Breaking News

Uncategorized

ಜೂ.20ಕ್ಕೆ ಬೆಂಗಳೂರಿಗೆ ಪ್ರಧಾನಮಂತ್ರಿ ಆಗಮನ

ಬೆಂಗಳೂರು: ಜೂನ್.20ಕ್ಕೆ ಬೆಂಗಳೂರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಮಿಸುತ್ತಿದ್ದು, ಈ ವೇಳೆ 20 ಗಂಟೆಗಳಲ್ಲಿ 10 ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಸೋಮವಾರ ನಗರಕ್ಕೆ ಆಗಮಿಸಿರುವ ಮೋದಿಯವರು ನಗರದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.ನಂತರ ಜೂನ್.21ಕ್ಕೆ ಮೈಸೂರಿಗೆ ಭೇಟಿ ನೀಡಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

Read More »

ಮಾಧ್ಯಮಗಳ ವಿರುದ್ಧ ಕಿಡಿಕಾರಿದ ಮಾಜಿ ಸಿಎಂ

ಬಾಗಲಕೋಟೆ: ನನಗೆ ಪ್ರಚಾರದ ಅವಶ್ಯಕತೆ ಇಲ್ಲ, ಸುದ್ದಿ ಬೇಕೆಂದರೆ ನೀವು ಕಾಯಲೇಬೇಕು ಎಂದು ಮಾಧ್ಯಮಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲಘುವಾಗಿ ಹೇಳಿಕೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಮಾಧ್ಯಮದವರಿಗೆ ಅಷ್ಟು ಇಂಪಾರ್ಟೆನ್ಸ್​ ಕೊಡಬಾರದು, ನನಗೆ ಪ್ರಚಾರ ಬೇಕಿಲ್ಲ, ಅವಶ್ಯಕತೆಯೂ ಇಲ್ಲ, ಎಂದು ಹೇಳಿದ್ದಾರೆ.ಟಿಆರ್​ಪಿ ಬೇಕಾಗಿರುವುದು ಮಾಧ್ಯಮದವರಿಗೆ ನಮಗಲ್ಲ, ಇವರಿಗೆ ಮಹತ್ವ ಕೊಡಲೇಬಾರದು, ಸುದ್ದಿ ಕೊಡೋರು ನಾವು, ಬೇಕಾಗಿರೋದು ನಿಮಗೆ ಹಾಗಾಗಿ ನೀವು ಕಾಯಬೇಕು ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಕ್ಷೇತ್ರದ …

Read More »

ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣ : ವಿದ್ಯಾರ್ಥಿ ಆತ್ಮಹತ್ಯೆ

ಕುಮಟಾ : ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಯೋರ್ವ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಲನಗದ್ದೆ ಎಂಬಲ್ಲಿ ನಡೆದಿದೆ. ಕುಮಟಾ ತಾಲೂಕಿನ ಹೊಲನಗದ್ದೆ ಕಡ್ಲೆ ನಿವಾಸಿ ಪ್ರಣಮ್ ಈಶ್ವರ ನಾಯ್ಕ (18) ಮೃತ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಪಿಯುಸಿ ಫಲಿತಾಂಶದಲ್ಲಿ ಪ್ರಣವ್ ಫೇಲ್ ಆಗಿದ್ದು, ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ದೂರಲಾಗಿದೆ. ತಂದೆ ಆಟೋ ಚಾಲಕನಾಗಿದ್ದು, ಒಬ್ಬನೇ ಮಗನಾದ ಈತನನ್ನು ಬಹಳ ಪ್ರೀತಿಯಿಂದ ಬೆಳೆಸಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಕುಮಟಾ …

Read More »

ರಾಜ್ಯದಲ್ಲಿ ಎರಡನೇ ಸ್ಥಾನಗಳಿಸಿದ ಆಳ್ವಾಸ್ ಕಾಲೇಜು

ಮಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸಮರ್ಥ್ ವಿಶ್ವನಾಥ್ ಜೋಶಿ (595) ಹಾಗೂ ವಿಜ್ಞಾನ ವಿಭಾಗದ ಶ್ರೀಕೃಷ್ಣ ಪೆಜತ್ತಾಯ ಪಿ.ಎಸ್. (597) ಅಂಕ ಪಡೆದು ರಾಜ್ಯದಲ್ಲಿ ಎರಡನೇ ಸ್ಥಾನಗಳಿಸಿದ್ದಾರೆ. ಇಬ್ಬರು ವಿದ್ಯಾರ್ಥಿಗಳಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ತಲಾ 1 ಲಕ್ಷ ರೂ. ನಗದು ಬಹುಮಾನ ಘೋಷಿಸಿದ್ದಾರೆ.

