Breaking News

Uncategorized

ಶಿಗ್ಗಾಂವಿ ಕ್ಷೇತ್ರದ ಜನರ ತೀರ್ಪನ್ನು ನಾನು ತಲೆಬಾಗಿ ಒಪ್ಪಿಕೊಳ್ಳುತ್ತೇನೆ: ಬೊಮ್ಮಾಯಿ

ಹುಬ್ಬಳ್ಳಿ: ಶಿಗ್ಗಾಂವಿ ಕ್ಷೇತ್ರದ ಜನರ ತೀರ್ಪನ್ನು ನಾನು ತಲೆಬಾಗಿ ಒಪ್ಪಿಕೊಳ್ಳುತ್ತೇನೆ. ಜನಾಶೀರ್ವಾದ ಸ್ವೀಕಾರ ಮಾಡುತ್ತೇನೆ. ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಶಿಗ್ಗಾಂವ ಫಲಿತಾಂಶದ ಕುರಿತು ಮಾತನಾಡಿದ ಅವರು, ಅಲ್ಲಿಯ ಜನರ ಸ್ಪಂದನೆ ನೋಡಿದ್ರೆ ನಮಗೆ ಭರವಸೆ ಇತ್ತು. ಆದರೆ ವಿಪರೀತ ಹಣದ ಹೊಳೆ ಹರಿಸಿ ಕಾಂಗ್ರೆಸ್ ಗೆಲುವು ಸಾಧಿಸಿದ್ದಾರೆ. ಸರ್ಕಾರ ಅವರದ್ದೇ ಇದೆ, ಆಡಳಿತ ಪಕ್ಷದ …

Read More »

ಕಾಂಗ್ರೆಸ್‌ ಅನ್ನು ನೆಚ್ಚಿಕೊಂಡು ಹೋದರೆ ಪ್ರಾದೇಶಿಕ ಪಕ್ಷಗಳು ಮುಳುಗಿ ಹೋಗಲಿವೆ: ಜೋಶಿ ಟೀಕೆ

ಹುಬ್ಬಳ್ಳಿ: ಕಾಂಗ್ರೆಸ್‌ ಅನ್ನು ನೆಚ್ಚಿಕೊಂಡು ಹೋದರೆ ಪ್ರಾದೇಶಿಕ ಪಕ್ಷಗಳು ಮುಳುಗಿ ಹೋಗಲಿವೆ ಎಂದು ಕೇಂದ್ರ ಸಚಿವ ಪ್ರಲ್ಲಾದ್‌ ಜೋಶಿ ಟೀಕಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಮಹಾರಾಷ್ಟ್ರ ಮತ್ತು ಜಾರ್ಖಂಡ್ ಚುನಾವಣೆ ಫಲಿತಾಂಶವೇ ಇದಕ್ಕೆ ನಿದರ್ಶನ ಎಂದು ಹೇಳಿದರು. ಕಾಂಗ್ರೆಸ್ ಪಕ್ಷ ತನ್ನ ಅಸ್ತಿತ್ವವನ್ನೇ ಕಳೆದುಕೊಂಡಿದೆ. ಇದರೊಂದಿಗೆ ಹೋದ ಪ್ರಾದೇಶಿಕ ಪಕ್ಷಗಳ ಗತಿಯೂ ಹಾಗೇ ಆಗಲಿದೆ ಎಂದು ಜೋಶಿ ಭವಿಷ್ಯ ನುಡಿದರು. ದೇಶದ ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಅದು ತನ್ನೊಂದಿಗೆ …

Read More »

ದೇಶಾದ್ಯಂತ ಕಾಂಗ್ರೆಸ್ ಪಕ್ಷ ನಶಿಸಿ ಹೋಗ್ತಾ ಇದೆ: ಜೋಶಿ

ಹುಬ್ಬಳ್ಳಿ: ದೇಶಾದ್ಯಂತ ಕಾಂಗ್ರೆಸ್ ಪಕ್ಷ ನಶಿಸಿ ಹೋಗ್ತಾ ಇದೆ. ಕಾಂಗ್ರೆಸ್ ಪಕ್ಷ ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷ ಆಗೋಕು ಯೋಗ್ಯವಲ್ಲದ ಸ್ಥಿತಿ ಇದೆ. ಪ್ರಧಾನ ಮಂತ್ರಿ ಹೇಳಿದಂತೆ ಕಾಂಗ್ರೆಸ್ ಪಕ್ಷ ಪರಜೀವ ಪಕ್ಷ. ಸ್ವಂತ ದೇಹ ಇಲ್ಲದೇ ಕಾಂಗ್ರೆಸ್ ಪಕ್ಷ ಅತೃಪ್ತ ಆತ್ಮ ಇದ್ದಂತಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಜೆಎಂಎಂ ಜೊತೆ ಇದ್ದಾರಂತಾ 12-13 ಸೀಟ್ ಬಂದಿದೆ. ಜಾರ್ಖಂಡ್ ನಲ್ಲಿ …

Read More »

