Breaking News

Uncategorized

ಬೆಳಗಾವಿ ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸುವಂತೆ ಆಗ್ರಹ: ಪುಂಡಾಟಿಕೆ ಮಾಡಿದರೆ ಸುಮ್ಮನಿರಲ್ಲ; ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕು ಎನ್ನುವ ಆದಿತ್ಯ ಠಾಕ್ರೆ ಅವರ ಹೇಳಿಕೆ ಅತ್ಯಂತ ಬಾಲಿಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದರು. ಬೆಳಗಾವಿಯ ಸುವರ್ಣಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ, ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕೆನ್ನುವ ಆದಿತ್ಯ ಠಾಕ್ರೆ ಅವರ ಹೇಳಿಕೆ ಅತ್ಯಂತ ಬಾಲಿಶವಾದದ್ದು. ನಮಗೆ ಮಹಾಜನ್ ವರದಿಯೇ ಅಂತಿಮ. ಮಹಾಜನ್ ವರದಿಯನ್ನು ಒಪ್ಪಿಕೊಂಡ ಮೇಲೆ ಮುಗಿಯಿತು. ಯಾರಾದ್ರೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಲು ಸಾಧ್ಯವೇ? ಎಂ.ಇ.ಎಸ್ …

Read More »

ತೊಗರಿಗೆ ಹೆಚ್ಚಿನ ಬೆಂಬಲ ಬೆಲೆ ಘೋಷಿಸಲು ಕ್ರಮ: ಸಚಿವ ಚಲುವರಾಯಸ್ವಾಮಿ

ಬೆಳಗಾವಿ(ಸುವರ್ಣ ವಿಧಾನಸೌಧ) : ಕಲಬುರಗಿ ಜಿಲ್ಲೆಯ ತೊಗರಿಗೆ ಹೆಚ್ಚಿನ ರೀತಿಯಲ್ಲಿ ಬೆಂಬಲ ಬೆಲೆ ಘೋಷಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ 30 ಲಕ್ಷ ರೈತರು ಬೆಳೆಯುತ್ತಿರುವ ತೊಗರಿ ಜಿ1-ಟ್ಯಾಗ್ ಕ್ಲಾಸ್-31 ಪ್ರಮಾಣ ಪತ್ರ 2017ರಿಂದ 2019ರಲ್ಲಿ ದೊರೆತಿದ್ದರೂ ಅದರ ಗುಣಧರ್ಮಕ್ಕೆ ಅನುಗುಣವಾಗಿ ವೈಜ್ಞಾನಿಕ ಬೆಂಬಲ ಬೆಲೆ ಘೋಷಿಸದಿರುವುದರಿಂದ ರೈತರಿಗೆ ನಷ್ಟ ಉಂಟಾಗುತ್ತಿದೆ ಎಂದು ಪರಿಷತ್‍ನಲ್ಲಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಮಂಡಿಸಿದ ಗಮನ …

Read More »

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸುವರ್ಣಸೌಧದ ಮುಂದೆ ಕೆ ಎಸ್ ಆರ್ ಟಿ ಸಿ ನೌಕರರ ಸಂಘದಿಂದ ಪ್ರತಿಭಟನೆ

ಬೆಳಗಾವಿ: ಭವಿಷ್ಯ ನಿಧಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಸಂಘ ಬೆಳಗಾವಿಯ ಸುವರ್ಣಸೌಧದ ಮುಂದೆ ಸೋಮವಾರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿತು. ಈ ಮೂಲಕ ಸರ್ಕಾರಕ್ಕೆ ಚಳಿಗಾಲ ಅಧಿವೇಶನ ಮೊದಲೇ ಪ್ರತಿಭಟನೆಯ ಬಿಸಿ ತಟ್ಟಿತು. ಸುವರ್ಣ ವಿಧಾನಸೌಧದ ಬಳಿಯ ಕೊಂಡುಸ್ಕೋಪ್ಪ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ನೌಕರರು ಪ್ರತಿಭಟನೆ ನಡೆಸಿದರು. 2,595.29 …

