Breaking News

Uncategorized

ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ 50,571 ಕೋಟಿ ರೂ. ಅನುದಾನ ಬಿಡುಗಡೆ: ಕೇಂದ್ರ ಸಚಿವ ಪಂಕಜ್ ಚೌಧರಿ

ನವದೆಹಲಿ: ಕೇಂದ್ರ ಸರ್ಕಾರ ರೂ. 50, 571 ಕೋಟಿ ಅನುದಾನವನ್ನು ರಾಜ್ಯಗಳಿಗೆ ಬಿಡುಗಡೆ ಮಾಡಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ಎಂಟು ತಿಂಗಳ ಅವಧಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ವೆಚ್ಚವನ್ನು ಹೆಚ್ಚಿಸಲು ಬಂಡವಾಳ ಹೂಡಿಕೆ ಯೋಜನೆ ಭಾಗವಾಗಿ ವಿಶೇಷ ನೆರವನ್ನು ಬಿಡುಗಡೆ ಮಾಡಲಾಗಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಲೋಕಸಭೆಯಲ್ಲಿ ತಿಳಿಸಿದ್ದಾರೆ. ಅರುಣಾಚಲ ಪ್ರದೇಶ, ಹರಿಯಾಣ, ಕೇರಳ, ಪಂಜಾಬ್ ಮತ್ತು ತೆಲಂಗಾಣ ಹೊರತುಪಡಿಸಿ 28 ರಾಜ್ಯಗಳ …

Read More »

ಅಂಗವಿಕಲರ ಅಭಿವೃದ್ಧಿಗೆ ಕೆಕೆಆರ್‌ಡಿಬಿಯಿಂದ ಅನುದಾನ ಮೀಸಲು: ಸಚಿವ ಈಶ್ವರ್ ಖಂಡ್ರೆ

ಬೀದರ್‌: ಅಂಗವಿಕಲರ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ (ಕೆಕೆಆರ್‌ಡಿಬಿ) ಶೇ 5ರಷ್ಟು ಅನುದಾನ ಮೀಸಲಿಡುವ ಪ್ರಸ್ತಾವ ಸಿದ್ಧಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಆಶ್ವಾಸನೆ ನೀಡಿದರು. ಜಿಲ್ಲಾಡಳಿತ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಹಯೋಗದಲ್ಲಿ ನಗರದ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯ ಎಲ್ಲ ಅಂಗವಿಕಲರಿಗೆ ವಸತಿ, ನಿವೇಶನಕ್ಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ …

Read More »

ಕಳ್ಳತನದ ಆರೋಪದಲ್ಲಿ ಜೈಲು ಪಾಲಾಗಿದ್ದ ಮೆಕ್ಯಾನಿಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ

ಹುಬ್ಬಳ್ಳಿ: ಕಳೆದ ಹತ್ತು ದಿನಗಳ ಹಿಂದೆ ಆನಂದ ನಗರದಲ್ಲಿ ಕಳ್ಳತನದ ಆರೋಪದಲ್ಲಿ ಜೈಲು ಪಾಲಾಗಿದ್ದ ಮೆಕ್ಯಾನಿಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಪೊಲೀಸರ ಕಿರುಕುಳದಿಂದಲೇ ಪತಿ ಸಾವನಪ್ಪಿದ್ದಾರೆ ಎಂದು ಮೃತ ಮೆಕ್ಯಾನಿಕ್ ಮಹಾಂತೇಶನ ಹೆಂಡತಿ ತನಿಖೆ ನಡೆಸುವಂತೆ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಸದ್ಯ ಈ ಪ್ರಕರಣಕ್ಕೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಆತ್ಮಹತ್ಯೆ ಮಾಡಿಕೊಂಡ ಮಹಾಂತೇಶ್ ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದ ಎನ್ನಲಾಗಿದೆ. ಈಗ ಈ ಡೆತ್ …

Read More »

ಹಾಡಹಗಲೇ ವ್ಯಕ್ತಿಗೆ ಚಾಕು ಇರಿತ

ಧಾರವಾಡ: ಹಾಡಹಗಲೇ ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಸಂಭವಿಸಿದೆ. ಗರಗ ಗ್ರಾಮದ ಗಿರೀಶ ಕರಡಿಗುಡ್ಡ ಎಂಬುವವರೇ ಹತ್ಯೆಗೀಡಾದವರು. ಹತ್ಯೆ ಮಾಡಿದವರು ಯಾರು? ಯಾವ ಉದ್ದೇಶಕ್ಕಾಗಿ ಹತ್ಯೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಗಿರೀಶ ಅವರು ಸಣ್ಣ ಪುಟ್ಟ ರಿಯಲ್ ಎಸ್ಟೇಟ್ ಕೆಲಸ ಹಾಗೂ ಕಾರುಗಳನ್ನು ಕೊಡಿಸುವ ಮತ್ತು ತೆಗೆದುಕೊಳ್ಳುವ ಕೆಲಸ ಮಾಡುತ್ತಿದ್ದರು ಎಂದು ಗೊತ್ತಾಗಿದೆ. ಮಂಗಳವಾರ ಮಧ್ಯಾಹ್ನ ಗಿರೀಶ ತಮ್ಮ ಮನೆ …