ನೋಂದಾಯಿತ ಮಾನವ ಸಂಪನ್ಮೂಲ ಏಜೆನ್ಸಿಗಳಿಂದ ಇ-ಪ್ರೋಕ್ಯೂರ್‌ಮೆಂಟ್ ಪೋರ್ಟಲ್ ಮೂಲಕ ಟೆಂಡರ್ ಆಹ್ವಾನ

ಧಾರವಾಡ : ಧಾರವಾಡ ಜಿಲ್ಲೆಯ ಅಟಲ್‍ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ನಾಡಕಛೇರಿಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಹಾಗೂ ಡಾಟಾ ಎಂಟಿ ಅವರೇಟರರನ್ನು ಒಂದು ವರ್ಷದ ಅವಧಿಗೆ ಪೂರೈಸುವ ಕುರಿತು ಆಸಕ್ತ ಮತ್ತು ನೋಂದಾಯಿತ ಮಾನವ ಸಂಪನ್ಮೂಲ ಏಜೆನ್ಸಿಗಳಿಂದ ಇ-ಪ್ರೋಕ್ಯೂರ್‌ಮೆಂಟ್ ಪೋರ್ಟಲ್ ಮೂಲಕ ಟೆಂಡರ್ ಕರೆಯಲಾಗಿದೆ. ಮಾಹಿತಿಗಾಗಿ https://kppp.karnataka.gov.in ನಲ್ಲಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಧಾರವಾಡ ಕರೆಯಲಾಗಿದ್ದು, ಅಟಲ್ ಜೀ ಜನಸ್ನೇಹಿ ಕೇಂದ್ರದ ಶಾಖೆಯಲ್ಲಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು. …

Read More »

ರಾಜ್ಯ ಸರ್ಕಾರದಿಂದ ಮಿನಿ ಟ್ರ್ಯಾಕ್ಟರ್ ಖರೀದಿಗೆ ಶೇ.90 ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಪ್ರಸಕ್ತ(2024-25) ಸಾಲಿನ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50 ರ ರಿಯಾಯಿತಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಶೇ.90 ರ ರಿಯಾಯಿತಿಯಲ್ಲಿ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟೋವೇಟರ್, ಕಳೆ ಕೊಚ್ಚುವ ಯಂತ್ರಗಳು, ಪವರ್ ವೀಡರ್, ಪವರ್ ಸ್ಪ್ರೇಯರ್ಸ್, ಡೀಸೆಲ್ ಪಂಪ್‍ಸೆಟ್, ಪ್ಲೋರ್‍ಮಿಲ್, ಯಂತ್ರ ಚಾಲಿತ ಮೋಟೋಕಾರ್ಟ್, ಮೋಟಾರ್ ಚಾಲಿತ ಸಣ್ಣ ಎಣ್ಣೆಗಾಣಗಳು ಮತ್ತು ಇತರೆ …

Read More »

ಹಾಸನದಲ್ಲಿ ಡಿ.5 ರಂದು ಸಿಎಂ ಸಿದ್ದರಾಮಯ್ಯ ಅಭಿಮಾನಿಗಳಿಂದ ಬೃಹತ್ ಸಮಾವೇಶ

ಹಾಸನ : ವಾಲ್ಮೀಕಿ ಹಗರಣ, ಮುಡಾ ಹಗರಣ ಸೇರಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಸಾಲು ಸಾಲು ಹಗರಣಗಳಿಂದ ಮುಜುಗರಕ್ಕೆ ಈಡಾಗಿತ್ತು. ಈ ಬಾರಿಯ 3 ವಿಧಾನಸಭಾ ಉಪಚುನಾವಣೆಯಲ್ಲಿ ಗೆಲ್ಲುವುದು ಕಷ್ಟ ಅಂತ ಅಂದಾಜಿಸಲಾಗಿತ್ತು. ಆದರೆ ನಿನ್ನೆ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸಿದೆ. ಈ ಹಿನ್ನೆಲೆಯಲ್ಲಿ ಹಾಸನದಲ್ಲಿ ಡಿಸೆಂಬರ್ 5 ರಂದು ಸಿಎಂ ಸಿದ್ದರಾಮಯ್ಯ ಅವರ ಅಭಿಮಾನಿಗಳು ಬೃಹತ್ ಸಮಾವೇಶವನ್ನು ಹಮ್ಮಿಕೊಂಡಿದ್ದಾರೆ. ಹೌದು ಸಾಲು ಸಾಲು ಆರೋಪ, …

Read More »

