Shaikh BigTv
November 30, 2024
Uncategorized
ಹುಬ್ಬಳ್ಳಿ: ವಾಣಿಜ್ಯ ನಗರದ ಪ್ರಸಿದ್ಧ ಉಣಕಲ್ ಕೆರೆ ಒಂದು ಇತಿಹಾಸ ಹೊಂದಿದೆ. ಈ ಕೆರೆಗೆ ಚನ್ನಬಸವೇಶ್ವರ ಸಾಗರ ಹೆಸರು ಇಡಲು ಉತ್ತರ ಕರ್ನಾಟಕ ಜನಶಕ್ತಿ ಸೇನಾ ಸಂಸ್ಥಾಪಕ ಎಸ್ ಎಸ್ ಶಂಕರಣ್ಣ ನಿರಂತರ ಹೋರಾಟ ಮಾಡಿದ್ದರು, ಆ ಹೋರಾಟಕ್ಕೆ ಇದೀಗ ಜಯ ಸಿಕ್ಕಿದೆ. ಹೌದು, ಉಣಕಲ್ ಕೆರೆ ಗೆ ಚನ್ನಬಸವೇಶ್ವರ ಸಾಗರ ಹೆಸರು ನಿರಂತರವಾಗಿ ಹೋರಾಟ ನಡೆದಿದ್ದು, ಇದೀಗ ಹುಬ್ಬಳ್ಳಿ ಧಾರವಾಡ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಉಣಕಲ್ ಚನ್ನಬಸವೇಶ್ವರ ಜಲ …
Read More »
Shaikh BigTv
November 30, 2024
Uncategorized
ನವಲಗುಂದ : ಪಟ್ಟಣದ ಅಣ್ಣಿಗೇರಿ ರಸ್ತೆಯಲ್ಲಿ ಈಗಾಗಲೇ ಇರುವ ಆಶ್ರಯ ಜಮೀನಿನ ಪಕ್ಕದಲ್ಲಿರುವ ಬಸವರಾಜ ಬಿರೋಳ್ಳಿಯವರ 1 ಎಕರೆ 19 ಗುಂಟೆ ಜಮೀನನ್ನು ಮನೆ ಇಲ್ಲದ ಬಡಜನತೆಗೆ ಸೂರು ಒದಗಿಸುವುದಕ್ಕಾಗಿ ಖರೀದಿಸಲಾಯಿತು. ಜಮೀನು ನೀಡಿದ ಮಾಲೀಕರಿಗೆ ಶಾಸಕ ಎನ್.ಎಚ್.ಕೋನರಡ್ಡಿ ಸನ್ಮಾನಿಸಿ ಚೆಕ್ ನೀಡಿದರು. ಈ ವೇಳೆ ತಹಸೀಲ್ದಾರ ಸುಧೀರ ಸಾಹುಕಾರ, ಪುರಸಭೆ ಮುಖ್ಯಧಿಕಾರಿ ಶರಣು ಪೂಜಾರ, ಪುರಸಭೆ ಸದಸ್ಯರು, ಹಿರಿಯರು ಉಪಸ್ಥಿತರಿದ್ದರು.
Read More »
Shaikh BigTv
November 30, 2024
Uncategorized
ನವಲಗುಂದ : ರೈತರನ್ನು ವೃಥಾ ಅಲೆದಾಡಿಸದೇ ಅಧಿಕಾರಿಗಳು ರೈತ ಸಮುದಾಯಕ್ಕೆ ಸ್ಪಂದಿಸಬೇಕು. ರೈತರಿಗೆ ಕಾಲ-ಕಾಲಕ್ಕೆ ಸರ್ಕಾರದಿಂದ ಬರುವ ಸೌಲಭ್ಯಗಳ ಕುರಿತು ಪ್ರಾಮಾಣಿಕವಾಗಿ ಮಾಹಿತಿ ಮುಟ್ಟಿಸಬೇಕು ಎಂದು ಶಾಸಕ ಎನ್.ಎಚ್.ಕೋನರಡ್ಡಿ ಹೇಳಿದರು. ಪಟ್ಟಣದ ಪಶು ಆಸ್ಪತ್ರೆಯಲ್ಲಿ ಪಶುಪಾಲನಾ ಇಲಾಖೆ ವತಿಯಿಂದ ರೈತರಿಗೆ ಮೇವು ಕತ್ತರಿಸುವ ಎರಡು ಯಂತ್ರಗಳನ್ನು ವಿತರಿಸಿ ಮಾತನಾಡಿದ ಅವರು ಹೈನುಗಾರಿಕೆ ರೈತರಿಗೆ ಒಂದು ವರದಾನವಾಗಿದ್ದು, ಕೃಷಿ ಜೊತೆಗೆ ಹೈನುಗಾರಿಕೆಯನ್ನು ಕೂಡ ರೈತರು ಅಳವಡಿಸಿಕೊಳ್ಳಬೇಕು ಎಂದರು. ಪಶು ವೈದ್ಯಾಧಿಕಾರಿ ಮನೋಹರ …
Read More »
Shaikh BigTv
November 30, 2024
Uncategorized
ಕುಂದಗೋಳ : ಬೆಳಗಾವಿಯಲ್ಲಿ ಡಿಸೆಂಬರ್ 10 ರಂದು ಪಂಚಮಸಾಲಿ ಲಿಂಗಾಯತರಿಗೆ 2ಎ ಮೀಸಲಾತಿ ಉಪ ಸಮಾಜಗಳಿಗೆ ಓಬಿಸಿ ಮೀಸಲಾತಿ ಹಕ್ಕೊತ್ತಾಯ ಮಾಡಲು ಕೈಗೊಳ್ಳಲಿರುವ ಪ್ರತಿಭಟನೆ ಪೂರ್ವಭಾವಿ ಸಭೆ ನಾಳೆ ಅಭಿನವ ಕಲ್ಯಾಣಪುರ ಬಸವಣ್ಣಜ್ಜನವರು ಕಲ್ಯಾಣಪುರ ಮಠದಲ್ಲಿ ನಡೆಯಲಿದೆ. ನಾಳೆ ನವೆಂಬರ್ 30 ರಂದು ಬೆಳಿಗ್ಗೆ 9 ಗಂಟೆಗೆ ಕೂಡಲಸಂಗಮ ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಕುಂದಗೋಳ ಕಲ್ಯಾಣಪುರ ಮಠದಲ್ಲಿ ನಡೆಯಲಿದೆ. ಕುಂದಗೋಳ ತಾಲೂಕು ಸೇರಿದಂತೆ ಸುತ್ತಮುತ್ತಲಿನ ಹಳ್ಳಿಯ …
