Shaikh BigTv
December 12, 2024
Uncategorized
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು. ಗುರುವಾರ ಪ್ರತಿಭಟನೆ ನಡೆಸಿ, ಆಶಾ ಕಾರ್ಯಕರ್ತೆಯರಿಗೆ ಸೇವಾ ಭದ್ರತೆ ಒದಗಿಸಬೇಕು ಹಾಗೂ ವೇತನ ಹೆಚ್ಚಳ ಮಾಡಬೇಕು ಎಂದು ಆಶಾ ಕಾರ್ಯಕರ್ತೆಯರು ಸರ್ಕಾರಕ್ಕೆ ಮನವಿ ಸಲ್ಲಿಸಿದರು.
Read More »
Shaikh BigTv
December 12, 2024
Uncategorized
ಹುಬ್ಬಳ್ಳಿ – ಧಾರವಾಡದ ವಾರ್ಡ್ ನಂ.30 ಮತ್ತು 31ರ ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿ ಸೇರಿಕೊಂಡು ಬೆಳಗಾವಿ ವಿಧಾನಸೌಧದ ಮುಂದೆ ಹೋರಾಟದ ಸಮಯದಲ್ಲಿ ಲಾಠಿ ಚಾರ್ಜ್ ಮಾಡಿದ್ದನ್ನು ಹಾಗೂ ವಿರೋಧ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಅರವಿಂದ ಬೆಲ್ಲದ ಅವರ ಮೇಲೆ ನಡೆದಂತ ಲಾಠಿ ಚಾರ್ಜ್ ಅನ್ನು ಖಂಡಿಸಿ ಗೋಕುಲ್ ರೋಡ ಮಂಜುನಾಥ ನಗರದ ಕ್ರಾಸ್ ನಲ್ಲಿಂದು ಪ್ರತಿಭಟನೆ ಮಾಡಿದರು.
Read More »
Shaikh BigTv
December 12, 2024
Uncategorized
ಅಣ್ಣಿಗೇರಿ : ಬಸವ ಜಯ ಮೃತ್ಯುಂಜಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಲಿಂಗಾಯಿತ ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಹೋರಾಟವನ್ನು ಬೆಳಗಾವಿಯ ಸುವರ್ಣ ವಿಧಾನ ಸೌಧದ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನೆ ನಿಯಂತ್ರಿಸಲು ಲಾಠಿಚಾರ್ಜ್ ನಡೆಸಿದ ಹಿನ್ನೆಲೆಯಲ್ಲಿ ಸುಮಾರು ಜನರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೋರಾಟಗಾರರ ಮೇಲೆ ಪೊಲೀಸರ ಹಲ್ಲೆಯನ್ನು ಸಮಸ್ತ ಅಣ್ಣಿಗೇರಿ ತಾಲೂಕಿನ ಲಿಂಗಾಯತ ಪಂಚಮಸಾಲಿ ಸಮಾಜ ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿ, ಇಂದು ಪಟ್ಟಣದಲ್ಲಿ …
Read More »
Shaikh BigTv
December 12, 2024
Uncategorized
ಧಾರವಾಡ: ಕಾರು ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡ ತಾಲೂಕಿನ ಯರಿಕೊಪ್ಪ ಬಳಿಯ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದೆ. ಮೂಲತಃ ಬೆಂಗಳೂರು ಮೂಲದವರಾದ ಮೂರು ಜನ ಈ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಕಾರಿನಲ್ಲಿ ನಾಲೈದು ಜನ ಗೋವಾ ಕಡೆಯಿಂದ ಮರಳಿ ಬೆಂಗಳೂರಿನತ್ತ ತೆರಳುತ್ತಿದ್ದರು. ಈ ವೇಳೆ ಹುಬ್ಬಳ್ಳಿ ಕಡೆಯಿಂದ ಪುಣೆ ಕಡೆ ಹೋಗುತ್ತಿದ್ದ ಲಾರಿ ಈ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ …
