Breaking News

Uncategorized

ಆರ್ ಬಿ ಐ ನಿಂದ ರೈತರಿಗೆ ಕೃಷಿ ಸಾಲದ ಮಿತಿ 1.6 ಲಕ್ಷದಿಂದ 2 ಲಕ್ಷ ರೂ.ಗೆ ಹೆಚ್ಚಳ

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ರೈತರಿಗೆ ಮೇಲಾಧಾರ ರಹಿತ ಕೃಷಿ ಸಾಲದ ಮಿತಿಯನ್ನು ಹೆಚ್ಚಿಸುವುದಾಗಿ ಘೋಷಿಸಿದೆ. ಈ ಮಿತಿಯನ್ನು ಪ್ರತಿ ಸಾಲಗಾರನಿಗೆ 1.6 ಲಕ್ಷ ರೂ.ಗಳಿಂದ 2 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಡಿಸೆಂಬರ್ 6 ರ ಶುಕ್ರವಾರ ಹಣಕಾಸು ನೀತಿ ಸಮಿತಿ (ಎಂಪಿಸಿ) ಬ್ರೀಫಿಂಗ್ನಲ್ಲಿ ಈ ಘೋಷಣೆ ಮಾಡಿದ್ದಾರೆ. ಈ ಕ್ರಮವು ರೈತರಿಗೆ, ವಿಶೇಷವಾಗಿ ಸಣ್ಣ ಮತ್ತು ಅತಿಸಣ್ಣ ರೈತರಿಗೆ …

Read More »

ಎಲ್ಲಾ ಕೃಷಿ ಉತ್ಪನ್ನಗಳು ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿ: ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್

ನವದೆಹಲಿ: ರೈತರ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ, ನರೇಂದ್ರ ಮೋದಿ ಸರಕಾರವು ಎಲ್ಲಾ ಕೃಷಿ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಖರೀದಿಸಲಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಇಂದು ಘೋಷಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ರೈತರಿಗೆ ಎಂಎಸ್‌ಪಿ ಸಮಸ್ಯೆಯ ಕುರಿತು ಪೂರಕ ಪ್ರಶ್ನೆಗಳಿಗೆ ಉತ್ತರವಾಗಿ ಅವರು ಈ ಭರವಸೆ ನೀಡಿದರು. ಎಂಎಸ್‌ಪಿಗೆ ಕಾನೂನು ಬೆಂಬಲ ಸೇರಿದಂತೆ ಬೇಡಿಕೆಗಳ ಪಟ್ಟಿಯನ್ನು ಹೊತ್ತು ರೈತರು ದೆಹಲಿಗೆ ಕಾಲ್ನಡಿಗೆ ಜಾಥಾವನ್ನು ಆರಂಭಿಸಿದ ದಿನವೇ …

Read More »

ಜಿಲ್ಲಾ ಗ್ಯಾರೆಂಟಿ ಪ್ರಾಧಿಕಾರ ಸಭೆ

ಧಾರವಾಡ : ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುμÁ್ಠನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಳಿಗ್ಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುμÁ್ಠನ ಮತ್ತು ಸಾಂಸ್ಥಿಕ ಕಾರ್ಯ ವಿಧಾನಗಳು ಹಾಗೂ ಪರಿಣಾಮಕಾರಿಯಾಗಿ ಜಾರಿಗೊಳಿಸುವ ಬಗ್ಗೆ ಪ್ರಗತಿ ಪರಿಶೀಲನೆ ಸಭೆ ಜರುಗಿತು. ಗ್ಯಾರಂಟಿ ಯೋಜನೆಯ ಬಗ್ಗೆ ಅಧಿಕಾರಿಗಳು ಗಮಹರಿಸಿ, ಜನರಿಗೆ ತಲುಪಿಸುವ ಕಾರ್ಯವನ್ನು ಮಾಡಬೇಕು. ಕೆಲವು ಭಾಗಗಳಲ್ಲಿ ಗ್ಯಾರಂಟಿ ಯೋಜನೆ ಸರಿಯಾಗಿ ತಲುಪದಿರುವ ಬಗೆಗೆ ದೂರುಗಳು …

Read More »

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ (ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ) ತರಬೇತಿಗಾಗಿ ಅರ್ಜಿ ಸಲ್ಲಿಸುವ ಅವಧಿ ಡಿ. 18 ವರೆಗೆ ವಿಸ್ತರಣೆ