ಬಿಜೆಪಿಗೆ ಸತತ 3ನೇ ಬಾರಿ ಜನಾದೇಶ ನೀಡಿದ 6ನೇ ರಾಜ್ಯ ಮಹಾರಾಷ್ಟ್ರ: ಪ್ರಧಾನಿ ಮೋದಿ

ನವದೆಹಲಿ: ನಾವು ಒಗ್ಗಟ್ಟಾಗಿದ್ದರೆ ಸುರಕ್ಷಿತವಾಗಿರುತ್ತೇವೆ (ಏಕ್ ಹೈ ತೊ ಸೇಫ್ ಹೈ) ಎಂಬುದು ಇಂದು ದೇಶದ ಮಹಾಮಂತ್ರವಾಗಿದೆ. ಹರ್ಯಾಣ ಮಹಾರಾಷ್ಟ್ರ ಇದನ್ನು ಸಾಬೀತು ಪಡಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಒಳಗೊಂಡ ಮಹಾಯುತಿ ಕೂಟ ಜಯಭೇರಿ ಬಾರಿಸಿದ ಬೆನ್ನಲ್ಲೇ ಪಕ್ಷದ ಪ್ರಧಾನ ಕಚೇರಿಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಮೋದಿ, ಕಳೆದ 50 ವರ್ಷಗಳಲ್ಲಿ ಚುನಾವಣಾ ಪೂರ್ವ ಮೈತ್ರಿ ಇದೇ ಮೊದಲ ಬಾರಿ ಇಂತಹ ಅಭೂತಪೂರ್ವ ಗೆಲುವು ಸಾಧಿಸುವ …

Read More »

ಉಪಚುನಾವಣೆ ಗೆಲುವಿನೊಂದಿಗೆ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಬಲ 138 ಕ್ಕೆ ಹೆಚ್ಚಳ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಿದೆ. ಇದರೊಂದಿಗೆ ಕಾಂಗ್ರೆಸ್ ಸದಸ್ಯ ಬಲ ವಿಧಾನಸಭೆಯಲ್ಲಿ 136 ರಿಂದ 138ಕ್ಕೆ ಹೆಚ್ಚಳವಾಗಿದೆ. ಜೆಡಿಎಸ್ ನ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸಂಸದರಾಗಿ ಆಯ್ಕೆಯಾಗಿದ್ದರಿಂದ ಚನ್ನಪಟ್ಟಣ ಕ್ಷೇತ್ರ ತೆರವಾಗಿತ್ತು. ಬಿಜೆಪಿಯ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶಿಗ್ಗಾವಿ ಕ್ಷೇತ್ರ ತೆರವಾಗಿತ್ತು. ಜೆಡಿಎಸ್ ಮತ್ತು ಬಿಜೆಪಿ ಈ ಕ್ಷೇತ್ರಗಳನ್ನು ಕಳೆದುಕೊಂಡಿವೆ. ಈ. ತುಕಾರಾಂ ಸಂಸದರಾಗಿ ಆಯ್ಕೆಯಾಗಿದ್ದರಿಂದ …

Read More »

ಮುಡಾ, ವಕ್ಫ್ ನಂತಹ ಸುಳ್ಳು ಆರೋಪಗಳಿಗೆ ಜನರಿಂದ ತಕ್ಕ ಉತ್ತರ: ಸಚಿವ ಈಶ್ವರ್ ಖಂಡ್ರೆ

ಬೀದರ್ : ಮುಡಾ, ವಕ್ಫ್ ಬಗ್ಗೆ ಪ್ರತಿಪಕ್ಷಗಳು ನಮ್ಮ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದು, ಆ ಸುಳ್ಳು ಆರೋಪಗಳಿಗೆ ಉಪ ಚುನಾವಣೆಯಲ್ಲಿ ಜನರು ತಕ್ಕ ಉತ್ತರ ಕೊಟ್ಟಿದ್ದಾರೆ ಎಂದು ರಾಜ್ಯದ ಅರಣ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಹೇಳಿದ್ದಾರೆ. ಜಿಲ್ಲೆಯ ಬಸವಕಲ್ಯಾಣದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಮತದಾರರು ನಮ್ಮ ಕೈ ಹಿಡಿದಿದ್ದು, ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲವು …

Read More »

ಯಾಸೀರ್ ಅಹಮದ್ ಖಾನ್ ಪಠಾಣ್ ಅವರಿಗೆ ಬೆಳಗಾವಿಯಲ್ಲಿ ಸನ್ಮಾನ

ಬೆಳಗಾವಿ: ಶಿಗ್ಗಾವಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಯಾಸೀರ ಅಹಮದ್ ಖಾನ್ ಪಠಾಣ ಇಲ್ಲಿನ ಕಾಂಗ್ರೆಸ್ ಭವನಕ್ಕೆ ಶನಿವಾರ ರಾತ್ರಿ ಆಗಮಿಸಿ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭೇಟಿಯಾದರು. ಪಠಾಣ ಇಲ್ಲಿಗೆ ಬರುತ್ತಿದ್ದಂತೆ, ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಪಕ್ಷದ ಗ್ರಾಮೀಣ ಜಿಲ್ಲಾ ಘಟಕದ ವತಿಯಿಂದಲೂ ಸನ್ಮಾನಿಸಲಾಯಿತು. 30 ವರ್ಷಗಳಿಂದ ವನವಾಸ ಅನುಭವಿಸುತ್ತಿದ್ದ ಶಿಗ್ಗಾವಿ ಕ್ಷೇತ್ರದಲ್ಲಿ ನನ್ನಂಥ ಸಾಮಾನ್ಯ ಕಾರ್ಯಕರ್ತನನ್ನು ಸತೀಶ ಜಾರಕಿಹೊಳಿ ಗೆಲ್ಲಿಸಿದ್ದಾರೆ. …

Read More »