Breaking News

Uncategorized

ಕರಿಯಮ್ಮನ ಕಾಣಿಕೆ ಹುಂಡಿ ಕದ್ದು ಪರಾರಿಯಾದ ಖದೀಮರು

ಹುಬ್ಬಳ್ಳಿ: ಬೆಳ್ಳಂಬೆಳಿಗ್ಗೆ ಭಕ್ತರ ಸೋಗಿನಲ್ಲಿ ದೇವಸ್ಥಾನಕ್ಕೆ ನುಗ್ಗಿದ ಖದೀಮರು ದೇವಸ್ಥಾನದ ಕಾಣಿಕೆ ಹುಂಡಿಯನ್ನು ಕದ್ದು ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯ ಉಣಕಲ್ ನೃಪತುಂಗ ನಗರದಲ್ಲಿಂದು ನಡೆದಿದೆ. ಕರಿಯಮ್ಮ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ ಮಾಡಿದ ಖದೀಮರು ಕಾಣಿಕೆ ಹುಂಡಿಯೊಂದಿಗೆ ಪರಾರಿಯಾಗಿದ್ದಾರೆ. ಇನ್ನೂ ಸ್ಥಳಕ್ಕೆ ಅಶೋಕ್ ನಗರದ ಪೊಲೀಸ್ ಠಾಣೆ ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸುತ್ತಿದ್ದಾರೆ.ಇನ್ನೂ ಈ ಕುರಿತು ಸಾರ್ವಜನಿಕರು ಮಾಹಿತಿ ನೀಡಿದ್ದು, ಕಳ್ಳತನ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More »

ಶಿಕ್ಷಕ ಲೈಂಗಿಕ ಕಿರುಕುಳ : ಪೊಲೀಸರು ಭೇಟಿ ನೀಡಿ ಪರಿಶೀಲನೆ

ಹಾವೇರಿ: ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ, ಸಹ ಶಿಕ್ಷಕಿಗೆ ಅದೇ ಶಾಲೆಯ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಬಮ್ಮನಹಳ್ಳಿಯ ಪ್ರೌಢಶಾಲೆ ಶಿಕ್ಷಕನ ವಿರುದ್ಧ ಈ ಆರೋಪ ಕೇಳಿ ಬಂದಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಬಮ್ಮನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಸಮಾಜ ವಿಜ್ಞಾನ ಶಿಕ್ಷಕನ ವಿರುದ್ಧ ಮುಖ್ಯ ಶಿಕ್ಷಕಿ, ಸಹಶಿಕ್ಷಕಿ ಆರೋಪ ಮಾಡಿದ್ದಾರೆ. ಶಿಕ್ಷಕನ ಕೃತ್ಯದಿಂದ ಬೇಸತ್ತು ಕಣ್ಣೀರು ಹಾಕಿದ್ದಾರೆ. ಶಾಲೆಗೆ ಡಿಡಿಪಿಐ ಜಗದೀಶ್ವರ್ ಮತ್ತು ಪೊಲೀಸರು …

Read More »

ಡಾ| ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಧರ್ಮಸ್ಥಳ ಡಾ| ವೀರೇಂದ್ರ ಹೆಗ್ಗಡೆ ಅವರಿಗೂ ನನಗೂ ಮಂಜುನಾಥನಿಗೂ ಭಕ್ತರಿಗೂ ಇರುವ ಸಂಬಂಧದಂತೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಡಾ| ವೀರೇಂದ್ರ ಹೆಗ್ಗಡೆ ಅವರನ್ನು ಬೆಂಗಳೂರಿನ ಅವರ ಮನೆಯಲ್ಲಿ ಅಭಿನಂದಿಸಿ ಮಾತನಾಡಿದ ಅವರು, ಹೆಗ್ಗಡೆ ದೊಡ್ಡ ಕ್ಷೇತ್ರಕ್ಕೆ ಧರ್ಮಾಧಿಕಾರಿ ಆಗಿದ್ದಾರೆ. ‘ಮಾತು ತಪ್ಪದ ಮಂಜುನಾಥ, ಕಾಸು ಬಿಡದ ತಿಮ್ಮಪ್ಪ’ ಅಂತ ಮಾತಿದೆ. ಅವರನ್ನು ಕೇಂದ್ರ ಸರಕಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ. ಅವರು ಮಾಡಿರುವ ಗ್ರಾಮೀಣ ಸೇವೆ ಅನನ್ಯ …

Read More »

