Breaking News

Uncategorized

ರಾಜ್ಯದಾದ್ಯಂತ ವಕ್ಸ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದೆ: ಮಹೇಶ ಟೆಂಗಿನಕಾಯಿ

ಧಾರವಾಡ: ಬೆಳಗಾವಿಯ ಅಧಿವೇಶನದಲ್ಲಿ ವಕ್ಸ್ ವಿಚಾರದ ಬಗ್ಗೆ ಧ್ವನಿ ಎತ್ತುತ್ತೇವೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ಇಂದು ರಾಜ್ಯದಾದ್ಯಂತ ವಕ್ಸ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದೆ. ನಮ್ಮ ಸಂಘಟನಾತ್ಮಕ 39 ಜಿಲ್ಲಾ ಘಟಕಗಳಿವೆ. ಎಲ್ಲಾ ಘಟಕಗಳಿಂದ ಪ್ರತಿಭಟನೆ ನಡೆದಿದೆ. ಲವ್ ಜಿಹಾದ್‌ನಂತೆಯೇ ಈಗ ಲ್ಯಾಂಡ್ ಜಿಹಾದ್ ನಡೆದಿದೆ. ಇದನ್ನು ಸಚಿವ ಜಮೀರ್ ಅಹ್ಮದ್ ಮಾಡಿದ್ದಾರೆ ಎಂದರು. ವಕ್ಷ ವಿರುದ್ಧ ನಮ್ಮ …

Read More »

ಅನ್ನದಾತನಿಗೆ ಆರ್ಥಿಕ ಭದ್ರತೆ ಜೋತೆ ಸಾಮಾಜಿಕ ಮನ್ನಣೆ : ಮುನ್ನೂರು ರೈತರಿಗೆ ‘ ಭೂಮಿ’ ಪ್ರಶಸ್ತಿ

ಹುಬ್ಬಳ್ಳಿ: ಡಿಜಿಟಲ್ ತಂತ್ರಜ್ಞಾನವನ್ನು ಅತ್ಯಂತ ಸರಳೀಕರಣಗೊಳಿಸಿ, ರೈತರಿಗೆ ಉತ್ತಮ ಮಾರುಕಟ್ಟೆ ವ್ಯವಸ್ಥೆ, ಕೃಷಿ ವಿಧಾನ ಸುಧಾರಣೆ ಸಾಮಾಜಿಕ ಭದ್ರತೆ ಮತ್ತು ಗೌರವ ಸಿಗುವ ನಿಟ್ಟಿನಲ್ಲಿ ‘ಭೂಮಿ’ ಸಂಸ್ಥೆ ಸೇವೆ ಸಲ್ಲಿಸುತ್ತಿದೆ. ಕಳೆದ ಹತ್ತು ವರ್ಷಗಳಿಂದ ಕೃಷಿ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನ ಬಳಕೆ ಹಾಗೂ ರೈತರ ಬೆಳೆಗಳಿಗೆ ಉತ್ತಮ ಆದಾಯ ನೀಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ, ‘ಭೂಮಿ’ ಸಂಸ್ಥೆ, ಇದೀಗ ಇನ್ನೊಂದು ಮೈಲಿಗಲ್ಲು ಸ್ಥಾಪಿಸಲು ಮುಂದಾಗಿದೆ. ನಗರದಲ್ಲಿ ಇಂದು ಸುದ್ದಿ …

Read More »

ಜಾತಿ ನೋಡಿ ಮತ ನೀಡಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ: ಸಿಎಂ ಸಿದ್ದರಾಮಯ್ಯ

