Breaking News

Uncategorized

ಜೇಮ್ಸ್’ ಚಿತ್ರದ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಆಸ್ಪತ್ರೆಗೆ ದಾಖಲು

‘ವಿಜಯನಗರ: ಹೊಸಪೇಟೆಯ ಗಣಿ ಉದ್ಯಮಿ ಹಾಗು ಪುನೀತ್ ರಾಜ್‌ಕುಮಾರ್ ನಟನೆಯ ‘ಜೇಮ್ಸ್’ ಚಿತ್ರದ ನಿರ್ಮಾಪಕ ಕಿಶೋರ್ ಪತ್ತಿಕೊಂಡ (42) ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನ ಮನೆಯಲ್ಲಿ ರಾತ್ರಿ ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಕುಸಿದು ಬಿದ್ದಿದ್ದಾರೆ. ಕೂಡಲೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಐಸಿಯುನಲ್ಲಿ ಚಿಕಿತ್ಸೆ ನಡೆಯುತ್ತಿದೆ ಎಂದು ಆಪ್ತ ಸ್ನೇಹಿತರೊಬ್ಬರು ತಿಳಿಸಿದರು.

Read More »

ಪಿಎಸ್‌ಐ ಹಗರಣದ ಬಗ್ಗೆ ಹೊಸ ಬಾಂಬ್ ಸಿಡಿಸಿದ ಮಾಜಿ ಸಿಎಂ

ಬೆಂಗಳೂರು: ಬಹುಕೋಟಿ ರೂಪಾಯಿ ಹಗರಣ ಪಿಎಸ್‌ಐ ಕರ್ಮಕಾಂಡದ ಬಗ್ಗೆ ನಾನು ಗಾಳಿಯಲ್ಲಿ ಗುಂಡು ಹೊಡೆದಿಲ್ಲ. ಇದ್ದದ್ದನ್ನು ಇದ್ದ ಹಾಗೆ ಹೇಳಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ನಗರದ ಚಾಮರಾಜಪೇಟೆಯ ಛಲವಾದಿ ಪಾಳ್ಯದಲ್ಲಿ ಇಂದು ಮಾತನಾಡಿದ ಅವರು; ಮಾಧ್ಯಮಗಳಲ್ಲೇ ಈ ಬಗ್ಗೆ ತನಿಖಾ ವರದಿಗಳು ಬಂದಿವೆ. ತಲಾ 30 ಲಕ್ಷ ರೂಪಾಯಿಯನ್ನು 25 ಅಭ್ಯರ್ಥಿಗಳಿಂದ ವಸೂಲಿ ಆಗಿದೆ ಅಂದರೆ, ಒತ್ತು ಮೊತ್ತ ಎಷ್ಟಾಯ್ತು? 200-300 ಜನ 70-80 ಲಕ್ಷ …

Read More »

ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಪಿರಿಯಾಪಟ್ಟಣದಲ್ಲಿ ಪ್ರತಿಭಟನೆ

ಪಿರಿಯಾಪಟ್ಟಣ : ರಾಜಾಸ್ಥಾನದಲ್ಲಿ ನಡೆದ ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಪಟ್ಟಣದಲ್ಲಿ ಹಿಂದೂ ಜಾಗರಣಾ ಸಮಿತಿವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಪಟ್ಟಣದ ಮಸಣೀಕಮ್ಮ ದೇವಾಲಯದಿಂದ ಕಾಲ್ನಡಿಗೆಯಲ್ಲಿ ಮೆರವಣಿಗೆ ಹೊರಟ ಕಾರ್ಯಕರ್ತರು ಪಟ್ಟಣದ ಬಸವೇಶ್ವರ ಸರ್ಕಲ್‌ಬಳಿ ಮಾನವ ಸರಪಳಿ ನಿರ್ಮಾಣ ಮಾಡಿ ಕೆಲ ಸಮಯ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪರಿಸರ ಹೋರಾಟಗಾರರ ಹಾಗೂ ಬಿಜೆಪಿ ಮುಖಂಡ ಕೌಲನಹಳ್ಳಿ ಸೋಮಶೇಖರ್ ಮಾತನಾಡಿ ದೇಶದಲ್ಲಿ ಮುಸ್ಲಿಂ ಭಯೋತ್ಪಾದನೆ ಹೆಚ್ಚಾಗುತ್ತಿದ್ದು ಇದು ನಿಲ್ಲಬೇಕು. ರಾಜಾಸ್ಥಾನದಲ್ಲಿ ಆದ …

Read More »

