Breaking News

Uncategorized

ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ : ಪರಿಶೀಲನೆ ಮಾಡಲು‌ ಸಮಿತಿ‌ರಚನೆ : ಔಷಧಿ ಕಂಪನಿ ಮೇಲೆ ಕಠಿಣ ಕ್ರಮ – ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ : ಬಳ್ಳಾರಿಯಲ್ಲಿ ಬಾಣಂತಿಯ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಭೆ ಮಾಡಿ ಕಳಪೆ ಔಷಧಿ ಕೊಟ್ಟಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಅವರನ್ನು ಬ್ಲಾಕ್ ಲಿಸ್ಟ್ ಗೆ ಹಾಕಲು‌ ಹೇಳಿದ್ದೇನೆ, ಅವರ ವಿಚಾರಣೆ ಮಾಡಲು ಹೇಳಿದ್ದೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಡ್ರಗ್ ಕಂಟ್ರೋಲ್ ರನ್ನಾ ಅವರನ್ನು ಅಮಾನತು ಮಾಡಲಾಗಿದೆ. ಇದರ ಜೊತೆಗೆ ಒಂದು ಕಮಿಟಿ ರಚನೆ ಮಾಡಲಾಗಿದೆ ಆ ಕಮಿಟಿ ವರದಿ ನೀಡಿದ ಮೇಲೆ ಮುಂದಿನ …

Read More »

ಖಾಸಗಿ ಲೇವಾದೇವಿಗಾರರಿಂದ ಹೆಚ್ಚಿನ ಬಡ್ಡಿ ವಸೂಲು ಮಾಡಿದರೆ ಕಾನೂನು ಕ್ರಮ; ಸಹಕಾರಿ ಇಲಾಖೆ, ಲೀಡ್ ಬ್ಯಾಂಕ್ ನಿಗಾವಹಿಸಿ, ಗ್ರಾಹಕರ ಹಿತರಕ್ಷಣೆ ಮಾಡಬೇಕು: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ : ಸಹಕಾರ ಇಲಾಖೆಯಿಂದ ಕರ್ನಾಟಕ ಲೇವಾದೇವಿಗಾರರ ಅಧಿನಿಯಮ 1961 ಹಾಗೂ ನಿಯಮಾವಳಿಗಳು 1965 ರನ್ವಯ ನೋಂದಾಯಿತ ಆಗಿರುವ ಖಾಸಗಿ ಲೇವಾದೇವಿಗಾರರು ಹೆಚ್ಚಿನ ಬಡ್ಡಿ ವಸೂಲು ಮಾಡಿದರೆ, ಅವರ ಲೈಸನ್ಸ್ ರದ್ದುಪಡಿಸಿ, ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಅವರು ಇಂದು ಮಧ್ಯಾಹ್ನ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಜಿಲ್ಲೆಯ ಖಾಸಗಿ ಲೇವಾದೇವಿದಾರರು, ಮೈಕ್ರೋ ಪೈನಾನ್ಸ್ ಮತ್ತು ಪೈನಾನ್ಸ್ ಸಂಸ್ಥೆಗಳ …

Read More »

ಡಿ. 9 ರಂದು ಜಿಲ್ಲೆಯಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಆಚರಣೆ

ಧಾರವಾಡ : ಡಿಸೆಂಬರ 9 ರಂದು ಹಮ್ಮಿಕೊಂಡಿರುವ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಅಂಗವಾಗಿ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಗಂಣದಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಸಮನ್ವಯ ಸಮಿತಿ ಸಭೆಯನ್ನು ಜರುಗಿಸಲಾಯಿತು. ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಸುಜಾತಾ.ವಿ.ಹಸವೀಮಠ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದಂದು ಜಿಲ್ಲೆಯ 1 ರಿಂದ 19 ವರ್ಷದ ಒಳಗಿನ 5,80,127 ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ ನೀಡುವ ಗುರಿಯನ್ನು ನಿಗದಿಪಡಿಸಲಾಗಿದೆ. …

Read More »

ಡಾ.ಬಿ.ಆರ್.ಅಂಬೇಡ್ಕರವರ ತತ್ವ, ಆದರ್ಶಗಳನ್ನು ನಾವೇಲ್ಲರೂ ಅಳವಡಿಸಿಕೊಳ್ಳೋಣ : ಡಾ.ಅರುಣಕುಮಾರ ಸಿ