ತುಮಕೂರು: ರಾಜಕೀಯ ನಾಯಕನೊಬ್ಬ ಜನಪರವಾಗಿ ಇದ್ದಾನೋ, ಇಲ್ಲವೋ ಗೊತ್ತಿಲ್ಲದೆ, ಆತನಿಗೆ ರಾಜಕೀಯ ಜ್ಞಾನ ಇದೆಯೋ, ಇಲ್ಲವೋ? ಗೊತ್ತಿಲ್ಲದೆ ನಮ್ಮ ಜಾತಿಯವನು ಎನ್ನುವ ಏಕೈಕ ಕಾರಣಕ್ಕೆ ಮತ ನೀಡುವವರು ಇದ್ದಾರೆ, ಕೆಲವು ನಾಯಕರು ಪ್ರಜ್ಞಾವಂತರಿದ್ದರೂ ತಮ್ಮ ಜಾತಿಯವನಲ್ಲ ಎನ್ನುವ ಕಾರಣಕ್ಕೆ ಮತ ನೀಡಲು ನಿರಾಕರಿಸುತ್ತಾರೆ. ಹೀಗಾದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ಹೊರ ಹಾಕಿದ್ದಾರೆ. ಇಂದು (ನ22) ನಡೆದ ಸಿದ್ಧಾರ್ಥ ಎಜುಕೇಷನ್ ಸೊಸೈಟಿಯ ಕ್ವೆಸ್ಟ್ ಶಿಕ್ಷಣ ಅಕಾಡೆಮಿಯ …

Read More »

ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ತೋಟಗಾರಿಕೆ ಬೆಳೆ ಬೆಳೆಯಲು ರೈತರಿಂದ ಅರ್ಜಿ ಆಹ್ವಾನ

ದಾವಣಗೆರೆ : ರಾಷ್ಟ್ರೀಯ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ, 2025-26 ನೇ ಸಾಲಿನಲ್ಲಿ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಗ್ರಾಮ ಪಂಚಾಯಿತಿಯಲ್ಲಿ ಹೊಸದಾಗಿ ತೋಟಗಾರಿಕೆ ಬೆಳೆ ಬೆಳೆಯುವ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ಅಗತ್ಯ ದಾಖಲಾತಿಗಳೊಂದಿಗೆ ಪಹಣಿ,ಆಧಾರ್, ಉದ್ಯೋಗ ಚೀಟಿ, ಸಣ್ಣ ಮತ್ತು ಅತೀ ಸಣ್ಣ ರೈತರ ಪ್ರಮಾಣ ಪತ್ರ, ಪರಿಶಿಷ್ಟ ಜಾತಿ, ಪಂಗಡದವರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರದೊಂದಿಗೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿ …

Read More »

ರಾಜ್ಯದ 100 ಇಂಜಿನಿಯರಿಂಗ್ ಕಾಲೇಜುಗಳನ್ನು ಕಾರ್ಪೊರೇಟ್ ಸಂಸ್ಥೆಗಳು ದತ್ತು ಪಡೆಯಲಿವೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದ ನೂರು ಇಂಜಿನಿಯರಿಂಗ್ ಕಾಲೇಜುಗಳನ್ನು ಕಾರ್ಪೊರೇಟ್ ಸಂಸ್ಥೆಗಳು ಮುಂದಿನ ವರ್ಷ ದತ್ತು ತೆಗೆದುಕೊಳ್ಳಲಿವೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಮುಂದಿನ ವರ್ಷದ ವೇಳೆಗೆ 100 ಇಂಜಿನಿಯರಿಂಗ್ ಕಾಲೇಜುಗಳನ್ನು ಸಮಾನ ಸಂಖ್ಯೆಯ ಕಾರ್ಪೊರೇಟ್ ಸಂಸ್ಥೆಗಳು ದತ್ತು ತೆಗೆದುಕೊಳ್ಳಲು ನಿರ್ಧರಿಸಲಾಗಿದೆ, ಏಕೆಂದರೆ ವಿದ್ಯಾರ್ಥಿಗಳ ಉದ್ಯೋಗ ಹಾಗೂ ಭವಿಷ್ಯವನ್ನು ಉತ್ತಮಗೊಳ್ಳಿಸಲು ಇದು ಸಹಕಾರಿಯಾಗಿದೆ. ಸರ್ಕಾರವು ಕೈಗಾರಿಕೆಗಳಲ್ಲಿ ಹಗ್ಗ ಹಾಕಲು ಪ್ರಯತ್ನಿಸುತ್ತಿದೆ. ದೊಡ್ಡ ಆಟೋಮೊಬೈಲ್ ಕಂಪನಿಯು ಉದ್ಯೋಗಗಳನ್ನು ನೀಡಲು ಸಿದ್ಧವಾಗಿದೆ …