ವರುಣನ ಆರ್ಭಟ : ಹಲವು ಜಿಲ್ಲೆಗಳಲ್ಲಿ ಶಾಲೆ ರಜೆ ಘೋಷಣೆ

ಬೆಂಗಳೂರು : ರಾಜ್ಯಾಧ್ಯಂತ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದೆ . ಹಲವು ಜಿಲ್ಲೆಗಳಲ್ಲಿ ಎಡೆಬಿಡದೇ ಸುರಿಯುತ್ತಿರುವಂತ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಮನೆಯಿಂದ ಹೊರ ಬರಲಾಗದಂತ ಸ್ಥಿತಿಯನ್ನು ಜನರು ಎದುರಿಸುತ್ತಿದ್ದಾರೆ. ಇದೇ ಕಾರಣದಿಂದಾಗಿ ರಾಜ್ಯದ ವಿವಿಧ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಭಾರೀ ಮಳೆಯ ಕಾರಣದಿಂದ ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Read More »

ಜೋಶಿ ಗುಲಾಮಗಿರಿಯಿಂದ ಹೊರಬರಬೇಕು : ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ‘ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಶಿಯವರೆ, ನನ್ನನ್ನು ಹೀಗಳೆಯುವ ಮೊದಲು ತಾವು ಆರ್‌ಎಸ್‌ಎಸ್‌, ನರೇಂದ್ರ ಮೋದಿ, ಅಮಿತ್‌ ಶಾ ಗುಲಾಮಗಿರಿಯಿಂದ ಹೊರಬರಬೇಕು. ಹಾಗೆಯೇ ಅಂಬಾನಿ, ಅದಾನಿಗಳ ಗುಲಾಮಗಿರಿಯಿಂದಲೂ ಹೊರ ಬಂದು ಕನ್ನಡದ ಸ್ವಾಭಿಮಾನವನ್ನು ಎತ್ತಿ ಹಿಡಿಯಬೇಕು’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ. ನರೇಂದ್ರ ಮೋದಿ ಸರ್ಕಾರದ ದುರಾಡಳಿತದ ಬಗ್ಗೆ ನಾನು ಹೇಳುತ್ತಿರುವ ಪ್ರತಿ ಸಂಗತಿಯನ್ನೂ ದಾಖಲೆ ಆಧರಿಸಿಯೇ ಹೇಳುತ್ತಿದ್ದೇನೆ. ನಾನು ಸುಳ್ಳು ಹೇಳಿದ್ದೇನೆಂದು ಆರೋಪಿಸಿ …

Read More »

ಚಂದ್ರಶೇಖರ ಗುರೂಜಿ ಕೊಲೆ ಪ್ರಕರಣ: ವನಜಾಕ್ಷಿಯ ತೀವ್ರ ವಿಚಾರಣೆ ನಡೆಸಿದ ಪೊಲೀಸರು

ಹುಬ್ಬಳ್ಳಿ:ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ನಿಂದ ವನಜಾಕ್ಷಿ ಶಿರೂರು ತೀವ್ರ ವಿಚಾರಣೆ ನಡೆಸಲಾಗಿದ್ದು, ವನಜಾಕ್ಷಿ ಶಿರೂರ ಹಂತಕ ಮಹಾಂತೇಶ ಶಿರೂರ ಪತ್ನಿಯಾಗಿರುವ ಹಿನ್ನೆಲೆಯಲ್ಲಿ ತೀವ್ರ ವಿಚಾರಣೆ ನಡೆಸಿದ್ದಾರೆ. ‌ಸತತವಾಗಿ ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿದ ಪೊಲೀಸರು, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಭೂರಾಮ್, ಡಿಸಿಪಿಗಳಾದ ಸಾಹಿಲ್ ಬಾಗ್ಲಾ, ಗೋಪಾಲ ಬ್ಯಾಕೋಡ ನೇತೃತ್ವದಲ್ಲಿ ವಿಚಾರಣೆ ನಡೆಸಿ ಮನೆಗೆ ವಾಪಸ್ ಕಳಿಸಿದ್ದಾರೆ. ಇನ್ನೂ ಚಂದ್ರಶೇಖರ ಗುರೂಜಿ …

Read More »

ತಂಡ ರಚನೆ ಮಾಡಿ ನಾಲ್ಕು ಗಂಟೆಯಲ್ಲಿಯೇ ಆರೋಪಿಗಳನ್ನು ಬಂಧಿಸಿದ್ದೇವೆ: ಲಾಭುರಾಮ್

ಹುಬ್ಬಳ್ಳಿ:ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಂಜುನಾಥ ಮರೇವಾಡ, ಮಹಾಂತೇಶ ಶಿರೂರ ಬಂಧಿಸಲಾಗಿದೆ. ಆರೋಪಿಗಳ ಬಂಧನಕ್ಕೆ ತಂಡ ರಚನೆ ಮಾಡಿದ್ದೇವು. ಈಗ ಬಂಧಿಸಿದ್ದು, ಕೊಲೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ತನಿಖೆಯ ನಂತರವೇ ಗೊತ್ತಾಗಬೇಕಿದೆ ಎಂದು ಹು-ಧಾ ಮಹಾನಗರ ಪೊಲೀಸ್ ಆಯುಕ್ತ ಆಭೂರಾಮ್ ಹೇಳಿದರು. ವಿದ್ಯಾನಗರದ ಪೊಲೀಸ್ ಠಾಣೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಆರೋಪಿಗಳ ಪತ್ತೆಗೆ ಪ್ರತ್ಯೇಕ ತಂಡ ನೇಮಿಸಿದ್ದೇವು. ಆರೋಪಿಗಳ ಚಹರಾಪಟ್ಟಿಯನ್ನು ಅಕ್ಕಪಕ್ಕದ ಜಿಲ್ಲೆಯ ಪೊಲೀಸರಿಗೆ ಹೇಳಿದ್ದೇವು. …

