Breaking News

Uncategorized

2023 ರಲ್ಲಿ ಭಾರತದಿಂದ ₹21 ಸಾವಿರ ಕೋಟಿ ರಕ್ಷಣಾ ಉಪಕರಣಗಳ ರಫ್ತು: ಡಾ.ಜಿ.ಸತೀಶ್ ರೆಡ್ಡಿ

ಆನೇಕಲ್: ಶಸ್ತ್ರಾಸ್ತ್ರ ತಯಾರಿಕೆಯಲ್ಲಿ ಭಾರತ ಸ್ವಾವಲಂಬಿಯಾಗುತ್ತಿದೆ. 2023ನೇ ಸಾಲಿನಲ್ಲಿ ₹21 ಸಾವಿರ ಕೋಟಿ ರಕ್ಷಣಾ ಉಪಕರಣಗಳನ್ನು ರಫ್ತು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ₹50 ಸಾವಿರ ಕೋಟಿ ಗುರಿ ಹೊಂದಲಾಗಿದೆ. ರಕ್ಷಣಾ ಕ್ಷೇತ್ರದಲ್ಲಿ ಭಾರತ ನಾಯಕನಾಗಬೇಕು ಎಂಬುದು ಗುರಿಯಾಗಿದೆ ಎಂದು ರಕ್ಷಣಾ ಸಚಿವಾಲಯದ ಸಲಹೆಗಾರ, ಡಿಆರ್‌ಡಿಓ ಆಡಳಿತ ಮಂಡಳಿ ಅಧ್ಯಕ್ಷ ಡಾ.ಜಿ.ಸತೀಶ್‌ ರೆಡ್ಡಿ ಹೇಳಿದರು. ಅಲಯನ್ಸ್‌ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವದಲ್ಲಿ ಮಾತನಾಡಿ, ಸ್ಟಾರ್ಟ್‌ ಅಪ್‌ಗೆ ಇತ್ತೀದಿನ ದಿನಗಳಲ್ಲಿ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. …

Read More »

ಕಂದಾಯ ಇಲಾಖೆಯ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಶಿವಮೊಗ್ಗ: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ‌ ಆಡಳಿತ ಅಧಿಕಾರಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿದ್ದು, ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮುಖೇನ ನೇಮಕಾತಿ ಮಾಡಲು ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿರುತ್ತದೆ. ಅದರಂತೆ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ದಿನಾಂಕ 29-09-2024, 26-10-2024 ಹಾಗೂ 27-10-2024 …

Read More »

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚನೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ ಇದೆ. ಉತ್ತರ ಕರ್ನಾಟಕ ವಿಮೋಚನಾ ದಿನದಂದೇ ಈ ಬಗ್ಗೆ ಹೇಳಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಚರಿಸಿದರು. ಕಲಬುರಗಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು‌. ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಬೇಕು ಎನ್ನುವ ಬೇಡಿಕೆ ಬಹಳ ವರ್ಷಗಳಿಂದ ಇದೆ. ಪ್ರತ್ಯೇಕ ಸಚಿವಾಲಯ ಮಾಡುವ ಉದ್ದೇಶ ನಮಗೆ ಇದೆ ಎಂದರು.

Read More »

ಎಂಟು ದಿನಗಳ ಬೆಳಗಾವಿ ಚಳಿಗಾಲ ಅಧಿವೇಶನ ಯಶಸ್ವಿ: 13 ವಿಧೇಯಕಗಳ ಅಂಗೀಕಾರ

ಮಡಿಕೇರಿ: ಬೆಳಗಾವಿಯ ಸುವರ್ಣ ಸೌಧದಲ್ಲಿ 8 ದಿನಗಳ ಕಾಲ ನಡೆದ ವಿಧಾನ ಸಭಾ ಅಧಿವೇಶನ ಅತ್ಯಂತ ಯಶಸ್ವಿಯಾಗಿದ್ದು, ಜನಪರವಾದ ಅನೇಕ ಪ್ರಶ್ನೆಗಳಿಗೆ ಸರ್ಕಾರದಿಂದ ಸಮರ್ಪಕ ಉತ್ತರ ದೊರಕಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಪ್ರತಿಕ್ರಿಯಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಈ ಬಾರಿಯ ವಿಧಾನ ಸಭಾ ಅಧಿವೇಶನವು ಯಾವುದೇ ಪ್ರತಿಭಟನೆಗಳಿಗೆ ಆಸ್ಪದ ಇಲ್ಲದಂತೆ 8 ದಿನಗಳಲ್ಲಿ 64 ಗಂಟೆ ಕಾಲ ಅತ್ಯಂತ ಯಶಸ್ವಿಯಾಗಿ ಸದನ ನಡೆದಿದೆ. ಜನಪರವಾಗಿ ಅಧಿವೇಶನ …