Read More »
Shaikh BigTv
December 12, 2024
Uncategorized
ಧಾರವಾಡ : ಜನರ ಕಲ್ಯಾಣಕ್ಕಾಗಿ ಸರಕಾರಗಳು ಜಾರಿಗೆ ತರುವ ಪ್ರತಿ ಯೋಜನೆ, ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಮತ್ತು ನಿಯಮಾನುಸಾರ ಅನುಷ್ಠಾನವಾಗಲು ಗ್ರಾಮ ಆಡಳಿತ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ. ಗ್ರಾಮ ಆಡಳಿತ ಅಧಿಕಾರಿಗಳು ತಮ್ಮ ಕಾರ್ಯಶೈಲಿ, ತತಕ್ಷಣದ ಸ್ಪಂದನೆಗಳ ಮೂಲಕ ಕ್ಷೇತ್ರಮಟ್ಟದಿಂದ ಸರಕಾರದ ವರ್ಚಸ್ಸು ಹೆಚ್ಚಿಸುತ್ತಾರೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಅವರು ಇಂದು ಮಧ್ಯಾಹ್ನ ನಗರದ ರೇವೆನ್ಯೂ ಕ್ಲಬ್ ಆವರಣದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲೂಕು ಕಚೇರಿ …
Read More »
Shaikh BigTv
December 12, 2024
Uncategorized
ಧಾರವಾಡ : ಆರೋಗ್ಯವಂತ ಮಕ್ಕಳು ರಾಷ್ಟ್ರದ ಬಹುದೊಡ್ಡ ಆಸ್ತಿ, ಮಕ್ಕಳ ಆರೋಗ್ಯಯುತ ಬೆಳವಣಿಗೆ ಮತ್ತು ಅವರಿಗೆ ಸಮಗ್ರ ಪೌಷ್ಠಕಾಂಶಗಳು ದೊರಕುವಂತೆ ಮಾಡಲು ಸರಕಾರದಿಂದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಅವುಗಳ ಪರಿಣಾಮಕಾರಿ ಜಾರಿ ನಮ್ಮ ಜವಾಬ್ದಾರಿ ಆಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ನಗರದ ಕೆ.ಇ.ಬೋರ್ಡ ಸಂಸ್ಥೆಯ ಕರ್ನಾಟಕ ಹೈಸ್ಕೂಲ್‍ದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ …
Read More »
Shaikh BigTv
December 12, 2024
Uncategorized
ಧಾರವಾಡ: ಬೆಳಗಾವಿಯ ಸುವರ್ಣಸೌಧದ ಬಳಿ ಪಂಚಮಸಾಲಿ ಹೋರಾಟಗಾರರ ಮೇಲೆ ನಡೆದ ಲಾಠಿ ಚಾರ್ಜ್ ಖಂಡಿಸಿ ಪಂಚಮಸಾಲಿ ಸಮುದಾಯದ ಮುಖಂಡರು ಧಾರವಾಡ-ಗೋವಾ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಧಾರವಾಡದ ಕೆಲಗೇರಿ ಬಳಿಯ ಗೋವಾ ರಸ್ತೆಯನ್ನು ದಿಢೀರ್ ಬಂದ್ ಮಾಡಿದ ಪಂಚಮಸಾಲಿ ಸಮಾಜದ ಮುಖಂಡರು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಕೆಲ ಹೊತ್ತು ರಸ್ತೆ ಬಂದ್ ಮಾಡಿದ್ದರಿಂದ ಸಂಚಾರ ದಟ್ಟಣೆ ಉಂಟಾಯಿತು. ಕೊನೆಗೆ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ ರಸ್ತೆಯನ್ನು ವಾಹನ …
