Breaking News

Uncategorized

ಇಂದು ರಾಜ್ಯದ ವಿವಿಧ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ  ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಇಂದು ರಾಜ್ಯದ ವಿವಿಧ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.

Read More »

ದೇಶ 15 ಜಿಲ್ಲೆಗಳಿಗೆ ಐಎಂಡಿ ರೆಡ್‌ ಅಲರ್ಟ್‌ ಘೋಷಣೆ

ಹೊಸದಿಲ್ಲಿ: ಕರ್ನಾಟಕ, ಮಹಾರಾಷ್ಟ್ರ, ರಾಜಸ್ಥಾನ, ಪಂಜಾಬ್‌ ಹಾಗೂ ಹರಿಯಾಣದಲ್ಲಿ ಭಾರೀ ಮಳೆ ಯಾಗಿದ್ದು, ಹಲವು ಸ್ಥಳಗಳಲ್ಲಿನ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಆ ಪ್ರಾಂತದಲ್ಲೆಲ್ಲ ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಇದರ ನಡುವೆಯೇ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ದೇಶ 15 ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್‌ ಅಲರ್ಟ್‌ ಘೋಷಿಸಿದೆ. ಮಹಾರಾಷ್ಟ್ರದ ಗಾಡಿcರೋಲಿಯಲ್ಲಿ ಹರಿ ಯುತ್ತಿರುವ ಕುಂಡಲಿಕಾ, ಅಂಬಾ, ಸಾವಿತ್ರಿ, ಪಾತಾಳಗಂಗಾ, ಉಲ್ಹಾಸ್‌ ಹಾಗೂ ಗಾರ್ಗಿ …

Read More »

ಕರಾವಳಿ ಮತ್ತು ಮಲೆನಾಡಿನಲ್ಲಿ ಭರ್ಜರಿ ಮಳೆ

ಬೆಂಗಳೂರು: ಕಳೆದೊಂದು ವಾರದಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಭರ್ಜರಿಯಾಗಿ ಸುರಿಯುತ್ತಿರುವ ಮಳೆ ಸೋಮವಾರ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಆವರಿಸಿಕೊಳ್ಳಲಿದೆ. ಬೀದರ್‌, ಕಲಬುರಗಿ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದ್ದು (11 ರಿಂದ 20 ಸೆಂ.ಮೀ) ‘ಆರೆಂಜ್‌ ಅಲರ್ಟ್‌’ ನೀಡಲಾಗಿದೆ. ಬುಧವಾರದವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ‘ಅತಿ ಭಾರಿ ಮಳೆ’ಯಾಗಲಿರುವುದರಿಂದ (20 ಸೆಂ.ಮೀಗೂ ಹೆಚ್ಚು) ‘ರೆಡ್‌ ಅಲರ್ಟ್‌’ ಮುಂದುವರೆಸಲಾಗಿದೆ. ಕೊಡಗು, …

Read More »

ಶಿವಸೇನಾದ 53 ಶಾಸಕರಿಗೆ ಶೋಕಾಸ್‌ ನೋಟಿಸ್‌ ಜಾರಿ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ಕಾರ್ಯದರ್ಶಿಯು ಶಿವಸೇನಾದ 53 ಶಾಸಕರಿಗೆ ಶೋಕಾಸ್‌ ನೋಟಿಸ್‌ ಜಾರಿ ಮಾಡಿದ್ದಾರೆ. ಇವರಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ 39 ಶಾಸಕರು, ಉದ್ಧವ್‌ ಠಾಕ್ರೆ ಬಣದ 14 ಶಾಸಕರು ಸೇರಿದ್ದಾರೆ. ಉದ್ಧವ್‌ ಠಾಕ್ರೆ ಬಣದಲ್ಲಿದ್ದ ಶಾಸಕ ಸಂತೋಷ್‌ ಬಂಗಾರ್, ಕೊನೆಕ್ಷಣದಲ್ಲಿ ಶಿಂಧೆ ಬಣವನ್ನು ಸೇರಿಕೊಂಡಿದ್ದರು.ನೋಟಿಸ್‌ ಜಾರಿಯಾಗಿರುವುದನ್ನು ಉಭಯ ಬಣಗಳು ದೃಢಪಡಿಸಿವೆ. ಮಹಾರಾಷ್ಟ್ರ ವಿಧಾನಸಭೆ (ಪಕ್ಷಾಂತರಕ್ಕಾಗಿ ಅನರ್ಹತೆ) ನಿಯಮಗಳ ಅನುಸಾರ ನೋಟಿಸ್‌ ಜಾರಿಗೊಳಿಸಲಾಗಿದೆ. ವಿಶ್ವಾಸಮತ ಕೋರುವ ಸಂದರ್ಭದಲ್ಲಿ ಪಕ್ಷದ …