ಮಗುಚಿ ಬಿದ್ದ ಕಾರು : ಒಬ್ಬರು ಸಾವು

ಸುರತ್ಕಲ್: ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಹೊನ್ನಕಟ್ಟೆ ಸಿಗ್ನಲ್ ಬಳಿ  ನಿಂತಿದ್ದ ಕಾರಿನ ಮೇಲೆ ಲಾರಿಯೊಂದು ಮಗುಚಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಲಾಯಿ ಗೋಕುಲನಗರ ನಿವಾಸಿ ಲೋಕನಾಥ ಮೃತ ವ್ಯಕ್ತಿ. ಲೋಕನಾಥ ಅವರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೊನ್ನಕಟ್ಟೆ ಸಿಗ್ನಲ್ ಬಳಿ ರಸ್ತೆ ದಾಟಲು ಕಾರು ನಿಲ್ಲಿಸಿದ್ದರು. ಈ ವೇಳೆ ಹಿಂದಿನಿಂದ ಬಂದ ಲಾರಿ ನಿಯಂತ್ರಣ ತಪ್ಪಿ ಕಾರಿನ ಮೇಲೆ ಮಗುಚಿ ಬಿದ್ದಿದೆ. ಕಾರಿನ ಮುಂಭಾಗದಲ್ಲಿ …

Read More »

ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ, ಜತೆಜತೆಗೆ ಸಾವಿನ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 18,840ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 43ದಿ ಮೃತಪಟ್ಟಿದ್ದಾರೆ. ಇವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ. ಸಕ್ರಿಯ ಪ್ರಕರಣಗಳು 2693ರಣಗಳು ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1250,28ವಿಟಿ ದರ ಶೇ.4.14 ದೇಶದಲ್ಲಿ ಒಂದೇ ದಿನದಲ್ಲಿ 1226795ನಾ ಲಸಿಕೆ ನೀಡಲಾಗಿದೆ. ಇದುವರೆಗೂ …

Read More »

ಬೈಕ್ ಗೆ ಲಾರಿ ಡಿಕ್ಕಿ : 3 ಸಾವು

ಕಲಬುರಗಿ : ಬೈಕ್ ಗೆ ಲಾರಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ತಾಲ್ಲೂಕಿನ ಫರಹತಾಬಾದ್ ಸಮೀಪದ ಕೂಡಿ ದರ್ಗಾ ಬಳಿ ನಡೆದಿದೆ. ಒಂದೇ ಬೈಕ್‌ನಲ್ಲಿ ಮೂವರೂ ಹೋಗುತ್ತಿದ್ದ ವೇಳೆ ಜೇವರ್ಗಿಯಿಂದ ಕಲಬುರಗಿಗೆ ಹೋಗುತ್ತಿದ್ದ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟಿದ್ದಾರೆ.ಮೃತರು ಜೇವರ್ಗಿ ತಾಲ್ಲೂಕಿನ ಎಸ್.ಎನ್‌. ಹಿಪ್ಪರಗಾ ಗ್ರಾಮದ ಆಕಾಶ ಶರಣಪ್ಪ ಬಡಿಗೇರ (25), ಲಕ್ಷ್ಮಣ ರವಿ ಮಲ್ಲಾಬಾದ (19) ಹಾಗೂ ಶಿವು ಸಿದ್ದಪ್ಪ ಮ್ಯಾಗೇರಿ (24) ಎಂದು …

Read More »

ಕನ್ನಡಕ್ಕೆ ರೋಚಕ ಇತಿಹಾಸವಿದೆ, ಮಾತೃ ಭಾಷೆ ಸದಾ ಅಭಿವೃದ್ಧಿ : ಸಿಎಂ

ಬೆಂಗಳೂರು: ಕನ್ನಡಕ್ಕೆ ರೋಚಕ ಇತಿಹಾಸವಿದೆ, ಮಾತೃ ಭಾಷೆ ಸದಾ ಅಭಿವೃದ್ಧಿಯಾದಾಗ ಕನ್ನಡ ಮತ್ತು ಕನ್ನಡಿಗರ ಬದುಕು ಬೆಳೆಯುತ್ತದೆ.ಈ ಅರಿವಿನಿಂದ ನಾವು ಕೆಲಸ ಮಾಡಬೇಕು. ಇತರೆ ಭಾಷೆಗಳನ್ನು ಕಲಿಯುವುದು ಹಾಗು ಬಳಕೆ ಮಾಡುವುದು ದೊಡ್ಡ ತಪ್ಪು ಎನ್ನುವುದಕ್ಕಿಂತ ನಮ್ಮ ಭಾಷೆಯನ್ನು ಎಷ್ಟು ಬಳಸಿ ಹಾಗೂ ಬೆಳೆಸುತ್ತೇವೆ ಎನ್ನುವುದು ಮುಖ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು. ಶುಕ್ರವಾರ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕನ್ನಡ ರಥ-ಕಾಯಕ ಪಥ ಪುಸ್ತಕ ಲೋಕಾರ್ಪಣೆ ಹಾಗೂ ಕನ್ನಡ …

