Breaking News

Uncategorized

ಹಿರಿಯ ಕಲಾವಿದರಿಗೆ ತಿಂಗಳಿಗೆ 6 ಸಾವಿರ ರೂ. ಆರ್ಥಿಕ ಸಹಾಯ ಯೋಜನೆ ಪ್ರಾರಂಭ: ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್

ನವದೆಹಲಿ: ಸಂಸ್ಕೃತಿ ಸಚಿವಾಲಯವು 60 ವರ್ಷ ಮೇಲ್ಪಟ್ಟ ಹಿರಿಯ ಕಲಾವಿದರು ಮತ್ತು ವಿದ್ವಾಂಸರಿಗೆ ಆರ್ಥಿಕ ಸಹಾಯ ಯೋಜನೆ ಪ್ರಾರಂಭಿಸಿದೆ. ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್, 60 ವರ್ಷ ಮೇಲ್ಪಟ್ಟ ಹಿರಿಯ ಕಲಾವಿದರು ಮತ್ತು ವಿದ್ವಾಂಸರಿಗೆ ಸಂಸ್ಕೃತಿ ಸಚಿವಾಲಯವು ಆರ್ಥಿಕ ನೆರವು ಯೋಜನೆಯನ್ನು ಪ್ರಾರಂಭಿಸಿದೆ. 60 ವರ್ಷ ವಯಸ್ಸಿನ ಹಿರಿಯ ಕಲಾವಿದರು ಮತ್ತು ವಿದ್ವಾಂಸರಿಗೆ ತಿಂಗಳಿಗೆ ಗರಿಷ್ಠ ಆರು …

Read More »

ರಾಜ್ಯದಲ್ಲಿ ಶಿಕ್ಷಕರ ಹುದ್ದೆಗಳ ಕೊರತೆಯನ್ನು ಸರಿಪಡಿಸಲು ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಕರ್ನಾಟಕದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶಿಕ್ಷಕರ ಹುದ್ದೆಗಳ ಕೊರತೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಒಟ್ಟು 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಇದರ ಪೈಕಿ, 48,922 ಹುದ್ದೆಗಳು ಪ್ರಾಥಮಿಕ ಶಿಕ್ಷಣದ ಹಂತದಲ್ಲಿ ಮತ್ತು 10,850 ಹುದ್ದೆಗಳು ಪ್ರೌಢಶಾಲಾ ಹಂತದಲ್ಲಿ ಖಾಲಿ ಇವೆ. ಈ ಸಮಸ್ಯೆ ರಾಜ್ಯದ ಶಿಕ್ಷಣ ವ್ಯವಸ್ಥೆಗೆ ಸವಾಲಾಗಿ ಪರಿಣಮಿಸಿದ್ದು, ವಿದ್ಯಾರ್ಥಿಗಳ ಪಾಠಕ್ರಮ, ಕಲಿಕೆ ಗುಣಮಟ್ಟ ಮತ್ತು …

Read More »

ರಾಜ್ಯಾದ್ಯಂತ ಸರ್ಕಾರಿ ನೇಮಕಾತಿಯಲ್ಲಿ 2,035 ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಡಿ.ಸುಧಾಕರ್

ಬೆಂಗಳೂರು: 371(ಜೆ ) ಕಾಯ್ದೆಯನ್ವಯ ರಾಜ್ಯದಾದ್ಯಂತ ಸರ್ಕಾರಿ ನೇಮಕಾತಿಯಲ್ಲಿ ರಾಜ್ಯಮಟ್ಟದ ಸ್ಥಳೀಯ ವೃಂದದ ನೇರ ನೇಮಕಾತಿಯಲ್ಲಿ 9695 ಹುದ್ದೆಗಳನ್ನು ಗುರುತಿಸಲಾಗಿದ್ದು, ಈ ಪೈಕಿ 5977 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಎಂದು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ತಿಳಿಸಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಅವರು, 371(ಜೆ ) ಅಡಿ ವಿವಿಧ ನೇಮಕಾತಿ ಸಂಸ್ಥೆಗಳಲ್ಲಿ 1,658 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದ್ದು, ಇನ್ನು 2,035 ಹುದ್ದೆಗಳ ಭರ್ತಿ ಮಾಡಲು …