Read More »

ಬೈಕ್‌ಗಳ ನಡುವೆ ಡಿಕ್ಕಿ ಸ್ಥಳದಲ್ಲೇ ಸವಾರ ಸಾವು

ಕುಂದಗೋಳ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸವಾರನೋರ್ವ ಸಾವನ್ನಪ್ಪಿದ ಘಟನೆ ಕುಂದಗೋಳ ಬೆನಕನಹಳ್ಳಿ ಕಡೆ ನಡೆದಿದೆ. ಬೆನಕನಹಳ್ಳಿ ಮಾರ್ಗದಿಂದ ಕುಂದಗೋಳ ಕಡೆಗೆ ಬರುತ್ತಿದ್ದ ಬೈಕ್ ಸವಾರ ಮತ್ತು ಕುಂದಗೋಳದಿಂದ ಬೆನಕನಹಳ್ಳಿಗೆ ಹೊರಟಿದ್ದ ಬೈಕ್‌ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನೋರ್ವ ತೀವ್ರ ರಕ್ತಸಿಕ್ತವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ಮೃತ ಬೈಕ್ ಸವಾರ ಯಾರು ಎಂಬುದು ಸ್ಪಷ್ಟವಾಗಿಲ್ಲ.

Read More »

ಸರಕಾರದ ವರ್ಚಸ್ಸು ಹೆಚ್ಚಿಸುವಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಪಾತ್ರ ಮಹತ್ವದ್ದು; ಅವರಿಂದ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಸಾಧ್ಯ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ : ಜನರ ಕಲ್ಯಾಣಕ್ಕಾಗಿ ಸರಕಾರಗಳು ಜಾರಿಗೆ ತರುವ ಪ್ರತಿ ಯೋಜನೆ, ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಮತ್ತು ನಿಯಮಾನುಸಾರ ಅನುಷ್ಠಾನವಾಗಲು ಗ್ರಾಮ ಆಡಳಿತ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ. ಗ್ರಾಮ ಆಡಳಿತ ಅಧಿಕಾರಿಗಳು ತಮ್ಮ ಕಾರ್ಯಶೈಲಿ, ತತಕ್ಷಣದ ಸ್ಪಂದನೆಗಳ ಮೂಲಕ ಕ್ಷೇತ್ರಮಟ್ಟದಿಂದ ಸರಕಾರದ ವರ್ಚಸ್ಸು ಹೆಚ್ಚಿಸುತ್ತಾರೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಅವರು ಇಂದು ಮಧ್ಯಾಹ್ನ ನಗರದ ರೇವೆನ್ಯೂ ಕ್ಲಬ್ ಆವರಣದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲೂಕು ಕಚೇರಿ …

Read More »

ಗಿರಿಜನ ಉಪಯೋಜನೆಯಡಿ ಕುರಿ/ಮೇಕೆ ಪೂರೈಕೆ ಘಟಕದಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ, ನಿಯಮಿತದ ವತಿಯಿಂದ 2024-25 ನೇ ಸಾಲಿನ ಗಿರಿಜನ ಉಪ ಯೋಜನೆಯಡಿಯಲ್ಲಿ ಕುರಿ/ಮೇಕೆ ಘಟಕ ಪೂರೈಕೆ ಯೋಜನೆಗೆ ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಪರಿಶಿಷ್ಟ ಪಂಗಡದ ಸದಸ್ಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. 16 ರಿಂದ 60 ವರ್ಷದೊಳಗಿನ ಮಹಿಳಾ/ಪುರುಷ ಸದಸ್ಯರು ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಮೂಲಕ ಅರ್ಜಿ ಸಲ್ಲಿಸಬಹುದು. …

Read More »