Read More »

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್: ಗೃಹ, ಪೊಲೀಸ್ ಇಲಾಖೆಗೆ ಹೈಕೋರ್ಟ್ ನೋಟಿಸ್

ಧಾರವಾಡ: ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠದಿಂದ ಸರ್ಕಾರ, ಗೃಹ ಇಲಾಖೆ ಮತ್ತು ಪೊಲೀಸ್ ಇಲಾಖೆಗೆ ನೋಟಿಸ್ ಜಾರಿ ಮಾಡಿದ್ದು, ಸ್ಪಷ್ಟನೆ ಕೆಳಲಾಗಿದೆ. ಲಾಠಿಚಾರ್ಜ್​ ವಿರುದ್ಧ ಜಯಮೃತ್ಯುಂಜಯ ಶ್ರೀ, ಪಂಚಮಸಾಲಿ ವಕೀಲರ ಪರಿಷತ್ ಸೇರಿದಂತೆ ಧಾರವಾಡ ಹೈಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಹಾಗಾಗಿ ಇದೀಗ ನೋಟಿಸ್ ಜಾರಿ ಮಾಡಲಾಗಿದೆ. ರಿಟ್ ಅರ್ಜಿ ಸಲ್ಲಿಕೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಲಾಠಿಚಾರ್ಜ್​ …

Read More »

ಪಂಚಮಸಾಲಿ ಮೀಸಲಾತಿಯನ್ನು ಕಾನೂನು ಹೋರಾಟದ ಮೂಲಕವೇ ಪಡೆಯುತ್ತೇವೆ: ವಚನಾನಂದ ಸ್ವಾಮೀಜಿ

ಕೊಪ್ಪಳ: ಪಂಚಮಸಾಲಿ ಸಮಾಜಕ್ಕೆ ಸಿಗಬೇಕಾದ ಮೀಸಲಾತಿಯನ್ನು ಕಾನೂನು ಹೋರಾಟದ ಮೂಲಕವೇ ಪಡೆಯುತ್ತೇವೆ ಎಂದು ಹರಿಹರ ಪೀಠದ ವಚನಾನಂದ ಸ್ವಾಮೀಜಿ ಹೇಳಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪಂಚಮಸಾಲಿ ಸಮಾಜ ಹೋರಾಟ ಮಾಡುತ್ತಿದ್ದರೂ ಸರ್ಕಾರ ಮೀಸಲಾತಿ ಕೊಡುವಾಗ ಇಡೀ ವೀರಶೈವ ಲಿಂಗಾಯತ ಸಮಾಜಕ್ಕೆ ನೀಡುತ್ತದೆ. ಕೇಂದ್ರದಲ್ಲಿ ಓಬಿಸಿ ಯಲ್ಲಿ ಸೇರುವುದು ಮತ್ತು ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ಯಾವುದನ್ನು ನೀಡಬೇಕು ಎನ್ನುವ ಕುರಿತು ಚಿಂತನೆಯಾಗಬೇಕು ಎಂದರು.

Read More »

ರಾಜ್ಯ ಸರ್ಕಾರದಿಂದ ಗುತ್ತಿಗೆ ಸಿಬ್ಬಂದಿಗಳಿಗೆ 7 ನೇ ವೇತನ ಆಯೋಗದಂತೆ ಸಂಚಿತ ವೇತನ ಪರಿಷ್ಕರಿಸಿ ಆದೇಶ

ಬೆಂಗಳೂರು: ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳ, ಮುಖ್ಯಮಂತ್ರಿಯವರ ಸಲಹಗಾರರ/ ಸಂಪುಟ ದರ್ಜೆ ಸ್ನಾನಮಾನ ಹಾಗೂ ಸಚಿವರ ಸ್ನಾನಮಾನ ವಡದ ಪ್ರಾಧಿಕಾರಿಗಳ ಮತ್ತು ರಂಟೆ ಯೋಜನಗಳ ಅನುಷ್ಠಾನ ಪ್ರಾಧಿಕಾರದ ದಿರದ ಅಧ್ಯಕ್ಷರು / ಉಪಾಧ್ಯಕ್ಷರ ಆಪ್ತ ಶಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನನ್ನಯ ಸಂಚಿತ ವೇತನವನ್ನು ಪರಿಷ್ಕರಿಸಿ ಆದೇಶಿಸಿದೆ. ಈ ಸಂಬಂಧ ನಡಾವಳಿಯನ್ನು ಹೊರಡಿಸಿರುವಂತ ಸಿಬ್ಬಂದಿ ಮತ್ತು ಆಡಳಿತ …

