Breaking News

Uncategorized

ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಪ್ರಮಾಣವಚನ ಸ್ವೀಕಾರ

ನವದೆಹಲಿ : ವಯನಾಡು ಕ್ಷೇತ್ರದಿಂದ ಸಂಸದೆಯಾಗಿ ಆಯ್ಕೆಯಾದ ಪ್ರಿಯಾಂಕಾ ವಾದ್ರಾ ಸಂಸತ್ ಪ್ರವೇಶ ಮಾಡಿದ್ದಾರೆ ಸಂಸದೆಯಾಗಿ ಪ್ರಮಾನವಚನ ಸ್ವೀಕರಿಸಿದ್ದಾರೆ. ಪ್ರಮಾಣವಚನ ಸ್ವೀಕಾರ ವೇಳೆ ಪ್ರಿಯಾಂಕಾ ಕೈಯಲ್ಲಿ ಸಂವಿಧಾನ ಪುಸ್ತಕ ಹಿಡಿದು ಗಮನ ಸೆಳೆದಿದ್ದಾರೆ. ಕೇರಳದ ಪಾರಂಪಾರಿಕ ಕೈಮಗ್ಗ ಸೀರೆಯಾದ ಬಿಳಿ ಬಣ್ಣದ ಕಸವು ಸೀರೆಯುಟ್ಟು ಪ್ರಿಯಾಂಕಾ ಪ್ರತಿಜ್ಞಾವಿಧಿ ಸ್ವೀಕಾರ ಮಾಡಿದರು. ಇತ್ತೀಚೆಗೆ ಮುಕ್ತಾಯಗೊಂಡ ವಯನಾಡು ಬೈ ಎಲೆಕ್ಷನ್ ನಲ್ಲಿ ಪ್ರಿಯಾಂಕಾ ವಾದ್ರಾ, 6 ಲಕ್ಷಕ್ಕೂ ಹೆಚ್ಚು ಮತಗಳಿಂದ ಭರ್ಜರಿ ಜಯಗಳಿಸಿದ್ದರು. …

Read More »

ಕೊಂಕಣ ರೈಲ್ವೆ ವಿಲೀನಕ್ಕೆ ಒಪ್ಪದ ಕರ್ನಾಟಕ ಸರ್ಕಾರ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ನವದೆಹಲಿ: ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆಯನ್ನು ವಿಲೀನಗೊಳಿಸುವ ಪ್ರಸ್ತಾವನೆಗೆ ಕರ್ನಾಟಕ ಸರ್ಕಾರ ಒಪ್ಪಿಗೆ ನೀಡಿಲ್ಲ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಬುಧವಾರ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಚಿವರು, ಗೋವಾ ರಾಜ್ಯ ಸರ್ಕಾರ ಮಾತ್ರ ತನ್ನ ಪಾಲನ್ನು ಬಿಟ್ಟುಕೊಡಲು ಇಚ್ಛೆ ವ್ಯಕ್ತಪಡಿಸಿದೆ ಎಂದು ಮಾಹಿತಿ ನೀಡಿದ್ದಾರೆ. ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ ರೈಲ್ವೆ ಸಚಿವಾಲಯ, ಮಹಾರಾಷ್ಟ್ರ ಸರ್ಕಾರ, …

Read More »

ಕಳಸಾ ಬಂಡೂರಿ ನೀರಾವರಿ ಯೋಜನೆಗೆ ತ್ವರಿತ ಪರಿಸರ ಅನುಮತಿ ನೀಡಿ: ಕೇಂದ್ರ ಸಚಿವರಿಗೆ ಡಿಕೆ ಶಿವಕುಮಾರ್ ಮನವಿ

ನವದೆಹಲಿ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರನ್ನು ಭೇಟಿ ಮಾಡಿ, ಕಳಸಾ-ಬಂಡೂರಿ ನೀರಾವರಿ ಯೋಜನೆಗೆ ಪರಿಸರ ಅನುಮತಿಯನ್ನು ತ್ವರಿತವಾಗಿ ನೀಡುವಂತೆ ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಕೆ ಶಿವಕುಮಾರ್ ಅವರು, ಕಳಸಾ-ಬಂಡೂರಿ ಯೋಜನೆಯು ರಾಜ್ಯದ ನೀರಿನ ಅಗತ್ಯಗಳಿಗೆ ನಿರ್ಣಾಯಕವಾಗಿದ್ದು, ಇದಕ್ಕೆ ಅಗತ್ಯವಿರುವ ಅರಣ್ಯ ಹಾಗೂ ವನ್ಯಜೀವಿ ಮಂಡಳಿ ಅನುಮತಿ ಕೊಡಿಸಬೇಕು ಎಂದು ಮನವಿ ಸಲ್ಲಿಸಿದರು. …

Read More »

ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾರಿಗೆ ಸಂಸ್ಥೆಗೆ ₹5,900 ಕೋಟಿ ನಷ್ಟ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾರಿಗೆ ಸಂಸ್ಥೆಗಳು ಅನುಭವಿಸಿದ್ದ ನಷ್ಟ ₹5,900 ಕೋಟಿ ಹಾಗೂ ಭವಿಷ್ಯ ನಿಧಿ, ಸಾಮಗ್ರಿಗಳ ಖರೀದಿ, ಡೀಸೆಲ್ ಬಾಕಿಯನ್ನು ಕಾಂಗ್ರೆಸ್‌ ಸರ್ಕಾರ ತೀರಿಸುತ್ತಲೇ ಸಂಸ್ಥೆಯನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಈ ಕುರಿತ ಹೇಳಿಕೆಯನ್ನು ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, 2013ರಲ್ಲಿ ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್‌ 2018ರಲ್ಲಿ ನಿರ್ಗಮಿಸುವಾಗ ಸಾರಿಗೆ ನಿಗಮಗಳಲ್ಲಿ ಭವಿಷ್ಯ ನಿಧಿ ಮೊತ್ತ ಬಾಕಿ ಇದ್ದದ್ದು ₹13.71 …

Read More »

ಅಂಬಿಗರ ಚೌಡಯ್ಯ ನಿಗಮದ ನೂತನ ಅಧ್ಯಕ್ಷರಾಗಿ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ನೇಮಕ

ಕಲಬುರಗಿ : ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರನ್ನು ನಿಜಶರಣ ಅಂಬಿಗರ ಚೌಡಯ್ಯ ನಿಗಮದ ನೂತನ ಅಧ್ಯಕ್ಷರನ್ನಾಗಿ ನೇಮಿಸಿ, ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ-1 ಉಮಾದೇವಿ ಅವರು ಅಧಿಸೂಚನೆ ಹೊರಡಿಸಿದ್ದು, ಅಧ್ಯಕ್ಷರನ್ನಾಗಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ನಿಜಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷರನ್ನಾಗಿ ಬಾಬುರಾವ್ ಚಿಂಚನಸೂರ ಅವರನ್ನು ನೇಮಿಸಿ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. …

Read More »

ಬಸ್ ನಲ್ಲಿ ಬ್ಯಾಗ್ ಕದ್ದಿದ್ದ ಕಳ್ಳಿಯ ಬಂಧನ: ಚಿನ್ನಾಭರಣ, ನಗದು ವಶ

ಹುಬ್ಬಳ್ಳಿ: ಶಿರಸಿಯಿಂದ ಧಾರವಾಡಕ್ಕೆ ಬರುತ್ತಿದ್ದ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರ‌ ಬ್ಯಾಗ್ ಕಳ್ಳತನವಾಗಿದ್ದರ ಪ್ರಕರಣಕ್ಕೆ ಸಂಬಂಧಿಸಿದಂತೆ ಛಬ್ಬಿ ಗ್ರಾಮದ ನಿವಾಸಿ ಮಹಾದೇವಿ ವಡ್ಡರ್ ಮಹಿಳಾ ಆರೋಪಿತಳನ್ನು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿತಳಿಂದ ಕಳ್ಳತನವಾಗಿದ್ದ 2 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು 7000 ರೂ. ನಗದು, ಮೊಬೈಲ್ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಪೊಲೀಸ್ S H ಯಳ್ಳೂರ ರವರ ನೇತೃತ್ವದ ತಂಡದ …

Read More »

ವಕ್ಫ್ ಮಸೂದೆ ಜಂಟಿ ಸಂಸದೀಯ ಸಮಿತಿ ಅಧಿಕಾರವಧಿ ವಿಸ್ತರಿಸಲು ಸರ್ವಾನುಮತದ ನಿರ್ಧಾರ

ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆ ಪರಿಶೀಲಿಸುತ್ತಿರುವ ಜಂಟಿ ಸಂಸದೀಯ ಸಮಿತಿಯು ತನ್ನ ಅಧಿಕಾರಾವಧಿಯನ್ನು ಮುಂದಿನ ಬಜೆಟ್ ಅಧಿವೇಶನದ ಕೊನೆಯ ದಿನದವರೆಗೆ ವಿಸ್ತರಿಸಲು ಬುಧವಾರ ಸರ್ವಾನುಮತದಿಂದ ನಿರ್ಧರಿಸಿದೆ. ಇದಕ್ಕೂ ಮೊದಲು ಸಮಿತಿಯ ಕರಡು ವರದಿಯನ್ನು ಅಂಗೀಕರಿಸಲು ಸಿದ್ಧವಾಗಿದ್ದ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕ ಪಾಲ್ ಅವರ ನಿಲುವಿನಿಂದಾಗಿ, ಸಭೆಯು ವಿಪಕ್ಷಗಳ ಸದಸ್ಯರ ಆಕ್ರೋಶದ ಪ್ರತಿಭಟನೆಗೂ ಸಾಕ್ಷಿಯಾಯಿತು. ವಿರೋಧ ಪಕ್ಷದ ಸದಸ್ಯರು ಸಭಾತ್ಯಾಗ ಮಾಡಿ, ಪಾಲ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರಿಂದ ಸಭೆಯಲ್ಲಿ …