ಧಾರವಾಡ : 2024-25 ನೇ ಸಾಲಿಗೆ ಭಾರತೀಯ ಶುಶ್ರೂಷಾ ಪರಿಷತ್ತಿನ ಮಾರ್ಗಸೂಚಿಯಂತೆ ಧಾರವಾಡ ಜಿಲ್ಲೆಯಲ್ಲಿರುವ ಸರ್ಕಾರಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರಿಗೆ ತರಬೇತಿ ಕೇಂದ್ರಕ್ಕೆ 24 ತಿಂಗಳ ತರಬೇತಿಗಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಡಿಸೆಂಬರ 18 ವರೆಗೆ ವಿಸ್ತರಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿಗಳನ್ನು www.karhfw.gov.in ವೆಬ್ ಸೈಟ್‍ನಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ …

Read More »

ಅನ್ನಚಕ್ರ ಯೋಜನೆಗೆ ಚಾಲನೆ ನೀಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನವದೆಹಲಿಯಲ್ಲಿ ಅನ್ನ ಚಕ್ರ ಹೊಸ ಪೋರ್ಟಲ್‌ಗೆ ಚಾಲನೆ ದೊರೆತಿದೆ. ಕೇಂದ್ರ ಸರ್ಕಾರ ದೇಶದ 80 ಕೋಟಿ ಬಡವರಿಗೆ 2028ರವರೆಗೆ ಉಚಿತ ಪಡಿತರ ಯೋಜನೆ ವಿಸ್ತರಿಸಿದೆ. ಅನ್ನಚಕ್ರ ಯೋಜನೆಗೆ ಚಾಲನೆ ನೀಡಿ ಮಾತನಾಡಿ ಸಚಿವ ಪ್ರಹ್ಲಾದ್‌ ಜೋಶಿ, ಭಾರತ, ಯುರೋಪಿಯನ್ ಒಕ್ಕೂಟಕ್ಕಿಂತ ದುಪ್ಪಟ್ಟು ಜನಸಂಖ್ಯೆಗೆ ಉಚಿತ ಪಡಿತರ ಪೂರೈಸುತ್ತಿದೆ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಭಾರತ ಪ್ರತಿ ತಿಂಗಳು 2.20 ಲಕ್ಷ ಕೋಟಿ ಮೌಲ್ಯದ ಉಚಿತ …

Read More »

2028 ರವರೆಗೆ ರಾಜ್ಯದಲ್ಲಿ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ ಘೋಷಣೆ

ಹಾಸನ : ಮುಂದಿನ ವಿಧಾನಸಭಾ ಚುನಾವಣೆಯವರಿಗೂ ಅಂದರೆ 2028 ರವರೆಗೆ ರಾಜ್ಯದಲ್ಲಿ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. 2028ರಲ್ಲಿ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹಾಸನದಲ್ಲಿ ಜನ ಕಲ್ಯಾಣ ಮೃತ್ ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಬಡ ಜನರಿಗೋಸ್ಕರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಆದರೆ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ …

Read More »

ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಫಡ್ನವಿಸ್ ರಿಂದ ಮೊದಲ ದಿನವೇ ಹಲವು ಕಡತಗಳಿಗೆ ಸಹಿ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಪದಗ್ರಹಣ ಮಾಡಿದ್ದು, ಅಧಿಕಾರ ವಹಿಸಿಕೊಂಡ ಮೊದಲ ದಿನ ಹಲವು ಕಡತಗಳಿಗೆ ಸಹಿ ಹಾಕಿದ್ದಾರೆ. ಮುಖ್ಯಮಂತ್ರಿಯಾದ ಬೆನ್ನಲ್ಲೇ ಮೂಳೆ ಮಜ್ಜೆಯ ಕಸಿಗಾಗಿ ಕಾಯುತ್ತಿರುವ ರೋಗಿಗಳಿಗೆ ತಲಾ 5 ಲಕ್ಷ ರೂಪಾಯಿ ಬಿಡುಗಡೆ ಮಾಡುವ ಪ್ರಸ್ತಾವನೆಯ ಕಡತಕ್ಕೆ ಸಹಿ ಹಾಕಿದ್ದಾರೆ. ಫಡ್ನವಿಸ್ ಸಹಿ ಹಾಕಿರುವ ಮೊದಲ ಕಡತ ಇದಾಗಿದೆ. ಪುಣೆ ಮೂಲದ ಚಂದ್ರಕಾಂತ್ ಕುರ್ಹಾಡೆ ಅವರ ಪತ್ನಿ ಪತಿಯ ಚಿಕಿತ್ಸೆಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೆರವು …

Read More »

ರಾಜ್ಯದಲ್ಲಿ ಕಾಂಗ್ರೆಸ್​ ನ 5 ಗ್ಯಾರಂಟಿಗಳನ್ನು ರದ್ದುಗೊಳಿಸುವ ಪ್ರಯತ್ನ ನಡೆಯುತ್ತಿದೆ: ರಣದೀಪ್ ಸಿಂಗ್ ಸುರ್ಜೇವಾಲಾ

ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳ ಮೇಲೆ ಟೀಕೆ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿ ರಾಜ್ಯದ ಮಹಿಳೆಯರಿಗೆ ಸಿಗುವ ಎರಡು ಸಾವಿರ, ಅನ್ನಭಾಗ್ಯ ಯೋಜನೆ ಅಕ್ಕಿ ಹಣ, 200 ಯೂನಿಟ್ ಉಚಿತ ವಿದ್ಯುತ್, ನಿರುದ್ಯೋಗಿ ಯುವಕರ ನಿರುದ್ಯೋಗ ಭತ್ಯೆಯನ್ನು ಕಸಿಯಲು ಪ್ರಯತ್ನಿಸುತ್ತಿದೆ ಎಂದು ರಣದೀಪ್ ಸಿಂಗ್ ಸುರ್ಜೆವಾಲ ಅವರು ಹೇಳಿದರು. ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಮಾತನಾಡಿ, ಬಿಜೆಪಿ …

Read More »

ಬೆಳಗಾವಿ: ಸಿಇಒ ಅಧ್ಯಕ್ಷತೆಯಲ್ಲಿ ಚಳಿಗಾಲ ಅಧಿವೇಶನದ ಪೂರ್ವಭಾವಿ ಸಭೆ

ಬೆಳಗಾವಿ: ಕಳೆದ ವರ್ಷದಂತೆ ಈ ವರ್ಷವೂ ಸಹ ಚಳಿಗಾಲದ ಅಧಿವೇಶನ ಜಿಲ್ಲೆಯಲ್ಲಿ ಜರುಗುತ್ತಿದ್ದು, ಅಧಿವೇಶನದ ಸುಗಮ ನಿರ್ವಹಣೆಗಾಗಿ ಜಿಲ್ಲಾ ಪಂಚಾಯತಿ ಹಾಗೂ ಅಧೀನ ಇಲಾಖೆಯ ಸಿಬ್ಬಂದಿ ವರ್ಗದವರು ಸಮನ್ವಯತೆ ಸಾಧಿಸುವ ಮೂಲಕ ತಮ್ಮ ಕಾರ್ಯ ನಿರ್ವಹಿಸಿ ಹಾಗೂ ಶಿಸ್ತು ಮತ್ತು ಸಮಯ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಿ ಎಂದು ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ಶಿಂಧೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಜರುಗಿದ ಚಳಿಗಾಲದ ಅಧಿವೇಶನದ …

Read More »

ಮಂಗಳೂರು ಸೇರಿ ದೇಶದ 6 ವಿಮಾನ ನಿಲ್ದಾಣ ಗುತ್ತಿಗೆ ಪಾರದರ್ಶಕ: ಕೇಂದ್ರ ಸಚಿವ ಕೆ.ರಾಮಮೋಹನ್ ನಾಯ್ಡು

ಹೊಸದಿಲ್ಲಿ: ಮಂಗಳೂರು ಸೇರಿದಂತೆ ದೇಶದ 6 ಪ್ರಮುಖ ವಿಮಾನ ನಿಲ್ದಾಣಗಳನ್ನು ಅದಾನಿ ಗ್ರೂಪ್‌ಗೆ ಪಾರದರ್ಶಕವಾಗಿಯೇ ಗುತ್ತಿಗೆ ನೀಡಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವ ಕೆ.ರಾಮ್‌ಮೋಹನ್‌ ನಾಯ್ಡು ಗುರುವಾರ ಲೋಕಸಬೆಗೆ ಮಾಹಿತಿ ನೀಡಿದ್ದಾರೆ. ಟಿಎಂಸಿ ಸಂಸದ ಸೌಗತ ರಾಯ್‌ “ಒಂದೇ ಸಂಸ್ಥೆಗೆ 2 ವಿಮಾನ ನಿಲ್ದಾಣ ಗುತ್ತಿಗೆ ನೀಡ ಬಾರದೆಂದು ನೀತಿ ಆಯೋಗ, ಆರ್ಥಿಕ ವ್ಯವಹಾರಗಳ ಇಲಾಖೆ ಅಭಿಪ್ರಾಯ’ ಎಂದಿದ್ದರು. ಅದಕ್ಕೆ ಉತ್ತರಿಸಿದ ಸಚಿವರು, “ನೀತಿ ಆಯೋಗದ ಸಿಇಒ, ಡಿಇಎ ಕಾರ್ಯದರ್ಶಿಯವರಿದ್ದ …

Read More »