜನೆ, ಬೆಳೆ ಪರಿಹಾರ, ಬೆಂಬಲ ಬೆಲೆ ಯೋಜನೆಗಳ ಸೌಲಭ್ಯವನ್ನು ಪಡೆಯಲು ಬೆಳೆ ಸಮೀಕ್ಷೆ ಮಾಡುವುದು ಅವಶ್ಯಕವಾಗಿರುತ್ತದೆ. ಬೆಳೆ ವಿಮೆ ಮಾಡಿಸಿದ ರೈತರು ಕಡ್ಡಾಯವಾಗಿ ತಾವು ಬೆಳೆದ ಬೆಳೆಯನ್ನು ಬೆಳೆ ಸಮೀಕ್ಷೆಯಡಿ ನೋಂದಾಯಿಸಬೇಕು. ಬೆಳೆ ಸಮೀಕ್ಷೆ …

Read More »

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು. ಬೆಂಗಳೂರಿನ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಬೇಡಿಕೆ ಹಾಗೂ ಕುಂದು ಕೊರತೆಗಳ ಬಗ್ಗೆ ಸಚಿವರು ಚರ್ಚೆ ನಡೆಸಿದರು. ಗೌರವಧನ ಹೆಚ್ಚಳ, ಮುಂಬಡ್ತಿ, ಗ್ರಾಚ್ಯುಟಿ ಸೌಲಭ್ಯ, ಉಚಿತ ವೈದ್ಯಕೀಯ ಸೌಲಭ್ಯ, ಅನಾರೋಗ್ಯ ಪೀಡಿತರಿಗೆ ಸ್ವಯಂ ನಿವೃತ್ತಿ ಯೋಜನೆ ಸೇರಿದಂತೆ ಹಲವು …

Read More »

ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು: ಸಂಸದ ಸಾಗರ್ ಖಂಡ್ರೆ

ಬಾಲ್ಕಿ: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸರ್ಕಾರ ಸಾಕಷ್ಟು ಯೋಜನೆ ರೂಪಿಸಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಟ್ಯಾಬ್ ನೀಡುವ ಮೂಲಕ ಅವರ ಕಲಿಕೆಗೆ ಸಹಕರಿಸುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಸದ ಸಾಗರ್ ಖಂಡ್ರೆ ಹೇಳಿದರು. ಪಟ್ಟಣದಲ್ಲಿ ಪ್ರಜ್ಞಾ ಫೌಂಡೇಶನ್, ಐಐಎಫ್‌ಎಲ್ ಸಂಸ್ಥೆ ಸಹಯೋಗದಲ್ಲಿ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಿ ಮಾತನಾಡಿದರು. ಉತ್ತಮ ಶಿಕ್ಷಣ ಪಡೆಯುವುದು ಪ್ರತಿ ಮಗುವಿನ ಹಕ್ಕು. ಟ್ಯಾಬ್ ಮೂಲಕ ಮಕ್ಕಳಿಗೆ ತಂತ್ರಜ್ಞಾನ ಆಧಾರಿತ ಶಿಕ್ಷಣ …

Read More »

ಬೆಂಬಲ ಬೆಲೆ ಯೋಜನೆಯಡಿ ತೊಗರಿ ಉತ್ಪನ್ನ ಖರೀದಿ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ : ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ಬೆಂಗಳೂರಿನ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿಯಮಿತ, ಬಳ್ಳಾರಿ ಶಾಖೆ ವತಿಯಿಂದ ಎಫ್‌ಎಕ್ಯೂ ಗುಣಮಟ್ಟದ ತೊಗರಿ ಉತ್ಪನ್ನ ಖರೀದಿಸಲಾಗುತ್ತಿದೆ ಎಂದು ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರವು ನಿಗಧಿಪಡಿಸಿದ ಬೆಂಬಲ ಬೆಲೆಯಂತೆ ಪ್ರತಿ ಕ್ವಿಂಟಾಲ್‌ಗೆ ರೂ.7550 ರಂತೆ ರೈತರಿಂದ ಖರೀದಿಸಲಾಗುತ್ತದೆ. ಬಳ್ಳಾರಿ ನಗರದ ಎಸ್‌ಪಿ ವೃತ್ತದ …

Read More »

ಬಹುನಿರೀಕ್ಷಿತ ಜಾತಿ ಗಣತಿ ವರದಿ ಮಂಡಿಸಲು ಸಮಯ ನಿಗದಿ

ಬೆಂಗಳೂರು: ಬಹುನಿರೀಕ್ಷಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ(ಜಾತಿ ಗಣತಿ) ವರದಿ ಮಂಡಿಸಲು ಮುಹೂರ್ತ ಫಿಕ್ಸ್ ಆಗಿದೆ. ಸಚಿವ ಸಂಪುಟ ಸಭೆಯ ಮುಂದೆ ಇದೇ ಮೊದಲ ಬಾರಿಗೆ ವರದಿ ಮಂಡನೆಯಾಗಲಿದ್ದು, ವರದಿಯನ್ನು ಸಂಪುಟ ಒಪ್ಪುತ್ತದೆಯೇ, ಇಲ್ಲವೇ ಅಧಿವೇಶನಕ್ಕೆ ಒಯ್ಯುತ್ತದೆಯೇ ಎನ್ನುವುದು ಕುತೂಹಲ ಮೂಡಿಸಿದೆ. 169 ಕೋಟಿ ರೂ. ವೆಚ್ಚದಲ್ಲಿ ಸಿದ್ದಪಡಿಸಲಾದ ವರದಿಯ ಅಂಶಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಸದಸ್ಯರೊಂದಿಗೆ ಚರ್ಚಿಸಲಿದ್ದಾರೆ. ಜಾತಿ ಗಣತಿ ವರದಿಯನ್ನು ಸದನದಲ್ಲಿ ಮಂಡಿಸಬೇಕೇ ಬೇಡವೇ ಎನ್ನುವುದರ …

Read More »

ಕಲಬುರಗಿ: ಬೆಂಬಲ ಬೆಲೆಯಡಿ ತೊಗರಿ ಖರೀದಿಗೆ ನಿರ್ಧಾರ; ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ : ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಪ್ರಸಕ್ತ 2024-25ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ. ಗುಣಮಟ್ಟದ ತೊಗರಿ ರೈತರಿಂದ ಖರೀದಿಸಲು ನಿರ್ಧರಿಸಿಲಾಗಿದೆ. ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಿರುವ 177 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅಥವಾ ರೈತ ಉತ್ಪಾದಕ ಸಂಘಗಳಲ್ಲಿ ಬರುವ ಜ.6 ರಿಂದ 75 ದಿನಗಳವರೆಗೆ ತೊಗರಿ ಖರೀದಿಗೆ ನೊಂದಣಿ ಮತ್ತು …

Read More »