Read More »

ನಾಳೆ ಚಂದ್ರಶೇಖರ ಗುರೂಜಿ ಅಂತಿಮ ದರ್ಶನಕ್ಕೆ ಅವಕಾಶ

ಹುಬ್ಬಳ್ಳಿ : ಖ್ಯಾತ ವಾಸ್ತು ಶಾಸ್ತ್ರತಜ್ಞ ಚಂದ್ರಶೇಖರ್ ಗುರೂಜಿ ಹತ್ಯೆ ಹಿನ್ನೆಲೆಯಲ್ಲಿ ನಾಳೆ ಹತ್ತು ಗಂಟೆಯಿಂದ ಸಾರ್ವಜನಿಕ ದರ್ಶನಕ್ಕೆ ಹುಬ್ಬಳ್ಳಿಯ ಕೇಶ್ವಾಪುರದ ಸುಳ್ಳದ ರಸ್ತೆಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಸ್ವಂತ ಜಮೀನಿನಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು , ನಾಳೆ ಹತ್ತು ಗಂಟೆಯಿಂದ ಅಂತಿಮ ದರ್ಶನಕ್ಕೆ ಅವಕಾಶ ನೀಡಿದ್ದು , ಬಳಿಕ ಸುಳ್ಳದ ರಸ್ತೆಯಲ್ಲಿ ಸ್ವಂತ ಜಮೀನಲ್ಲಿಯೇ ಅಂತಿಮ ಸಂಸ್ಕಾರವನ್ನು ಮಾಡಲು ನಿರ್ಧಾರ ಮಾಡಲಾಗಿದೆ

Read More »

ಚಂದ್ರಶೇಖರ್ ಗುರೂಜಿ ಹತ್ಯೆ ಇಬ್ಬರು ಸೆರೆ

ಹುಬ್ಬಳ್ಳಿ,: ಚಾಕುವಿನಿಂದ ಇರಿದು ಸರಳವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅವರನ್ನ ಹತ್ಯೆಗೈದಿದ್ದ ಇಬ್ಬರು ಆರೋಪಿಗಳನ್ನ ಕೇವಲ ನಾಲ್ಕೇ ಗಂಟೆಗಳಲ್ಲಿ ಹುಬ್ಬಳ್ಳಿಯ ವಿದ್ಯಾನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮಹಂತೇಶ್ ಮತ್ತು ಮಂಜುನಾಥ್ ಬಂಧಿತ ಆರೋಪಿಗಳು. ಬೆಳಗಾವಿಯ ರಾಮದುರ್ಗದ ಬಳಿ ಬಂಧಿಸಲಾಗಿದೆ. ನಿಗೂಢ ಸ್ಥಳಗಳಲ್ಲಿ ಆರೋಪಿಗಳನ್ನ ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ. ಇಂದು ಮಧ್ಯಾಹ್ನ ಭಕ್ತರ ಸೋಗಿನಲ್ಲಿ ಬಂದಿದ್ಧ ಇಬ್ಬರು ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಚಂದ್ರಶೇಖರ್ ಗುರೂಜಿ ಅವರ ಕಾಲಿಗೆ ನಮಸ್ಕರಿಸುವ …

Read More »

ಚಂದ್ರಶೇಖರ ಗುರೂಜಿ ಕೊಲೆ ತನಿಖೆಗೆ ಐದು ತಂಡ ರಚನೆ: ಆಯುಕ್ತ ಲಾಭುರಾಮ್

ಹುಬ್ಬಳ್ಳಿ: ಚಂದ್ರಶೇಖರ ಗುರೂಜಿಯವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ತನಿಖಾ ತಂಡಗಳನ್ನು ರಚನೆ ಮಾಡಿದ್ದು, ತನಿಖೆಯ ನಂತರವೇ ಕೊಲೆಯ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಎಲ್ಲಾ ಹಂತದಲ್ಲಿಯೂ ಕೂಡ ತನಿಖೆ ನಡೆಸಲಾಗುತ್ತದೆ ಎಂದು ಹು-ಧಾ ಪೊಲೀಸ್ ಆಯುಕ್ತರಾದ ಲಾಭುರಾಮ್ ಹೇಳಿದರು. ಉಣಕಲ್ ಹತ್ತಿರದ ಕೊಲೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಇಂದು ಮಧ್ಯಾಹ್ನದ ವೇಳೆಯಲ್ಲಿ ಹುಬ್ಬಳ್ಳಿಯ ಉಣಕಲ್ ಪ್ರೆಸಿಡೆಂಟ್ ಹೋಟೆಲ್ …

Read More »