Breaking News

Uncategorized

ಹುಬ್ಬಳ್ಳಿ ಯ ತುಳಜಾಭವಾನಿಯ ದೇವಸ್ಥಾನದಲ್ಲಿ ಹೊರಟ್ಟಿ ಅವರಿಂದ ವಿಶೇಷ ಪೂಜೆ

ಹುಬ್ಬಳ್ಳಿ : ಸತತ 8ಬಾರಿ ವಿಜಯದ ಪತಾಕೆ ಹಾರಿಸಿದ ಸೋಲಿಲ್ಲದ ಸರದಾರ ಖ್ಯಾತಿಯ ಬಸವರಾಜ್ ಹೊರಟ್ಟಿ ಅವರು ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರು ಹುಬ್ಬಳ್ಳಿಯ ತುಳಜಾ ಭವಾನಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು ಇದೇ ಸಂದರ್ಭದಲ್ಲಿ ದೇವಸ್ಥಾನದ ಟ್ರಸ್ಟಿಗಳಾದ ನೀಲಕಂಠ ಜಡಿ ಹಾಗೂ ಮುಖಂಡ ರಾಜು ನಾಯಕ್ ವಾಡಿ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತಿಯಿದ್ದರು. ಬಸವರಾಜ್ …

Read More »

ಚಾಕುವಿನಿಂದ ಇರಿತ: ನಾಲ್ವರ ವಶಕ್ಕೆ ಮುಂದುವರಿದ ವಿಚಾರಣೆ

‌ಹುಬ್ಬಳ್ಳಿ: ಸಿಗರೇಟ್ ವಿಚಾರಕ್ಕೆ ನಡೆದ ಜಗಳದಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿದ ಆರೋಪಿಗಳಾದ ರಫೀಕ್, ಅಲ್ತಾಫ, ಅಸ್ಲಾಂ ಹಾಗೂ ಮಹಮ್ಮದ ಅಲಿಯನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.ಆರೋಪಿಗಳು ಜೂನ್ 14ರಂದು ಆನಂದ ನಗರದ ವೆಲ್ಕಮ್ ಹಾಲ್ ಬಳಿ ಸಿಗರೇಟ್ ಸೇದುವ ವಿಚಾರಕ್ಕೆ ಸಂಬಂಧಿಸಿದಂತೆ, ಜಿಲಾನಿ ಶೇಖ್ ಮತ್ತು ಜಾವಿದ್ ಶೇಖ್ ಅವರೊಂದಿಗೆ ಜಗಳವಾಡಿದ್ದರು. ನಂತರ, ಇಬ್ಬರಿಗೂ ಚಾಕುವಿನಿಂದ ಇರಿದು ಪರಾರಿಯಾಗಿದ್ದರು. ಇತ್ತೀಚೆಗೆ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ …

Read More »

ಜೂ.೨೫ ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಹುಬ್ಬಳ್ಳಿ ; ಸಮಾಜದಲ್ಲಿ ಗಮನಾರ್ಹ ಸಾಧನೆಗೈದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಮತ್ತು ಇತರ ಯುವ ಪ್ರತಿಭೆಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೋಳ್ಳಲಾಗಿದೆ ಎಂದು ಸ್ವಾಭಿಮಾನ ಫೌಂಡೇಶನ್ ನ ಅಧ್ಯಕ್ಷ ಮಂಜುನಾಥ ಕೊಂಡಪಲ್ಲಿ ಹೇಳಿದರು ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸ್ವಾಭಿಮಾನ ಫೌಂಡೇಶನ್ ವತಿಯಿಂದ ಈ ವರ್ಷ ಎಸ್ಎಸ್ಎಲ್ ಸಿ ಪರೀಕ್ಷೆ ಯಲ್ಲಿ ಗಮನಾರ್ಹ ಸಾಧನೆ ಮಾಡಿದ ಸರ್ಕಾರಿ ಶಾಲೆಗಳಲ್ಲಿ ಮತ್ತು ಆರ್ಥಿಕವಾಗಿ ಹಿಂದುವಳಿದ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸುವ ಪ್ರತಿಭಾ ಪುರಸ್ಕಾರ …

Read More »

