BigTv News
November 26, 2024
Uncategorized
ತುಮಕೂರು: ತುಮಕೂರು- ಮಂಗಳೂರು ನಡುವೆ ರೈಲು ಸಂಚಾರ ಆರಂಭಿಸುವ ಕುರಿತು ಅಧಿಕಾರಿಗಳ ಜತೆ ಚರ್ಚಿಸಿ, ಅಗತ್ಯ ಎನಿಸಿದರೆ ರೈಲಿನ ವ್ಯವಸ್ಥೆ ಮಾಡಲಾಗುವುದು ಎಂದು ಕೇಂದ್ರ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು. ನಗರದಲ್ಲಿ ಗುರುಕುಲ ಆರ್ಕೆಡ್’ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ನಗರ ಬೆಳೆದಂತೆ ಭೂಮಿಯ ಬೆಲೆ ಗಗನಮುಖಿಯಾಗಿದೆ. ಭವಿಷ್ಯದ ದೃಷ್ಟಿಯಿಂದ ನೆರೆಯ ಆಂಧ್ರಪ್ರದೇಶದವರು ದುಪ್ಪಟ್ಟು ಹಣ ನೀಡಿ ಈ ಭಾಗದ ಭೂಮಿ ಖರೀದಿಸುತ್ತಿದ್ದಾರೆ. ವೀರಶೈವ …
Read More »
BigTv News
November 25, 2024
Uncategorized
ಬೆಳಗಾವಿ: ಸರ್ಕಾರಿ ಪದವಿ ಪೂರ್ವ ವಿದ್ಯಾಲಯಗಳಲ್ಲಿ ವಿಜ್ಞಾನ ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ಗ್ರಾಮೀಣ ಪ್ರದೇಶದ ಮತ್ತು ಆರ್ಥಿಕವಾಗಿ ದುರ್ಬಲರಾಗಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಉನ್ನತಿಗಾಗಿ ಬೆಳಗಾವಿ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿರುವ ಸಿ.ಇ.ಟಿ.-ಸಕ್ಷಮ್ ಎಂಬ ವಿನೂತನ ಮತ್ತು ಸೃಜನಾತ್ಮಕ ಕಾರ್ಯಕ್ರಮಕ್ಕೆ ರಾಜ್ಯ ಸರಕಾರದ ಮೆಚ್ಚುಗೆ ಜತೆಗೆ ಚಾಲೆಂಜ್ ಫಂಡ್ ಯೋಜನೆಯಡಿ ಹತ್ತು ಲಕ್ಷ ರೂಪಾಯಿ ಅನುದಾನ ಲಭಿಸಿದೆ. ಜಿಲ್ಲೆಯ ಎಲ್ಲ ಸರಕಾರಿ ವಿಜ್ಞಾನ ಪದವಿ ಪೂರ್ವ ಕಾಲೇಜುಗಳಲ್ಲಿ ಕಲಿಯುತ್ತಿರುವ ಬಡ ಕುಟುಂಬಗಳ ಹಾಗೂ ಗ್ರಾಮೀಣ …
Read More »
bigtvnews22
November 25, 2024
Uncategorized
ಬೆಂಗಳೂರು: ಶಿಗ್ಗಾಂವಿ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ ಬಳಿಕ ಸಿಎಂ ಸಿದ್ದರಾಮಯ್ಯ ಮನವಿ ಮೇರೆಗೆ ಉಮೇದುವಾರಿಕೆ ವಾಪಸ್ ಪಡೆದುಕೊಂಡಿದ್ದ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿಗೆ ಬಂಪ್ ಗಿಫ್ಟ್ ನೀಡಲಾಗಿದೆ. ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಗಮದ ಅಧ್ಯಕ್ಷರನ್ನಾಗಿ ಅಜ್ಜಂಪೀರ್ ಖಾದ್ರಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಶಿಗ್ಗಾಂವಿ ಉಪಚುನಾವಣೆ ವೇಳೆ ತಮ್ಮ ಮಾತಿಗೆ ಬೆಲೆ ಕೊಟ್ಟು ನಾಮಪತ್ರ ವಾಪಸ್ ಪಡೆದುಕೊಂಡಿದ್ದಕ್ಕೆ ಸಿಎಂ …
Read More »
BigTv News
November 25, 2024
Uncategorized
ಬೆಂಗಳೂರು : ನವೆಂಬರ್ 28 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಬಗ್ಗೆ ಆರ್. ಚಂದ್ರಶೇಖರ್, ಸರ್ಕಾರದ ಅಪರ ಕಾರ್ಯದರ್ಶಿ ಇವರು ಸುತ್ತೋಲೆ ಹೊರಡಿಸಿದ್ದು, ದಿ. 28.11.2024, ಗುರುವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 24 ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ.ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದಿದ್ದಾರೆ.