Read More »

ಉತ್ತರ ಕರ್ನಾಟಕದ ಜನ ಕರ್ನಾಟಕವನ್ನು ಕಟ್ಟುವುದರಲ್ಲಿ ವಿಶೇಷ ಪಾತ್ರವನ್ನು ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಉತ್ತರ ಕರ್ನಾಟಕದ ಜನರ ಬಗ್ಗೆ ನಮ್ಮ ಬದ್ಧತೆಯನ್ನು ಪ್ರಶ್ನಿಸುವಂತಿಲ್ಲ. ಈ ಭಾಗದ ಜನರ ಬಗ್ಗೆ ನನಗೆ ವಿಶೇಷ ಪ್ರೀತಿ ಮತ್ತು ಕಾಳಜಿಯಿದೆ. ಉತ್ತರ ಕರ್ನಾಟಕದ ಜನ ಕರ್ನಾಟಕವನ್ನು ಕಟ್ಟುವುದರಲ್ಲಿ ವಿಶೇಷವಾದ ಪಾತ್ರವನ್ನು ವಹಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸುವರ್ಣ ವಿಧಾನಸೌಧದ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ನಡೆದ ಚರ್ಚೆಗೆ ಸರಕಾರ ಪರವಾಗಿ ಅವರು ಉತ್ತರ ನೀಡಿದರು. ಕಲಬುರಗಿ ಮತ್ತು ಬೆಳಗಾವಿ ವಿಭಾಗಗಳಲ್ಲಿ …

Read More »

ರಾಜ್ಯದಲ್ಲಿ ಮಾಜಿ ಸೈನಿಕರಿಗೆ ಭೂ ಮಂಜೂರಾತಿಗೆ ನಿವೇಶನ ನೀಡಲು ಕ್ರಮ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ : ರಾಜ್ಯದಲ್ಲಿರುವ ಮಾಜಿ ಸೈನಿಕರಿಗೆ ವ್ಯವಸಾಯದ ಉದ್ದೇಶಕ್ಕಾಗಿ ಭೂ ಮಂಜೂರಾತಿ ಮಾಡಲು ರಾಜ್ಯದಲ್ಲಿ ಸರ್ಕಾರಿ ಭೂಮಿಯ ತೀವ್ರ ಕೊರತೆಯಿರುವುದರಿಂದ, ಅವರಿಗೆ ನಿವೇಶನ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ವಿಧಾನ ಪರಿಷತ್ತಿನಲ್ಲಿ ಸದಸ್ಯ ಸಿ. ಎನ್. ಮಂಜೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ದೇಶಕ್ಕಾಗಿ ಸೇವೆ ಸಲ್ಲಿಸಿರುವ ಮಾಜಿ ಸೈನಿಕರ ಕುರಿತಂತೆ ಗೌರವ ಮತ್ತು ಅಭಿಮಾನವಿದೆ. ಜವಾನ್ ಸಮ್ಮಾನ್ ಹೆಸರಿನಲ್ಲಿ ಮಾಜಿ …

Read More »

ಮುಂದುವರೆದ ಸಮುದಾಯವನ್ನು 2ಎ ಮೀಸಲಾತಿಗೆ ಸೇರಿಸಬೇಡಿ: ರಾಜ್ಯ ಹಿಂದುಳಿದ ಒಕ್ಕೂಟದಿಂದ ಪ್ರತಿಭಟನೆ

