BigTv News
July 20, 2022
Uncategorized
ಹರ್ಯಾಣ: ಇಲ್ಲಿನ ಅಕ್ರಮ ಗಣಿಗಾರಿಕೆ ಮಾಫಿಯಾ ಡಿಎಸ್ಪಿ ಸುರೇಂದ್ರ ಸಿಂಗ್ ಅವರನ್ನು ಬಲಿ ಪಡೆದಿದೆ. ಪೊಲೀಸ್ ಅಧಿಕಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರ ದೇಹವು ತೆರೆದ ಕಸದ ತೊಟ್ಟಿಯಲ್ಲಿ ಪತ್ತೆಯಾಗಿದೆ. ಈ ಘಟನೆಯ ನಂತರ ಆಡಳಿತ ವಲಯದಲ್ಲಿ ಅಲ್ಲೋಲಕಲ್ಲೋಲ ಉಂಟಾಗಿದೆ. ಅದೇ ಸಮಯದಲ್ಲಿ, ಇಡೀ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸ್ ಪಡೆ ನಿಯೋಜಿಸಲಾಗಿದೆ. ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಬಗ್ಗ ಸುಳಿವು ಸಿಕ್ಕ ಬೆನ್ನಲ್ಲೇ ಡಿಎಸ್ಪಿ ಸುರೇಂದರ್ ಕುಮಾರ್ ಬಿಷ್ಣೋಯ್ ಅವರು ಅಕ್ರಮ …
Read More »
BigTv News
July 20, 2022
Uncategorized
ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಾದಾಮಿ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಣಕ್ಕಿಳಿದಿದ್ದ ವೇಳೆ ಅವರ ಎದುರಾಳಿಯಾಗಿ ಬಿಜೆಪಿಯಿಂದ ಬಿ. ಶ್ರೀರಾಮುಲು ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ಶ್ರೀರಾಮುಲು ಪರಾಭವಗೊಂಡಿದ್ದು, ಇದೀಗ ಬೀದರ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು 2023ರ ವಿಧಾನಸಭಾ ಚುನಾವಣೆಯಲ್ಲೂ ಪಕ್ಷ ಸೂಚಿಸಿದರೆ ತಾವು ಸಿದ್ದರಾಮಯ್ಯನವರ ಎದುರಾಳಿಯಾಗಿ ಕಣಕ್ಕಿಳಿಯಲು ಸಿದ್ದ ಎಂದು ತಿಳಿಸಿದ್ದಾರೆ.ಬಾದಾಮಿ ಕ್ಷೇತ್ರದ ಜನತೆ ಸಿದ್ದರಾಮಯ್ಯನವರನ್ನು ಗೆಲ್ಲಿಸಿ ಈಗ ಪಶ್ಚಾತಾಪ ಪಡುತ್ತಿದ್ದಾರೆ ಎಂದು ಹೇಳಿದ ಶ್ರೀರಾಮುಲು, …
Read More »
BigTv News
July 20, 2022
Uncategorized
ರಾಮನಗರ : ಚಾಮುಂಡೇಶ್ವರಿ, ಜನರ ಆಶೀರ್ವಾದದಿಂದ ರಾಜ್ಯದಲ್ಲಿ ಮತ್ತೆ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಿನಲ್ಲಿ ಬಹಳ ಜನ ಸಿಎಂ ಆಗುವ ಇಚ್ಛೆ ಹೊಂದಿದ್ದಾರೆ. ಆದರೆ ಭಗವಂತನ ಇಚ್ಛೆ ಬೇರೆ ಇದೆ. ತಾಯಿ ಚಾಮುಂಡೇಶ್ವರಿ, ಜನರ ಆಶೀರ್ವಾದಿಂದ ರಾಜ್ಯದಲ್ಲಿ ಮತ್ತೆ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ. ಇನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಮಾತನಾಡಿ, ಕಾಂಗ್ರೆಸ್ ನವರಿಗೆ ಸೋನಿಯಾ …
Read More »
BigTv News
July 20, 2022
Uncategorized
