Breaking News

Uncategorized

ಕಬ್ಬಿನ ದರ ನಿಗದಿಪಡಿಸದಿದ್ದಲ್ಲಿ ರಾಜ್ಯ ರೈತ ಸಂಘದಿಂದ ಹೋರಾಟದ ಎಚ್ಚರಿಕೆ

ಬೀದರ್‌: ಜಿಲ್ಲೆಯಲ್ಲಿ ಸಕ್ಕರೆ ಕಾರ್ಖಾನೆಗಳು ಕಳೆದ ಒಂದು ತಿಂಗಳಿಂದ ಕಬ್ಬು ನುರಿಸುವಿಕೆ ಆರಂಭಿಸಿದ್ದರೂ ಇದುವರೆಗೆ ದರ ನಿಗದಿಪಡಿಸಿಲ್ಲ. ನಾಲ್ಕೈದು ದಿನಗಳಲ್ಲಿ ಬೆಲೆ ನಿಗದಿಪಡಿಸದಿದ್ದಲ್ಲಿ ಹೈದರಾಬಾದ್‌-ಮುಂಬೈ ರಾಷ್ಟ್ರೀಯ ಹೆದ್ದಾರಿ ಬಂದ್‌ ಮಾಡಿ ಹೋರಾಟ ನಡೆಸಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಎಚ್ಚರಿಕೆ ನೀಡಿದೆ. ರೈತ ಸಂಘದ ಮುಖಂಡರು ನಗರದಲ್ಲಿ ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು …

Read More »

ಬೆಂಗಳೂರಿನಲ್ಲಿ ಪ್ಯಾರಿಸ್ ಕಂಪನಿಯ ತಯಾರಿಕಾ ಘಟಕ: ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ಕರ್ನಾಟಕಕ್ಕೆ ಬಂಡವಾಳ ಹೂಡಿಕೆ ಆಕರ್ಷಿಸಲು ಪ್ಯಾರಿಸ್‌ ಪ್ರವಾಸದಲ್ಲಿರುವ ಕರ್ನಾಟಕ ರಾಜ್ಯ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಕರ್ನಾಟಕ ಸರ್ಕಾರ ಬಂಡವಾಳ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ. ಪರಿಣಾಮ ಪ್ಯಾರಿಸ್ ಕಂಪನಿಯು ಬೆಂಗಳೂರಿನಲ್ಲಿ ತನ್ನ ತಯಾರಿಕಾ ಘಟಕ ಸ್ಥಾಪಿಸಲು ಸಹಮತ ನೀಡಿದೆ. ಇದರಿಂದ ಸಾವಿರಾರು ಉದ್ಯೋಗ ಸೃಷ್ಟಿಯಾಗಲಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ 2025ರ ಫೆಬ್ರವರಿಯಲ್ಲಿ ನಡೆಯಲಿರುವ ‘ಕರ್ನಾಟಕ ಜಾಗತಿಕ ಹೂಡಿಕೆದಾರರ ಸಮಾವೇಶ 2025’ ಸಂಬಂಧ …

Read More »

ಪಿಎಂ ಕಿಸಾನ್ ಸಮ್ಮಾನ್: ಫಲಾನುಭವಿಗಳ ಸಂಖ್ಯೆ 6 ಲಕ್ಷ ಕುಸಿತ

ನವದೆಹಲಿ: ಕರ್ನಾಟಕದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಪ್ರಧಾನಮಂತ್ರಿ ಕೃಷಿ ಸಮ್ಮಾನ್‌ ಯೋಜನೆಯ (ಪಿಎಂ-ಕಿಸಾನ್‌) ಫಲಾನುಭವಿಗಳ ಸಂಖ್ಯೆ ಐದು ಲಕ್ಷದಿಂದ ಆರು ಲಕ್ಷದಷ್ಟು ಕುಸಿತವಾಗಿದೆ. ಲೋಕಸಭೆಯಲ್ಲಿ ಮೈಸೂರು ಸಂಸದ ಯದುವೀರ್ ಒಡೆಯರ್‌ ಮಂಗಳವಾರ ಕೇಳಿದ ಪ್ರಶ್ನೆಗೆ ಕೃಷಿ ಖಾತೆ ರಾಜ್ಯ ಸಚಿವ ರಾಮನಾಥ್‌ ಠಾಕೂರ್‌ ನೀಡಿರುವ ಉತ್ತರದಲ್ಲಿ ಈ ಮಾಹಿತಿ ಇದೆ. 13ನೇ ಕಂತಿನವರೆಗೆ (2023ರ ಮಾರ್ಚ್) ರಾಜ್ಯದ ಫಲಾನುಭವಿಗಳ ಸಂಖ್ಯೆ 49 ಲಕ್ಷದಷ್ಟು ಇತ್ತು. 14ನೇ ಕಂತಿನಲ್ಲೂ ಫಲಾನುಭವಿಗಳ ಸಂಖ್ಯೆ …

Read More »

