Breaking News

Uncategorized

ಕಲಬುರಗಿ: ತೊಗರಿ ಬೆಳೆ ನಷ್ಟ, ಎಕರೆಗೆ 20,000 ರೂ. ಪರಿಹಾರಕ್ಕೆ ಆಗ್ರಹ

ಕಲಬುರಗಿ : ಪ್ರಸಕ್ತ ಸಾಲಿನಲ್ಲಿ ಬಿತ್ತನೆಯಾದ ರೈತರ ತೊಗರಿ ಬೆಳೆ ನೆಟೆ ರೋಗದಿಂದ ಹಾನಿಯಾಗಿ ನಷ್ಟ ಅನುಭವಿಸಿದ್ದು, ಸರಕಾರ ಈ ಕೂಡಲೇ ಪರಿಹಾರ ಮತ್ತು ಬೆಳೆ ವಿಮೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಕಲ್ಯಾಣ ಕರ್ನಾಟಕ ಜನಪರ ಕಲ್ಯಾಣ ವೇದಿಕೆಯು ಆಳಂದ ತಾಲ್ಲೂಕು ತಹಶೀಲ್ದಾರ್ ಮೂಲಕ ಸರಕಾರಕ್ಕೆ ಆಗ್ರಹಿಸಿದೆ. ಈ ಕುರಿತು ಆಳಂದ ಪಟ್ಟಣದ ಹೊರವಲಯದ ತಾಲ್ಲೂಕು ಆಡಳಿತಸೌಧ ಮುಂಭಾಗದಲ್ಲಿ ಬೇಡಿಕೆಯ ಕುರಿತು ಗ್ರೇಡ್-2 ತಹಶೀಲ್ದಾರ್ ಬಿ.ಜಿ. ಕುದರಿ ಮೂಲಕ …

Read More »

ಕೃಷಿ ಉತ್ಪನ್ನಗಳ ಖರೀದಿಗೆ ಶೇ.90 ರಷ್ಟು ಸಹಾಯಧನ

ಬೆಂಗಳೂರು : ಪ್ರಸಕ್ತ (2024-25) ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣಗಳು ಲಭ್ಯವಿರುತ್ತವೆ. ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿಯೊಂದಿಗೆ ಪಹಣಿ(ಆರ್‍ಟಿಸಿ), ಆಧಾರ್ ಕಾರ್ಡ್‍ನ ಜೆರಾಕ್ಸ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಒಂದು ಭಾವಚಿತ್ರ ರೂ.100ರ ಛಾಪಾ ಕಾಗದ ದಾಖಲಾತಿಗಳನ್ನು ಸಲ್ಲಿಸಿ ಇಲಾಖೆಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳ ಸದುಪಯೋಗವನ್ನು …

Read More »

ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರಕ್ಕೆ ಆಗ್ರಹಿಸಿ ಡಿ.16 ರಂದು ಸುವರ್ಣಸೌಧದ ಬಳಿ ಕೃಷಿ ಕಾರ್ಮಿಕ ಸಂಘಟನೆ ಪ್ರತಿಭಟನೆ

ಬೆಳಗಾವಿ: ಬಗರ್‌ಹುಕುಂ ಸಾಗುವಳಿದಾರರಿಗೆ ತಕ್ಷಣವೇ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿ ಡಿ.16ರಂದು ಸುವರ್ಣ ವಿಧಾನಸೌಧ ಬಳಿ ಪ್ರತಿಭಟನೆ ಮಾಡಲಾಗುವುದು ಎಂದು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ರಾಜ್ಯ ಘಟಕದ ಕಾರ್ಯದರ್ಶಿ ಬಿ.ಭಗವಾನ್‌ ರೆಡ್ಡಿ ಹೇಳಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಭೂರಹಿತರು ಮತ್ತು ಬಡ ರೈತರು ಜೀವನೋಪಾಯಕ್ಕಾಗಿ ಕಂದಾಯ ಮತ್ತು ಅರಣ್ಯದ ಕುರುಚಲು ಗಿಡ, ಕಲ್ಲುಭೂಮಿಯಲ್ಲಿ ಹಲವು ದಶಕಗಳಿಂದ ಸಾಗುವಳಿ ಮಾಡುತ್ತ ಬಂದಿದ್ದಾರೆ. ತಕ್ಷಣವೇ ಹಕ್ಕುಪತ್ರ …