Read More »

ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ದ್ರೌಪದಿ ಮುರ್ಮು

ಬೆಂಗಳೂರು: ಎನ್‌ಡಿಎ ಬೆಂಬಲಿತ ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ದ್ರೌಪದಿ ಮುರ್ಮು ಜು.10ರಂದು ಬೆಂಗಳೂರಿಗೆ ಭೇಟಿ ನೀಡಿದ್ದು, ರಾಷ್ಟ್ರಪತಿ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಜೆಡಿಎಸ್ ಬೆಂಬಲ ಕೋರಿದರು. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ನಿವಾಸಕ್ಕೆ  ಬಂದಿದ್ದ ದ್ರೌಪದಿ ಮುರ್ಮು ಅವರು ಕೆಲ ಕಾಲ ಮಾತುಕತೆ ನಡೆಸಿ ಬೆಂಬಲ ಕೋರಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಹ ಇದ್ದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಕಿಶನ್ ರೆಡ್ಡಿ, ಮುಖ್ಯಮಂತ್ರಿ ಬಸವರಾಜ …

Read More »

ಓವರ್ ಟೇಕ್ : ಜಮೀನಿಗೆ ನುಗ್ಗಿದ ಬಸ್

ಮಂಡ್ಯ : ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಕೆಎಸ್ ಆರ್ ಟಿ ಸಿ ಬಸ್ ಜಮೀನಿಗೆ ನುಗ್ಗಿರುವ ಘಟನೆ ಜಿಲ್ಲೆಯ ದುದ್ದ ಗ್ರಾಮದ ಬಳಿ ನಡೆದಿದೆ. ಮೇಲುಕೋಟೆಯಿಂದ ಮಂಡ್ಯಕ್ಕೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಟ್ರಾಕ್ಟರ್ ಅನ್ನು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಏಕಾಏಕಿ ಅಡ್ಡಬಂದ ಟ್ರ್ಯಾಕ್ಟರ್ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಜಮೀನಿಗೆ ನುಗ್ಗಿದೆ.ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು …

Read More »

ತನ್ನ ಪ್ರೀತಿಯನ್ನು ವ್ಯಕ್ತಪಡಿಸಿದ ಜೇಮ್ಸ್‌ ಚಿತ್ರ ನಟಿ

ಬೆಂಗಳೂರು; ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ನಟನೆಯ ಕೊನೆಯ ಚಿತ್ರ ಜೇಮ್ಸ್‌ ಚಿತ್ರದಲ್ಲಿ ನಟಿಸಿದ್ದ ಬಹುಭಾಷಾ ನಟಿ ಪ್ರಿಯಾ ಆನಂದ್‌ ನೀಡಿರುವ ಹೇಳಿಕೆ ಸೋಷಿಯಲ್‌ ಮೀಡಿಯಾದಲ್ಲಿ ಸಾಕಷ್ಟು ವೈರಲ್‌ ಆಗುತ್ತಿದೆ. ಮಲಯಾಳ, ತೆಲುಗು, ಕನ್ನಡ, ತಮಿಳು ಚಿತ್ರಗಳಲ್ಲಿ ನಟಿಸಿರುವ ಪ್ರಿಯಾ ಆನಂದ್‌, ಇತ್ತೀಚೆಗೆ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದಾರೆ. ಅದರಲ್ಲಿ ಮದುವೆ ಅಂತೂ ಆದರೆ ನಿತ್ಯಾನಂದರನ್ನೇ ಮದುವೆಯಾಗುತ್ತೇನೆ ಎಂದಿದ್ದಾರೆ. ನಿತ್ಯಾನಂದ ಸ್ವಾಮೀಜಿ ಅಂದರೆ ನನಗೆ ತುಂಬಾ ಇಷ್ಟ. ಅವರಲ್ಲಿ ಏನೋ ಒಂದು …