Read More »

ಬೆಳಗಾವಿ ಅಧಿವೇಶನ ಮುಗಿಯುವ ತನಕವಾದರೂ ಕಾಂಗ್ರೆಸ್​ ಸರ್ಕಾರ ಉಳಿಯಲಿ: ಜನಾರ್ಧನ ರೆಡ್ಡಿ

ಕೊಪ್ಪಳ: ನಿತ್ಯ ಸಂಕಷ್ಟ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಿಯಾಗಿ ನಿದ್ದೆ ಮಾಡುತ್ತಿಲ್ಲ ಕಾಂಗ್ರೆಸ್‌ ಪಕ್ಷದ ಸರ್ಕಾರ ಯಾವುದೇ ಕ್ಷಣದಲ್ಲಾದರೂ ಅಧಿಕಾರ ಕಳೆದುಕೊಳ್ಳಬಹುದು ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದರು. ನಗರದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿ ನಾನು ಕಾಲಜ್ಞಾನ ಹೇಳಲು ಆಗುವುದಿಲ್ಲ ಆದರೆ ಯಾವುದೇ ಸಮಯದಲ್ಲಾದರೂ ಸರ್ಕಾರ ಉರುಳಬಹುದು ಎನ್ನುವುದಂತೂ ನಿಶ್ಚಿತ. ಉತ್ತರ ಕರ್ನಾಟಕದ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಬೇಕಿರುವ ಕಾರಣ ಬೆಳಗಾವಿ ಅಧಿವೇಶನ ಮುಗಿಯುವ ತನಕವಾದರೂ ಸರ್ಕಾರ …

Read More »

ಕರ್ನಾಟಕದಲ್ಲಿ ಹೂಡಿಕೆ ಮಾಡುವಂತೆ ಜರ್ಮನ್ ಕಂಪನಿಗಳಿಗೆ ಸಿಎಂ ಸಿದ್ದರಾಮಯ್ಯ ಕರೆ

ಬೆಂಗಳೂರು: ಕರ್ನಾಟಕವು ಹೂಡಿಕೆಗೆ ಪ್ರಶಸ್ತ ಸ್ಥಳವಾಗಿದ್ದು, ಇಲ್ಲಿ ಹೂಡಿಕೆದಾರ ಸ್ನೇಹಿ ವಾತಾವರಣ ಇದೆ ವಿಶ್ವದರ್ಜೆ ಮೂಲಸೌಕರ್ಯಗಳಿವೆ ಕೌಶಲ್ಯವಂತ ಕೆಲಸಗಾರರಿದ್ದಾರೆ ಜರ್ಮನ್ ಕಂಪನಿಗಳು ಇದನ್ನು ಬಳಸಿಕೊಳ್ಳಬೇಕು ಎಂದು ಕರ್ನಾಟಕ ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಜರ್ಮನಿಯ ಸ್ಟುಟ್​ಗಾರ್ಟ್​ನಲ್ಲಿ ಟಿವಿ9 ನೆಟ್ವರ್ಕ್ ಆಯೋಜಿಸಿರುವ ನ್ಯೂಸ್9 ಗ್ಲೋಬಲ್ ಸಮಿಟ್ ಕಾರ್ಯಕ್ರಮದಲ್ಲಿ ಆನ್ಲೈನ್ ಮೂಲಕ ಮಾತನಾಡಿದ ಸಿದ್ದರಾಮಯ್ಯ, ಕರ್ನಾಟಕ ಮತ್ತು ಜರ್ಮನಿಯ ನಡುವಿನ ವ್ಯಾಪಾರ ಸಂಬಂಧ ಗಟ್ಟಿಗೊಳ್ಳಬೇಕೆಂದು ಕರೆ ನೀಡಿದರು. ಕರ್ನಾಟಕ ಮತ್ತು ಜರ್ಮನಿ ಮಧ್ಯೆ …