ಜ.1 ರಿಂದ ಎಲ್ಲಾ ಭೂ ಮಂಜೂರು ದಾಖಲೆಗಳ ಡಿಜಿಟಲೀಕರಿಸಲು ಕ್ರಮ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ : ರೈತರಿಗಾಗುತ್ತಿರುವ ಶೋಷಣೆಗಳನ್ನು ತಪ್ಪಿಸುವ ಸಲುವಾಗಿ ಜನವರಿ.01 ರಿಂದ ಈವರೆಗಿನ ಎಲ್ ಭೂ-ಮಂಜೂರು ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಲು ಕ್ರಮವಹಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನಕ್ಕೆ ಮಾಹಿತಿ ನೀಡಿದರು. ಸೋಮವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ್ದ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಬಗರ್ ಹುಕುಂ ಯೋಜನೆ ಅಡಿಯಲ್ಲಿ 1999 ರಿಂದ 2004ರ ಅವಧಿಯಲ್ಲಿ ಜಮೀನು ಮಂಜೂರು ಮಾಡಲಾಗಿದ್ದರೂ ಸಾಗುವಳಿ ಚೀಟಿ ನೀಡಿಲ್ಲ, ಕೆಲವರಿಗೆ ಸಾಗುವಳಿ ಚೀಟಿ …

Read More »

ರಾಜ್ಯದ ಜಿ.ಪಂ, ತಾ.ಪಂ. ನೌಕರರಿಗೆ ಸಿಹಿಸುದ್ದಿ: ವೇತನ ಪಾವತಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ವಿವಿಧ ತಾಲೂಕು ಪಂಚಾಯತ್ ಹಾಗೂ ಜಿಲ್ಲಾಪಂಚಾಯತ್ ನೌಕರರಿಗೆ ಸಿಹಿಸುದ್ದಿ ನೀಡಿದ್ದು, ವೇತನ ಪಾವತಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ ಈ ಆದೇಶಕ್ಕೆ ಲಗತ್ತಿಸಿರುವ ಅನುಬಂಧದ ಕಾಲಂ 2ರ ತಾಲ್ಲೂಕು ಪಂಚಾಯತಿಗೆ ಕಾಲಂ 3 ಕಾರ್ಯಕ್ರಮದಡಿ ಬಾಕಿ/ಪ್ರಸಕ್ತ ಸಾಲಿನ ಬಾಕಿ/ಪ್ರಸಕ್ತ ಸಾಲಿನ ವೇತನ, ವೇತನೇತರ, ಹೊರಗುತ್ತಿಗೆ ನೌಕರರ ವೇತನ, ದಿನಗೂಲಿ ನೌಕರರ ಉಪದಾನ ಮತ್ತು ವೈದ್ಯಕೀಯ ವೆಚ್ಚ ಮರು …

Read More »

ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನ: ರಾಜ್ಯಾದ್ಯಂತ ನಾಳೆ ಸರ್ಕಾರಿ ರಜೆ ಘೋಷಣೆ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್‌ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಬಗ್ಗೆ ಮಾಹಿತಿ ನೀಡಿದ್ದಾರೆ. ನಾಳೆ ರಾಜ್ಯದ ಸರ್ಕಾರಿ ರಜೆ ಇರುತ್ತದೆ. ಅಲ್ಲದೆ ನಾಳೆ ಬೆಳಿಗ್ಗೆ 8 ಗಂಟೆವರೆಗೆ ಅಂತಿಮ …

Read More »

ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅಂತ್ಯಕ್ರಿಯೆ: 3 ದಿನ ಶೋಕಾಚರಣೆ ಘೋಷಿಸಿ ರಾಜ್ಯಸರ್ಕಾರ ಆದೇಶ

ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಡಿಸೆಂಬರ್ 11 ರಂದು ಅಂತ್ಯಕ್ರಿಯೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರಾಗಿದ್ದ ಶ್ರೀ ಎಸ್ ಎಂ ಕೃಷ್ಣ ರವರು ದಿನಾಂಕ: 10.12.2024ರ ಮಂಗಳವಾರದಂದು ಪೂರ್ವಾಹ್ನ 02:30ಕ್ಕೆ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ …

Read More »