ಬೆಳಗಾವಿ: ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯವಾಗಿ ಮುಂದುವರಿದ ಯಾವುದೇ ಸಮುದಾಯವನ್ನು ಪ್ರವರ್ಗ ‘2ಎ’ ಮೀಸಲಾತಿ ಪಟ್ಟಿಯಲ್ಲಿ ಸೇರಿಸಬಾರದು ಎಂದು ಆಗ್ರಹಿಸಿ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದವರು ಇಲ್ಲಿನ ಸುವರ್ಣ ವಿಧಾನಸೌಧ ಬಳಿ ಇರುವ ವೇದಿಕೆಯಲ್ಲಿ ಬುಧವಾರ ಬೃಹತ್‌ ಪ್ರತಿಭಟನೆ ನಡೆಸಿದರು. ಸದ್ಯ ಪ್ರವರ್ಗ ‘3ಬಿ’ ಅಡಿ ಮೀಸಲಾತಿ ಪಡೆಯುತ್ತಿರುವ ಲಿಂಗಾಯತ ಪಂಚಮಸಾಲಿ ಸಮುದಾಯದವರು ತಮ್ಮನ್ನು ‘2ಎ’ಗೆ ಸೇರ್ಪಡೆಗೊಳಿಸುವಂತೆ ಒತ್ತಾಯಿಸಿ ಹೋರಾಟ ಮಾಡುತ್ತಿದ್ದಾರೆ. ಶೈಕ್ಷಣಿಕ, ಸಾಮಾಜಿಕ ಆರ್ಥಿಕ ಮತ್ತು …

Read More »

ವಿಜಯ್ ಮಲ್ಯ ಆಸ್ತಿ ಮಾರಾಟದಿಂದ ಬ್ಯಾಂಕ್ ಗಳಿಗೆ 14 ಸಾವಿರ ಕೋಟಿ ಮರಳಿಸಿದ ಜಾರಿ ನಿರ್ದೇಶನಾಲಯ

ನವದೆಹಲಿ: ಬಹುಕೋಟಿ ಬ್ಯಾಂಕ್ ವಂಚನೆ ಹಗರಣಗಳಲ್ಲಿ ಷಾಮೀಲಾದ ಆರೋಪ ಎದುರಿಸುತ್ತಿರುವ ಉದ್ಯಮಿ ವಿಜಯ್ ಮಲ್ಯ ಅವರ ಆಸ್ತಿಗಳ ಮಾರಾಟದಿಂದ ಬಂದ 14 ಸಾವಿರ ಕೋಟಿ ರೂಪಾಯಿಗಳನ್ನು ಕಾನೂನು ಜಾರಿ ನಿರ್ದೇಶನಾಲಯ ಬ್ಯಾಂಕ್‌ಗಳಿಗೆ ಮರಳಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಲೋಕಸಭೆಯಲ್ಲಿ ಬಹಿರಂಗಪಡಿಸಿದರು. ವಜ್ರದ ವ್ಯಾಪಾರಿ ನೀರವ್ ಮೋದಿಯವರಿಂದ 1053 ಕೋಟಿ ಸೇರಿದಂತೆ ವಿವಿಧ ಹಗರಣಗಳಲ್ಲಿ ಷಾಮೀಲಾದವರಿಂದ ಒಟ್ಟು 22280 ಕೋಟಿ ರೂಪಾಯಿಗಳನ್ನು ಸಂತ್ರಸ್ತರಿಗೆ ವಾಪಾಸು ನೀಡಲಾಗಿದೆ ಎಂದು …

Read More »

ಡಿ. ೧೯ರಂದು ಸುವರ್ಣಸೌಧ ಎದುರು ಪ್ರತಿಭಟನೆ

ಧಾರವಾಡ:ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿಯ ತನಿಖೆ ನಡೆಸುವಂತೆ ಆಗ್ರಹಿಸಿ ಡಿ. ೧೯ರಂದು ಬೆಳಗ್ಗೆ ೧೦: ೩೦ಕ್ಕೆ ಬೆಳಗಾವಿಯ ಸುವರ್ಣಸೌಧ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಸಂಶೋಧಕರ ಒಕ್ಕೂಟದ ಅಧ್ಯಕ್ಷ ಡಾ. ಶಿವಸೋಮಣ್ಣ ನಿಟ್ಟೂರ ಹೇಳಿದರು. ನಗರದ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ ನಡೆದಿರುವ ಕುರಿತು ಸಚಿವರಿಗೆ ಹಲವು ಬಾರಿ ಮನವಿ ನೀಡಿದರೂ ಸರಕಾರ ತನಿಖೆ ನಡೆಸಲು ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.

