Breaking News

Uncategorized

ಸಚಿವ ಸಂತೋಷ್ ಲಾಡ್ ರ ಶ್ರಮ ಶ್ಲಾಘಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಶಿಗ್ಗಾಂವಿ, ಚೆನ್ನಪಟ್ಟಣ ಹಾಗೂ ಸಂಡೂರು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಮೂರೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ವಿಶೇಷವಾಗಿ ಸಂಡೂರು ಕ್ಷೇತ್ರದಲ್ಲಿ ಮತ್ತೆ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿದೆ. ಈ ಗೆಲುವಿಗೆ ಶ್ರಮಿಸಿದ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರನ್ನು ಮುಖ್ಯಮಂತ್ರಿಗಳು ಶ್ಲಾಘಿಸಿದ್ದಾರೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗೋಷ್ಠಿ ಹಮ್ಮಿಕೊಂಡಿದ್ದರು. ಈ ವೇಳೆ …

Read More »

ರಾಜಕೀಯ ಭವಿಷ್ಯ ಗಟ್ಟಿಪಡಿಸಿಕೊಂಡ ಸಿ.ಪಿ.ಯೋಗೇಶ್ವರ್‌

ಬೆಂಗಳೂರು: ರಾಜಕೀಯ ಜಿದ್ದಾಜಿದ್ದಿನ ಹೋರಾಟಕ್ಕೆ ಹೆಸರಾಗಿದ್ದ ಹಾಗೂ ತೀವ್ರ ಕುತೂಹಲ ಕೆರಳಿಸಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಜಯಗಳಿಸುವ ಮೂಲಕ ತಮ್ಮ ರಾಜಕೀಯ ಭವಿಷ್ಯ ಗಟ್ಟಿ ಮಾಡಿಕೊಂಡಿದ್ದಾರೆ. ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರಾಭವಗೊಂಡಿದ್ದು, ಮೂರನೇ ಬಾರಿ ಚುನಾವಣೆ ಯಲ್ಲಿ ಸೋಲುವ ಮೂಲಕ ಎನ್ಡಿಎ ಮೈತ್ರಿಕೂಟಕ್ಕೆ ಭಾರೀ ಹಿನ್ನಡೆ ಉಂಟಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ನಡುವಿನ ಸಮರವೆಂದೇ …

Read More »

ಹಿಂದಿನಿಂದಲೂ ನಮ್ಮ ಜೊತೆಗಿದ್ದ ಅಲ್ಪಸಂಖ್ಯಾತರು ಈ ಸಲ ನಮ್ಮ ಕೈ ಹಿಡಿಯಲಿಲ್ಲ: ನಿಖಿಲ್ ಕುಮಾರಸ್ವಾಮಿ

ಬಿಡದಿ: ಹಿಂದಿನಿಂದಲೂ ನಮ್ಮ ಜೊತೆಗಿದ್ದ ಅಲ್ಪಸಂಖ್ಯಾತರು ಈ ಸಲ ನಮ್ಮ ಕೈ ಹಿಡಿಯಲಿಲ್ಲ ಎಂದು ಚನ್ನಪಟ್ಟಣ ಉಪ ಚುನಾವಣೆಯ ಪರಾಜಿತ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದರು. ಉಪ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆ ಬಿಡದಿ ಸಮೀಪದ ಕೇತಗಾನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡೂ ಪಕ್ಷಗಳ ಕಾರ್ಯಕರ್ತರು ಯೋಧರಂತೆ ಕೆಲಸ ಮಾಡಿದರು. ಸೋಲು ಮತ್ತು ಗೆಲುವಿಗೆ ತನ್ನದೇ ಆದ ಕಾರಣಗಳಿರುತ್ತವೆ ಎಂದರು. ಬಹುಶಃ ಒಂದು ಸಮುದಾಯದ (ಮುಸ್ಲಿಂ) …

Read More »

ನ.25 ರಂದು ಮಹಾರಾಷ್ಟ್ರದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ

ಮುಂಬೈ: ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಬಹುಮತ ಗಳಿಸಿದ್ದು, ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಪಡೆದಿದೆ. ಈಗ ರಾಜ್ಯದಲ್ಲಿ ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದಂತೆ ಚರ್ಚೆಗಳು ನಡೆಯುತ್ತಿವೆ. ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಂಬಂಧ ನ.25 ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ನ.26 ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಮಹಾಯುತಿ ಮೈತ್ರಿಕೂಟದ ದೊಡ್ಡ ಸಭೆಯೂ ಇದೇ ಸಮಯದಲ್ಲಿ ನಡೆಯುವ ಸಾಧ್ಯತೆಯಿದೆ. ಮಹಾಯುತಿ ಮೈತ್ರಿಕೂಟ 220 …

Read More »

ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಗೆ ಭರ್ಜರಿ ಜಯ: ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ನಿತಿನ್ ಗಡ್ಕರಿ