ದೇವಸ್ಥಾನದ ಕಂಪೌಂಡ ಭೂಮಿ ಪೂಜೆ ಸಲ್ಲಿಸಿದ ಕುಸುಮಾವತಿ ಶಿವಳ್ಳಿ

ಕುಂದಗೋಳ: ‘ದಾನ, ದಾಸೋಹ ಹಾಗೂ ನಿಸ್ವಾರ್ಥ ಭಕ್ತಿಗೆ ಹೆಸರಾದ ಯಲ್ಲಮ್ಮ ದೇವಿ ಅವರು ಪುಣ್ಯದ ಮಾರ್ಗ ತೋರಿದ ಮಹಾಸಾಧ್ವಿ. ಸಮಾಜ ಸುಧಾರಣೆಯಲ್ಲಿ ಕ್ರಾಂತಿ ಮಾಡಿದ ಅವರನ್ನು ಸ್ಮರಿಸಿ ಅವರ ವಿಚಾರ ಮತ್ತು ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುಂದಿನ ಪೀಳಿಗೆಗೆ ಆದರ್ಶಪ್ರಾಯರಾಗಬೇಕು’ ಎಂದು ಶಾಸಕಿ ಕುಸುಮಾವತಿ ಶಿವಳ್ಳಿ ಹೇಳಿದರು. ಅವರು ಚಿಕ್ಕನರ್ತಿ ಗ್ರಾಮದಲ್ಲಿ ಶಾಸಕರ ಪ್ರದೇಶಾಭಿರುದ್ದಿ ಯೋಜನೆ ಅಡಿಯಲ್ಲಿನ 4 ಲಕ್ಷವರುಗಳ ಮೊತ್ತದ ಕಂಪೌ0ಡ್ ನಿರ್ಮಾಣ ಭೂಮಿ ಪೂಜೆ …

Read More »

ಚರಂಡಿಯಲ್ಲಿ ಯುವಕನ ಶವ ಪತ್ತೆ

ಧಾರವಾಡ : ರಾತ್ರಿ ಮನೆಯಿಂದ ಹೊರ ಹೋದ ವ್ಯಕ್ತಿಯೊಬ್ಬ ಇಂದು ಬೆಳಗಾಗುವಷ್ಟರಲ್ಲಿ ಚರಂಡಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಅಮ್ಮಿನಭಾವಿ ಗ್ರಾಮದ ಮಲ್ಲಿಕಾರ್ಜುನ ಗೂಳದಕೊಪ್ಪ (45) ಎಂಬಾತನೇ ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ಮನೆಯಿಂದ ಹೊರ ಹೋಗಿದ್ದ ಈತ , ಬೆಳಗಾಗುವಷ್ಟರಲ್ಲಿ ಗ್ರಾಮದ ಗ್ರಾಮ ದೇವಿ ದೇವಸ್ಥಾನ ಬಳಿಯ ಚರಂಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ . ಅರೆನಗ್ನ ಸ್ಥಿತಿಯಲ್ಲಿರುವ ಶವ ಕಂಡು …

Read More »

ಯಡಿಯೂರಪ್ಪ ಕುಟುಂಬ ಸಮೇತ ವಿದೇಶ ಪ್ರವಾಸ

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕುಟುಂಬ ಸಮೇತ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ. ಸೋಮವಾರದಂದು ರಾಜ್ಯಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಬಳಿಕ ಪೂರ್ವನಿಯೋಜಿತ ಕಾರ್ಯಕ್ರಮದಂತೆ ಯಡಿಯೂರಪ್ಪನವರು ಲಂಡನ್ ಗೆ ತೆರಳಿದ್ದಾರೆ. ಯಡಿಯೂರಪ್ಪನವರಿಗೆ ಅವರ ಪುತ್ರ ಬಿ.ವೈ. ವಿಜಯೇಂದ್ರ ಮತ್ತು ಕುಟುಂಬದ ಇತರೆ ಸದಸ್ಯರು ಸಾಥ್ ನೀಡಿದ್ದು, ಈ ತಿಂಗಳ ಅಂತ್ಯಕ್ಕೆ ಭಾರತಕ್ಕೆ ವಾಪಸ್ಸಾಗಲಿದ್ದಾರೆ ಎಂದು ತಿಳಿದುಬಂದಿದೆ. ಯಡಿಯೂರಪ್ಪನವರು ತಮ್ಮ ಲಂಡನ್ ಪ್ರವಾಸದ ವೇಳೆ …

Read More »

SSLC ಪೂರಕ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

ಜೂನ್ 27 ರಿಂದ ಜುಲೈ 4 ರವರಿಗೆ 10ನೇ ತರಗತಿ ಪೂರಕ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಕ್ಕೆ ಹೋಗಲು ಮತ್ತು ಹಿಂದಿರುಗಲು ಅವಕಾಶವಿದ್ದು, ವಿದ್ಯಾರ್ಥಿಗಳು ಬಸ್ ನಿರ್ವಾಹಕರಿಗೆ ತಮ್ಮ ಪರೀಕ್ಷೆಯ ಪ್ರವೇಶ ಪತ್ರ ತೋರಿಸಿ ಸಾಮಾನ್ಯ ಮತ್ತು ವೇಗದೂತ ಬಸ್ಸುಗಳಲ್ಲಿ ಪ್ರಯಾಣ ಮಾಡಬಹುದಾಗಿದೆ.

