Breaking News

Uncategorized

ವೆಟ್ ವೆಲ್ ನಿರ್ವಹಣೆ ಕೊರತೆ: ಸಮಸ್ಯೆಯಿಂದ ಜನರು ತತ್ತರ

ಹುಬ್ಬಳ್ಳಿ: ಜಲಮಂಡಳಿ ಹಾಗೂ ಖಾಸಗೀಕರಣದ ಹಗ್ಗ ಜಗ್ಗಾಟಕ್ಕೆ ಬ್ರೇಕ್ ಬಿದ್ದಿದೆ. ಆದರೆ ಜನರ ಸಮಸ್ಯೆಗಳಿಗೆ ಮಾತ್ರ ಯಾವುದೇ ರೀತಿಯಲ್ಲಿ ಬ್ರೇಕ್ ಬಿದ್ದಿಲ್ಲ. ಸರಿಯಾದ ನಿರ್ವಹಣೆ ಕೊರತೆಯಿಂದ ಜನರು ಸಮಸ್ಯೆಗಳ ಸುಳಿಯಲ್ಲಿ ಸಿಲುಕಿಕೊಂಡು ಜೀವನ ನಡೆಸುವಂತಾಗಿದೆ. ಧಾರವಾಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಯಿಂದ ಸಮಸ್ಯೆ ಎದುರಾಗಿರುವುದು ಒಂದು ಕಡೆಯಾದರೇ ವೆಟ್ ವೆಲ್ ನಿರ್ವಹಣೆ ಕೊರತೆಯಿಂದ ಜನರು ಸಮಸ್ಯೆ ಸಿಲುಕಿಕೊಂಡಿದ್ದು, ಮಳೆಗಿಂತ ವೆಟ್ ವೆಲ್ ಸೋರಿಕೆ ಸಮಸ್ಯೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಹುಬ್ಬಳ್ಳಿಯ ಲೋಹಿಯಾನಗರದ …

Read More »

ಬೈಕ್ ಕಳ್ಳತನ: ಸಿಸಿ ಕ್ಯಾಮರದಲ್ಲಿ ಕಳ್ಳರ ಕೈಚಳಕ ಸೆರೆ….

ಹುಬ್ಬಳ್ಳಿ: ಮನೆಯ ಮುಂದೆ ನಿಲ್ಲಿಸಿದ ಬೈಕ್ ನ್ನು ಕಳ್ಳರು ಕಳತನ ಮಾಡಿ ಪರಾರಿಯಾಗಿರುವ ಘಟನೆ ಇಲ್ಲಿನ ಗೋಕುಲರಸ್ತೆಯ ಪ್ರಿಯದರ್ಶಿನಿ ಕಾಲೋನಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. , ಬಸವರಾಜ ಸಂಕಣ್ಣವರ ಎಂಬಾತರಿಗೆ ಸೇರಿದ್ದ ಬೈಕ್ ಇದ್ದಾಗಿದ್ದು, ಜುಲೈ 11 ರ ಮಧ್ಯರಾತ್ರಿ ಮನೆಯ ಮುಂದೆ ನಿಲ್ಲಿಸಲಾಗಿದ್ದ ಬಜಾಜ್ ಕಂಪನಿಯ ಪಲ್ಸರ್ 200 ಮೋಟರ್ ಸೈಕಲ್ ನ್ನು ಕಳತನ ಮಾಡಲಾಗಿದೆ. ಈ ಕುರಿತು ಗೋಕುಲರಸ್ತೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌ ಇನ್ನು …

Read More »

ಅಪರಿಚಿತ ವಾಹನ ಡಿಕ್ಕಿ : ವ್ಯಕ್ತಿ ಸಾವು

ತುಮಕೂರು: ರಾಷ್ಟ್ರೀಯ ಹೆದ್ದಾರಿ-48ರ ಶಿರಾ ತಾಲ್ಲೂಕಿನ ಚಿಕ್ಕನಹಳ್ಳಿ ಸಮೀಪ ಅಪರಿಚಿತ ವಾಹನ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಅನ್ವರ್ ಖಾನ್ (55) ಮೃತಪಟ್ಟಿದ್ದಾರೆ. ಶಿರಾ ನಗರದ ಅನ್ವರ್ ಖಾನ್ ರಸ್ತೆ ದಾಟುತ್ತಿದ್ದ ಸಮಯದಲ್ಲಿ ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದ್ದು ಅನ್ನರ್ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.ಕಳ್ಳಂಬೆಳ್ಳ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Read More »