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ‘ಮಹಾಯುತಿ’ ಮೈತ್ರಿಗೆ ಭರ್ಜರಿ ಜಯ ಸಿಕ್ಕಿದ್ದು, ಕೇಂದ್ರ ಸಚಿವ ನಿತಿನ್‌ ಗಡ್ಕರಿ ಸಂತಸ ವ್ಯಕ್ತಪಡಿಸಿ, ಮಹಾರಾಷ್ಟ್ರದ ಜನರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಚುನಾವಣೆಯಲ್ಲಿ ಬಿಜೆಪಿ-ಮಹಾಯುತಿ ಮೈತ್ರಿಕೂಟದ ಐತಿಹಾಸಿಕ ವಿಜಯಕ್ಕಾಗಿ ಮಹಾರಾಷ್ಟ್ರದ ಜನತೆಗೆ ಹೃತ್ಪೂರ್ವಕ ಅಭಿನಂದನೆಗಳು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ, ಬಿಜೆಪಿ-ಮಹಾಯುತಿ ನಿರಂತರವಾಗಿ ಅಭಿವೃದ್ಧಿಗೆ ಆದ್ಯತೆ ನೀಡಿದೆ. ಮಹಾರಾಷ್ಟ್ರದ ಸಮಗ್ರ ಪ್ರಗತಿ ಮತ್ತು ಜನರ ಆಕಾಂಕ್ಷೆಗಳಿಗೆ …

Read More »

ನಿಖಿಲ್ ಕುಮಾರಸ್ವಾಮಿಗೆ ಅದೃಷ್ಟವಿಲ್ಲ ಅನಿಸುತ್ತೆ: ವಿಪಕ್ಷ ನಾಯಕ ಆರ್‌.ಅಶೋಕ್

ಬೆಂಗಳೂರು : ರಾಜ್ಯದ ಮೂರು ಕ್ಷೇತ್ರಗಳ ವಿಧಾನಸಭೆಯ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಬಿಜೆಪಿ, ಜೆಡಿಎಸ್ ತೀವ್ರ ಮುಖಭಂಗ ಎದುರಿಸಿದೆ. ಅದರಲ್ಲೂ ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲಿನ ಕುರಿತಾಗಿ ವಿಪಕ್ಷ ನಾಯಕ ಆರ್ ಅಶೋಕ ಬಹುಶಹ ನಿಖಿಲ್ ಕುಮಾರಸ್ವಾಮಿ ಅವರಿಗೆ ಅದೃಷ್ಟವಿಲ್ಲ ಅನಿಸುತ್ತದೆ ಎಂದು ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನರ ಈ ಒಂದು ತೀರ್ಪಿಗೆ ತಲೆಬಾಗುತ್ತೇವೆ. ಚುನಾವಣೆಯಲ್ಲಿ ಗೆಲ್ಲಲು ಕಾರಣವಿದ್ದಂತೆ …

Read More »

ಕೇಂದ್ರ ಸರ್ಕಾರದಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಅನುದಾನ ಬಿಡುಗಡೆ

ನವದೆಹಲಿ: ಕೇಂದ್ರ ಸರ್ಕಾರವು 2024 -25ನೇ ಆರ್ಥಿಕ ವರ್ಷದಲ್ಲಿ ರಾಜ್ಯದ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ 15ನೇ ಹಣಕಾಸು ಆಯೋಗದ ಅನುದಾನದಲ್ಲಿ 448.29 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ರಾಜ್ಯದ ಎಲ್ಲಾ 5949 ಗ್ರಾಮ ಪಂಚಾಯಿತಿಗಳನ್ನು ಒಳಗೊಂಡಂತೆ ಈ ಅನುದಾನ ಬಿಡುಗಡೆ ಮಾಡಲಾಗಿದೆ. ಭಾರತ ಸರ್ಕಾರವು ಪಂಚಾಯತ್ ರಾಜ್ ಸಚಿವಾಲಯ, ಜಲ ಶಕ್ತಿ ಸಚಿವಾಲಯ ಮೂಲಕ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯಗಳಿಗೆ 15ನೇ ಹಣಕಾಸು ಆಯೋಗದ ಅನುದಾನವನ್ನು ಬಿಡುಗಡೆ ಮಾಡಲು ಶಿಫಾರಸು …

Read More »