Read More »

ಸಂಚಾರಿ ನಿಯಮಗಳ ಪಾಲನೆಯಿಂದ ಎಲ್ಲ ಸಂಚಾರಿಗಳು ಸುರಕ್ಷಿತ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ: ರಸ್ತೆ ಸಂಚಾರಿ ನಿಯಮಗಳನ್ನು ಪ್ರತಿಯೊಬ್ಬರು ಪಾಲಿಸುವದರಿಂದ ಎಲ್ಲ ಸಂಚಾರಿಗಳು ಸುರಕ್ಷಿತವಾಗಿರುತ್ತಾರೆ. 2024 ರ ಜನೆವರಿಯಿಂದ ನವೆಂಬರವರಗೆ ಅವಳಿನಗರದಲ್ಲಿ 118 ವಾಹನ ಅಪಘಾತ ಪ್ರಕರಣಗಳಾಗಿದ್ದು, ಇದರಲ್ಲಿ 126 ಜನ ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದಿಂದ ಆಯೋಜಿಸಿದ್ದ ಎಲ್.ಇ.ಡಿ ಸ್ಕ್ರೀನ್ ಹೊಂದಿರುವ ವಾಹನಗಳ ಮೂಲಕ …

Read More »

ರಸ್ತೆ ಮೂಲಸೌಕರ್ಯ ಯೋಜನೆಗಳ ಪ್ರಗತಿ ಪರಿಶೀಲಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಪ್ರಯಾಗರಾಜ್: ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯದಲ್ಲಿನ ನಿರ್ಣಾಯಕ ರಸ್ತೆ ಮೂಲಸೌಕರ್ಯ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿದರು. ವಿಶೇಷವಾಗಿ ಮುಂದಿನ ತಿಂಗಳು ಪ್ರಯಾಗ್‌ರಾಜ್‌ನಲ್ಲಿ ಆರಂಭವಾಗಲಿರುವ ಮಹಾಕುಂಭದ ಆಯೋಜನೆ ಸುಗಮಗೊಳಿಸುವ ಗುರಿ ಹೊಂದಿರುವ ಯೋಜನೆಗಳನ್ನು ಪರಿಶೀಲಿಸಲಾಯಿತು. 63.17-ಕಿಲೋಮೀಟರ್ ರಾಯ್‌ಬರೇಲಿ-ಪ್ರಯಾಗ್‌ರಾಜ್ ರಾಷ್ಟ್ರೀಯ ಹೆದ್ದಾರಿಯ ಅಗಲೀಕರಣ, ನಾಲ್ಕು ಸ್ಥಳಗಳಲ್ಲಿ ಚತುಷ್ಪಥ ಬೈಪಾಸ್‌ಗಳ ನಿರ್ಮಾಣ, ಪ್ರಯಾಗರಾಜ್ ಒಳವರ್ತುಲ ರಸ್ತೆಯ 7.6- ಕಿಲೋಮೀಟರ್ ಭಾಗ ಮತ್ತು ಫಾಫಮೌನಲ್ಲಿ ಗಂಗಾ ನದಿಯ …

Read More »

ಫೆಬ್ರವರಿ ವೇಳೆಗೆ ತಾ.ಪಂ, ಜಿ.ಪಂ ಚುನಾವಣೆ ನಡೆಸಲು ಸಿದ್ಧತೆ: ಡಿಸಿಎಂ ಡಿಕೆಶಿ

ಬೆಂಗಳೂರು: ಮುಂದಿನ ಫೆಬ್ರವರಿ ವೇಳೆಗೆ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ತಯಾರಿಗಳಾಗುತ್ತಿವೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಮತದಾರರ ಪಟ್ಟಿ ಕೂಡ ಸಿದ್ಧಗೊಳ್ಳುತ್ತಿದೆ. ಚುನಾವಣೆಯನ್ನಂತು ನಿಲ್ಲಿಸಲು ಸಾಧ್ಯವಿಲ್ಲ ಫೆಬ್ರವರಿಯಲ್ಲಿ ಮತದಾನದ ಸಾಧ್ಯತೆ ಇದೆ ಎಂದರು. ಸಚಿವ ಸಂಪುಟ …

Read More »

