Breaking News

Uncategorized

ಧಾರವಾಡದ ಅನೇಕ ಪ್ರದೇಶಗಳಲ್ಲಿ ಎನ್.ಶಶಿಕುಮಾರ ಅವರು ಬೈಕ್ ಮೇಲೆ ಗಸ್ತು

ಧಾರವಾಡ: ಧಾರವಾಡದ ಅನೇಕ ಪ್ರದೇಶಗಳಲ್ಲಿ ಪೊಲೀಸ್‌ ಆಯುಕ್ತ ಎನ್.ಶಶಿಕುಮಾರ ಅವರು ಬೈಕ್ ಮೇಲೆ ಗಸ್ತು ತಿರುಗಿದ್ದಾರೆ. ಸಾರ್ವಜನಿಕರು ಪೊಲೀಸರೊಂದಿಗೆ ಸ್ನೇಹದಿಂದಿರಬೇಕು. ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡಬಾರದು. ಸಾರ್ವಜನಿಕರು ಪೊಲೀಸರೊಂದಿಗೆ ಬಾಂಧವ್ಯದಿಂದ ಇರಬೇಕು ಎಂಬ ಉದ್ದೇಶದಿಂದ ಧಾರವಾಡದ ಅನೇಕ ಪ್ರದೇಶಗಳಲ್ಲಿ ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಅವರು ಬೈಕ್‌ ಮೇಲೆ ಸಂಚರಿಸಿ ಗಮನಸೆಳೆದರು. ಅಲ್ಲದೇ ಸಾರ್ವಜನಿಕರ ಸಮಸ್ಯೆ ಏನು ಎಂಬುದರ ಕುರಿತು ಅನೇಕ ಕಡೆ ಸಾರ್ವಜನಿಕರ ಅಹವಾಲನ್ನೂ ಅವರು ಸ್ವೀಕರಿಸಿದರು. ಪೊಲೀಸ್‌ …

Read More »

ನೂರಾರು ಸಮಾಜದ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದು ಖಂಡನೀಯ

ಹುಬ್ಬಳ್ಳಿ: ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ, ಕೂಡಲ ಸಂಗಮದ ಪೀಠಾಧ್ಯಕ್ಷರ ನೇತೃತ್ವದಲ್ಲಿ ಬೆಳಗಾವಿ ಸುವರ್ಣ ಸೌಧಕ್ಕೆ ಪಾದಯಾತ್ರೆ ಕೈಗೊಂಡಿದ್ದ ನೂರಾರು ಸಮಾಜದ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದನ್ನು ಹೋರಾಟ ಸಮಿತಿ ಧಾರವಾಡ ಜಿಲ್ಲಾ ಘಟಕದ ವಿರೇಶ ಉಂಡಿ ಬಲವಾಗಿ ಖಂಡಿಸಿದ್ದಾರೆ. ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ನೀಡಬೇಕೆಂಬ ಸಮಾಜ ಬಾಂಧವರ ನ್ಯಾಯಯುತ ಬೇಡಿಕೆಯ ಹಕ್ಕೊತ್ತಾಯದೊಂದಿಗೆ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ನಡೆಸಲಾದ ಶಾಂತಿಯುತ ಪಾದಯಾತ್ರಿಕರ ಮೇಲೆ …

Read More »