ಚನ್ನಪಟ್ಟಣ ಬೈ ಎಲೆಕ್ಷನ್ ಬಳಿಕ ಕುಮಾರಸ್ವಾಮಿ ಜೊತೆಗಿನ ಮೈತ್ರಿಗೆ ಬಿಜೆಪಿ ಬೈ ಬೈ

ಬೆಂಗಳೂರು: ಕರ್ನಾಟಕದಲ್ಲಿ ಈ ಬಾರಿ ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಸೋಲಿನತ್ತ ಮುಖ ಮಾಡಿದ್ದು, ಈ ಚುನಾವಣೆ ಫಲಿತಾಂಶದ ಬಳಿಕ ಜೆಡಿಎಸ್ ಜೊತೆಗಿನ ಮೈತ್ರಿಗೆ ಬಿಜೆಪಿ ನಾಯಕರಲ್ಲೇ ಭಿನ್ನಮತ ಏಳುವುದು ಖಚಿತವಾಗಿದೆ. ಚನ್ನಪಟ್ಟಣದಲ್ಲಿ ಈ ಬಾರಿ ಎನ್ ಡಿಎ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ಅವರನ್ನು ಕಣಕ್ಕಿಳಿಸಬೇಕು ಎಂಬುದು ರಾಜ್ಯ ಬಿಜೆಪಿ ನಾಯಕರ ಒತ್ತಾಸೆಯಾಗಿತ್ತು. ಯೋಗೇಶ್ವರ್ ಕೂಡಾ ಕೊನೇ ಕ್ಷಣದವರೆಗೂ ಬಿಜೆಪಿ ಹೈಕಮಾಂಡ್ ಮೂಲಕ ಲಾಬಿ ನಡೆಸಲು ಪ್ರಯತ್ನಿಸಿದ್ದರು. ಆದರೆ ಇದು …

Read More »

ಮಹಾರಾಷ್ಟ್ರದಲ್ಲಿ ಗೆಲುವಿನ ನಗೆ ಬೀರಿದ ಮಹಾಯುತಿ ಮೈತ್ರಿ, ಜಾರ್ಖಂಡ್ ಉಳಿಸಿಕೊಂಡ ಇಂಡಿಯಾ

ನವದೆಹಲಿ: ಭಾರತೀಯ ಜನತಾ ಪಕ್ಷದ ನೇತೃತ್ವದ ಮಹಾಯುತಿ ಮೈತ್ರಿಯು ಮಹಾರಾಷ್ಟ್ರದಲ್ಲಿ ಗೆಲುವಿನ ನಗೆ ಬೀರಿದೆ. ಮಹಾ ವಿಕಾಸ್ ಅಘಾಡಿ ವಿರುದ್ಧ ಪ್ರಬಲ ಗೆಲುವು ಸಾಧಿಸಿದೆ, ಪ್ರತಿಪಕ್ಷ ಇಂಡಿಯಾ ಬಣವು ಜಾರ್ಖಂಡ್ ಗೆಲುವಿಗೆ ಸಿದ್ಧವಾಗಿದೆ ಎಂದು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿನ ಟ್ರೆಂಡ್ ಗಳು ಸೂಚಿಸಿವೆ. ಮಹಾಯುತಿ ನೇತೃತ್ವದಲ್ಲಿ ಬಿಜೆಪಿ-ಶಿವಸೇನೆ-ಎನ್‌ಸಿಪಿ ಸಹಭಾಗಿತ್ವವು ಪ್ರಬಲ ರಾಜ್ಯವಾದ ಮಹಾರಾಷ್ಟ್ರದ 288 ಸ್ಥಾನಗಳಲ್ಲಿ 218 ರಲ್ಲಿ ಮುನ್ನಡೆ ಸಾಧಿಸಿದ್ದರೆ, ಆಡಳಿತ ಮೈತ್ರಿಕೂಟದ ಪರ ಜನರ ಅಲೆಯನ್ನು ತೋರಿಸುತ್ತದೆ. …

Read More »

ಶಿಗ್ಗಾಂವಿ ಬೈ ಎಲೆಕ್ಷನ್: ಯಾಸೀರ್ ಅಹಮದ್ ಖಾನ್ ಪಠಾಣ್ ಗೆಲುವು

ಹಾವೇರಿ: ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿಗೆ ಪ್ರತಿಷ್ಠೆಯ ಕಣವಾಗಿದ್ದ ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿಗೆ ಸೋಲಾಗಿದೆ. ಈ ಮೂಲಕ ಬೊಮ್ಮಾಯಿ ಕುಟುಂಬದ ಮೂರನೇ ತಲೆಮಾರು ವಿಧಾನಸಭೆ ಪ್ರವೇಶಿಸುವುದು ತಪ್ಪಿಹೋಗಿದೆ. ಬಂಡಾಯದ ಬಿಸಿಯ ನಡುವೆಯೂ ಸ್ಪರ್ಧಿಸಿದ್ದ ಕಾಂಗ್ರೆಸ್​ನ ಯಾಸಿರ್ ಅಹಮದ್​ ಖಾನ್​ ಪಠಾಣ್ ಗೆಲುವು ಸಾಧಿಸಿದ್ದಾರೆ. ಅಜ್ಜಂಪೀರ್ ಖಾದ್ರಿ ಅವರ ಬಂಡಾಯ ಕಾಂಗ್ರೆಸ್​ಗೆ ಆರಂಭದಲ್ಲಿ ತುಸು ಹಿನ್ನಡೆ ತಂದಿತ್ತು. ಆದರೆ ಅದನ್ನು ಶಮನಗೊಳಿಸಿ ಚುನಾವಣೆಯಲ್ಲಿ ಯಶಸ್ಸು ಕಾಣುವಲ್ಲಿ ಕಾಂಗ್ರೆಸ್ ಸಫಲವಾಗಿದೆ. …

Read More »