Read More »
BigTv News
November 25, 2024
Uncategorized
ಬೆಂಗಳೂರು: ಭಾರತ ಸಂವಿಧಾನದ 75ನೆ ವಾರ್ಷಿಕೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಸಾಂವಿಧಾನಿಕ ಮೌಲ್ಯಗಳ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ರಾಜ್ಯಾದ್ಯಂತ ಅಭಿಯಾನವನ್ನು ಪ್ರಾರಂಭಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನ ದಿನವಾದ ನವೆಂಬರ್ 26ರಿಂದ ಆರಂಭವಾಗಲಿರುವ ಮೂರು ದಿನಗಳ ಈ ಕಾರ್ಯಕ್ರಮದಲ್ಲಿ ಸಾಂವಿಧಾನಿಕ ಸಾಕ್ಷರತೆಯ ಬಗ್ಗೆ …
Read More »
BigTv News
November 25, 2024
Uncategorized
ಬೀದರ್: ವಕ್ಫ್ ಭೂ ಕಬಳಿಕೆ ವಿರೋಧಿ ಜನಜಾಗೃತಿ ಹೋರಾಟ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರಾದ ಬಸವನಗೌಡ ಪಾಟೀಲ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ನೇತೃತ್ವದ ತಂಡ ಇಂದು (ನ.25) ತಾಲೂಕಿನ ಧರ್ಮಾಪುರ ಗ್ರಾಮಕ್ಕೆ ಭೇಟಿ ನೀಡಿ ಜನರಿಂದ ಅಹವಾಲು ಸ್ವೀಕಾರ ಮಾಡಿದರು. ಜಮೀನುಗಳಲ್ಲಿ ವಕ್ಫ್ ಹೆಸರು ಸೇರ್ಪಡೆ ಕುರಿತಂತೆ ತಂಡವು ಗ್ರಾಮದ ಹಲವು ಜನರಿಂದ ಮಾಹಿತಿ ಸಂಗ್ರಹ ಮಾಡಿತು. ಈ ವೇಳೆ ಪಹಣಿಯಿಂದ ವಕ್ಫ್ ಅಂತ ತೆಗೆಯುವುದಲ್ಲ, ವಕ್ಫ್ ಬೋರ್ಡನ್ನೇ ತೆಗೆಯಬೇಕು …
Read More »
Shaikh BigTv
November 25, 2024
Uncategorized
ಹುಬ್ಬಳ್ಳಿ : ಬೈಕ್ ಸವಾರನೊಬ್ಬ ಆಯ ತಪ್ಪಿ ರಾಮದುರ್ಗದ ಘಾಟ ಪ್ರಪಾತಕ್ಕೆ ಬಿದ್ದು ಸಾವನ್ನಪ್ಪಿದ್ದು, ಇನ್ನೊಬ್ಬನಿಗೆ ಗಂಭೀರವಾದ ಗಾಯವಾದ ಘಟನೆಯೊಂದು ರವಿವಾರ ನಡೆದಿದೆ. ಹಳೆ ಹುಬ್ಬಳ್ಳಿಯ ಆನಂದ್ ನಗರದ ಚಂದನ್ ಕಾಲೋನಿ ನಿವಾಸಿ ಗಣೇಶ್ ಸರೋಜಾ ಗೋಸಾವಿ ಸಾವನ್ನಪ್ಪಿದ ಯುವಕ. ಮನೆ ದೇವರಿಗೆಂದು ಹುಬ್ಬಳ್ಳಿಯಿಂದ ಹೋಗುತ್ತಿದ್ದಾಗ, ರಾಮದುರ್ಗದ ಘಾಟ ಬಳಿ ಆಯತಪ್ಪಿ ಪ್ರಪಾತಕ್ಕೆ ಬಿದ್ದು, ದೇಹಕ್ಕೆ ಕಲ್ಲು ಚುಚ್ಚಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನೊಬ್ಬನಿಗೆ ಗಂಭೀರವಾದ ಗಾಯವಾಗಿದ್ದು, ಧಾರವಾಡ ಖಾಸಗಿ ಆಸ್ಪತ್ರೆಯಲ್ಲಿ …