ಸಿದ್ದರಾಮೋತ್ಸವ ಕಾಂಗ್ರೆಸ್‌ ಗೆಲುವಿಗೆ ಅನುಕೂಲ : ಶಿವಕುಮಾರ್‌

ಬೆಂಗಳೂರು : ಸಿದ್ದರಾಮಯ್ಯ ಅವರ 75ನೇ ಜನ್ಮದಿನ ಅಮೃತ ಮಹೋತ್ಸವವು ಕಾಂಗ್ರೆಸ್‌ ಗೆಲುವಿಗೆ ಅನುಕೂಲವಾಗುವಂತಹ ಕಾರ್ಯಕ್ರಮವಾಗಬೇಕು. ನಮ್ಮೆಲ್ಲರ ಗುರಿ 2023ಕ್ಕೆ ಕಾಂಗ್ರೆಸ್‌ ಪಕ್ಷವನ್ನು ವಿಧಾನಸೌಧದಲ್ಲಿ ಅಧಿಕಾರಕ್ಕೆ ತರುವುದಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅಭಿಪ್ರಾಯಪಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಸಿದ್ದರಾಮೋತ್ಸವ ಎಂದು ಮಾಡುತ್ತಿರುವುದು ಮಾಧ್ಯಮಗಳ ಸೃಷ್ಟಿ. ಸಮಿತಿಯು ಎಲ್ಲೂ ಸಿದ್ದರಾಮೋತ್ಸವ ಎಂದು ಹೇಳಿಲ್ಲ. ಕಾರ್ಯಕ್ರಮವನ್ನು ಪಕ್ಷದ ನಾಯಕರೇ ಮಾಡುತ್ತಿದ್ದು, ಖುದ್ದು ರಾಹುಲ್‌ಗಾಂಧಿ ಅವರೂ …

Read More »

ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ : 2 ಸಾವು

ಕೊಪ್ಪಳ: ತಾಲ್ಲೂಕಿನ ಹಿರೇಸುಳಿಕೇರಿ ಗ್ರಾಮದ ಹತ್ತಿರ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ ಯಲಬುರ್ಗಾ ತಾಲ್ಲೂಕಿನ ಹುಲ್ಲೇಗುಡ್ಡ ಶರಣಬಸವ ಮತ್ತು ಹನುಮಂತಪ್ಪ ಕಂಬಳಿ ಮೃತರು. ಕಾರು ಚಲಾಯಿಸುತ್ತಿದ್ದ ಶರಣಬಸವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಹನುಮಂತಪ್ಪ ಅವರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಕೊಪ್ಪಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಮಾಜಿ ಕಾರ್ಪೋರೆಟರ್ ಪತಿ ಅಯೂಬ್ ಖಾನ್ ಸಾವು

ಬೆಂಗಳೂರು: ಮಾಜಿ ಕಾರ್ಪೋರೆಟರ್ ಪತಿ ಅಯೂಬ್ ಖಾನ್ ಅವರು ಚಾಕು ಇರಿತಕ್ಕೆ ಒಳಗಾಗಿದ್ದರು. ಆದರೆ ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಆಯೂಬ್ ಖಾನ್ ಟಿಪ್ಪು ನಗರದ ನಿವಾಸಿಯಾಗಿದ್ದರು. ನಿನ್ನೆ ಅವರಿಗೆ ಚಾಕು ಇರಿಯಲಾಗಿತ್ತು. ಮನೆಯ ಕೂಗಳತೆ ದೂರದಲ್ಲೇ ಸಂಬಂಧಿಕರು ಈ ಕೃತ್ಯ ನಡೆಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಚಾಕು ಇರಿತದಿಂದ ಹೊಟ್ಟೆಯ ಭಾಗಕ್ಕೆ ಗಂಭೀರವಾದ ಗಾಯವಾಗಿದ್ದರಿಂದ ಕೂಡಲೇ ಅವರನ್ನ ಬೆನ್ನೇರುಘಟ್ಟದಲ್ಲಿರುವ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ …

Read More »

ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಹೊಳೆಗೆ ಬಿದ್ದ ಲಾರಿ

ಪುತ್ತೂರು: ಕೆಮಿಕಲ್ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಹೊಳೆಗೆ ಬಿದ್ದ ಘಟನೆ ನಿನ್ನೆ ನೆಲ್ಯಾಡಿಯ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ನಡೆದಿದೆ. ಘಟನೆಯಿಂದಾಗಿ ಲಾರಿ ಚಾಲಕ ಹಾಗೂ ಸಹಾಯಕ ಸಣ್ಣಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ನೆಲ್ಯಾಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ 500 ಕೋಟಿ ರೂ. ಬಿಡುಗಡೆ : ಸಿಎಂ

ಉಡುಪಿ : ರಾಜ್ಯಾದ್ಯಂತ ಭಾರೀ ಮಳೆಯಿಂದಾಗಿ ನೆರೆ ಪರಿಸ್ಥಿತಿ ಉಂಟಾಗಿದ್ದು, ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಆಗಿರುವ ತಾತ್ಕಾಲಿಕ ಪರಿಹಾರವಾಗಿ ತಕ್ಷಣ 500 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಉಡುಪಿಯಲ್ಲಿ ಕರಾವಳಿ ಜಿಲ್ಲೆಗಳ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಮಳೆಹಾನಿ ಪರಿಶೀಲನಾ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಈ ತಿಂಗಳಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಮಳೆಯಾಗಿದೆ. ಪರಿಣಾಮ ಸಾಕಷ್ಟು ಮೂಲ ಸೌಕರ್ಯಗಳಿಗೆ ಹಾನಿಯಾಗಿದ್ದು, ಇದನ್ನು ಸರಿಪಡಿಸಲು …

Read More »

ಸೋನಿಯಾ ಗಾಂಧಿಗೆ ಇಡಿ ನೋಟಿಸ್ : ಜು. 21ರಂದು ಪ್ರತಿಭಟನೆ

ಲಂಡನ್‌ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ಹಾಜರಾಗುವ ದಿನವಾದ ಜುಲೈ 21ರಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸಲು  ನಡೆದ ಸಭೆಯಲ್ಲಿ ಕಾಂಗ್ರೆಸ್ ಮುಖಂಡರು ನಿರ್ಧರಿಸಿದ್ದಾರೆ. ಗುರುವಾರ ಪಕ್ಷದಿಂದ ಮತ್ತೊಂದು ಮಹತ್ವದ ಸಭೆಯನ್ನು ಕರೆಯಲಾಗಿದ್ದು, ಅಲ್ಲಿ ಎಲ್ಲಾ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಉಸ್ತುವಾರಿಗಳು ಮತ್ತು ಪಿಸಿಸಿ ಮುಖ್ಯಸ್ಥರು ‘ಭಾರತ್ ಜೋಡೋ ಯಾತ್ರೆ’ …

Read More »

ಡಿಕೆಶಿ ದೆಹಲಿಯತ್ತ ಪಯಣ

ಬೆಂಗಳೂರು : ಎಐಸಿಸಿಯು ದೆಹಲಿಯಲ್ಲಿ ಗುರುವಾರ ಆಯೋಜಿಸಿರುವ ಭಾರತ್‌ ಜೋಡೋ ಯಾತ್ರೆಯ ಪೂರ್ವಸಿದ್ಧತಾ ಸಭೆಯಲ್ಲಿ ಪಾಲ್ಗೊಳ್ಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಮಾಜಿ ಸಚಿವ ಕೆ.ಜೆ. ಜಾರ್ಜ್ ಬುಧವಾರ ದೆಹಲಿಗೆ ತೆರಳಿದರು. ಭಾರತ್‌ ಜೋಡೋ ಯಾತ್ರೆಯ ಕುರಿತು ಚರ್ಚಿಸಲು ಎಲ್ಲಾ ರಾಜ್ಯಗಳ ಪ್ರದೇಶ ಕಾಂಗ್ರೆಸ್‌ ಸಮಿತಿ ರಾಜ್ಯಾಧ್ಯಕ್ಷರೊಂದಿಗೆ ಹೈಕಮಾಂಡ್‌ ಗುರುವಾರ ಸಭೆ ಆಯೋಜಿಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಯಾವ ದಿನಾಂಕದಂದು ಭಾರತ್‌ ಜೋಡೋ ಯಾತ್ರೆ ನಡೆಯಲಿದೆ ಹಾಗೂ …

Read More »