ಹುಬ್ಬಳ್ಳಿ: ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ನಡೆದಿದೆ. ಉಪ್ಪಿನ ಬೆಟಗೇರಿ ಗ್ರಾಮದ ಅಬ್ದುಲ್ ಖಾದರ್ ಮದ್ನಿ (80) ಮೃತ ವ್ಯಕ್ತಿ. ಗ್ರಾಮದ ಹಳ್ಳದಲ್ಲಿ ಅಬ್ದುಲ್ ಮೃತದೇಹ ಪತ್ತೆಯಾಗಿದೆ. ಮಾನಸಿಕ ಅಸ್ವಸ್ಥರಾಗಿದ್ದ ಅಬ್ದುಲ್, ಕಳೆದ ಭಾಬುವಾರ ನಾಪತ್ತೆಯಾಗಿದ್ದರು. ಇಂದು ಹಿರೇಹಳ್ಳದಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ …
Read More »
BigTv News
July 20, 2022
Uncategorized
ಬಾಗಲಕೋಟೆ: ಇಳಕಲ್ ಹೊರವಲಯದಲ್ಲಿ ಖಾಸಗಿ ವಿಆರ್ಎಲ್ ಬಸ್ ಲಾರಿಯೊಂದಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಗಾಣಿಗ ಗುರುಪೀಠದ ಬಸವಪ್ರಭು ಸ್ವಾಮೀಜಿ ಮತ್ತು ಬಸ್ ಚಾಲಕ ಸೇರಿದಂತೆ ಐವರಿಗೆ ಗಾಯಗಳಾಗಿವೆ. ಗಾಯಾಳುಗಳು ಅಪಾಯದಿಂದ ಪಾರಾಗಿದ್ದಾರೆ. ಬೆಳಿಗ್ಗೆ ಮೂರು ಗಂಟೆಗೆ ಘಟನೆ ನಡೆದಿದ್ದು ಚಿತ್ರದುರ್ದದ ಗಾಣಿಗ ಗುರುಪೀಠದ ಸ್ವಾಮೀಜಿ ಅವರನ್ನು ಬೆಂಗಳೂರು ಗ್ಲೋಬಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಳಿದಂತೆ ಚಾಲಕ ಸೇರಿ ನಾಲ್ವರನ್ನು ಇಳಕಲ್ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಇಳಕಲ್ ಗ್ರಾಮೀಣ …
Read More »
BigTv News
July 20, 2022
Uncategorized
ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ಪಶ್ಚಿಮ ಬಂಗಾಳದ ಪಂಜಿಪಾಡಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಡಿ ಭದ್ರತಾ ಪಡೆ (ಬಿಎಸ್ಎಫ್) ಯೋಧ, ಚಿಕ್ಕೋಡಿ ತಾಲ್ಲೂಕಿನ ಯಡೂರವಾಡಿಯ ಸೂರಜ್ ಧೋಂಡಿರಾಮ ಸುತಾರ (30) ಮೃತಪಟ್ಟಿದ್ದಾರೆ. ಈ ಯೋಧ ಪತ್ನಿ ಸಮೇತರಾಗಿ ಆಟೊದಲ್ಲಿ ಕೆಲಸದ ಸ್ಥಳಕ್ಕೆ ಹೋಗುತ್ತಿದ್ದರು. ಆಟೊದಿಂದ ಇಳಿಯುವ ವೇಳೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆಯಿತು. ಅದರ ಚಕ್ರಕ್ಕೆ ಸಿಲುಕಿ ಯೋಧ ಸ್ಥಳದಲ್ಲೇ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. 2012ರಲ್ಲಿ ಅವರು …
Read More »
BigTv News
July 20, 2022
Uncategorized
