Breaking News

Uncategorized

ಬೆಳಗಾವಿಯ ಚಳಿಗಾಲ ಅಧಿವೇಶನದ ಮೊದಲ ದಿನವೇ ಮಹಾಮೇಳಾವ್: ಎಂಇಎಸ್

ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಆರಂಭವಾಗಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನದ ಮೊದಲ ದಿನವೇ (ಡಿ.9ರಂದು) ಮಹಾಮೇಳಾವ್‌ ನಡೆಸಲಾಗುವುದು ಎಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ಮುಖಂಡರು ಪ್ರಕಟಿಸಿದರು. ಇಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ಅವರನ್ನು ಇಂದು ಭೇಟಿಯಾದ ಅವರು, ಅಧಿವೇಶನಕ್ಕೆ ಪರ್ಯಾಯವಾಗಿ ನಗರದಲ್ಲಿ ಮಹಾಮೇಳಾವ್‌ ಮಾಡುತ್ತೇವೆ ಇದಕ್ಕೆ ವ್ಯವಸ್ಥೆ ಮಾಡಿಕೊಡಿ ಎಂದು ಮನವಿ ಮಾಡಿದರು. ಎಂಇಎಸ್‌ ಕಾರ್ಯಾಧ್ಯಕ್ಷ ಮನೋಹರ ಕಿಣೇಕರ, ರಾಜ್ಯ ಸರ್ಕಾರದಿಂದ ಗಡಿಭಾಗದ ಮರಾಠಿ ಭಾಷಿಕರ ಮೇಲೆ ಅನ್ಯಾಯ …

Read More »

ಇನ್ಮುಂದೆ ವಿವಿಗಳಿಗೆ ಮುಖ್ಯಮಂತ್ರಿಗಳೇ ಕುಲಪತಿ: ಸಂಪುಟ ಸಭೆಯಲ್ಲಿ ರಾಜ್ಯಪಾಲರ ಅಧಿಕಾರಕ್ಕೆ ಬ್ರೇಕ್

ಬೆಂಗಳೂರು: ಇನ್ಮುಂದೆ ವಿಶ್ವವಿದ್ಯಾಲಯಗಳಿಗೆ ಮುಖ್ಯಮಂತ್ರಿಯೇ ಕುಲಪತಿ, ರಾಜ್ಯಪಾಲರ ಅಧಿಕಾರಕ್ಕೆ ಸಂಪುಟ ಸಭೆಯಲ್ಲಿ ಬ್ರೇಕ್ ಹಾಕಲಾಗಿದೆ. ಇಂತಹ ಮಹತ್ವದ ನಿರ್ಧಾರವನ್ನು ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಇಂದಿನ ಸಂಪುಟ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಯುನಿವರ್ಸಿಟಿ ತಿದ್ದುಪಡಿ ವಿಧೇಯಕಕ್ಕೆ ಕ್ಯಾಬಿನೆಟ್ ಅನುಮೋದನೆ ನೀಡಲಾಗಿದೆ. ಈ ವಿಧೇಯಕಕ್ಕೆ ತಿದ್ದುಪಡಿ ತರಲು ಕ್ಯಾಬಿನೇಟ್ ಅನುಮೋದನೆ …

Read More »