Read More »
BigTv News
December 12, 2024
Uncategorized
ಕೊಪ್ಪಳ: ಮಹಿಳಾ ಸ್ನೇಹಿ ಯೋಜನೆಗಳನ್ನು ರೂಪಿಸುವಲ್ಲಿ ಹಾಗೂ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಲ್ಲಿ ಕೊಪ್ಪಳ ತಾಲ್ಲೂಕಿನ ಕಿನ್ನಾಳ ಗ್ರಾಮ ಪಂಚಾಯಿತಿ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದ್ದು, ಕೇಂದ್ರದ ರಾಷ್ಟ್ರೀಯ ಪಂಚಾಯಿತಿ ಪುರಸ್ಕಾರಕ್ಕೆ ಭಾಜನವಾಗಿದೆ. 2022-23ನೇ ಸಾಲಿನಲ್ಲಿ ಆಯಾ ಪಂಚಾಯಿತಿಗಳು ಮಾಡಿದ ಸಾಧನೆಯನ್ನು ಪರಾಮರ್ಶಿಸಿ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು. ವಿವಿಧ ವಿಷಯಗಳನ್ನು ಆಧರಿಸಿ ಒಂಬತ್ತು ವಿಭಾಗದಲ್ಲಿ ಒಂಬತ್ತು ಪಂಚಾಯಿತಿಗಳನ್ನು ಭಾರತ ಸರ್ಕಾರದ …
Read More »
Shaikh BigTv
December 12, 2024
Uncategorized
ಹುಬ್ಬಳ್ಳಿ : ಬಸ್ ಹತ್ತುವ ವೇಳೆ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ನಡೆದಿರುವ ಘಟನೆ ಹುಬ್ಬಳ್ಳಿಯ ಹೊಸೂರು ಬಸ್ ನಿಲ್ದಾಣದಲ್ಲಿ ನಡೆದಿದೆ. ಹುಬ್ಬಳ್ಳಿ-ಗದಗ ಬಸ್ ನಲ್ಲಿ ನಡೆದ ಘಟನೆಯಾಗಿದ್ದು, ಬಸ್ ಹತ್ತುತ್ತಿದ್ದ ಮಹಿಳೆಯ 2.30 ಲಕ್ಷ ಮೌಲ್ಯದ 50 ಗ್ರಾಂ ಮಾಂಗಲ್ಯ ಸರ ಮತ್ತು ಬಳೆ ಕಳ್ಳತನ ಮಾಡಿದ್ದಾರೆ. ಬೈರಿದೇವರಕೊಪ್ಪದ ಶಾಂತಾದೇವಿ ಮದಗುಣಿಕಿ ಆಭರಣ ಕಳೆದುಕೊಂಡ ಮಹಿಳೆಯಾಗಿದ್ದು, ಹೊಸೂರು ನಿಲ್ದಾಣದಲ್ಲಿ ಬಸ್ ಹತ್ತುವಾಗ ಕಳ್ಳರ ಕೈಚಳಕ ತೋರಿದ್ದಾರೆ. ಗದಗ ಬಸ್ …
Read More »
Shaikh BigTv
December 12, 2024
Uncategorized
ಹುಬ್ಬಳ್ಳಿ: ಮನೆಗಳ್ಳತನ ಮಾಡಿ ಎಸ್ಕೆಪ್ ಆಗಿದ್ದ ಇಬ್ಬರು ಕಳ್ಳರು ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆ ಪೊಲೀಸರು ಅರೆಸ್ಟ್ ಮಾಡಿ, ಲಕ್ಷಾಂತರ ರೂಪಾಯಿ ಹಣವನ್ನು ವಶಕ್ಕೆ ಪಡೆದಿದ್ದಾರೆ. ಕೆಲವು ದಿನಗಳ ಹಿಂದೆ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ, ಮರಾಠ ಗಲ್ಲಿಯಲ್ಲಿ ಮನೆಯೊಂದರ ಕಳ್ಳತನ ಮಾಡಿದ ಪ್ರಕರಣ ದಾಖಲಾಗಿತ್ತು. ಸದರಿ ಕಳ್ಳತನ ಪ್ರಕರಣವನ್ನು ಭೇದಿಸಲು ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಎಂ.ಎಂ ತಹಶೀಲ್ದಾರ್ ಮತ್ತವರ ಸಿಬ್ಬಂದಿಯನ್ನೊಳಗೊಂಡ ತಂಡವೊಂದನ್ನು …
Read More »