ಧಾರವಾಡ : ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ(ಡಿಮ್ಹಾನ್ಸ್) ಸಭಾಂಗಣದಲ್ಲಿ ಬಾಬಾ ಸಾಹೇಬ ಡಾ.ಬಿ.ಆರ್.ಅಂಬೇಡ್ಕರ ಅವರ 68ನೇ ಮಹಾ ಪರಿನಿರ್ವಾಣ ದಿನದ ಪ್ರಯುಕ್ತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಗೌರವ ನಮನಗಳನ್ನು ಸಲ್ಲಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಡಿಮ್ಹಾನ್ಸ್ ಸಂಸ್ಥೆಯ ನಿರ್ದೇಶಕ ಡಾ.ಅರುಣಕುಮಾರ ಸಿ ಅವರು ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರವರ ತತ್ವ, ಆದರ್ಶಗಳನ್ನು ನಾವೇಲ್ಲರೂ ಅಳವಡಿಸಿಕೊಳ್ಳೋಣ ಮತ್ತು ಅವರ …

Read More »

ಶಿಗ್ಗಾಂವಿ ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್​ ಅಭಿನಂದನಾ ಸಮಾವೇಶ

ಶಿಗ್ಗಾಂವಿ: ಸಿಎಂ ಸಿದ್ದರಾಮಯ್ಯ ಅವರು ಶಿಗ್ಗಾಂವಿ ಕ್ಷೇತ್ರದಲ್ಲಿ ಭರ್ಜರಿ ಗೆಲುವು ನೀಡಿದ ಕ್ಷೇತ್ರದ ಜನರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವು ನೀಡಿದ ಕ್ಷೇತ್ರದ ಮತದಾರರಿಗೆ ಅಭಿನಂದನಾ ಸಮಾವೇಶ ಆಯೋಜಿಸಲಾಗಿದೆ. ಸವಣೂರಿನ ತಾಲೂಕಿನ ಕ್ರೀಡಾಂಗಣದಲ್ಲಿ ಸಂಜೆ ನಾಲ್ಕು ಗಂಟೆಗೆ ಕೃತಜ್ಞತಾ ಸಮಾವೇಶ ನಡೆಯಲಿದೆ. ಕೃತಜ್ಞತಾ ಸಭೆ: ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಗೆಲುವು ಸಾಧಿಸಿದ ನಂತರ, ಶಿಗ್ಗಾಂವಿಯಲ್ಲಿ ಕೃತಜ್ಞತಾ …

Read More »

ವಸತಿ ಯೋಜನೆಯ 3000 ಫಲಾನುಭವಿಗಳಿಗೆ ತಲಾ 5 ಲಕ್ಷ ರೂ. ಸಾಲ

ಬೆಂಗಳೂರು: ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಬ್ಯಾಂಕ್ ಸಾಲ ನೀಡುವ ಕುರಿತಂತೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಬ್ಯಾಂಕ್ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ್ದು, ಸಭೆ ಫಲಪ್ರದವಾಗಿದೆ. ಮೊದಲ ಹಂತದಲ್ಲಿ 3000 ಫಲಾನುಭವಿಗಳಿಗೆ ತಲಾ 5 ಲಕ್ಷ ರೂ.ನೀಡಲು ಬ್ಯಾಂಕುಗಳ ಮುಖ್ಯಸ್ಥರು ಸಮ್ಮತಿ ಸೂಚಿಸಿದ್ದಾರೆ. ಮೊದಲ ಹಂತದಲ್ಲಿ ಸಾಲಕ್ಕಾಗಿ 3 ಸಾವಿರ ಅರ್ಜಿಗಳು ಸಲ್ಲಿಕೆಯಾಗಿದ್ದು, 316 ಮಂದಿಗೆ ಸಾಲ ಮಂಜೂರಾಗಿದೆ. ಬ್ಯಾಂಕ್ ಆಫ್ ಬರೋಡಾ, ಕೆನರಾ …

Read More »

ಎರಡನೇ ಪೂರ್ವ ಬಜೆಟ್ ಸಮಾಲೋಚನಾ ಸಭೆ ನಡೆಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನವದೆಹಲಿಯಲ್ಲಿ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳು ಮತ್ತು ಪ್ರಮುಖ ಕೃಷಿ ಅರ್ಥಶಾಸ್ತ್ರಜ್ಞರೊಂದಿಗೆ ಎರಡನೇ ಪೂರ್ವ ಬಜೆಟ್ ಸಮಾಲೋಚನಾ ಸಭೆ ನಡೆಸಿದರು. ಕೇಂದ್ರ ಬಜೆಟ್ 2025-26 ರ ಸಿದ್ಧತೆಯ ಭಾಗವಾಗಿ ನಡೆದ ಈ ಸಭೆಯ ಅಧ್ಯಕ್ಷತೆಯನ್ನು ನಿರ್ಮಲಾ ಸೀತಾರಾಮನ್ ವಹಿಸಿದ್ದರು. ಸಭೆಯಲ್ಲಿ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ, ಹಣಕಾಸು ಕಾರ್ಯದರ್ಶಿ ಮತ್ತು ಆರ್ಥಿಕ …