Read More »

ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳ ನಿಯಮಗಳಿಗೆ ಬದಲಾವಣೆ ನಿರ್ಧಾರ ಕೈಗೊಂಡ ಸರ್ಕಾರ

ಬೆಂಗಳೂರು: ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಅಲ್ಪ ಸಂಖ್ಯಾತರ ಶಿಕ್ಷಣ ಸಂಸ್ಥೆಗಳ ನಿಯಮಗಳಿಗೆ ಬದಲಾವಣೆ ತರುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಇದಕ್ಕೆ ಪ್ರತಿಪಕ್ಷ ಬಿಜೆಪಿ ಟೀಕಿಸಿದೆ. ಅಲ್ಪ ಸಂಖ್ಯಾತರ ಶಿಕ್ಷಣ ಸಂಸ್ಥೆಗಳಲ್ಲಿ ಕನಿಷ್ಠ ಇಂತಿಷ್ಟೇ ಆ ವರ್ಗದ ವಿದ್ಯಾರ್ಥಿಗಳು ಇರಬೇಕೆಂಬ ನಿಯಮ ತೆಗೆದುಹಾಕಲಾಗಿದೆ. ಇದುವರೆಗೆ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರ ನಿಗದಿಪಡಿಸಿದ ಶೇಕಡಾವಾರು ವಿದ್ಯಾರ್ಥಿಗಳು ಲಭ್ಯವಿರುತ್ತಿರಲಿಲ್ಲ. ಇದರಿಂದಾಗಿ ಆ ಶಿಕ್ಷಣ ಸಂಸ್ಥೆಗಳ ಮಾನ್ಯತೆ …

Read More »

ಅಂತರ್ ನಿಗಮ ಉದ್ದಿಮೆಗಳ ಠೇವಣಿ ಹೂಡಿಕೆಗೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ಅಂತರ್‌ ನಿಗಮ ಅಥವಾ ಸಾರ್ವಜನಿಕ ವಲಯದ ಉದ್ದಿಮೆಗಳ ಠೇವಣಿ ಹೂಡಿಕೆಗೆ ಸಚಿವ ಸಂಪುಟವು ಅನುಮೋದನೆ ನೀಡಿದ್ದು, ಇದರಿಂದ ಲಾಭದಲ್ಲಿರುವ ಸರಕಾರಿ ಸ್ವಾಮ್ಯದ ಉದ್ದಿಮೆಯೊಂದು ನಷ್ಟದಲ್ಲಿರುವ ಮತ್ತೂಂದು ಸರಕಾರಿ ಸ್ವಾಮ್ಯದ ಉದ್ದಿಮೆಗೆ ಸಾಲ ನೀಡಲು ಅವ ಕಾಶ ಕಲ್ಪಿಸಲಾಗಿದೆ. ಇದರಿಂದ ಉಳಿತಾಯ ಆಗಲಿದೆ. ಪ್ರಸ್ತುತ ವ್ಯವಸ್ಥೆಯಲ್ಲಿ ಸಾಮಾನ್ಯವಾಗಿ ನಷ್ಟದಲ್ಲಿರುವ ನಿಗಮ ಅಥವಾ ಸಾರ್ವಜನಿಕ ವಲಯದ ಉದ್ದಿಮೆಗಳಿಗೆ ಆರ್ಥಿಕ ಒತ್ತಡ ಇರುವುದರಿಂದ ಮುಕ್ತ ಮಾರುಕಟ್ಟೆಯಲ್ಲಿ ವಿವಿಧ ಹಣಕಾಸು ಸಂಸ್ಥೆಗಳಿಂದ ಹೆಚ್ಚಿನ ಬಡ್ಡಿದರದಲ್ಲಿ ಸಾಲ …

Read More »