Read More »
BigTv News
November 30, 2024
Uncategorized
ಬೆಂಗಳೂರು: ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಶುಭ ಸುದ್ದಿ ಇಲ್ಲಿದೆ. 2400 ಕೆ.ಎಸ್.ಆರ್.ಪಿ. ಪೋಲೀಸರ ನೇಮಕಾತಿಗೆ ಸರ್ಕಾರ ಆದೇಶಿಸಿದೆ. ಸಶಸ್ತ್ರ ಮೀಸಲು ಪಡೆಯ ಎರಡು ಹೊಸ ಬೆಟಾಲಿಯನ್ ಆರಂಭಿಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ದೇವನಹಳ್ಳಿ ಮತ್ತು ಕೆಜಿಎಫ್ ಬಳಿ 2,400 ಪೊಲೀಸರ ಬಲವುಳ್ಳ ಎರಡು ಬೆಟಾಲಿಯನ್ ಆರಂಭಕ್ಕೆ ಅಧಿಕೃತವಾಗಿ ಶುಕ್ರವಾರ ಸರ್ಕಾರ ಆದೇಶಿಸಿದೆ. ಪ್ರಸ್ತುತ 12 ಕೆ.ಎಸ್.ಆರ್.ಪಿ., ಎರಡು ಐ.ಆರ್.ಬಿ. ಬೆಟಾಲಿಯನ್ ಗಳು ಇದ್ದು, ಮತ್ತಷ್ಟು ಬೆಟಾಲಿಯನ್ ಆರಂಭಿಸುವಂತೆ ಕೋರಿ …
Read More »
BigTv News
November 30, 2024
Uncategorized
ಬೆಂಗಳೂರು : ರಾಜ್ಯದಲ್ಲಿ ಒಟ್ಟು 1.96 ಲಕ್ಷ ಸರಕಾರಿ ಸರ್ವೇ ನಂಬರ್ಗಳಿದ್ದು, ಅಭಿಯಾನದ ರೀತಿಯಲ್ಲಿ ಪೋಡಿ ದುರಸ್ಥಿ ಮಾಡಲಾಗುವುದು. ಇದಕ್ಕಾಗಿ ಶನಿವಾರ(ನ.30)ದಂದು ಹಾಸನದಲ್ಲಿ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ಧಾರೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಾನಾ ಸರಕಾರಿ ಯೋಜನೆಗಳ ಅಡಿ ಕಳೆದ 30-40 ವರ್ಷಗಳಿಂದ ಲಕ್ಷಾಂತರ ಜನರಿಗೆ ಸರಕಾರಿ ಜಮೀನು ಮಂಜೂರಾಗಿದೆ. ಆದರೆ, ಈವರೆಗೆ ಪೋಡಿ ದುರಸ್ಥಿ ಆಗಿಲ್ಲ. ದಾಖಲೆ ಪಕ್ಕ ಆಗಿಲ್ಲ. ಇಂತಹ …
Read More »
BigTv News
November 30, 2024
Uncategorized
ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಅವಧಿಯಲ್ಲಿ 1.58 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಜಂಟಿ ಸಮೀಕ್ಷೆ ನಡೆಸಲಾಗಿದೆ. ಒಂದು ವಾರದಲ್ಲಿ ರೈತರ ಖಾತೆಗೆ ಪರಿಹಾರ ಮೊತ್ತ ಜಮಾ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಹಿಂಗಾರು ಮಳೆಯಿಂದ ಅಂದಾಜು 120 ಕೋಟಿ ರೂ.ನಷ್ಟು ನಷ್ಟ ಉಂಟಾಗಿದೆ. ರೈತರಿಗೆ ಪರಿಹಾರ ನೀಡುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಆದಾಯ ಸಂಗ್ರಹದಲ್ಲಿ ಕಂದಾಯ ಇಲಾಖೆ …