Read More »

ಸೇತುವೆ ನಿರ್ಮಾಣಕ್ಕೆ ಶಾಸಕ ಕೋನರಡ್ಡಿ ಭೂಮಿ ಪೂಜೆ

ಅಣ್ಣಿಗೇರಿ: ಕೊಂಡಿಕೊಪ್ಪ ಗ್ರಾಮದಲ್ಲಿ ಕೊಂಡಿಕೊಪ್ಪ ಕುರ್ತಕೋಟಿ ರಸ್ತೆಯ ಸವಳ ಹಳ್ಳಕ್ಕೆ ಸಣ್ಣ ನೀರಾವರಿ ಇಲಾಖೆಯಿಂದ ರೂ. 2.47 ಕೋಟಿ ಅನುದಾನದಲ್ಲಿ ಸೇತುವೆ ನಿರ್ಮಾಣಕ್ಕೆ ಶಾಸಕ ಕೋನರಡ್ಡಿ ಅವರು ನೆರವೇರಿಸಿ, ಮಾತನಾಡಿ ಅವರು ಹಳ್ಳದ ಆಚೆ ಇರುವ ಕೊಂಡಿಕೊಪ್ಪ ಗ್ರಾಮದ ರೈತರ ಜಮೀನುಗಳಿಗೆ ಹಳ್ಳದಾಟಿ ಹೋಗಲು ದೊಡ್ಡ ಸಮಸ್ಯೆಯಾಗಿತ್ತು. ಸಮಸ್ಯೆಗೆ ಪರಿಹಾರ ಕಂಡುಹಿಡಿಯಲು ಪೂಜೆ ಮಾಡಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಗ್ರಾಮದ ಬಸ್ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳ ಸಲುವಾಗಿ ಮನವಿ …

Read More »

ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ ಎಸ್ಕೆಪ್

ಧಾರವಾಡ: ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ನ್ನು ಖದೀಮರು ಹೊತ್ತೊಯ್ದಿರುವ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ನಡೆದಿದೆ. ಉಪ್ಪಿನ ಬೆಟಗೇರಿ ಗ್ರಾಮದ ಬಸವರಾಜ ಪಟ್ಟಣಶೆಟ್ಟಿ ಎಂಬುವವರಿಗೆ ಸೇರಿದ ಬೈಕನ್ನೇ ಖದೀಮರು ಹೊತ್ತೊಯ್ದಿದ್ದಾರೆ. ಶನಿವಾರ ಸಂತೆಗೆಂದು ಬಸವರಾಜ ಬೈಕ್ ತೆಗೆದುಕೊಂಡು ಬಂದು ಮುತ್ತೂರ ಅವರ ಮನೆ ಎದುರು ನಿಲ್ಲಿಸಿ ಹೋಗಿದ್ದ. ಅಷ್ಟರಲ್ಲಾಗಲೇ KA-25 EY0473 ಸಂಖ್ಯೆಯ ಬೈಕ್‌ನ್ನು ಖದೀಮರು ತೆಗೆದುಕೊಂಡು ಹೋಗಿದ್ದಾರೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕಳ್ಳತನ …

Read More »

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಸಂತೋಷ್ ಲಾಡ್

ಹುಬ್ಬಳ್ಳಿ: ಬಡವರಿಗೆ ಭೂಮಿ ಕೊಟ್ಟವರು ಕಾಂಗ್ರೆಸ್‌ನವರು. ಉಳುವವನೆ ಭೂಮಿ ಒಡೆಯ ಕಾರ್ಯಕ್ರಮ ಮಾಡಿದ್ದೇ ಕಾಂಗ್ರೆಸ್, ಬಿಜೆಪಿ ಅವಾಗ ಸಾಹುಕಾರ ಪರವಾಗಿ ಕಾರ್ಯಕ್ರಮಕ್ಕೆ ವಿರೋಧ ಮಾಡಿದ್ದರು ಎಂದು ಹುಬ್ಬಳ್ಳಿಯಲ್ಲಿ ಸಚಿವ ಸಂತೋಷ್ ಲಾಡ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಬಾಣಂತಿಯರ ಸಾವು ವಿಚಾರಕ್ಕೆ ಸಂಬಂಧ ಪಟ್ಟ ಸಚಿವರು ಉತ್ತರ ಕೊಟ್ಟಿದ್ದಾರೆ. ಅದರ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ ಎಂದರು. ವಕ್ಸ್‌ ವಿರೋಧಿಸಿ …

Read More »