Read More »

ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಆರಂಭ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಆರಂಭವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಶುಕ್ರವಾರ ಅತ್ಯಧಿಕ 146.5ಮಿಮೀ ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ. ಇಂದು ಸಂಜೆಯಿಂದ ನಾಳೆಯವರೆಗೂ ಮಲೆನಾಡು ಮತ್ತು ಕರಾವಳಿಯಲ್ಲಿ ಅಧಿಕ ಮಳೆಯಾಗುವ ಸಾಧ್ಯತೆಯನ್ನು ಕೆಸ್‌ಎನ್‌ಡಿಎಂಸಿ ತಿಳಿಸಿದೆ. ಶನಿವಾರ ಮಧ್ಯಾಹ್ನ ಈ ಬಗ್ಗೆ ಟ್ವೀಟ್‌ ಮಾಡಿರುವ ಸಂಸ್ಥೆ, ಮಲೆನಾಡಿನಾದ್ಯಂತ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ …

Read More »

ರಾಜ್ಯಕ್ಕೆ ಟಾಪ ಆದ ದಕ್ಷಿಣ ಕನ್ನಡ ಜಿಲ್ಲೆ

ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಈ ಬಾರಿ ಶೇ.61.88 ಫಲಿತಾಂಶ ಬಂದಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಶೇಖಡವಾರು ಫಲಿತಾಂಶದಲ್ಲಿ 0.8 ಹೆಚ್ಚಾಗಿದೆ. ಶನಿವಾರ ಬೆಳಗ್ಗೆ 11.30ಕ್ಕೆ ಮಲ್ಲೆಶ್ವರದಲ್ಲಿರುವ ಪದವಿ ಪೂರ್ವ ಶಿಕ್ಷಣ ಮಂಡಳಿ ಕಚೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶ ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಸಚಿವರು, ಒಟ್ಟಾರೆ ಫಲಿತಾಂಶ ಕಲಾ ವಿಭಾಗದಲ್ಲಿ ಶೇ.48.71, ವಾಣಿಜ್ಯ ವಿಭಾಗದಲ್ಲಿ …

Read More »

ವಿಜ್ಞಾನ ವಿಭಾಗದಲ್ಲಿ 13 ವಿದ್ಯಾರ್ಥಿಗಳು ಟಾಪ್ ರ್‍ಯಾಂಕ್

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಹೊರ ಬಂದಿದ್ದು, ವಿಜ್ಞಾನ ವಿಭಾಗದಲ್ಲಿ 13 ವಿದ್ಯಾರ್ಥಿಗಳು ಟಾಪ್ ರ್‍ಯಾಂಕ್ ಗಳಿಸಿದ್ದಾರೆ .ಅದರಲ್ಲಿ 600 ಅಂಕಕ್ಕೆ 598 ಅಂಕ ಗಳಿಸುವ ಮೂಲಕ ಬೆಂಗಳೂರು ಜಯನಗರದ ಆರ್ ವಿ. ಕಾಲೇಜಿನ ಸಿಮ್ರಾನ್ ಶೇಷರಾವ್ ಅವರು ರಾಜ್ಯಕ್ಕೆ ಟಾಪರ್ ಹೊರ ಹೊಮ್ಮಿದ್ದಾರೆ. ಸೆಂಟ್ ಅಲೋಷಿಯಸ್ ಕಾಲೇಜಿನ ಇಲಾಂ ಮಹಮದ್ ರಫಿಕ್ ದವೂದ್ ಸಹೇಬ್ ಅವರು 597 ಅಂಕ ಗಳಿಸುವ ಮೂಲಕ ದ್ವಿತೀಯ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ.

Read More »

ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿಗೆ ಅದ್ದೂರಿ ಸ್ವಾಗತ: ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮ

ಹುಬ್ಬಳ್ಳಿ: ದ್ವೀತಿಯ ಪಿಯುಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದ್ದು,ವಾಣಿಜ್ಯನಗರಿ ಹುಬ್ಬಳ್ಳಿಯ ವಿದ್ಯಾರ್ಥಿನಿ ಮೂರನೇ ರ್ಯಾಂಕ್ ಪಡೆಯುವ ಮೂಲಕ ಸಾಧನೆ ಮಾಡಿದ್ದು, ಎಸ್.ಜೆ.ಎಂ.ವಿ.ಎಸ್ ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಹುಬ್ಬಳ್ಳಿಯ ಎಸ್.ಜೆ.ಎಂ.ವಿ.ಎಸ್ ಕಾಲೇಜಿನ ವಿದ್ಯಾರ್ಥಿನಿ‌ಗೆ ಸಾನಿಕಾ ಗುಂಡೂರಾವ್ ಮೂರನೇ ರ‌್ಯಾಂಕ್ ಪಡೆದ ವಿದ್ಯಾರ್ಥಿನಿಯಾಗಿದ್ದು, ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಕಾಲೇಜಿಗೆ ಆಗಮಿಸಿದ್ದು, ಕಾಲೇಜಿನ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದ ನೇತೃತ್ವದಲ್ಲಿ ವಿದ್ಯಾರ್ಥಿನಿಯರು ವಾದ್ಯಗಳೊಂದಿಗೆ ಅದ್ದೂರಿಯಾಗಿ ಸ್ವಾಗತಿಸಿದ್ದು, ಕಾಲೇಜಿನ ಆವರಣದಲ್ಲಿ ಸಂಭ್ರಮ ಮನೆ ಮಾಡಿತ್ತು. …