Read More »

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ಅಜೀವ ಕಾರಾಗೃಹ ಶಿಕ್ಷೆ , ದಂಡ

ಉಡುಪಿ: ಬಾಲಕಿಯನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಸಾಬೀತಾಗಿದ್ದು ಹೀಗಾಗಿ ಅಪರಾಧಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನಾಯಾಧೀಶರಾದ ಶ್ರೀನಿವಾಸ ಸುವರ್ಣ ಅವರು ಅಜೀವ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಪಶ್ಚಿಮ ಬಂಗಾಳ ಮೂಲದ ರಾಜೀಬ್ ಅಲಿಯಾಸ್ ಚೋಟು (20) ಶಿಕ್ಷೆಗೆ ಗುರಿಯಾದ ಆರೋಪಿ. 2018ರ ಪೆಬ್ರವರಿ ತಿಂಗಳಿನಲ್ಲಿ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ರಸ್ತೆ …

Read More »

ಕೇಂದ್ರ ಸಚಿವರೊಂದಿಗೆ ಅನುಚಿತವಾಗಿ ವರ್ತನೆ : ಶಾಲಾ ಶಿಕ್ಷಕ ಅಮಾನತು

ಬೀದರ್ : ರಸಗೊಬ್ಬರ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಭಗವಂತ ಖೂಬಾ ಅವರ ಜತೆ ಮೊಬೈಲ್‌ ನಲ್ಲಿ ಅನುಚಿತವಾಗಿ ವರ್ತಿಸಿದ ಆರೋಪ ಹಿನ್ನಲೆ ಸರ್ಕಾರಿ ಶಾಲಾ ಶಿಕ್ಷಕನನ್ನು ಅಮಾನತ್ತುಗೊಳಿಸಿ ಡಿಡಿಪಿಐ ಗಣಪತಿ ಬಾರಾಟಕೆ ಆದೇಶ ಹೊರಡಿಸಿದ್ದಾರೆ. ಔರಾದ ತಾಲೂಕಿನ ಜೀರ್ಗಾ(ಕೆ) ಸರ್ಕಾರಿ ಶಾಲಾ ಶಿಕ್ಷಕ ಕುಶಾಲ ಪಾಟೀಲ ಅಮಾನತ್ತುಗೊಂಡ ಶಿಕ್ಷಕರ. ಜೂ. 10 ರಂದು ಪಾಟೀಲ ಅವರು ಸ್ವಗ್ರಾಮ ಹೆಡಗಾಪುರದಲ್ಲಿ ರಸಗೊಬ್ಬರ ಕೊರತೆ ಸಂಬಂಧ …

Read More »

ಜೂ. 25ರ ವರೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದ ಕರಾವಳಿ ಭಾಗದಲ್ಲಿ ಮುಂಗಾರು ಚುರುಕಾಗಿದೆ.‌ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ವರುಣದೇವ ಅಬ್ಬರಿಸುತ್ತಿದ್ದಾನೆ. ಕಾರವಾರದ ರೈಲ್ವೆ ನಿಲ್ದಾಣ ರಸ್ತೆ, ಹಬ್ಬುವಾಡ, ಸೋನಾರವಾಡ, ಸಾಯಿಬಾಬಾ ಮಂದಿರ ರಸ್ತೆಗಳು ಜಲಾವೃತವಾಗಿ ಜನ ಪರದಾಡಿದ್ರು. ಮನೆಗಳಿಗೆ ನೀರು ನುಗ್ಗಿದ್ದಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಾಳೆಯು ಸಹ ವರುಣನ ರೌದ್ರಾವತಾರ ಮುಂದುವರಿಯಲಿದ್ದು, ಜೂನ್ 25ರ ವರೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇದರೊಂದಿಗೆ ಸ್ಥಳೀಯರು, ಪ್ರವಾಸಿಗರು …

Read More »