ರೈತರಿಗೆ ಆರ್ ಬಿ ಐ ಸಿಹಿಸುದ್ದಿ: ಭದ್ರತೆ ಇಲ್ಲದ ಕೃಷಿ ಸಾಲ ಮಿತಿ 2 ಲಕ್ಷ ರೂ.ಗೆ ಏರಿಕೆ

ಮುಂಬಯಿ: ರೈತರಿಗೆ ಆರ್‌ಬಿಐ ಸಿಹಿ ಸುದ್ದಿ ನೀಡಿದೆ. ಯಾವುದೇ ಭದ್ರತೆ (ಮೇಲಾಧಾರ) ಇಲ್ಲದೇ ನೀಡಲಾಗುವ ಕೃಷಿ ಸಾಲದ ಮಿತಿಯನ್ನು ಈಗ ಇರುವ 1.6 ಲಕ್ಷ ರೂ.ಗಳಿಂದ 2 ಲಕ್ಷ ರೂ.ಗಳಿಗೆ ಏರಿಕೆ ಮಾಡಿರುವುದಾಗಿ ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ ಹೇಳಿದ್ದಾರೆ. ಆರ್‌ಬಿಐನ 3 ದಿನಗಳ ವಿತ್ತೀಯ ನೀತಿ ಪರಿಶೀಲನ ಸಭೆ ಬಳಿಕ ಅವರು ಮಾತನಾಡಿದರು. ಹಾಲಿ ವಿತ್ತ ವರ್ಷದ ಜಿಡಿಪಿ ಪ್ರಗತಿ ದರದ ನಿರೀಕ್ಷೆಯನ್ನು ಈ ಹಿಂದಿನ ಶೇ.7ರಿಂದ ಶೇ.6.6ಕ್ಕಿಳಿಸಲಾಗಿದೆ. ಸತತ …

Read More »

ಕಲಬುರಗಿ: 6 ಲೈನ್ ಗ್ರೀನ್ ಫೀಲ್ಡ್ ಹೆದ್ದಾರಿ ಕಾಮಗಾರಿ ವೀಕ್ಷಿಸಿದ ಜಿಲ್ಲಾಧಿಕಾರಿ

ಕಲಬುರಗಿ: ಜೇವರ್ಗಿಯ ಎನ್‌.ಎಚ್‌-150ರ ಬಳಿಯ ಮಾರಡಗಿ ಎಸ್-ಆಂದೋಲಾ ಗ್ರಾಮದ ಬಳಿ ಮಹಾರಾಷ್ಟ್ರ ಗಡಿಯಿಂದ ಕರ್ನಾಟಕ ಗಡಿಯವರೆಗೆ ನಿರ್ಮಾಣವಾಗುತ್ತಿರುವ ಆರು ಲೈನ್ ಗ್ರೀನ್‍ಫೀಲ್ಡ್ ಹೆದ್ದಾರಿ ಕಾಮಗಾರಿಯನ್ನು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಪ್ರಾಜೆಕ್ಟ್ ಗುತ್ತಿಗೆದಾರ ಹಾಗೂ ಎಂಜಿನಿಯರ್‌ಗಳು ಯೋಜನೆಯ ವ್ಯಾಪ್ತಿ, ಪ್ರಸ್ತುತ ಪ್ರಗತಿ ಕುರಿತು ಜಿಲ್ಲಾಧಿಕಾರಿಗೆ ಮಾಹಿತಿ ಒದಗಿಸಿದರು. ಬಳಿಕ ಕಲಬುರಗಿ ರಿಂಗ್ ರೋಡ್‍ನ ಸರ್ವಿಸ್ ರಸ್ತೆ ಕಾಮಗಾರಿ, ಎನ್‍ಎಚ್-50 ವಿಭಾಗವನ್ನು ಪರಿಶೀಲಿಸಿದರು. ಈ ವೇಳೆ …

Read More »