ಕೇಂದ್ರ ಸರ್ಕಾರದಿಂದ ಕೋಳಿ ಸಾಕಣೆಗೆ ಶೇ.50 ರಷ್ಟು ಸಬ್ಸಿಡಿಯೊಂದಿಗೆ 50 ಲಕ್ಷ ರೂ. ಸಾಲ ಲಭ್ಯ

ನವದೆಹಲಿ : ಕೋಳಿ ಸಾಕಣೆ ಕೇಂದ್ರವನ್ನ ಸ್ಥಾಪಿಸುವ ಮೂಲಕ ಜೀವನೋಪಾಯವನ್ನ ಗಳಿಸಲು ಬಯಸುವವರಿಗೆ ಕೇಂದ್ರ ಸರ್ಕಾರ ಒಳ್ಳೆಯ ಸುದ್ದಿಯನ್ನು ನೀಡಿದೆ. ಕೋಳಿ ಸಾಕಣೆ ಕೇಂದ್ರ ಸ್ಥಾಪಿಸಲು ಶೇ.50ರಷ್ಟು ಸಬ್ಸಿಡಿಯೊಂದಿಗೆ 50 ಲಕ್ಷ ರೂ.ವರೆಗೆ ಸಾಲ ಮಂಜೂರು ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದ್ರೆ, ಸಾಲ ಪಡೆಯಲು ಬಯಸುವವರು ಒಂದು ಎಕರೆ ಭೂಮಿಯನ್ನ ಹೊಂದಿರಬೇಕು. ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳು ಅರ್ಹ ಜನರಿಗೆ ಸಾಲವನ್ನ ನೀಡುತ್ತವೆ. ಹೆಚ್ಚಿನ ವಿವರಗಳನ್ನ ಹತ್ತಿರದ ಪಶುಸಂಗೋಪನಾ ಇಲಾಖೆಯ …

Read More »

ಅಧಿವೇಶನದಲ್ಲಿ ವಿಶೇಷ ಅನುದಾನಕ್ಕಾಗಿ ಧ್ವನಿ ಎತ್ತುವೆ: ಶಾಸಕ ಲಕ್ಷ್ಮಣ ಸವದಿ

ಅಥಣಿ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಅಗತ್ಯವಿಲ್ಲ, ಬದಲಿಗೆ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ಧಿ ಮಂಡಳಿ ರಚಿಸಿ ಅಗತ್ಯವಿರುವ ಅನುದಾನ ನೀಡಬೇಕಿದೆ. ಈ ಮೂಲಕ ಪ್ರತ್ಯೇಕ ರಾಜ್ಯದ ಕೂಗಿಗೆ ಅಂತ್ಯಹಾಡಲು ಸಾಧ್ಯ. ಈ ಕುರಿತು ಅಧಿವೇಶನದಲ್ಲಿ ಧ್ವನಿ ಎತ್ತುವೆ ಶಾಸಕ ಲಕ್ಷ್ಮಣ ಸವದಿ ಹೇಳಿದರು. ಅಥಣಿ ಪಟ್ಟಣದಲ್ಲಿ ಪುರಸಭೆ ವತಿಯಿಂದ ವಿವಿಧ ಯೋಜನೆಗಳಡಿಯಲ್ಲಿ ಕೈಗೊಳ್ಳುವ ₹4.10 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಇಂದು ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಕಲ್ಯಾಣ ಕರ್ನಾಟಕ …

Read More »

ಗೃಹಲಕ್ಷ್ಮೀ ಫಲಾನುಭವಿಗಳಿಗೆ ಸಿಹಿಸುದ್ದಿ: ನಾಲ್ಕೈದು ದಿನಗಳಲ್ಲಿ ಖಾತೆಗೆ ಹಣ ಜಮಾ

ಬೆಂಗಳೂರು: ನಾಲ್ಕೈದು ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಹಣ ಹಾಕಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆರೋಪಿಸುವವರು ಹಣ ಹಾಕಿದರೂ ಆರೋಪಿಸುತ್ತಾರೆ. ಹಣ ಹಾಕದಿದ್ದರೂ ಅವರು ಆರೋಪ ಮಾಡುತ್ತಾರೆ. ಚುನಾವಣೆಗಾಗಿ ಹಣ ಹಾಕುತ್ತಾರೆ ಎಂದು ಹೇಳುತ್ತಾರೆ. ಈಗ ಚುನಾವಣೆ ಏನಿಲ್ಲವಲ್ಲ ಎಂದು ಹೇಳಿದ್ದಾರೆ. ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗುವುದು ವಿಳಂಬಾಗಿದ್ದ ಬಗ್ಗೆ ಫಲಾನುಭವಿ ಮಹಿಳೆಯರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ …

Read More »

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ 9 ಮಸೂದೆ ಮಂಡಿಸಲು ಅನುಮೋದನೆ: ಸಚಿವ ಹೆಚ್.ಕೆ.ಪಾಟೀಲ್‌