ಬಾಗಲಕೋಟೆ: ₹36 ಲಕ್ಷ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ

ರಾಂಪುರ: ಸಮೀಪದ ಹಳ್ಳೂರ ಗ್ರಾಮದಲ್ಲಿ ಈಚೆಗೆ ₹36 ಲಕ್ಷ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಚ್.ವೈ.ಮೇಟಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಶಾಸಕರು, ಮುಖ್ಯಮಂತ್ರಿಗಳ ವಿಶೇಷ ಲೆಕ್ಕ ಶೀರ್ಷಿಕೆಯಡಿ ಮಂಜೂರಾದ ಅನುದಾನದಲ್ಲಿ ಹಳ್ಳೂರ- ಬೆನಕಟ್ಟಿ ರಸ್ತೆ ಅಭಿವೃದ್ಧಿಗೆ ₹6 ಲಕ್ಷ, ಸ್ಥಳೀಯ ಮಹಾಂತಪ್ಪ ಘೋರ್ಪಡೆ ಅವರ ಮನೆಯಿಂದ ಕೂಡಲಸಂಗಮ ರಸ್ತೆಯವರೆಗೆ ಸಿಸಿ ರಸ್ತೆ ನಿರ್ಮಾಣಕ್ಕೆ ₹10 ಲಕ್ಷ, ಹಳ್ಳೂರ- ಬನ್ನಿಕಟ್ಟಿ ರಸ್ತೆ ನಿರ್ಮಾಣಕ್ಕೆ ₹10 …

Read More »

ಕೃಷಿ ಚಟುವಟಿಕೆಗಳು ತ್ವರಿತಗತಿಯಲ್ಲಿ ಸಾಗುತ್ತಿರುವುದು ಶ್ಲಾಘನೀಯ: ಬಿ.ಆರ್. ಪಾಟೀಲ

ನವಲಗುಂದ: ಹಳೇ ಒಕ್ಕಲುತನ ಪದ್ಧತಿ ಇಂದು ಬದಲಾಗಿದ್ದು, ಎತ್ತು ಚಕ್ಕಡಿಗಳೇ, ನೇಗಿಲು ಹೋಗಿ ಯಂತ್ರಮಯವಾಗಿದ್ದು, ಕೃಷಿ ಚಟುವಟಿಕೆಗಳು ತ್ವರಿತಗತಿಯಲ್ಲಿ ಸಾಗುತ್ತಿರುವುದು ಶ್ಲಾಘನೀಯ ಎಂದು ಶಾಸಕ ಬಿ.ಆರ್. ಪಾಟೀಲ ಹೇಳಿದರು. ನವಲಗುಂದ ಮತಕ್ಷೇತ್ರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಶಂಕರ ಕಾಲೇಜಿನ ಆವರಣದಲ್ಲಿ ನಡೆದ ಟಗರಿನ ಕಾಳಗ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು. ಹೊಲಗಳಿಗೆ ಟ್ಯಾಕ್ಟ‌ರ್, ರಾಶಿಮಷಿನ್, ದಾನ್ಯ ತರಾಕ್ ದೊಡ್ಡದೊಡ್ಡ ವಾಹನಗಳು ಹೋಗ್ತಾವೆ ಹೋಗಲು ಚಕ್ಕಡಿ ರಸ್ತೆಗಳು ಬೇಕು. ಅಂತಹ ಚಕ್ಕಡಿದಾರಿ ಹರಿಕಾರ …

Read More »

ಎಸ್.ಎಂ. ಕೃಷ್ಣ ಅವರಿಗೆ ಸಂತಾಪ ಸೂಚಿಸಿದ ಶೆಟ್ಟರ್

ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ವಿದೇಶಾಂಗ ಸಚಿವರಾಗಿದ್ದ ಎಸ್.ಎಂ. ಕೃಷ್ಣ ಅವರು ತಮ್ಮ 92 ನೇ ವರ್ಷಕ್ಕೆ ವಿಧಿವಶರಾದ ಸುದ್ದಿ ತಿಳಿದು ಅತೀವ ದುಃಖಭರಿತನಾಗಿರುವೆ ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಬೆಳಗಾವಿ ಲೋಕಸಭಾ ಸದಸ್ಯರಾದ ಜಗದೀಶ ಶೆಟ್ಟ‌ರ್ ಅವರು ಸಂತಾಪ ತಿಳಿಸಿದ್ದಾರೆ. ಎಸ್.ಎಮ್ ಕೃಷ್ಣಾ ಹಾಗೂ ತಮ್ಮ ಪರಿಚಯ ತುಂಬಾ ಕಾಲದ್ದು, ಅವರ ಸರಳತೆಯ ಸ್ವಭಾವ, ಸಜ್ಜನಿಕೆಯ ಗುಣಗಳು ನನಗೆ ಬಹಳ ಇಷ್ಟವಾಗಿದ್ದವು. ಯಾವುದೇ ಒಂದು ಬಿಕಟ್ಟಿನ …

Read More »