Read More »

ಗ್ಯಾರಂಟಿ ಯೋಜನೆಗಳು ಬಡ ಕುಟುಂಬಗಳಿಗೆ ಆಸರೆಯಾಗಿ ನಿಂತಿವೆ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ‌ ಯೋಜನೆಗಳು ಬಡ ಕುಟುಂಬಗಳಿಗೆ ಆಸರೆಯಾಗಿ ನಿಂತಿವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಹೇಳಿದರು. ಸೊರಬದ ಬ್ಲಾಕ್ ವ್ಯಾಪ್ತಿಯ ವಿವಿಧ ಇಲಾಖೆಗಳ 25 ಕಾಮಗಾರಿಗಳು ಮತ್ತು 58 ಕಾಮಗಾರಿಗಳ‌ ಶಂಕುಸ್ಥಾಪನೆ (ಒಟ್ಟು 56.34ಕೋಟಿ ಮೊತ್ತದ) ಹಾಗೂ ತಾಲ್ಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ಕಚೇರಿ , ತಾಲ್ಲೂಕು ಬಗರ್ ಹುಕುಂ ಸಮಿತಿ‌ ಕಚೇರಿ ಹಾಗೂ …

Read More »

ಬೆಂಗಳೂರು-ಪುಣೆ ದಶಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶೀಘ್ರ ಪ್ರಾರಂಭ: ಟಿ.ಬಿ.ಜಯಚಂದ್ರ

ಶಿರಾ: ಬೆಂಗಳೂರು- ಪುಣೆ ದಶಪಥ ರಾಷ್ಟ್ರೀಯ ಹೆದ್ದಾರಿ (ವಿಷನ್-47) ಕಾಮಗಾರಿ ಅತಿ ಶೀಘ್ರ ಪ್ರಾರಂಭವಾಗಲಿದ್ದು ಇದರಿಂದಾಗಿ ತಾಲ್ಲೂಕಿನ ಚಿತ್ರಣವೇ ಬದಲಾಗುವುದು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು. ತಾಲ್ಲೂಕಿನ ತೊಗರಗುಂಟೆ ಬಳಿ ₹25 ಕೋಟಿ ವೆಚ್ಚದಲ್ಲಿ ಶಿರಾ- ಅಮರಾಪುರ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ತಾಲ್ಲೂಕಿನಲ್ಲಿ ಈಗಾಗಲೇ ಮೂರು ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗುತ್ತಿದ್ದು, ಶೀಘ್ರದಲ್ಲಿ ಬೆಂಗಳೂರು- ಪೂನಾ ಹೆದ್ದಾರಿ ಕಾಮಗಾರಿ ಪ್ರಾರಂಭವಾಗುವುದರಿಂದ ಒಟ್ಟು ನಾಲ್ಕು ರಾಷ್ಟ್ರೀಯ ಹೆದ್ದಾರಿಗಳು ಹಾದು …

Read More »

ರಾಮಮಂದಿರ ಕಟ್ಟುವುದರಿಂದ ಹಿಂದೂ ನಾಯಕನಾಗುವುದಿಲ್ಲ: ಮೋಹನ್ ಭಾಗವತ್

ಪುಣೆ: ರಾಮಮಂದಿರ ಕಟ್ಟುವುದರಿಂದ ಹಿಂದೂ ನಾಯಕನಾಗುವುದಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್ ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದಾರೆ. ಭಾಗವತ್ ಅವರು ಯಾರದೇ ಹೆಸರೆತ್ತದೇ ಈ ಮಾತು ಆಡಿದ್ದಾರೆ. ಪುಣೆಯಲ್ಲಿ ಉಪನ್ಯಾಸ ಮಾಲಿಕೆಯೊಂದರಲ್ಲಿ ವಿಶ್ವಗುರು ಭಾರತ ಕುರಿತು ಭಾಷಣ ಮಾಡಿದ ಭಾಗವತ್, ರಾಮಮಂದಿರ ಹಿಂದೂಗಳ ನಂಬಿಕೆಯ ವಿಷಯವಾಗಿದೆ. ರಾಮ ಮಂದಿರ ನಿರ್ಮಾಣವಾಗಬೇಕು ಎಂದು ಹಿಂದೂಗಳು ನಂಬಿದರು. ಆದರೆ ಈಗ ನಿರ್ಮಾಣ ಮಾಡುವುದರಿಂದ ಯಾವುದೇ ವ್ಯಕ್ತಿಯು ಹಿಂದೂ ನಾಯಕನಾಗುವುದಿಲ್ಲ ಎಂದರು. …

Read More »