ಬೆಂಗಳೂರು : ರಾಜ್ಯ ಸಚಿವ ಸಂಪುಟ ಸಭೆಯಲ್ಲಿ 9 ಮಸೂದೆ ಮಂಡಿಸಲು ಅನುಮೋದನೆ ನೀಡಲಾಗಿದೆ ಎಂದು ಸಚಿವ ಹೆಚ್​.ಕೆ.ಪಾಟೀಲ್ ಅವರು ಮಾಹಿತಿ ನೀಡಿದರು. ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯದ ಬಳಿಕ ಮಾಹಿತಿ ನೀಡಿದ ಅವರು, ಕಾರ್ಮಿಕರ ಕಲ್ಯಾಣ ತಿದ್ದುಪಡಿ ವಿಧೇಯಕ-2024, ಅಂತರ್ಜಲ ನಿಯಮಾವಳಿ ಅಭಿವೃದ್ಧಿ ನಿರ್ವಹಣಾ ತಿದ್ದುಪಡಿ, ಚಾಣಕ್ಯ ವಿಶ್ವ ವಿದ್ಯಾಲಯ ತಿದ್ದುಪಡಿ ವಿಧೇಯಕ, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಯೂನಿವರ್ಸಿಟಿ ತಿದ್ದುಪಡಿಗೆ ಅನುಮೋದನೆ ನೀಡಲಾಗಿದೆ ಎಂದರು. ವಿವಿಗೆ ಸಂಬಂಧಿಸಿ …

Read More »

ಹಂಪಿ ಪ್ರವಾಸಕ್ಕೆ ಹೊರಟ ಶಾಲಾ ಮಕ್ಕಳಿದ್ದ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ: ತಪ್ಪಿದ ಭಾರಿ ಅನಾಹುತ

ಕೊಪ್ಪಳ : ವಿಜಯನಗರ ಜಿಲ್ಲೆಯ ಹಂಪಿ ಪ್ರವಾಸಕ್ಕೆ ಎಂದು ಕಲ್ಬುರ್ಗಿ ಜಿಲ್ಲೆಯ ಗುರುಮಿಟ್ಕಲ್ ನ ಶಾಲಾ ಮಕ್ಕಳಿದ್ದ ಕೆಎಸ್‌ಆರ್‌ಟಿಸಿ ಬಸ್ ಒಂದು ಪಲ್ಟಿಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಬಳಿ ನಡೆದಿದೆ. ಆದರೆ ಅದೃಷ್ಟವಶಾತ್ ಬಸ್ನಲ್ಲಿದ್ದ ಎಲ್ಲಾ ಮಕ್ಕಳು ಕೂಡ ಸೇಫ್ ಆಗಿದ್ದಾರೆ. ಕಲಬುರಗಿಯ ಗುರುಮಿಟ್ಕಲ್‌ನ ಶಾಲಾ ಮಕ್ಕಳಿದ್ದ ಸಾರಿಗೆ ಬಸ್‌ ಗಂಗಾವತಿಯ ಮರಳಿ ಸಮೀಪ ರಸ್ತೆ ಬದಿಯ ಹೊಲಕ್ಕೆ ಉರುಳಿದೆ, ಇಂದು ಬೆಳಗ್ಗೆ 4:30ರ ಸುಮಾರಿಗೆ ಘಟನೆ …

Read More »

