Shaikh BigTv
December 1, 2024
Uncategorized
ಧಾರವಾಡ: ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ವಿಧಾನಸಭೆ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆ ಕುರಿತು ಘೋಷಣೆ ಮಾಡಬೇಕು ಎಂದು ಧಾರವಾಡ ಪತ್ಯೇಕ ಪಾಲಿಕೆ ಮಹಾನಗರ ಪಾಲಿಕೆ ಅಭಿವೃದ್ಧಿ ವೇದಿಕೆ ಅಧ್ಯಕ್ಷ ವೆಂಕಟೇಶ ಮಾಚಕನೂರು ಆಗ್ರಹಿಸಿದರು. ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆ ಮಾಡಬೇಕು ಎಂದು ನಾಲ್ಕು ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ. ಕಳೆದ ವಿಧಾನಸಭೆ ಅಧಿವೇಶನದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ …
Read More »
BigTv News
December 1, 2024
Uncategorized
ಕಲಬುರಗಿ: ಐಟಿ ನವೋದ್ಯಮಗಳಿಗೆ ಪ್ರೋತ್ಸಾಹಿಸುವ ದೃಷ್ಟಿಯಿಂದ ಹೆಚ್ಚಿನ ಮೂಲಸೌಕರ್ಯ ಮತ್ತು ತಾಂತ್ರಿಕ ಸಹಾಯ ಒದಗಿಸುವ ನಿಟ್ಟಿನಲ್ಲಿ ನಗರದಲ್ಲಿ ಇನ್‌ಕ್ಯುಬೇಶನ್ ಕೇಂದ್ರ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ-ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಎಂಜಿನಿಯರಿಂಗ್ ಕಾಲೇಜು, ವಿಜ್ಞಾನ ಪದವಿ ಕಾಲೇಜು ಹಾಗೂ ನವೋದ್ಯಮಿಗಳೊಂದಿಗೆ ಸಭೆ ನಡೆಸಿದ ಅವರು, ಎಂಜಿನಿಯರಿಂಗ್ ಕಾಲೇಜಿನವರು ನಗರದಲ್ಲಿ ಸುಮಾರು 5 …
Read More »
BigTv News
November 30, 2024
Uncategorized
ಮಂಗಳೂರು: ದೇಶದಲ್ಲಿ ಪೊಲೀಸರಿಗೆ ಸುಸಜ್ಜಿತ ಮನೆಗಳನ್ನು ಯಾವ ರಾಜ್ಯಗಳು ನಿರ್ಮಿಸಿಲ್ಲ. ನಮ್ಮ ಸರ್ಕಾರವು ಸುಸಜ್ಜಿತವಾದ ಮನೆಗಳನ್ನು ನಿರ್ಮಿಸಿ ಕೊಡುತ್ತಿದೆ. ಇಲಾಖೆಯ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಗೆ ವಸತಿ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು. ಮಂಗಳೂರಿನ ಅತ್ತಾವರದಲ್ಲಿ ಮಂಗಳೂರು ನಗರ ಪೊಲೀಸ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ನೂತನ ಪೊಲೀಸ್ ವಸತಿ ಗೃಹ ಸಮುಚ್ಛಯಗಳು ಹಾಗೂ ಸುಬ್ರಹ್ಮಣ್ಯ ಮತ್ತು …
Read More »
BigTv News
November 30, 2024
Uncategorized
ಬೆಳಗಾವಿ: ಬೆಳಗಾವಿ ಜಿಲ್ಲಾಧಿಕಾರಿಗಳಾದ ಮೊಹಮ್ಮದ್ ರೋಷನ್ ಅವರು ಜಿಲ್ಲೆಯ ರಾಮತೀರ್ಥ ನಗರದಲ್ಲಿರುವ ಸರ್ಕಾರಿ ವಿಶೇಷ ದತ್ತು ಸ್ವೀಕಾರ ಕೇಂದ್ರಕ್ಕೆ ಇಂದು ಭೇಟಿ ನೀಡಿ ಮಕ್ಕಳ ಆರೋಗ್ಯ ಕುರಿತು ಪರಿಶೀಲಿಸಿದರು. ಮಕ್ಕಳ ಆರೋಗ್ಯ ತಪಾಸಣೆ ಹಾಗೂ ಮಕ್ಕಳಿಗೆ ಅಗತ್ಯವಿರುವ ಎಲ್ಲ ಮೂಲಭೂತ ಸೌಕರ್ಯಗಳನ್ನು ಸರಿಯಾಗಿ ನಿರ್ವಹಿಸುವಂತೆ ದತ್ತು ಸ್ವೀಕಾರ ಕೇಂದ್ರದ ಮುಖ್ಯಸ್ಥರಿಗೆ ಹಾಗೂ ಮಕ್ಕಳ ಆರೋಗ್ಯ ಮತ್ತು ಕಾಳಜಿಯ ಬಗ್ಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಸೂಚಿಸಿದರು.
Read More »
Shaikh BigTv
November 30, 2024
Uncategorized
ಧಾರವಾಡ : ಧಾರವಾಡ ಕೃಷಿ ವಿಶ್ವವಿದ್ಯಾಲಯವು ನವೆಂಬರ 27 ರಿಂದ ಕೆಲಗೇರಿ ಕೆರೆಯ ಬದುಗಳ ಮೇಲಿರುವ ಕಸ ಕಡ್ಡಿ ಮತ್ತು ಇನ್ನಿತರ ತ್ಯಾಜ್ಯ ವಸ್ತುಗಳನ್ನು ಸ್ವಚ್ಛಗೊಳಿಸಲು ಪ್ರತಿದಿನ ಸುಮಾರು 32 ಕೃಷಿ ಕಾರ್ಮಿಕರನ್ನು ಅಲ್ಲದೇ ಇದರ ಉಸ್ತುವಾರಿ ನೋಡಿಕೊಳ್ಳಲು ಎರಡು ಕ್ಷೇತ್ರ ಸಹಾಯಕರು ಹಾಗೂ ಇಬ್ಬರು ವಿಜ್ಞಾನಿಗಳನ್ನು ನಿಯೋಜಿಸಲಾಗಿದೆ. ಪ್ರತಿದಿನ 6 ರಿಂದ 8 ಟ್ರ್ಯಾಕ್ಟರ್‍ಗಳಿಗೆ ಕಸಕಡ್ಡಿಗಳನ್ನು ತುಂಬಿ ಸ್ವಚ್ಛಗೊಳಿಸಲಾಗುತ್ತಿದೆ. ಅಲ್ಲದೇ, ಮುಂದಿನ ದಿನಗಳಲ್ಲಿ ಕೆರೆಯ ಸುತ್ತಲಿನ ಎಲ್ಲ ಕಸಕಡ್ಡಿಗಳನ್ನು …
Read More »
BigTv News
November 30, 2024
Uncategorized
ಕೊಪ್ಪಳ: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದಿಂದ 2024-25ನೇ ಸಾಲಿನ ಗಿರಿಜನ ಉಪಯೋಜನೆ ಅಡಿಯಲ್ಲಿ (10+1) ಕುರಿ-ಮೇಕೆ ಘಟಕದಡಿ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದಿಂದ 2024-25ನೇ ಸಾಲಿನ ಗಿರಿಜನ ಉಪಯೋಜನೆಯಡಿ ಗ್ರಾಮೀಣ ಭಾಗದ ಪರಿಶಿಷ್ಟ ಪಂಗಡದ ರೈತರಿಗೆ ಶೇಕಡ 90ರಷ್ಟು ಸಹಾಯಧನದೊಂದಿಗೆ (10+1) ಕುರಿ-ಮೇಕೆ ಘಟಕ ವಿತರಣೆಗೆ ಕೊಪ್ಪಳ ಜಿಲ್ಲಾವಾರು ಪರಶಿಷ್ಟ ಪಂಗಡಕ್ಕೆ 8 ಗುರಿಗಳನ್ನು ನಿಗದಿ ಪಡಿಸಲಾಗಿದೆ. ಕರ್ನಾಟಕ …
Read More »
BigTv News
November 30, 2024
Uncategorized
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಮೇಕೆದಾಟು ಸಮತೋಲನ ಜಲಾಶಯ ಮತ್ತು ಕಳಸಾ ಬಂಡೂರಿ ಯೋಜನೆಗಳಿಗೆ ತುರ್ತು ಅನುಮತಿ ನೀಡುವಂತೆ ಮನವಿ ಮಾಡಿದರು. ಅಲ್ಲದೆ, ನಬಾರ್ಡ್ ನೆರವು ಹೆಚ್ಚಳಕ್ಕೆ ಆಗ್ರಹಿಸಿದರು. ದೆಹಲಿಯ ಪಾರ್ಲಿಮೆಂಟ್ ಕಾಂಪ್ಲೆಕ್ಸ್‌ನಲ್ಲಿ ನಡೆದ ಸಭೆಯಲ್ಲಿ ಕೃಷಿ, ಜಲಸಂಪನ್ಮೂಲ ಮತ್ತು ನಗರ ಮೂಲಸೌಕರ್ಯ ಸೇರಿದಂತೆ ನಿರ್ಣಾಯಕ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸುವ ಹಲವಾರು ವಿಷಯಗಳಿಗೆ ಕೇಂದ್ರ ಸರ್ಕಾರ ತುರ್ತು ಮಧ್ಯಸ್ಥಿಕೆ …
Read More »
Shaikh BigTv
November 30, 2024
Uncategorized