Read More »
BigTv News
November 25, 2024
Uncategorized
ಮುಂಬೈ: ಶಿವಸೇನೆಯ (ಶಿಂದೆ ಬಣ) ಶಾಸಕಾಂಗ ಪಕ್ಷದ ನಾಯಕರಾಗಿ ಮುಖ್ಯಮಂತ್ರಿ ಏಕನಾಥ ಶಿಂದೆ ಆಯ್ಕೆಯಾದರು. ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ಶಾಸಕರಾಗಿ ಆಯ್ಕೆಯಾದ ಪಕ್ಷದ ಎಲ್ಲ 57 ಸದಸ್ಯರು ಇದ್ದರು. ಮುಖ್ಯ ಸಚೇತಕ, ಇತರ ಪದಾಧಿಕಾರಿಗಳನ್ನು ನೇಮಿಸುವ ಅಧಿಕಾರವನ್ನು ಶಿಂದೆ ಅವರಿಗೆ ನೀಡಲಾಗಿದೆ ಎಂದು ಪಕ್ಷದ ನಾಯಕ ದೀಪಕ್ ಕೇಸಕರ್ ಹೇಳಿದ್ದಾರೆ. ಹೊಸ ಸಿ.ಎಂ ಆಯ್ಕೆ ಕುರಿತಂತೆ ಮೈತ್ರಿ ಪಕ್ಷಗಳಲ್ಲಿ ಯಾವುದೇ ವಿವಾದ ಇಲ್ಲ ಎಂದು ಹೇಳಿದರು.
Read More »
BigTv News
November 25, 2024
Uncategorized
ಬೆಂಗಳೂರು : ನವೆಂಬರ್- 26 ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಲ್ಲೇಖಿತ ಸುತ್ತೋಲೆಯಲ್ಲಿ ಸೂಚಿಸಿರುವಂತೆ, ಜನವರಿ 26ರ ಗಣರಾಜ್ಯೋತ್ಸವ ದಿನದಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ …
Read More »
BigTv News
November 25, 2024
Uncategorized
ನವದೆಹಲಿ: ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದಂತೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರ ನಡೆದ ಕಾರಣ ಉಭಯ ಸದನಗಳ ಕಲಾಪವನ್ನು ಮುಂದೂಡಲಾಗಿದೆ. ಚಳಿಗಾಲದ ಅಧಿವೇಶನ ಇಂದು ಆರಂಭವಾಗುತ್ತಿದ್ದಂತೆ ವಿಪಕ್ಷಗಳು ವಕ್ಫ್ ಮಂಡಳಿ ವಿವಾದ ಹಾಗೂ ಮಣಿಪುರ ಗಲಭೆ ಕುರಿತು ಚರ್ಚೆಗೆ ಆಗ್ರಹಿಸಿದವು. ಕೇಂದ್ರ ಸರ್ಕಾರ ಒಂದು ದೇಶ, ಒಂದು ಚುನಾವಣೆ, ಬ್ಯಾಕಿಂಗ್ ಮಸೂದೆ ಮತ್ತು ರೈಲ್ವೆ ವಿಧೇಯಕ ತಿದ್ದುಪಡಿ ಮಸೂದೆ, ವಕ್ಫ್ ಮಂಡಳಿ ಮಸೂದೆ ಮತ್ತು ಪ್ರಕೃತಿ ವಿಕೋಪ ನಿರ್ವಹಣೆ ಮಸೂದೆಗಳನ್ನು …
Read More »