ನಾರ್ಮಲ್ ಹೆರಿಗೆಗಿಂತ ಸಿಸೇರಿಯನ್ ಸಂಖ್ಯೆ ವಿಪರೀತ ಏರಿಕೆ: ಸಚಿವರ ಕಳವಳ

ಶಿವಮೊಗ್ಗ: ಜಿಲ್ಲೆಯಲ್ಲಿ ಸಹಜ ಹೆರಿಗೆಗಿಂತಲೂ ಸಿಸೇರಿಯನ್ ಸಂಖ್ಯೆಯಲ್ಲಿ ವಿಪರೀತ ಏರಿಕೆ ಆಗಿರುವುದನ್ನು ಕಂಡು ಸ್ವತಃ ಆರೋಗ್ಯ ಸಚಿವರೇ ಹೌಹಾರಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಸೇರಿಯನ್ ಪ್ರಮಾಣ ಗರಿಷ್ಠ ಶೇ.49 ಇದ್ದರೆ ಖಾಸಗಿ ಆಸ್ಪತ್ರೆಗಳಲ್ಲಿ ಗರಿಷ್ಠ ಶೇ.73 ಇರುವುದನ್ನು ಕಂಡು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಳವಳ ವ್ಯಕ್ತಪಡಿಸಿದ್ದಾರೆ. ಇಲಾಖೆ ಪ್ರಗತಿ ಪರಿಶೀಲನೆ ನಡೆಸುವ ವೇಳೆ ಅಧಿಕಾರಿಗಳು ನೀಡಿದ ಅಂಕಿ ಅಂಶಗಳನ್ನು ಕಂಡು ಆತಂಕ ವ್ಯಕ್ತಪಡಿಸಿದರು. ಈ ಪ್ರಮಾಣದಲ್ಲಿ ಸಿಸೇರಿಯನ್ ಮಾಡುವ ಅವಶ್ಯವಿದೆಯೇ …

Read More »

ಡಿ. 6 ರಂದು ಸಾಗರದಲ್ಲಿ ಅಡಿಕೆ ಬೆಳೆಗಾರರ ಸಮಾವೇಶ

ಶಿವಮೊಗ್ಗ: ಅಡಿಕೆ ನಿಷೇಧದ ಭೀತಿ, ಬೆಲೆ ಏರಿಳಿತ, ಕಾರ್ಮಿಕರ ಕೊರತೆ ಮುಂತಾದ ಸಮಸ್ಯೆಗಳಿಗೆ ಸಿಲುಕಿ ಮಲೆನಾಡಿನ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ. ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತು ಚರ್ಚಿಸಲು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಅಡಿಕೆ ಬೆಳೆಗಾರರ ಸಮಾವೇಶವನ್ನು ಡಿಸೆಂಬರ್ 6ರಂದು ಆಯೋಜಿಸಲಾಗಿದೆ. ಕೇಂದ್ರ ಕೃಷಿ ಸಚಿವರನ್ನು ಸಹ ಸಮಾವೇಶಕ್ಕೆ ಆಹ್ವಾನಿಸಲಾಗಿದೆ. ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ನೇತೃತ್ವದಲ್ಲಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ವಿಶ್ವೇಶ್ವರ ಹೆಗಡೆ ಕಾಗೇರಿ, ಕ್ಯಾಪ್ಟನ್ ಬ್ರಿಜೇಶ್ …

Read More »

ದೇಶದಲ್ಲಿ ವಕ್ಫ್ ಮಂಡಳಿಗಳ 58,929 ಕರ್ನಾಟಕದಲ್ಲಿ 869 ಆಸ್ತಿಗಳ ಅತಿಕ್ರಮ ಆರೋಪ: ಕೇಂದ್ರ ಸರ್ಕಾರ

ನವದೆಹಲಿ: ದೇಶದಲ್ಲಿ ವಕ್ಫ್ ಮಂಡಳಿಗಳ 58,929 ಆಸ್ತಿಗಳ ಅತಿಕ್ರಮವಾಗಿರುವ ಆರೋಪ ಕೇಳಿಬಂದಿದೆ. ಇದರಲ್ಲಿ ಕರ್ನಾಟಕದ 869 ಆಸ್ತಿಗಳೂ ಸೇರಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಲೋಕಸಭೆಯಲ್ಲಿ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಕೇಂದ್ರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರೆಣ್‌ ರಿಜಿಜು, ಕಾಲ ಕಾಲಕ್ಕೆ ವಕ್ಫ್‌ ಆಸ್ತಿಗೆ ಸಂಬಂಧಿಸಿದಂತೆ ಸಾಕಷ್ಟು ದೂರುಗಳು ಕೇಂದ್ರೀಯ ವಕ್ಫ್‌ ಪರಿಷತ್‌ಗೆ ಬಂದಿವೆ. ಅವುಗಳನ್ನು ಆಯಾ ಸಂದರ್ಭದಲ್ಲೇ ರಾಜ್ಯ ವಕ್ಫ್ …

Read More »