Read More »
BigTv News
November 30, 2024
Uncategorized
ಬೆಳಗಾವಿ: ಪ್ರತಿ ಅಮವಾಸ್ಯೆ ಹಾಗೂ ಹುಣ್ಣಿಗೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಬೆಳಗಾವಿ ಜಿಲ್ಲೆಯ ಸುಪ್ರಸಿದ್ಧ ಸವದತ್ತಿ ಕ್ಷೇತ್ರ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಅಭಿವೃದ್ಧಿಗೆ ಕಾಲ ಸನ್ನಿಹಿತವಾಗಿದೆ. ಕಾರಣ ಕೇಂದ್ರ ಸರ್ಕಾರವು ಶತಕೋಟಿ ಅನುದಾನ ಬಿಡುಗಡೆ ಮಾಡಿದೆ. ಈ ಕುರಿತು ಬೆಳಗಾವಿ ಬಿಜೆಪಿ ಸಂಸದರಾದ ಜಗದೀಶ್ ಶೆಟ್ಟರ್ ಅವರು ಮಾಹಿತಿ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಸುಪ್ರಸಿದ್ಧ ಕ್ಷೇತ್ರ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಪ್ರವಾಸೋದ್ಯಮ …
Read More »
Shaikh BigTv
November 30, 2024
Uncategorized
ಹುಬ್ಬಳ್ಳಿ: ರೈತರು ಉತ್ತಿ, ಬಿತ್ತಿ ಬೆಳೆ ತೆಗೆದಾಗ ಮಾತ್ರ ಎಲ್ಲರೂ ಸುಖವಾಗಿರಲು ಸಾಧ್ಯ. ಅಂತಹ ಅನ್ನದಾತರಿಗಾಗಿ ನಿರಂತರ ವಿದ್ಯುತ್ ಪೂರೈಕೆ ಮಾಡುವುದೇ ನನ್ನ ಮೊದಲ ಆದ್ಯತೆಯಾಗಿದೆ ಎಂದು ಹೆಸ್ಕಾಂ ಅಧ್ಯಕ್ಷ ಸೈಯದ್ ಅಜ್ಜಂಪೀರ ಖಾದ್ರಿ ಹೇಳಿದರು. ಇಲ್ಲಿನ ನವನಗರದ ಹೆಸ್ಕಾಂ ಕಚೇರಿಯಲ್ಲಿ ಶುಕ್ರವಾರ ಹೆಸ್ಕಾಂ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಗೃಹಜ್ಯೋತಿ ಯೋಜನೆ ಮೂಲಕ ಕಾಂಗ್ರೆಸ್ ಸರ್ಕಾರ ಬಡವರ ಪಾಲಿನ ಕಲ್ಪವೃಕ್ಷವಾಗಿದೆ. ಗೃಹಜ್ಯೋತಿ ಯೋಜನೆಯನ್ನು ಇನ್ನಷ್ಟು ಬಲಪಡಿಸಲಾಗುವುದು ಎಂದು …
Read More »
Shaikh BigTv
November 29, 2024
Uncategorized
ನವಲಗುಂದ: ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ತಾಪಂ ಸಭಾಂಗಣದಲ್ಲಿ ಅಧ್ಯಕ್ಷ ವರ್ಧಮಾನಗೌಡ ಹಿರೇಗೌಡ್ರ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯಲ್ಲಿ ಪಂಚ ಗ್ಯಾರಂಟಿಗಳ ಯೋಜನೆಗಳ ಸುಗಮ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ವೇಳೆ ಮಾತನಾಡಿದ ಅವರು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಂಚ ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸಲು ಸಂಬಂಧಿಸಿದ ಇಲಾಖಾ ಅಧಿಕಾರಗಳು ಪ್ರಯತ್ನಿಸುವಂತೆ ಸೂಚಿಸಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯಲ್ಲಿ ಪ್ರಮುಖವಾಗಿ …
Read More »