Read More »

ಕಲಬುರಗಿ ಜಿಲ್ಲಾಧಿಕಾರಿ, ಸಿಇಒಗೆ ಮುಖ್ಯಮಂತ್ರಿಗಳಿಂದ ಪ್ರಶಸ್ತಿ ವಿತರಣೆ

ಕಲಬುರಗಿ: ಕಳೆದ‌ ಸೆಪ್ಟೆಂಬರ್ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ‌ ಅಂಗವಾಗಿ ಪ್ರಜಾಪ್ರಭುತ್ವ ಕುರಿತು ಜಾಗೃತಿ ಮೂಡಿಸಲು ಜಿಲ್ಲೆಯಲ್ಲಿ ಆಯೋಜಿಸಿದ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮವನ್ನು ಅತ್ಯತ್ತಮ ರೀತಿಯಲ್ಲಿ ನಿರ್ವಹಣೆ ಮಾಡಿದ್ದಕ್ಕೆ ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಮತ್ತು ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರಮಾಣ ಪತ್ರ‌ ಪ್ರದಾನ ಮಾಡಿದರು. ಇಂದು ಬೆಂಗಳೂರಿನ ಡಾ.ಅಂಬೇಡ್ಕರ್ ಭವನದಲ್ಲಿ ನಡೆದ ಸಮಾರಂಭದಲ್ಲಿ ಅತ್ಯಂತ …

Read More »

ಕೇಂದ್ರ ಸರ್ಕಾರದಿಂದ ಕರ್ನಾಟಕ ಸೇರಿದಂತೆ 15 ರಾಜ್ಯಗಳಿಗೆ ವಿಪತ್ತು ಪರಿಹಾರ ನಿಧಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸೇರಿದಂತೆ ಒಟ್ಟು 15 ರಾಜ್ಯಗಳಲ್ಲಿ ವಿವಿಧ ವಿಪತ್ತು ಪರಿಹಾರ ಮತ್ತು ನಾಗರಿಕ ರಕ್ಷಣಾ ಸ್ವಯಂಸೇವಕರ ತರಬೇತಿ ಮತ್ತು ಸಾಮರ್ಥ್ಯ ವೃದ್ಧಿ ಯೋಜನೆಗೆ ಒಟ್ಟು 1115 ಕೋಟಿ ರೂಪಾಯಿ ಹಣವನ್ನು ಮೋದಿ ಸರ್ಕಾರ ಬಿಡುಗಡೆ ಮಾಡಿದೆ. ಇದರಲ್ಲಿ 1,000 ರೂ. ವಿವಿಧ ವಿಪತ್ತು ಪರಿಹಾರದ ಹಣವಾಗಿದ್ದರೆ, ಇನ್ನುಳಿದ ಹಣ ಸಾಮರ್ಥ್ಯ ವೃದ್ಧಿ ಯೋಜನೆಗೆ ನೀಡಲಾಗಿದೆ. ಇಂದು(ನವೆಂಬರ್ 26) ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ …

Read More »

5 ಸಾವಿರ ಟ್ರ್ಯಾಕ್ಟರ್ ಗಳ ಮೂಲಕ ಸುವರ್ಣಸೌಧಕ್ಕೆ ಮುತ್ತಿಗೆ: ಸರ್ಕಾರಕ್ಕೆ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

ಕೊಪ್ಪಳ : ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತರೆ ಸಮುದಾಯಗಳಿಗೆ ಮಾತ್ರ ಸ್ಪಂದನೆ ನೀಡುತ್ತಿದ್ದಾರೆ, ಆದರೆ ನಮ್ಮ ಸಮುದಾಯದ ವಿಚಾರ ಅಂತ ಬಂದಾಗ ಅವರ ಕಡೆಯಿಂದ ಸೂಕ್ತವಾದ ಸ್ಪಂದನೆ ಇರಲ್ಲ ಎಂದು ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ನಮ್ಮ ಸುದೀರ್ಘವಾದ ಲಿಂಗಾಯತ ಪಂಚಮಸಾಲಿ ಸಮುದಾಯದ ಹೋರಾಟಕ್ಕೆ ಯಾವುದೇ ಕನಿಷ್ಠ ಸ್ಪಂದನೆ ನೀಡಿಲ್ಲ. ಆದ್ರೆ ನಮ್ಮ ಸಿಎಂ ಬೇರೆ ಸಮುದಾಯಗಳಿಗೆ ಮಾತ್ರ ತಕ್ಷಣ ಸ್ಪಂದನೆ ನೀಡಿದ್ದಾರೆ. …

Read More »