ಬೆಂಗಳೂರು: ಹಾವೇರಿ ಜಿಲ್ಲೆಯ ಗೊಟಗೋಡಿಯಲ್ಲಿರುವ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ (ಪ್ರಭಾರ) ಪ್ರೊ. ಸಿ.ಟಿ. ಗುರುಪ್ರಸಾದ್ ಅವರ ಪತ್ನಿ ಎಚ್.ಕೆ. ಚೈತ್ರಾ (41) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಜ್ಞಾನಭಾರತಿ ಠಾಣೆಯಲ್ಲಿ ಅಸಹಜ ಸಾವು (ಯುಡಿಆರ್) ಪ್ರಕರಣ ದಾಖಲಾಗಿದೆ. ಜ್ಞಾನಭಾರತಿ ಬಳಿಯ ಕದಂಬ ಬಡಾವಣೆ ನಿವಾಸಿ ಚೈತ್ರಾ ಅವರು ಸೋಮವಾರ ಬೆಳಿಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆ ಸಹೋದರ ಡಾ. ಶರತ್ ಬಾಬು ದೂರು ನೀಡಿದ್ದಾರೆ. ಯುಡಿಆರ್ …
Read More »
BigTv News
July 20, 2022
Uncategorized
ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಜಾಲಿಕೊಪ್ಪ ಗ್ರಾಮದ ಬಳಿ ರಾಜ್ಯ ಹೆದ್ದಾರಿಯಲ್ಲಿ ಬೈಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದಾರೆ.ಘಟನೆಯಲ್ಲಿ 11 ವರ್ಷದ ಬಾಲಕ ಸ್ಥಳದಲ್ಲೇ ಮೃತನಾದರೆ, ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯ ಅಸುನೀಗಿದ್ದಾರೆ. ಬೈಲಹೊಂಗಲ ತಾಲೂಕಿನ ಚಿವಟಗುಂಡಿ ಗ್ರಾಮದ ಸಂದೀಪ ಸಿದ್ದಪ್ಪ ಮಲ್ಲೂರ (11) ಸ್ಥಳದಲ್ಲೇ ಸಾವನ್ನಪ್ಪಿದ್ದು, ಶಿವಪ್ಪ ಬಸವಂತಗೌಡ ಮಲ್ಲೂರ (46) ಬೆಳಗಾವಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯ ಮೃತಪಟ್ಟಿದ್ದಾರೆ. ತೀವ್ರ ಗಾಯಗೊಂಡಿರುವ …
Read More »
BigTv News
July 20, 2022
Uncategorized
ರಾಜ್ಯದ ಬಹುತೇಕ ಭಾಗಗಳಲ್ಲಿ ಸೂರ್ಯನ ದರ್ಶನ ಆಗಲಿದೆ. ಕಳೆದ 15 ದಿನಗಳಿಂದ ಮೋಡ ಕವಿದ ವಾತಾವರಣದಿಂದ ಬೇಸತ್ತಿದ್ದ ಜನರು ಸೂರ್ಯನಿಗೆ ಮೈಯೊಡ್ಡುತ್ತಿದ್ದಾರೆ. ಮಲೆನಾಡಿನ ಕೆಲ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನ ಜನರಿಗೆ ಬಹಳ ದಿನಗಳ ನಂತರ ನೀಲಿ ಆಗಸ ಕಾಣುವ ಅವಕಾಶ ಸಿಗಲಿದೆ. ಸಂಜೆ ವೇಳೆಗೆ ಮಳೆಯ ಸಿಂಚನ ಉಂಟಾಗುವ ಸಾಧ್ಯತೆಗಳಿವೆ. ಇಂದು ಗರಿಷ್ಠ 28 ಮತ್ತು ಕನಿಷ್ಠ 19 ಡಿಗ್ರಿ …
Read More »
BigTv News
July 20, 2022
Uncategorized
ಬೆಂಗಳೂರು: ರಾಷ್ಟ್ರಪತಿ ಸ್ಥಾನಕ್ಕೆ ಜು.18ರಂದು ನಡೆದ ಚುನಾವಣೆಯಲ್ಲಿ ಚುನಾವಣೆಯಲ್ಲಿ ಬಿಜೆಪಿಯವರು ಎಲ್ಲ ಶಾಸಕರನ್ನು ಬೆಂಗಳೂರಿನ ಹೊಟೇಲ್ಗೆ ಕರೆಸಿ ಆಹಾರ, ಪಾನೀಯ, ಮನರಂಜನೆ ನೀಡಿದ್ದಾರೆ. ಇದು ಚುನಾವಣಾ ಆಮಿಷವಾಗಿದ್ದು, ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಹಾಗೂ ರಾಜ್ಯದ ಮುಖ್ಯಮಂತ್ರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮುಕ್ತ ಹಾಗೂ ಪಾರದರ್ಶಕ ಚುನಾವಣೆ ನಡೆಯಬೇಕು. ಯಾವುದೇ ಆಮಿಷ, ಒತ್ತಡ ಹಾಕಬಾರದು. …
Read More »