Read More »

ನಾವು ಇರುವವರೆಗೂ ಆಟದ ಮೈದಾನ ಉಳಿಸಿಕೊಂಡು ಹೋಗ್ತೀವಿ

ಚಾಮರಾಜಪೇಟೆ  : ನಗರದ ರ್ಈದ್ಗಾ ಮೈದಾನ  ಭೂವಿವಾದ ಕುರಿತು ಇಂದು ಸಭೆ  ನಡೆಸಲಾಗಿದ್ದು, ವೆಂಕಟರಾಮ್‌ ಕಲಾಭವನದಲ್ಲಿ ಸೌಹಾರ್ದ ಸಭೆ ನಡೆದಿದ್ದು, ಸಭೆಯಲ್ಲಿ ಮಾಜಿ ಕಾರ್ಪೋರೇಟರ್ ಗಳು, ಶಾಸಕ ಜಮೀರ್ ಅಹ್ಮದ್  ಸೇರಿದಂತೆ ಅನೇಕರು ಭಾಗವಹಿಸಿದ್ದರು. ಆದರೆ ಸಭೆಯಲ್ಲಿ ಸಂಸದ ಪಿ ಸಿ ಮೋಹನ್, ಮಾಜಿ ಶಾಸಕರಾದ ಪ್ರಮೀಳಾ ನೇಸರ್ಗಿ ಸಭೆಗೆ ಗೈರಾಗಿದ್ದರು. ಸಭೆಗೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ್ದ ಮಾಜಿ ಕಾರ್ಪೊರೇಟರ್ ಚಂದ್ರಶೇಖರ್ ಸ್ಥಳೀಯ ಶಾಸಕರು ಆಟದ ಮೈದಾನವನ್ನು ಉಳಿಸಿಕೊಂಡು …

Read More »

ಕರ್ನಾಟಕ ಕರಾವಳಿಗೆ ರೆಡ್ ಅಲರ್ಟ್​ ಘೋಷಣೆ

ಬೆಂಗಳೂರು :ಕರ್ನಾಟಕದ ಕರಾವಳಿಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಇಂದು ಕೂಡ ರೆಡ್ ಅಲರ್ಟ್​  ಘೋಷಿಸಲಾಗಿದೆ. ಅಲ್ಲದೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದ ಶಾಲೆ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಕಲಬುರ್ಗಿ, ಬೀದರ್​​ನಲ್ಲಿ ಇನ್ನೆರಡು ದಿನ ಹಳದಿ ಅಲರ್ಟ್​  ಘೋಷಿಸಲಾಗಿದೆ.

Read More »

ಮುಂದಿನ ವರ್ಷದ ವಿಧಾನಸಭಾ ಚುನಾವಣೆ ನನಗೆ ಕೊನೆಯ ಚುನಾವಣೆ : ಸಿದ್ದರಾಮಯ್ಯ

ಕೊಳ್ಳೇಗಾಲ: ಮುಂದಿನ ವರ್ಷದ ವಿಧಾನಸಭಾ ಚುನಾವಣೆ ನನಗೆ ಕೊನೆಯ ಚುನಾವಣೆಯಾಗಿದ್ದು, ಬಳಿಕ ರಾಜಕೀಯದಿಂದ ನಿವೃತ್ತಿ ಹೊಂದುವ ಮೂಲಕ ಇತರರಿಗೆ ಅವಕಾಶ ಕಲ್ಪಿಸಿಕೊಡುವುದಾಗಿ ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಘೋಷಿಸಿದರು. ಪಟ್ಟಣದ ಬಸ್ತೀಪುರ ಬಡಾವಣೆಯಲ್ಲಿ ಆಯೋಜಿಸಿದ್ದ ಸಿದ್ದಪ್ಪಾಜಿ ಕಂಡಾಯ ಮತ್ತು ಕೊಂಡೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದಾವಣಗೆರೆಯಲ್ಲಿ ಆಗಸ್ಟ್‌ 3ರಂದು ನಡೆಯುವ ನನ್ನ 75ನೇ ಜನ್ಮ ದಿನೋತ್ಸವಕ್ಕೆ ಆರೆಸ್ಸೆಸ್‌ನವರು ಸಿದ್ದರಾಮಯ್ಯ ಅವರ ಉತ್ಸವ ಎಂದು ನಾಮಕರಣ ಮಾಡಿದ್ದಾರೆ. …

Read More »