ಹುಬ್ಬಳ್ಳಿ: ಪ್ರತಿ ದಿನ ಒತ್ತಡದ ನಡುವೆ ಕಾರ್ಯ ನಿರ್ವಹಿಸುತ್ತಿರುತ್ತೇವೆ. ಒತ್ತಡ ನಿವಾರಣೆ ಹಾಗೂ ಸದೃಢ ಆರೋಗ್ಯ ಹೊಂದಲು ದಿನನಿತ್ಯದ ಜೀವನದಲ್ಲಿ ವ್ಯಾಯಾಮ ಅತೀ ಮುಖ್ಯ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ ಹೇಳಿದರು. ಇಂದು ಕಾರವಾರ ರಸ್ತೆಯ ಹಳೆಯ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತಾಲಯ ಘಟಕದ ವತಿಯಿಂದ ಆಯೋಜಿಸಿದ್ದ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ತ್ರಿವರ್ಣ ಬಲೂನ್ ಹಾಗೂ ಪಾರಿವಾಳಗಳನ್ನು …
Read More »
BigTv News
November 30, 2024
Uncategorized
ಹುಬ್ಬಳ್ಳಿ: ಹೆಸ್ಕಾಂ ಇಲಾಖೆಯನ್ನು ಮಾದರಿ ಇಲಾಖೆಯನ್ನಾಗಿ ಮಾಡಲು ಪಣ ತೊಟ್ಟು ಕೆಲಸ ಮಾಡುತ್ತೇನೆ ಎಂದು ಹೆಸ್ಕಾಂ ನೂತನ ಅಧ್ಯಕ್ಷ ಸೈಯದ್ ಅಜ್ಜಂಪೀರ ಖಾದ್ರಿ ಹೇಳಿದರು. ಹುಬ್ಬಳ್ಳಿ ಹೆಸ್ಕಾಂ ಕಚೇರಿಯಲ್ಲಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು ರೈತ ದೇಶದ ಬೆನ್ನೆಲುಬು. ರೈತರಿಗೆ ಸಮಯಕ್ಕೆ ಸರಿಯಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಭಾರತ ದೇಶದಲ್ಲಿ ಗೃಹ ಜ್ಯೋತಿ ಯೋಜನೆ ಮಾದರಿಯಾಗಿದೆ. ಇಲಾಖೆ ಅಧಿಕಾರಿಗಳ ಸಹಕಾರ ತೆಗೆದುಕೊಂಡು ಕಾರ್ಯನಿರ್ವಹಿಸುತ್ತೇನೆ. ಹೆಸ್ಕಾಂ ವ್ಯಾಪ್ತಿಯ ಪ್ರದೇಶಗಳಿಗೆ …
Read More »
bigtvnews22
November 30, 2024
Uncategorized
ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಅವರ ಸ್ವಾಭಿಮಾನಿ ಸಮಾವೇಶಕ್ಕೆ ಸಾಕಷ್ಟು ವಿರೋಧಗಳ ನಡುವೆಯೂ ಸಚಿವ ಆರ್ ಬಿ ತಿಮ್ಮಾಪುರ ಸಿಎಂ ಪರ ಬ್ಯಾಟಿಂಗ್ ಬೀಸಿದ್ದಾರೆ. ವಿರೋಧ ಮಾಡಿದವರು ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ. ಅದು ಅವರ ವಿಚಾರ ಆದ್ರೆ ಸ್ವಾಭಿಮಾನಿ ಸಮಾವೇಶ ಮಾಡೋದರಲ್ಲಿ ತಪ್ಪೇನಿದೆ ಅಂತಾ ಪ್ರತಿಕ್ರಿಯೆ ನೀಡಿದರು. ರಾಜ್ಯದಲ್ಲಿರುವ ಬೇರೆ ಬೇರೆ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಅದು ಬಿಜೆಪಿ ಸರ್ಕಾರ ಇದ್ದಾಗಲೂ ಇದೆ. ನಮ್ಮ ಸರ್ಕಾರ ಇದ್ದಾಗಲೂ ಇದೆ. ಈ ಭ್ರಷ್ಟಾಚಾರ …
Read More »