Read More »

ವಿಭಿನ್ನ ರೀತಿಯಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಧಾರವಾಡ: ವಕ್ಸ್‌ ಬೋರ್ಡ್ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಇಡೀ ದಿನ ಧರಣಿ ನಡೆಸಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಟೆಂಟ್ ಹಾಕಿ ಧರಣಿ ನಡೆಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ನಡು ರಸ್ತೆಯಲ್ಲೇ ಭಜನೆ ಮಾಡುವ ಮೂಲಕ ಗಮನ ಸೆಳೆದರು. ರೈತರ ಜಮೀನು ಹಾಗೂ ಹಿಂದೂ ಧರ್ಮದ ಕೆಲ ದೇವಾಲಯಗಳು ವಕ್ಸ್ ಬೋರ್ಡ್‌ಗೆ ಒಳಪಟ್ಟಿವೆ ಎಂದು ನಮೂದಾಗಿರುವುದನ್ನು …

Read More »

ಚಿತ್ರದುರ್ಗದಲ್ಲಿ ಬೆಂಬಲ ಬೆಲೆಯಡಿ ಡಿ.1 ರಿಂದ ರಾಗಿ ಖರೀದಿ ನೋಂದಣಿ ಪ್ರಕ್ರಿಯೆ ಆರಂಭ: ಡಿಸಿ ಟಿ.ವೆಂಕಟೇಶ್

ಚಿತ್ರದುರ್ಗ: ಪ್ರಸಕ್ತ ಮುಂಗಾರು ಹಂಗಾಮಿನ ರಾಗಿ ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಕಾರ್ಯ ಪ್ರಾರಂಭಿಸಲಾಗುವುದು. ಡಿ.31 ರವರೆಗೆ ನೋಂದಣಿ ನಡೆಯಲಿದೆ ಪ್ರತಿ ಕ್ವಿಂಟಾಲ್ ರಾಗಿಗೆ ರೂ.4290 ದರ ನಿಗದಿ ಮಾಡಲಾಗಿದೆ ಮುಂಬರುವ ಜನವರಿ 01 ರಿಂದ ಮಾರ್ಚ್ 31 ರವರೆಗೆ ಖರೀದಿ ಪ್ರಕ್ರಿಯೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಕನಿಷ್ಠ ಬೆಂಬಲ ಬೆಲೆ …

Read More »

ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಸೌರಶಕ್ತಿ ಅಳವಡಿಕೆ ಯೋಜನೆಗೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ

ಬೆಂಗಳೂರು : ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಸೌರ ಶಕ್ತಿ ಅಳವಡಿಕೆ ಯೋಜನಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರಿನಲ್ಲಿ ಇಂದು ಚಾಲನೆ ನೀಡಿದರು. ಸೆಲ್ಕೋ ಫೌಂಡೇಶನ್ ಸಹಯೋಗದೊಂದಿಗೆ ರಾಜ್ಯದ ತಾಲೂಕು ಆಸ್ಪತ್ರೆಗಳು ಹಾಗೂ ಪ್ರಾಥಮಿಕ ಕೇಂದ್ರಗಳು ಸೇರಿದಂತೆ 5000 ಆರೋಗ್ಯ ಕೇಂದ್ರಗಳಲ್ಲಿ 2026 ರ ಒಳಗೆ ಸೌರ ವಿದ್ಯುತ್ ಅಳವಡಿಸುವ ಗುರಿ ಹೊಂದಲಾಗಿದೆ. 120 ಕೋಟಿ ವೆಚ್ವದಲ್ಲಿ ಸೆಲ್ಕೋ ಫೌಂಡೇಶನ್ ಸಹಯೋಗದೊಂದಿಗೆ ಸಿಎಸ್ ಆರ್ ಯೋಜನೆ ಅಡಿಯಲ್ಲಿ ಸೌರ ಶಕ್ತಿ …

Read More »