Read More »

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ ಮೂರು ದಿನಗಳಿಂದ ಸತತವಾಗಿ ಪ್ರತಿದಿನ 18 ಸಾವಿರಕ್ಕೂ ಹೆಚ್ಚು ಜನರಲ್ಲಿ ಕೋವಿಡ್ ಪತ್ತೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಮತ್ತೆ 18,257 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದ್ದು, 24 ಗಂಟೆಯಲ್ಲಿ 42 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,25,428ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 1,28,690 …

Read More »

ಅರ್ಥ ಪೂರ್ಣವಾಗಿ ಬಕ್ರಿದ್ ಹಬ್ಬ ಆಚರಣೆ

ಹುಬ್ಬಳ್ಳಿ :ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರಿದ್ ಹಬ್ಬವನ್ನು ಮುಸ್ಲಿಂ ಸಮುದಾಯದವರು ಆಚರಣೆ ಮಾಡಿದರು. ಮಳೆಯ ನಡುವೆ ಹುಬ್ಬಳ್ಳಿ – ಧಾರವಾಡ ಜಿಲ್ಲೆಯಾದ್ಯಂತ ಇಂದು ಸಂಭ್ರಮದಿಂದ (ಬಕ್ರೀದ್ ಹಬ್ಬ) ಮಾಡಲಾಯಿತು. ಹಬ್ಬದ ನಿಮಿತ್ತ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಬಳಿಯಿರುವ ಈದ್ಗಾ ಮೈದಾನದಲ್ಲಿ ಸಹಸ್ರಾರು ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ನೆರವೇರಿತು. ಹೊಸ ಬಟ್ಟೆಗಳನ್ನು ತೊಟ್ಟು, ಸುಗಂಧ ದ್ರವ್ಯಗಳನ್ನು ಲೇಪಿಸಿಕೊಂಡು ಬೈಕ್‌, ಆಟೋ, ಟಂಟಂ, ಕಾರುಗಳಲ್ಲಿ ಆಗಮಿಸಿ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ …

Read More »

ಜಿಲ್ಲೆಯ ಯಾರಾದರೂ ಅಮರನಾಥಕ್ಕೆ ತೆರಳಿದ್ದರೆ ತಕ್ಷಣ ಮಾಹಿತಿ ನೀಡಿ

ಧಾರವಾಡ : ದಕ್ಷಿಣ ಕಾಶ್ಮೀರದ ಅಮರನಾಥ ಗುಹಾ ದೇವಾಲಯ ಪ್ರದೇಶಕ್ಕೆ ಧಾರವಾಡ ಜಿಲ್ಲೆಯ ಯಾವುದೇ ವ್ಯಕ್ತಿ ಅಥವಾ ಕುಟುಂಬಸ್ಥರು ಪ್ರವಾಸ ಕೈಗೊಂಡಿದ್ದರೆ , ಆ ಕುರಿತು ಅವರ ಸಂಬಂಧಿಕರು , ಸ್ನೇಹಿತರು ಅಥವಾ ಪರಿಚಯಸ್ಥರು ಕೂಡಲೇ ಜಿಲ್ಲಾಡಳಿತದ ಉಚಿತ ಸಹಾಯವಾಣಿ ಸಂಖ್ಯೆ 1077 ಸಂಪರ್ಕಿಸಿ ಮಾಹಿತಿ ನೀಡಬೇಕು ಯಾತ್ರಿಕರ ಸುರಕ್ಷತೆಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ . ಅಮರನಾಥ ಪ್ರದೇಶದಲ್ಲಿ ಸುರಿಯುತ್ತಿರುವ ಅತಿವೃಷ್ಠಿಯಿಂದ ಪ್ರವಾಹ …

Read More »