ಕೊರಟಗೆರೆ: ರೈತರಿಂದ 26 ರೂ.ಗೆ 1 ಲೀ. ಹಾಲು ಖರೀದಿಸಿ ಗ್ರಾಹಕರಿಗೆ 44 ರೂ.ಗೆ ಮಾರಾಟ

ಕೊರಟಗೆರೆ: ನಮ್ಮಿಂದ 1ಲೀ ಹಾಲಿಗೆ 26ರೂನಂತೆ ಖರೀದಿಸಿ ನಮ್ಮ ಮುಂದೆಯೇ ನಮ್ಮೂರಿನ ಗ್ರಾಹಕರಿಗೆ 1ಲೀ ಹಾಲಿಗೆ 44ರೂಗೆ ಮಾರಾಟ ಮಾಡ್ತಾರೇ. ನಾವು ಪ್ರಶ್ನೆ ಮಾಡಿದ್ರೇ ನಿಮ್ಮ ಹಾಲಿನಲ್ಲಿ ಡಿಗ್ರಿ ಬರುತ್ತಿಲ್ಲ ಪ್ಯಾಟ್ ಕಡಿಮೆ ಇದೆ ನಿಮ್ಮ ಹಾಲು ಬೇಡ ಅಂತಾರೇ. ಡೈರಿ ಕಾರ್ಯದರ್ಶಿ ಸ್ವಾರ್ಥದಿಂದ ನಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ನಮಗೇ ಸೀಗುತ್ತಿಲ್ಲ ಎಂದು ಆರೋಪಿಸಿ ರೈತರು ಕಿಡಿಕಾರಿದ ಘಟನೆ ನಡೆದಿದೆ. ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಅರಸಾಪುರ ಹಾಲು …

Read More »

ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌ ಆದೇಶ

ನವದೆಹಲಿ : ಪಶ್ಚಿಮ ಬಂಗಾಳದಲ್ಲಿ 2010ರಿಂದ ನೀಡಲಾದ ಹಲವಾರು ಜಾತಿಗಳ ಒಬಿಸಿ ಸ್ಥಾನಮಾನವನ್ನ ರದ್ದುಗೊಳಿಸಿದ ಕಲ್ಕತ್ತಾ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಸೋಮವಾರ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಮೇ 22ರಂದು ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸಲ್ಲಿಸಿದ್ದ ಅರ್ಜಿಗಳು ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದವು. …

Read More »

ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಕಳಪೆ ಕಾಮಗಾರಿ ನಡೆದಿರುವುದು ನಿಜ: ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಬೀದರ್‌ ಜಿಲ್ಲೆಯ ಕಮಲನಗರದಿಂದ ನೌಬಾದ್‌ವರೆಗೆ ₹ 396.96 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಕಾಮಗಾರಿ ಕಳಪೆಯಾಗಿರುವುದು ಕಂಡುಬಂದಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ವಿಧಾನಸಭೆಗೆ ಸೋಮವಾರ ತಿಳಿಸಿದರು. ಬಿಜೆಪಿಯ ಪ್ರಭು ಚವ್ಹಾಣ್ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ಕಾಮಗಾರಿಯನ್ನು ಕೇಂದ್ರ ಸರ್ಕಾರದ ಅನುದಾನದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೇಲುಸ್ತುವಾರಿಯಲ್ಲಿ ಕೈಗೊಳ್ಳಲಾಗಿತ್ತು. 2022ರ ಜುಲೈ 15ರಂದು ಕಾಮಗಾರಿ ಪೂರ್ಣಗೊಳಿಸಿರುವುದಾಗಿ ಗುತ್ತಿಗೆದಾರರಿಗೆ ಪ್ರಮಾಣಪತ್ರವನ್ನೂ ವಿತರಿಸಲಾಗಿರುತ್ತದೆ’ ಎಂದರು. …

Read More »

ಜ.1 ರಿಂದ ಎಲ್ಲಾ ತಾಲೂಕು ಕಚೇರಿಗಳಲ್ಲಿ ಗ್ರ್ಯಾಂಟ್ ಲ್ಯಾಂಡ್ ದಾಖಲೆಗಳ ಸ್ಕ್ಯಾನ್: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಜನವರಿ 1ರಿಂದ ಎಲ್ಲಾ ತಾಲೂಕು ಕಚೇರಿಗಳಲ್ಲಿ ಗ್ರ್ಯಾಂಟ್ ಲ್ಯಾಂಡ್ ದಾಖಲೆಗಳ ಸ್ಕ್ಯಾನ್ ನಡೆಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಧೀರಜ್ ಮುನಿರಾಜು ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಬಗರ್ ಹುಕುಂ ಸೇರಿದಂತೆ ನಾನಾ ಸರ್ಕಾರಿ ಭೂಮಿ ಮಂಜೂರು ಪ್ರಕರಣಗಳಲ್ಲಿ ಕಂದಾಯ ಅಧಿಕಾರಿಗಳ ಭ್ರಷ್ಟಾಚಾರ, ಅಕ್ರಮಕ್ಕೆ ಕಡಿವಾಣ ಹಾಕಲು ಜನವರಿ 1ರಿಂದ ರಾಜ್ಯದ ಎಲ್ಲ ತಾಲೂಕು ಕಚೇರಿಗಳಲ್ಲಿ ಗ್ರ್ಯಾಂಟ್ …

Read More »