Read More »

ಶ್ರೀ ವಲ್ಲಭೇಶ್ವರ ಕಾರ್ತಿಕೋತ್ಸವದಲ್ಲಿ ಡಾ. ರಮೇಶ್ ಮಹಾದೇವಪ್ಪನವರು ಭಾಗಿ

ಹುಬ್ಬಳ್ಳಿ : ತಾಲೂಕಿನ ಮಂಟೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶ್ರೀ ವಲ್ಲಭೇಶ್ವರ ಕಾರ್ತಿಕೋತ್ಸವ ಹಾಗೂ ಸಹಸ್ರ ದೀಪೋತ್ಸವದ ಕಾರ್ಯಕ್ರಮದಲ್ಲಿ ಸರ್ವಧರ್ಮ ಸಮಾಜ ಸೇವಕ ಡಾ. ರಮೇಶ್ ಮಹಾದೇವಪ್ಪನವರು ಪಾಲ್ಗೊಂಡು ಕಾರ್ಯಕ್ರಮಕ್ಕೆ ಮೆರಗು ತಂದರು. ನಂತರ ದೇವರ ದರ್ಶನ ಪಡೆದು ಪುನೀತರಾದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಡಾ. ರಮೇಶ್ ಮಹಾದೇವಪ್ಪನವರ ಅವರಿಗೆ ವಿಶೇಷ ಸನ್ಮಾನ ಮಾಡಿ ಗೌರವಿಸಿದರು. ಈ ಕಾರ್ಯಕ್ರಮದಲ್ಲಿ ಪೂಜ್ಯ ಸ್ವಾಮೀಜಿ ಹಾಗೂ ಗುರು ಹಿರಿಯರು ಭಾಗಿಯಾಗಿದ್ದರು.

Read More »

ರೈತರಿಗೆ ಸಹಾಯ ಮಾಡಲು 1,000 ಕೋಟಿ ರೂ.ಗಳ ಕ್ರೆಡಿಟ್ ಗ್ಯಾರಂಟಿ ಯೋಜನೆಗೆ ಚಾಲನೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ಸಂಕಷ್ಟದ ಮಾರಾಟದಲ್ಲಿ ತೊಡಗಿರುವ ಸಣ್ಣ ರೈತರಿಗೆ ಸಹಾಯ ಮಾಡಲು ಕೇಂದ್ರವು ಸೋಮವಾರ ಕ್ರೆಡಿಟ್ ಗ್ಯಾರಂಟಿ ಯೋಜನೆಯನ್ನು (ಸಿಜಿಎಸ್) ಅನಾವರಣಗೊಳಿಸಿದೆ. ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಪ್ರಾರಂಭಿಸಿದ ಈ ಯೋಜನೆಯು ರೈತರಿಗೆ – ವಿಶೇಷವಾಗಿ ಸಣ್ಣ ಮತ್ತು ಅತಿಸಣ್ಣ – ಎಲೆಕ್ಟ್ರಾನಿಕ್ ವೇರ್ಹೌಸ್ ರಸೀದಿಗಳನ್ನು ಬಳಸಿಕೊಂಡು ಸುಗ್ಗಿಯ ನಂತರದ ಸಾಲಗಳನ್ನು ಪಡೆಯಲು ಸಹಾಯ ಮಾಡಲು 1000 ಕೋಟಿ ರೂ.ಗಳ ಕಾರ್ಪಸ್ ಅನ್ನು ಒದಗಿಸುತ್ತದೆ. …

Read More »