ಶ್ರೀ ಪರ್ವತ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ದೀಪೋತ್ಸವ ಕಾರ್ಯಕ್ರಮ

ನವಲಗುಂದ: ಪಟ್ಟಣದ ಗಾಂಧಿ ಮಾರುಕಟ್ಟೆಯಲ್ಲಿ ಇರುವ ಶ್ರೀ ಪರ್ವತ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಕೂಡಾ ಇಂದು ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ಜರುಗಿತು. ದೇವಸ್ಥಾನದ ಮುಂಭಾಗ ರಂಗೋಲಿಯಿಂದ ಸಿಂಗರಿಸಿ, ಮಣ್ಣಿನ ಹಣತೆಯಲ್ಲಿ ದೀಪಗಳನ್ನು ಹಚ್ಚಿ ಕಾರ್ತಿಕೋತ್ಸವ ಆಚರಣೆ ಮಾಡಲಾಯಿತು. ನಗರದ ಜನತೆ ಕಾರ್ತಿಕೋತ್ಸವದಲ್ಲಿ ಭಾಗಿಯಾಗಿ ದೀಪಗಳನ್ನು ಬೆಳಗಿಸಿ, ದೇವಸ್ಥಾನದ ವತಿಯಿಂದ ಕಲ್ಪಿಸಲಾದ ಪ್ರಸಾದ ಸ್ವೀಕರಿಸಿ ಮಲ್ಲಿಕಾರ್ಜುನನ ಕೃಪೆಗೆ ಪಾತ್ರರಾದರು.

Read More »

ಕನಕದಾಸರ ಭವ್ಯ ಮೂರ್ತಿ ಭವ್ಯ ಮೆರವಣಿಗೆ

ಅಣ್ಣಿಗೇರಿ: ಪಟ್ಟಣದಲ್ಲಿ ಕನಕದಾಸರ ಜಯಂತಿಯ ನಿಮಿತ್ಯ ಕನಕದಾಸರ ಭವ್ಯ ಮೂರ್ತಿಯನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಈ ಮೆರವಣಿಗೆಗೆ ದಾಸೋಹ ಮಠದ ಡಾ. ಶ್ರೀ ಶಿವಕುಮಾರ ಶ್ರೀಗಳು ಹಾಗೂ ಶಾಸಕರಾದ ಕೋನರಡ್ಡಿ ಮತ್ತು ವಿನೋದ್ ಅಸೂಟಿಯವರು ರಿಬ್ಬನ್ ಕಟ್ ಮಾಡುವ ಮುಖಾಂತರ ಚಾಲನೆ ನೀಡಿದರು. ಇನ್ನು ಈ ಮೆರವಣಿಗೆಯಲ್ಲಿ ಡೊಳ್ಳು ಮೇಳ ಕುಂಭಮೇಳದವರು ಪಾಲ್ಗೊಂಡು ಮೆರವಣಿಗೆಗೆ ಮೆರಗು ತಂದರು.

Read More »

ಬಿಜೆಪಿಯಲ್ಲಿನ ಆಂತರಿಕ ಕಚ್ಚಾಟರಿಂದ ಲಕ್ಷಾಂತರ ಜನ ಕಾರ್ಯಕರ್ತರಿಗೆ ಬೇಸರ ಉಂಟಾಗಿದೆ : ಬೆಲ್ಲದ

ಧಾರವಾಡ: ಸದ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಆಂತರಿಕ ಕಚ್ಚಾಟಕ್ಕೆ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಬೇಸರ ವ್ಯಕ್ತಡಿಸಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿನ ಆಂತರಿಕ ಕಚ್ಚಾಟರಿಂದ ಲಕ್ಷಾಂತರ ಜನ ಕಾರ್ಯಕರ್ತರಿಗೆ ಬೇಸರ ಉಂಟಾಗಿದೆ. ಬಿಜೆಪಿಗಾಗಿ ಹಗಲು, ರಾತ್ರಿ ಲಕ್ಷಾಂತರ ಜನ ಕಾರ್ಯಕರ್ತರು ದುಡಿದಿದ್ದಾರೆ. ಯಾವುದೇ ಫಲಾಪೇಕ್ಷೆ ಇಲ್ಲದೇ ಬಹಳ ವರ್ಷಗಳಿಂದ ದುಡಿದಿದ್ದಾರೆ. ಪಕ್ಷದ ಸಂಸ್ಥಾಪಕ ಶಾಮ ಪ್ರಸಾದ್‌ ಮುಖರ್ಜಿ ದೇಶಕ್ಕಾಗಿ ಜೀವ ಕಳೆದುಕೊಂಡಿದ್ದಾರೆ. ಅವರು ಆರ್ಟಿಕಲ್ …

Read More »