ಬೆಂಗಳೂರು: ಸಂಪೂರ್ಣ ಕೃಷಿ ಸಾಲ ಮನ್ನಾಕ್ಕೆ ಆಗ್ರಹಿಸಿ ರೈತ ಸಂಘಟನೆಗಳಿಂದ ಪ್ರತಿಭಟನೆ

ಬೆಂಗಳೂರು: ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ತರಬೇಕು, ಡಾ. ಸ್ವಾಮಿನಾಥನ್ ವರದಿಯಂತೆ ಬೆಂಬಲ ಬೆಲೆ ನಿಗದಿಯಾಗಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ರೈತ ನಾಯಕ ಜಗಜಿತ್‌ ಸಿಂಗ್‌ ದಲೈವಾಲ ಅವರ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆಯತ್ತಿರುವ ಉಪವಾಸ ಬೆಂಬಲಿಸಿ ರಾಜ್ಯದಲ್ಲೂ ರೈತ ಸಂಘಟನೆಗಳು ಸರದಿ ಉಪವಾಸ ಸತ್ಯಾಗ್ರಹ ಆರಂಭಿಸಿವೆ. ಕೇಂದ್ರ ಸರ್ಕಾರ ಚಳವಳಿ ನಿರತ …

Read More »

ಕೇಂದ್ರ ಸರ್ಕಾರದಿಂದ ಮೂರು ಹೊಸ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಒಪ್ಪಿಗೆ

ಬೆಂಗಳೂರು: ನರೇಂದ್ರ ಮೋದಿ ಸರ್ಕಾರ ಕರ್ನಾಟಕ್ಕೆ ಗುಡ್‌ ನ್ಯೂಸ್‌ ನೀಡಿದ್ದು, ಮೂರು ಹೊಸ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಒಪ್ಪಿಗೆ ನೀಡಿದೆ. ಇದರೊಂದಿಗೆ ರಾಜ್ಯದಲ್ಲಿ ಮತ್ತೊಂದು ನವೋದಯ ವಿದ್ಯಾಲಯ ಸ್ಥಾಪನೆಗೂ ಕೂಡ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ. ಶುಕ್ರವಾರ ಪ್ರಧಾನಿ ಮೋದಿ ನೇತೃತ್ವದ ಸಂಪುಟ ಸಭೆಯಲ್ಲಿ ಈ ತೀರ್ಮಾನವಾಗಿದೆ. ದೇಶದಾದ್ಯಂತ 85 ಹೊಸ ಕೇಂದ್ರೀಯ ವಿದ್ಯಾಲಯಗಳನ್ನು (ಕೆವಿಗಳು) ತೆರೆಯಲು ಸಂಪುಟ ಒಪ್ಪಿಗೆ ನೀಡಿದೆ. ಇದರಲ್ಲಿ ಶಿವಮೊಗ್ಗದ ಕೇಂದ್ರೀಯ ವಿದ್ಯಾಲಯದ ವಿಸ್ತರಣೆಗೆ ಅನುಮೋದನೆ …

Read More »

ಬೆಳಗಾವಿ ಚಳಿಗಾಲ ಅಧಿವೇಶನ: ವಸತಿಗಾಗಿ 2,756 ಕೊಠಡಿ, 10 ಸಮಿತಿ ರಚನೆ

ಬೆಳಗಾವಿ: ವಿಧಾನಮಂಡಲ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಸಚಿವರು, ಶಾಸಕರು, ಅಧಿಕಾರಿಗಳು, ಸಿಬ್ಬಂದಿ ಮತ್ತು ಪತ್ರಕರ್ತರಿಗಾಗಿ 2,756 ಕೊಠಡಿ ಕಾಯ್ದಿರಿಸಿದ್ದೇವೆ. ಇದಕ್ಕಾಗಿ ಪ್ರವಾಸಿ ಮಂದಿರಗಳು, ಖಾಸಗಿ ಹೋಟೆಲ್‌ಗಳು ಮತ್ತು ವಿವಿಧ ಸಂಸ್ಥೆಗಳ ಅತಿಥಿ ಗೃಹಗಳನ್ನು ಬಳಸಿಕೊಳ್ಳುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು. ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ವಸತಿಗಾಗಿ ವಿಧಿಸಿದ್ದ ದರವನ್ನೇ ಈ ಬಾರಿಯೂ ಮುಂದುವರಿಸುವಂತೆ ಕೋರಿದ್ದೇವೆ. ಇದಕ್ಕೆ ಎಲ್ಲ ಹೊಟೇಲ್ ಮಾಲೀಕರು ಒಪ್ಪಿದ್ದಾರೆ. ಅಧಿವೇಶನ …

Read More »