ರಾಜ್ಯ ಸರ್ಕಾರದಿಂದ ಎನ್ ಪಿ ಎಸ್ ನೌಕರರ ಕುಟುಂಬ ಪಿಂಚಣಿ ಬಗ್ಗೆ ಮಹತ್ವದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಸೇವೆಯಲ್ಲಿರುವಾಗಲೇ ಮರಣ ಹೊಂದಿದ ಎನ್ ಪಿ ಎಸ್ ನೌಕರರ ಕುಟುಂಬ ಪಿಂಚಣಿ ಪ್ರಸ್ತಾವನೆಯೊಂದಿಗೆ ಪರಿಶೀಲನಾ ಪಟ್ಟಿಯನ್ನು ಸಲ್ಲಿಸಲು ಮಹತ್ವದ ಆದೇಶ ಹೊರಡಿಸಿದೆ. ಈ ಸಂಬಂಧ ಖಜಾನೆ ಆಯುಕ್ತಾಲಯದ ಆಯುಕ್ತರು ರಾಜ್ಯದ ಎಲ್ಲಾ ಖಜಾನೆಯ ಪ್ರಭಾರಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಸೇವೆಯಲ್ಲಿರುವಾಗಲೇ ಮರಣ ಹೊಂದಿದ ಎನ್.ಪಿ.ಎಸ್. ನೌಕರರ ಕುಟುಂಬ ಪಿಂಚಣಿ ಪರಿವರ್ತನೆಯ ಪ್ರಸ್ತಾವನೆಗಳನ್ನು ರಾಜ್ಯದ ಖಜಾನೆಗಳಿಂದ ಎನ್.ಪಿ.ಎಸ್. ಘಟಕಕ್ಕೆ ಸಲ್ಲಿಸುತ್ತಿರುವುದು ಸರಿಯಷ್ಟೇ, ಸದರಿ ಪುಸ್ತಾವನೆಗಳಲ್ಲಿ ಡಿ.ಡಿ.ಓ.ರವರು ಅಪೂರ್ಣ …

Read More »

ರೈಲ್ವೆ ತಿದ್ದುಪಡಿ ಮಸೂದೆ ಅಂಗೀಕಾರ: ಖಾಸಗೀಕರಣಕ್ಕೆ ಅವಕಾಶ ನೀಡುವುದಿಲ್ಲವೆಂದ ಕೇಂದ್ರ ಸರ್ಕಾರ

ನವದೆಹಲಿ: ಲೋಕಸಭೆಯಲ್ಲಿ ರೈಲ್ವೆ ಕಾನೂನುಗಳಿಗೆ ತಿದ್ದುಪಡಿ ತರುವ ರೈಲ್ವೆ (ತಿದ್ದುಪಡಿ) ಮಸೂದೆ-2024 ಅನ್ನು ಬುಧವಾರ ಅಂಗೀಕರಿಸಿದ್ದು, ಇದು ಭಾರತೀಯ ರೈಲ್ವೆಯನ್ನು ಖಾಸಗೀಕರಣ ಮಾಡುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ರೈಲ್ವೆ ತಿದ್ದುಪಡಿ ಮಸೂದೆ ಮೇಲಿನ ಚರ್ಚೆಗೆ ಪ್ರತಿಕ್ರಿಯಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, ತಿದ್ದುಪಡಿಯು ರೈಲ್ವೆಯನ್ನು ಖಾಸಗೀಕರಣಗೊಳಿಸುತ್ತದೆ ಎಂಬ ನಕಲಿ ನಿರೂಪಣೆಯನ್ನು ಹುಟ್ಟುಹಾಕಲಾಗಿದೆ. ಸಂವಿಧಾನದ ಬಗ್ಗೆ ಅವರ (ವಿರೋಧ) ನಕಲಿ ನಿರೂಪಣೆ ವಿಫಲವಾಗಿದೆ .ಆದ್ರೆ ಈಗ …

Read More »

ಭಾರತೀಯ ರೈಲ್ವೆಯಲ್ಲಿ 58,642 ಖಾಲಿ ಹುದ್ದೆಗಳ ನೇಮಕಾತಿ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