Read More »

ದ್ವೀತಿಯ ಪಿಯುಸಿ ಫಲಿತಾಂಶ: ಹುಬ್ಬಳ್ಳಿಯ ವಿದ್ಯಾರ್ಥಿನಿ ಸಾಧನೆ

ಹುಬ್ಬಳ್ಳಿ: ದ್ವೀತಿಯ ಪಿಯುಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದ್ದು,ವಾಣಿಜ್ಯನಗರಿ ಹುಬ್ಬಳ್ಳಿಯ ವಿದ್ಯಾರ್ಥಿನಿ ಮೂರನೇ ರ್ಯಾಂಕ್ ಪಡೆಯುವ ಮೂಲಕ ಸಾಧನೆ ಮಾಡಿದ್ದಾಳೆ. ಹುಬ್ಬಳ್ಳಿಯ ಎಸ್.ಜೆ.ಎಂ.ವಿ.ಎಸ್ ಕಾಲೇಜಿನ ವಿದ್ಯಾರ್ಥಿನಿ‌ಗೆ ಮೂರನೇ ರ‌್ಯಾಂಕ್ ಬಂದಿದ್ದು,ಸಾನಿಕಾ ಗುಂಡೂರಾವ್ ಮೂರನೇ ರ‌್ಯಾಂಕ್ ಪಡೆದ ವಿದ್ಯಾರ್ಥಿನಿಯಾಗಿದ್ದಾಳೆ. 593 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಮೂರನೇ ರ‌್ಯಾಂಕ್ ಪಡೆದಿದ್ದು, ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜು ಹಾಗೂ ಕುಟುಂಬಸ್ಥರಲ್ಲಿ ಸಂತೋಷ ಮನೆ ಮಾಡಿದೆ‌.

Read More »

ಕೇಂದ್ರ ಸರ್ಕಾರ ಅಗ್ನಿಪಥ ಯೋಜನೆ ಸ್ಥಗಿತಗೊಳಿಸು ಪ್ರತಿಭಟನಾಕಾರರೊಂದಿಗೆ ಮಾತನಾಡಲಿ : ಸಿದ್ದರಾಮಯ್ಯ

ಹುಬ್ಬಳ್ಳಿ: ಕೇಂದ್ರ ಸರ್ಕಾರ ಕೂಡಲೇ ಅಗ್ನಿಪಥ ಯೋಜನೆಯನ್ನು ಸ್ಥಗಿತಗೊಳಿಸಿ ಪ್ರತಿಭಟನಾಕಾರರೊಂದಿಗೆ ಮಾತನಾಡಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದ ಅಗ್ನಿಪಥ್ ಯೋಜನೆಗೆ ನಮ್ಮ ವಿರೋಧವಿದೆ. ನಾಲ್ಕು ವರ್ಷದ ಬಳಿಕ ಆಯ್ಕೆ ಆದ ಅಭ್ಯರ್ಥಿಗಳ‌ ಪರಿಸ್ಥಿತಿ ಏನು? ಯಾರೂ ಹಿಂಸಾತ್ಮಕ ಪ್ರತಿಭಟನೆಗಳನ್ನು ನಡೆಸಬಾರದು. ಶಾಂತಿಯುತವಾಗಿ ಪ್ರತಿಭಟನೆ ಮಾಡಬೇಕು ಅದನ್ನು ಬಿಟ್ಟು ಹಿಂಸಾತ್ಮಕ ಕೃತ್ಯಕ್ಕೆ ಮುಂದಾಗಬಾರದು. ಪ್ರತಿಭಟನಾಕಾರರ ಜೊತೆ ಸರ್ಕಾರ ಮಾತನಾಡಬೇಕು. ಕೂಡಲೇ ಸರ್ಕಾರ ಅಗ್ನಿಪಥ್ …

Read More »