ನವದೆಹಲಿ : ಕೇಂದ್ರ ಸರ್ಕಾರದ ಪ್ರಕಾರ ರೈಲ್ವೇಯಲ್ಲಿ ಯುವಕರಿಗೆ ಗರಿಷ್ಠ ಅವಕಾಶಗಳನ್ನು ಒದಗಿಸಲು ಭಾರತೀಯ ರೈಲ್ವೇ ಬದ್ಧವಾಗಿದೆ. 58,642 ಖಾಲಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ರೈಲ್ವೆ ಸಚಿವ ವೈಷ್ಣವ್ ಅವರು ಲೋಕಸಭೆಯಲ್ಲಿ ರೈಲ್ವೆ (ತಿದ್ದುಪಡಿ) ಮಸೂದೆ 2024 ರ ಮೇಲಿನ ಚರ್ಚೆಗೆ ಉತ್ತರಿಸಿದರು. ಕಾಂಗ್ರೆಸ್‌ನ ಯುಪಿಎ ಸರ್ಕಾರದ ಅವಧಿಯಲ್ಲಿ 4,11,000 ಜನರಿಗೆ ರೈಲ್ವೆಯಲ್ಲಿ ಉದ್ಯೋಗ ದೊರೆತಿದ್ದರೆ, ಮೋದಿ ಸರ್ಕಾರದಲ್ಲಿ 5,02,000 …

Read More »

ಪಂಚಮಸಾಲಿ ಮೀಸಲಾತಿಗೆ ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಜಯಮೃತ್ಯುಂಜಯ ಸ್ವಾಮೀಜಿ

ಬೆಳಗಾವಿ : ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಮತ್ತಷ್ಟೂ ಹೋರಾಟ ತೀವ್ರಗೊಂಡಿದೆ. ನಾಳೆ ರಾಜ್ಯಾದ್ಯಂತ ರಸ್ತೆ ತಡೆದು ಪ್ರತಿಭಟನೆ ಮಾಡುವಂತೆ ಪಂಚಮಸಾಲಿ ಸಮುದಾಯದವರಿಗೆ ಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಿನ್ನೆ ಸುವರ್ಣಸೌಧದಲ್ಲಿ ಹೋರಾಟ ನಿರತರ ಮೇಲೆ ಪೊಲೀಸರೇ ಸಿವಿಲ್ ಡ್ರೆಸ್ ಧರಿಸಿ ಹಲ್ಲೆ ನಡೆಸಿದ್ದಾರೆ. ದ್ವೇಷದಿಂದ ಕಲ್ಲು ಹೊಡೆಯುವ ಕೆಲಸ ಮಾಡಿದ್ದು, ಹೋರಾಟವನ್ನು ಪೂರ್ವಗ್ರಹ ಪೀಡಿತರಾಗಿ ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಹೃದಯಕ್ಕೆ ಚುಚ್ಚುವಂತೆ ಹೊಡೆದಿದ್ದಾರೆ. ಈ …

Read More »

ಬರ ನಷ್ಟ ಪರಿಹಾರ ಸಮಸ್ಯೆ ನೀವೇ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಿ: ಸುಪ್ರೀಂ ಕೋರ್ಟ್‌

ನವದೆಹಲಿ: ಬರದಿಂದ ಆಗಿರುವ ನಷ್ಟ ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ಕೋರಿ ಕರ್ನಾಟಕ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್‌, ಸಮಸ್ಯೆಯನ್ನು ನೀವೇ ಮಾತುಕತೆ ನಡೆಸಿ ಪರಿಹರಿಸಿಕೊಳ್ಳಿ ಎಂದು ಮೌಖಿಕವಾಗಿ ಸಲಹೆ ನೀಡಿದೆ. 2023ರಲ್ಲಿ ಬರದಿಂದ ತತ್ತರಿಸಿದ್ದ ರಾಜ್ಯಕ್ಕೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್‌ಡಿಆರ್‌ಎಫ್‌)ಯಿಂದ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕು ಎಂದು ಕರ್ನಾಟಕ ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು. ಮಂಗಳವಾರ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾದ …

Read More »

ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಲಾಠಿಚಾರ್ಜ್ ಖಂಡಿಸಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆ

ಬೆಳಗಾವಿ: ಬೆಳಗಾವಿ ಸುವರ್ಣಸೌಧದ ಮುಂದೆ ಲಿಂಗಾಯತ ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿಚಾರ್ಜ್‌ ಮಾಡಿದ್ದನ್ನು ಖಂಡಿಸಿ ಡಿಸೆಂಬರ್ 12ರಂದು ರಾಜ್ಯಾದ್ಯಂತ ಪ್ರತಿಭಟನೆ ಘೋಷಣೆ ಮಾಡಲಾಗಿದೆ. ಲಾಠಿಚಾರ್ಜ್‌ ಮಾಡಿದ ಸರ್ಕಾರದ ಕ್ರಮ ಖಂಡಿಸಿ ಡಿ.12ರಂದು ರಾಜ್ಯದಾದ್ಯಂತ ಹೋರಾಟ ಮಾಡಲು ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ. ನಿನ್ನೆ ಸುವರ್ಣಸೌಧದ ಮುಂದೆ ನಡೆಯುತ್ತಿದ್ದ ಹೋರಾಟ ಹಿಂಸಾಚಾರಕ್ಕೆ ತಿರುಗಿತ್ತು. ಮಂಗಳವಾರ ರಾತ್ರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ, ‘ನಮ್ಮ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ. …

Read More »

ನಾಳೆ(ಡಿ.12) ಕೇಂದ್ರ ಸಚಿವ ಸಂಪುಟ ಸಭೆ ನಿಗದಿ

ನವದೆಹಲಿ : ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ಕೇಂದ್ರ ಸಚಿವ ಸಂಪುಟ ನಾಳೆ (ಡಿಸೆಂಬರ್ 12) ರಾಷ್ಟ್ರ ರಾಜಧಾನಿಯಲ್ಲಿ ಸಭೆ ಸೇರಲಿದೆ ಎಂದು ವರದಿಯಾಗಿದೆ. ನವೆಂಬರ್ 25 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕ್ಯಾಬಿನೆಟ್ ಪ್ಯಾನ್ 2.0 ಗೆ ಅನುಮೋದನೆ ನೀಡಿತು. ಪ್ಯಾನ್ ಕಾರ್ಡ್ ನವೀಕರಣದ ಬಗ್ಗೆ ಮಾತನಾಡಿದ ವೈಷ್ಣವ್, “ಪ್ಯಾನ್ ಕಾರ್ಡ್ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ, ವಿಶೇಷವಾಗಿ ಮಧ್ಯಮ ವರ್ಗ ಮತ್ತು ಸಣ್ಣ ವ್ಯವಹಾರಗಳಿಗೆ. ಇದು …

Read More »

ಜ.1 ರಿಂದ ಎಲ್ಲಾ ಭೂ ದಾಖಲೆಗಳ ಡಿಜಿಟಲೀಕರಣ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ : ರೈತರಿಗಾಗುತ್ತಿರುವ ಶೋಷಣೆಗಳನ್ನು ತಪ್ಪಿಸುವ ಸಲುವಾಗಿ ಜನವರಿ.01 ರಿಂದ ಈವರೆಗಿನ ಎಲ್ ಭೂ-ಮಂಜೂರು ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಲು ಕ್ರಮವಹಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನಕ್ಕೆ ಮಾಹಿತಿ ನೀಡಿದರು. ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ್ದ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಬಗರ್ ಹುಕುಂ ಯೋಜನೆ ಅಡಿಯಲ್ಲಿ 1999 ರಿಂದ 2004ರ ಅವಧಿಯಲ್ಲಿ ಜಮೀನು ಮಂಜೂರು ಮಾಡಲಾಗಿದ್ದರೂ ಸಾಗುವಳಿ ಚೀಟಿ ನೀಡಿಲ್ಲ, ಕೆಲವರಿಗೆ ಸಾಗುವಳಿ ಚೀಟಿ ನೀಡಿದ್ದರೂ …

Read More »